ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿರುವ ಲಾಡ್ಜ್‌ನಲ್ಲಿ ಬ್ಯಾಂಕ್ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಸಂತೋಷ್ (36) ಮೃತ ದುರ್ದೈವಿ.
ಸಂತೋಷ್ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೇಲಾಧಿಕಾರಿಗಳ ಕಿರುಕುಳ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂತೋಷ್ ಮಧ್ಯಪ್ರದೇಶದ ಖಾಸಗಿ ಬ್ಯಾಂಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಲ್ಲಿನ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ವರ್ಗಾವಣೆ ಕೋರಿದ್ದ. ವರ್ಗಾವಣೆಗೂ ಕೂಡಾ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಇದರಿಂದ ಮನನೊಂದ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ. ಸಂತೋಷ್ ಪತ್ನಿ ಲಾವಣ್ಯ ಅವರಿಂದ ದೂರು ದಾಖಲಾಗಿದೆ. ಸ್ಥಳಕ್ಕೆ ಹೊಸದುರ್ಗ ಸಿಪಿಐ (CPI) ತಿಮ್ಮಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇದನ್ನೂ ಓದಿ: Murder case : ರಾಮನಗರದಲ್ಲಿ ಸಂಬಂಧಿಕರಿಂದಲೇ ಯುವಕನ ಬರ್ಬರ ಹತ್ಯೆ
ಕೋಲಾರದಲ್ಲಿ ರೈಲಿಗೆ ಸಿಲುಕಿ ವ್ಯಕ್ತಿ ಸಾವು
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರಂ ರೈಲ್ವೆ ನಿಲ್ದಾಣದಲ್ಲಿ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಶ್ರೀನಿವಾಸಾಚಾರಿ (48) ಮೃತಪಟ್ಟವರು. ಕಾಮಸಮುದ್ರ ನಿವಾಸಿ ಶ್ರೀನಿವಾಸಚಾರಿ ಬೆಂಗಳೂರಿಗೆ ತೆರಳುವ ವೇಳೆ ರೈಲು ಅವಘಡ ಸಂಭವಿಸಿದೆ. ಇತ್ತೀಚೆಗೆ ಸಾಲದ ಸುಳಿಗೆ ಸಿಲುಕಿದ್ದ ಶ್ರೀನಿವಾಸಾಚಾರಿ, ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಬಂಗಾರಪೇಟೆ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯಪುರದಲ್ಲೂ ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ
ರೈಲಿಗೆ ತಲೆ ಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿನ ಇಂಡಿ ರೈಲು ನಿಲ್ದಾಣದಲ್ಲಿ ಘಟನೆ ನಡೆದಿದೆ. ವಿಜಯಪುರದಿಂದ ಸೋಲಾಪುರಕ್ಕೆ ಹೋಗುವ ಡೆಮೋ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತಪಟ್ಟಿರುವ ವ್ಯಕ್ತಿಯ ಹೆಸರು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ವಿಜಯಪುರ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ