Site icon Vistara News

Self Harming : ಕೋಟಿ ಕೋಟಿ ಸಾಲ ಮಾಡಿದ್ದ ಪತಿ; ಸಾಲಗಾರರ ಕಾಟಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ

husband had borrowed crores of rupees Wife commits suicide after being harassed by debtors

ಚಿತ್ರದುರ್ಗ: ಬೆಂಗಳೂರಲ್ಲಿ ಖಾಸಗಿ ಬ್ಯಾಂಕ್ ಕಿರುಕುಳಕ್ಕೆ ಅವಳಿ ಮಕ್ಕಳ ಜತೆ ತಾಯಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದರೆ, ಇತ್ತ ಚಿತ್ರದುರ್ಗದಲ್ಲೂ (Chitraduraga News) ಸಾಲಗಾರರ ಕಾಟಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆಗೆ ಶರಣಾದ್ದಾಳೆ.

ಚಿತ್ರದುರ್ಗ ನಗರದ ಹೊಳಲ್ಕೆರೆ ನಗರದ ಬಸವ ಲೇಔಟ್ ನಿವಾಸಿ ರಂಜಿತಾ (23) ಆತ್ಮಹತ್ಯೆ ಮಾಡಿಕೊಂಡವಳು. ಪತ್ನಿ ಸಾವಿಗೆ ಸಾಲಗಾರರೆ ಕಾರಣ ಎಂದು ರಂಜಿತಾ ಪತಿ ದರ್ಶನ್ ದೂರಿದ್ದಾರೆ. ದರ್ಶನ್ ಹಾಗೂ ರಂಜಿತಾ ಐದು ವರ್ಷಗಳ ಹಿಂದೆ ಮದುವೆಯಾಗಿದ್ದರು.

ಸಣ್ಣ ನೀರಾವರಿ ಇಲಾಖೆಯಲ್ಲಿ ಇಂಜಿನಿಯರ್ ಆಗಿದ್ದ ದರ್ಶನ್‌ , ಖಾಸಗಿಯಾಗಿ ಕೋಟಿಗಟ್ಟಲೆ ಸಾಲ ಮಾಡಿಕೊಂಡಿದ್ದ. ದಿನನಿತ್ಯ ಹಣ ನೀಡುವಂತೆ ಸಾಲಗಾರರು ಮನೆಗೆ ಬರುತ್ತಿದ್ದರು. ಹಣಕ್ಕಾಗಿ ಮನೆ ಹತ್ತಿರ ಬಂದು ದಂಪತಿಗೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತು ರಂಜಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ: Murder Case : ಪತ್ನಿಯ ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ್ದ ಕಿರಾತಕ; ಪೋಸ್ಟ್‌ಮಾರ್ಟಂನಲ್ಲಿ ಸಿಕ್ಕಿಬಿದ್ದ!

ಖಾಸಗಿ ಬ್ಯಾಂಕ್ ಕಿರುಕುಳ, ಅವಳಿ ಮಕ್ಕಳ ಜೊತೆ ತಾಯಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಬೆಂಗಳೂರು: ಸಾಲದ ಹೊರೆಗೆ ಅಂಜಿ, ಖಾಸಗಿ ಬ್ಯಾಂಕ್‌ ಸಿಬ್ಬಂದಿಯ ತಾಕೀತಿಗೆ ಅಂಜಿ ಇಬ್ಬರು ಮಕ್ಕಳೊಂದಿಗೆ ತಾಯಿಯೊಬ್ಬರು ಆತ್ಮಹತ್ಯೆ (self harm) ಮಾಡಿಕೊಂಡಿದ್ದಾರೆ. ಜೆ‌ಪಿ ನಗರದ ಮೂರನೇ ಹಂತದಲ್ಲಿ ಈ ದುರಂತ ಸಂಭವಿಸಿದ್ದು, ಖಾಸಗಿ ಬ್ಯಾಂಕ್‌ ಸಾಲದ ಹೊರೆಗೆ ಮೂವರೂ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯ ಅಂಬಲಪಾಡಿ ಮೂಲದವರಾದ ಕುಟುಂಬ ಬೆಂಗಳೂರಿನಲ್ಲಿ ವಾಸವಾಗಿತ್ತು. ಮೃತಪಟ್ಟ ಮಹಿಳೆ ಸುಕನ್ಯ (58). ನಿಖಿತ್, ನಿಶ್ಚಿತ ಮೃತ ಪಟ್ಟಿರುವ ಅವಳಿ ಮಕ್ಕಳು. ನಿನ್ನೆ ಸಂಜೆ ಬ್ಯಾಂಕ್ ಸಿಬ್ಬಂದಿಗಳು ಮನೆಗೆ ಆಗಮಿಸಿ ಸಾಲದ ಹಣ ವಾಪಸು ಕೇಳಿದ್ದರು. ಗಂಡ ಮನೆಯಲ್ಲಿರದ ವೇಳೆ ಬ್ಯಾಂಕ್ ಸಿಬ್ಬಂದಿಗಳು ಬಂದಿದ್ದರು ಎಂದು ಗೊತ್ತಾಗಿದೆ.

ಇದರಿಂದ ನೊಂದ ಸುಕನ್ಯ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಜೆ‌ಪಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮೆಟ್ರೋ ಸಿಬ್ಬಂದಿಯಿಂದ ಅಸಭ್ಯ ವರ್ತನೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಸಿಬ್ಬಂದಿಯೊಬ್ಬ ಮಹಿಳೆಯ ಮುಂದೆ ಅಸಭ್ಯವಾದ ವರ್ತನೆ (Indecent behavior) ತೋರಿಸಿದ್ದಾನೆ. ಇದರಿಂದ ಆತಂಕಿತರಾದ ಮಹಿಳೆ, ʼನನಗೆ ಇಲ್ಲಿ ಅಸುರಕ್ಷಿತʼ ಎನಿಸುತ್ತಿದೆ ಎಂದು ಎಕ್ಸ್‌ನಲ್ಲಿ ಸಂದೇಶ ಹಾಕಿದ್ದಾರಲ್ಲದೆ, ಕ್ರಮ ಕೈಗೊಳ್ಳುವಂತೆ ಮೆಟ್ರೋ ಅಧಿಕಾರಿಗಳು ಹಾಗೂ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಜಾಲಹಳ್ಳಿ ಮೆಟ್ರೋ ಫ್ಲಾಟ್‌ಫಾರಂನಲ್ಲಿ ಘಟನೆ ನಡೆದಿದ್ದು, ಮೆಟ್ರೋ ಸಿಬ್ಬಂದಿಯಿಂದ ಈ ಕೃತ್ಯ ನಡೆದಿದೆ ಎಂದು ದೂರಲಾಗಿದೆ. ಎದುರಿನ ಫ್ಲಾಟ್‌ಫಾರಂನಲ್ಲಿದ್ದ ಮಹಿಳೆಯ ಮುಂದೆ ಖಾಸಗಿ ಅಂಗವನ್ನು ಸ್ಪರ್ಶ ಮಾಡಿಕೊಂಡು ದುರ್ವರ್ತನೆ ತೋರಿದ್ದಾನೆ. ಇದನ್ನು ಮಹಿಳೆ ಆಕ್ಷೇಪಿಸಿದರೂ ಆತ ನಿಲ್ಲಿಸಿಲ್ಲ. ಬಳಿಕ ಆಕೆ ಇದನ್ನು ವಿಡಿಯೋ ಮಾಡಿಕೊಳ್ಳಲು ಆರಂಭಿಸಿದಾಗ ಆತ ಅಲ್ಲಿಂದ ಹೋಗಿದ್ದಾನೆ ಎಂದು ಗೊತ್ತಾಗಿದೆ.

ಈ ವಿಚಾರವನ್ನು ಮಹಿಳೆ ಮೆಟ್ರೋ ಮೇಲಧಿಕಾರಿಗಳಿಗೆ ದೂರು ನೀಡಿದ್ದಾರೆ. ಅವರಿಂದ ಯಾವುದೇ ಕ್ರಮ ಬರದಿರುವ ಹಿನ್ನೆಲೆಯಲ್ಲಿ, ಪೊಲೀಸರಿಗೆ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version