Self Harming : ಹೆಂಡ್ತಿ ಟಾರ್ಚರ್‌ಗೆ ನೇಣು ಬಿಗಿದುಕೊಂಡು ಗಂಡ ಆತ್ಮಹತ್ಯೆ - Vistara News

ಚಿತ್ರದುರ್ಗ

Self Harming : ಹೆಂಡ್ತಿ ಟಾರ್ಚರ್‌ಗೆ ನೇಣು ಬಿಗಿದುಕೊಂಡು ಗಂಡ ಆತ್ಮಹತ್ಯೆ

Self Harming : ತನ್ನ ವಿರುದ್ಧ ಪತ್ನಿ ದೂರು ಕೊಟ್ಟಿದ್ದಕ್ಕೆ ಮನನೊಂದ ಪತಿ ನೇಣುಬಿಗಿದುಕೊಂಡು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

VISTARANEWS.COM


on

Self Harming
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ನಗರದ ಐಯುಡಿಪಿ (IUDP) ಲೇಔಟ್ ನಿವಾಸಿ ಮಂಜುನಾಥ (38) ಆತ್ಮಹತ್ಯೆ ಮಾಡಿಕೊಂಡವರು.

ಕಳೆದ ಎರಡು ವರ್ಷಗಳ ಹಿಂದೆ ಚೇತನ ಎಂಬಾಕೆ ಜತೆ ಮಂಜುನಾಥ್ ವಿವಾಹವಾಗಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಚೇತನ ಪತಿ ಮಂಜುನಾಥ್‌ಗೆ ಕಿರುಕುಳ ನೀಡುತ್ತಿದ್ದರಂತೆ. ಚೇತನಾ ವಿರುದ್ಧ ಮಂಜುನಾಥ್ ಪೋಷಕರು ಆರೋಪಿಸಿದ್ದಾರೆ.

ಜಿಲ್ಲಾಸ್ಪತ್ರೆ ಸಿಟಿ ಸ್ಕ್ಯಾನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಮೇಲೆ ಚೇತನ ಮಹಿಳಾ ಠಾಣೆಗೆ ದೂರು ನೀಡಿದ್ದರು. ಪತ್ನಿ ದೂರು ನೀಡಿದ ವಿಷಯ ತಿಳಿದ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Murder Case: ಅಟ್ಟಾಡಿಸಿಕೊಂಡು ಹೋಗಿ ಮಾರಾಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್‌ನ ಕೊಲೆ

ಡೆತ್‌ ನೋಟ್‌ ಬರೆದಿಟ್ಟು ಜಮ್ಮು-ಕಾಶ್ಮೀರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಡೆತ್‌ ನೋಟ್‌ ಬರೆದಿಟ್ಟು ಜಮ್ಮು-ಕಾಶ್ಮೀರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವುದು ನಗರ ಹೊರವಲಯದ ಯಲಹಂಕದಲ್ಲಿ ನಡೆದಿದೆ. ನನ್ನ ಸಾವಿಗೆ‌ ನಾನೇ ಕಾರಣ ಎಂದು ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತನ್ವೀರ್ ಮೃತ ವಿದ್ಯಾರ್ಥಿ. ಪ್ರತಿಷ್ಠಿತ ರೇವಾ ಯೂನಿವರ್ಸಿಟಿಯಲ್ಲಿ ಬಿಎಸ್ಸಿ ದ್ವಿತೀಯ ವರ್ಷ ವ್ಯಾಸಂಗ ಮಾಡುತ್ತಿದ್ದ ತನ್ವೀರ್, ಭಾನುವಾರ ಇದ್ದಕ್ಕಿದ್ದಂತೆ ಪಿ.ಜಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಿ.ಜಿಯಲ್ಲಿನ ಕೆಲ‌ ವಿದ್ಯಾರ್ಥಿಗಳು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು, ತನ್ವೀರ್‌ನ ಪೋಷಕರಿಗೆ ಮಾಹಿತಿ ನೀಡಲಾಗಿದೆ. ಹೀಗಾಗಿ ಪೋಷಕರು ಕಾಶ್ಮೀರದಿಂದ ಬರುತ್ತಿದ್ದಾರೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಧಾರಾಕಾರ ಮಳೆಗೆ ಕೆರೆಯಂತಾದ ಬೆಂಗಳೂರು-ಹೊಸೂರು ಹೈವೆ; ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

Karnataka Rain : ನಿನ್ನೆ ಮಧ್ಯರಾತ್ರಿ ಸುರಿದ ಮಳೆಗೆ (Bengaluru Rain) ನಾನಾ ಅವಾಂತರವೇ ಸೃಷ್ಟಿಯಾಗಿದೆ. ಬೆಂಗಳೂರು-ಹೊಸೂರು ಹೆದ್ದಾರಿ ಹಾಗೂ ಡ್ಯಾಡಿಸ್ ಗಾರ್ಡನ್ ಲೇಔಟ್‌ ಜಲಾವೃತಗೊಂಡಿದೆ. ಜನರು ಹೊರಬರಲು ಆಗದೆ ಸಂಕಷ್ಟ ಎದುರಿಸುತ್ತಿದ್ದಾರೆ.

VISTARANEWS.COM


on

By

karnataka rain weather forecast
Koo

ಬೆಂಗಳೂರು ಗ್ರಾಮಾಂತರ: ಕಳೆದ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ (Karnataka Rain) ಬೆಂಗಳೂರು ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ನಾಲ್ಕೈದು ಗಂಟೆಗಳ ಕಾಲ ಸತತವಾಗಿ ಸುರಿದ ಮಳೆಗೆ (Bengaluru rain) ಬೆಂಗಳೂರು-ಹೊಸೂರು ಹೈವೆ ಕೆರೆಯಂತಾಗಿದೆ. ಬೆಂಗಳೂರು ಹೊಸೂರು ಹೆದ್ದಾರಿಯ ಸಿಲ್ಕ್ ಬೊರ್ಡ್ ಜಂಕ್ಷನ್‌ನಲ್ಲಿ ಮೂರ್ನಾಲ್ಕು ಅಡಿಗಳಷ್ಟು ಮಳೆ ನೀರು ನಿಂತಿದೆ.

ಜಲಾವೃತಗೊಂಡ ರಸ್ತೆಯ ನೀರಿನಲ್ಲಿಯೇ ಜನರು ಓಡಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಹೆದ್ದಾರಿ ಜಲಾವೃತದಿಂದಾಗಿ ಸೋಮವಾರ ಬೆಳಗ್ಗೆ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಟ್ರಾಫಿಕ್ ಜಾಮ್‌ ಜತೆಗೆ ಕೆರೆಯಂತಾದ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು. ಮೆಟ್ರೋ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಳೆ ನೀರು ಹೊರಹೋಗಲು ಯಾವುದೇ ಸೂಕ್ತ ವ್ಯವಸ್ಥೆ ಇಲ್ಲ. ಇದರಿಂದಾಗಿ ರಸ್ತೆಯೆಲ್ಲ ಜಲಾವೃತಗೊಂಡಿತ್ತು. ಪ್ರತಿ ಬಾರಿ ಮಳೆ ಬಂದಾಗ ಸಿಲ್ಕ್ ಬೋರ್ಡ್ ಜಂಕ್ಷನ್‌ ಜಲಾವೃತಗೊಳ್ಳಲಿದೆ.

ಇದನ್ನೂ ಓದಿ: Heavy Rain: ಸಿಲಿಕಾನ್‌ ಸಿಟಿಯಲ್ಲಿ ಮಳೆಯ ಅಬ್ಬರ; ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ

ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

ಭಾರಿ ಮಳೆಗೆ ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ಹೆಬ್ಬಗೋಡಿಯ ಕಮ್ಮಸಂದ್ರದ ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ ಹಾಕಲಾಗಿದೆ. ಕಳೆದ ರಾತ್ರಿಯಿಂದ ಸುರಿದ ಧಾರಾಕಾರ ಮಳೆಗೆ ಬಡಾವಣೆ ಸಂಪೂರ್ಣ ಜಲಾವೃತಗೊಂಡಿದೆ. ಮನೆಯಿಂದ ಹೊರಬರಲಾಗದೆ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೂರಾರು ಮನೆಗಳಿರುವ ಡ್ಯಾಡಿಸ್ ಗಾರ್ಡನ್ ಲೇಔಟ್‌ನಲ್ಲಿ ಮಳೆ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಇಲ್ಲದೆ ಅವಾಂತರವೇ ಸೃಷ್ಟಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ತಂಡ ದೌಡಾಯಿಸಿದ್ದು, ನಿವಾಸಿಗಳನ್ನು ಸುರಕ್ಷಿತವಾಗಿ ಮನೆಯಿಂದ ಹೊರಕರೆತರುತ್ತಿದ್ದಾರೆ.

ಕಾಲೇಜು ಆವರಣದಲ್ಲಿ ಜಲಾವೃತ

ಬೆಂಗಳೂರು ಗ್ರಾಮಾಂತರದ ಆನೇಕಲ್ ಪಟ್ಟಣದ ಗೋಪಾಲರಾಜು ಕಾಲೇಜು ಜಲಾವೃತಗೊಂಡಿದೆ. ಬೆಳಗಿನ ಜಾವ ಕಾಲೇಜಿಗೆ ಬಂದ ವಿದ್ಯಾರ್ಥಿಗಳು ಪರದಾಡಿದರು. ಆನೇಕಲ್ ಪಟ್ಟಣದ ಏಕೈಕ ಸರ್ಕಾರಿ ಡಿಗ್ರಿ ಕಾಲೇಜು ಇದಾಗಿದ್ದು, ಮಳೆಗೆ ಕಾಲೇಜು ಒಳಗಡೆ ಹೋಗಲು ಆಗದೆ ವಿದ್ಯಾರ್ಥಿಗಳು ಸಂಕಷ್ಟ ಎದುರಿಸಿದ್ದರು. ಪುರಸಭೆ ಅಧಿಕಾರಿಗಳು ಸರಿಪಡಿಸಿ ಕೊಡುವಂತೆ ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather : ಬೆಂಗಳೂರಿಗೆ ಭಾರಿ ಮಳೆ ಎಚ್ಚರಿಕೆ; ಚಾಮರಾಜನಗರ, ರಾಮನಗರಕ್ಕೆ ಯೆಲ್ಲೋ ಅಲರ್ಟ್‌

Karnataka Weather Forecast : ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಕ್ರಿಯಗೊಂಡಿದ್ದು, ಭಾರಿ ಮಳೆಯಾಗುವ (Heavy Rain alert) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ವ್ಯಾಪಕ್‌ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

Karnataka Weather forecast
Koo

ಬೆಂಗಳೂರು: ದಕ್ಷಿಣ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣದೊಂದಿಗೆ ಭಾರೀ ಮಳೆಯಾಗುವ (Heavy Rain alert) ಸಾಧ್ಯತೆ ಇದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

ದಕ್ಷಿಣ ಒಳನಾಡಿನ ಕೋಲಾರ, ರಾಮನಗರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Assault Case : ಅಂಜುಮನ್ ಸಂಸ್ಥೆ ಅಧ್ಯಕ್ಷನ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ ಅಪರಿಚಿತರು

ಬೆಂಗಳೂರಿನಲ್ಲಿ ಭಾರಿ ಮಳೆ ಎಚ್ಚರ

ಬೆಂಗಳೂರು ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಈ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಸೋಬಾನೆ ಹಾಡುತ್ತಾ ಭತ್ತ ನಾಟಿ ಮಾಡಿದ ರೈತರು; ನಾಳೆಯಿಂದ ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ

Karnataka Weather Forecast : ಮಲೆನಾಡು ಭಾಗದಲ್ಲಿ ಮಳೆಯು ಬಿಡುವು ಕೊಟ್ಟಿದ್ದು, ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಸೋಬಾನೆ ಹಾಡುತ್ತಾ ಭತ್ತದ ನಾಟಿ ಮಾಡಿದ್ದಾರೆ. ಇತ್ತ ಹಾವೇರಿಯಲ್ಲಿ ನಿರಂತರ ಮಳಗೆ ಸರ್ಕಾರಿ ಆಸ್ಪತ್ರೆಯ ಕಟ್ಟಡ ಸೋರುತ್ತಿದೆ.

VISTARANEWS.COM


on

By

karnataka weather Forecast
Koo

ಚಿಕ್ಕಮಗಳೂರು: ಮಲೆನಾಡಿನ ಚಿಕ್ಕಮಗಳೂರಿನಲ್ಲಿ ವರುಣ (Karnataka weather Forecast) ಬಿಡುವು ಕೊಟ್ಟಿದ್ದು, ಇತ್ತ ಕೃಷಿ ಕುಟುಂಬಗಳು ಭತ್ತದ ನಾಟಿ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹೇರೂರು ಗ್ರಾಮದಲ್ಲಿ ರೈತರಿಂದ ಭತ್ತದ ನಾಟಿ ಸಂಭ್ರಮ ಮನೆ ಮಾಡಿತ್ತು. ಮಲೆನಾಡಿನ ಸೋಬಾನೆ ಗೀತೆ ಹಾಡುತ್ತಾ ಭತ್ತದ ನಾಟಿ ಮಾಡುವ ಚಿತ್ರಣ ಕಂಡು ಬಂತು. ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್ ಆರ್ ಪುರ ಭಾಗಗಳಲ್ಲಿ ಭತ್ತದ ನಾಟಿ ಕಾರ್ಯ ಶುರುವಾಗಿದೆ.

ನಿರಂತರ ಮಳೆಗೆ ಶಿಥಿಲಗೊಂಡ ಆಸ್ಪತ್ರೆ

ಹಾವೇರಿ: ನಿರಂತರ ಮಳೆಗೆ ಪ್ರಾಥಮಿಕ ಆರೋಗ್ಯ ಕೇಂದ್ರವು ಸೋರುತ್ತಿದೆ. ಬಡ ಜನರ ಪಾಲಿನ ಸಂಜೀವಿನಿದ್ದ ಆಸ್ಪತ್ರೆ ಕುಸಿದು ಬೀಳುವ ಸ್ಥಿತಿಯಲ್ಲಿದೆ. ಹಾವೇರಿ ಜಿಲ್ಲೆ ಹಿರೇಕೇರೂರು ತಾಲೂಕು ಕೋಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೇ ನಂಬಿಕೊಂಡಿದ್ದ ಹಲವು ಗ್ರಾಮಗಳ ಜನರು ಕಂಗಾಲಾಗಿದ್ದಾರೆ.

ಕಟ್ಟಡ ಶಿಥಿಲವಾಗಿದ್ದರಿಂದ ಸಾರ್ವಜನಿಕರಿಗೆ ನೋ ಎಂಟ್ರೀ ಬೋರ್ಡ್ ಹಾಕಿದ್ದಾರೆ. ಆಸ್ಪತ್ರೆಯ ಚಾವಣಿ ಕಿತ್ತು ಬರುತ್ತಿದ್ದರು, ಇಕ್ಕಟ್ಟಿನಲ್ಲೇ ಎರಡು ಕೊಠಡಿಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎರಡೇ ಕೊಠಡಿಗಳಲ್ಲಿ ರೋಗಿಗಳು, ಔಷಧ, ಪೀಠೋಪಕಣ, ವೈದ್ಯಕೀಯ ಸಲಕರಣೆಗಳನ್ನು ಇಟ್ಟುಕೊಂಡಿದ್ದಾರೆ.

ಖಾಯಂ ವೈದ್ಯಾಧಿಕಾರಿಯೂ ಇಲ್ಲ, ವ್ಯವಸ್ಥೆಯೂ ಇಲ್ಲದಂತಾಗಿದೆ. ಆಸ್ಪತ್ರೆ ಕಟ್ಟಡ ಕೆಡವಿ ಹೊಸ ಆಸ್ಪತ್ರೆಗೆ ಮನವಿ ಮಾಡಿದ್ದರೂ ಆರೋಗ್ಯ ಇಲಾಖೆ ಡೋಂಟ್ ಕೇರ್ ಎನ್ನುತ್ತಿದೆ. ಕೆಲ ದಿನಗಳ ಹಿಂದೆ ವೈದ್ಯರ ಮೇಲೆ ಮೇಲ್ಚಾವಣಿಯ ಸಿಮೆಂಟ್ ಕುಸಿದು ಬಿದ್ದಿತ್ತು. ನಂತರ ಎಚ್ಚೆತ್ತು ಪ್ರತ್ಯೇಕ ಕೊಠಡಿ ಮಾಡಿ ರೋಗಿಗಳಿಗೆ ಚಿಕಿತ್ಸೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: Hidden Camera : ಲೇಡಿಸ್‌ ವಾಶ್‌ರೂಮ್‌ನ ಕಸದ ಬುಟ್ಟಿಯಲ್ಲಿತ್ತು ಮೊಬೈಲ್‌; ರೆಕಾರ್ಡ್‌ ಆಯ್ತು 2 ಗಂಟೆಗಳ ವಿಡಿಯೊ!

ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಆ.12ರಂದು ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣದೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾದರೆ, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಶುಷ್ಕ ಹವಾಮಾನವು ಇರಲಿದೆ. ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹಾಸನ

Bear Attack : ರೈತನ ಮೇಲೆ ಡೆಡ್ಲಿ ಅಟ್ಯಾಕ್‌ ಮಾಡಿ ಕೊಂದು ಹಾಕಿದ ಕರಡಿ

Bear Attack : ಹಾಸನದಲ್ಲಿ ರೈತನ ಮೇಲೆ ಕರಡಿಯೊಂದು ದಾಳಿ ಮಾಡಿದ್ದು, ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಇತ್ತ ಚಿತ್ರದುರ್ಗದಲ್ಲಿ ಇನ್ನೊಂದು ಕರಡಿ ದೇವಸ್ಥಾನದಲ್ಲಿ (Wild animals attack) ಇಟ್ಟಿದ್ದ ದೀಪದ ಎಣ್ಣೆ ಕುಡಿದು ಹೋಗಿದೆ.

VISTARANEWS.COM


on

By

Bear attack
Koo

ಹಾಸನ: ಕರಡಿ ದಾಳಿಯಿಂದ (Bear Attack ) ಗಾಯಗೊಂಡಿದ್ದ ರೈತರೊಬ್ಬರು ಮೃತಪಟ್ಟಿದ್ದಾರೆ. ಮಹಾಲಿಂಗಪ್ಪ (75) ಮೃತ ದುರ್ದೈವಿ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿಯ ಜನ್ನಾವರ ಗ್ರಾಮದಲ್ಲಿ ಘಟನೆ ನಡೆದಿದೆ.

ಜು.25ರಂದು ಬೆಳಗ್ಗೆ ಮಹಾಲಿಂಗಪ್ಪ ಅವರು ತೋಟದ ಮನೆಯ ಬಳಿ ನಿಂತಿದ್ದರು. ಈ ವೇಳೆ ಹಿಂದಿನಿಂದ ಬಂದ ಕರಡಿ ಡೆಡ್ಲಿ ಅಟ್ಯಾಕ್ ಮಾಡಿತ್ತು. ವೃದ್ಧ ಮಹಾಲಿಂಗಪ್ಪ ಅವರ ತಲೆಯ ಚರ್ಮವನ್ನೇ ಕಿತ್ತು, ಮುಖವನ್ನು ಪರಚಿ ತೀವ್ರವಾಗಿ ಗಾಯಗೊಳಿಸಿತ್ತು.

ಗಂಭೀರ ಗಾಯಗೊಂಡಿದ್ದ ಅವರನ್ನು ಅರಸೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸಾವು ಬದುಕಿನ ಮಧ್ಯೆ ಹೋರಾಡಿದ ಮಹಾಲಿಂಗಪ್ಪ ಅವರು ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್‌ 11ರಂದು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Hidden Camera : ಲೇಡಿಸ್‌ ವಾಶ್‌ರೂಮ್‌ನ ಕಸದ ಬುಟ್ಟಿಯಲ್ಲಿತ್ತು ಮೊಬೈಲ್‌; ರೆಕಾರ್ಡ್‌ ಆಯ್ತು 2 ಗಂಟೆಗಳ ವಿಡಿಯೊ!

ದೀಪದ ಎಣ್ಣೆ ಕುಡಿದು ಹೋದ ಕರಡಿ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಲಿಂಗನಹಳ್ಳಿ ಆಂಜನೇಯ ದೇವಸ್ಥಾನದಲ್ಲಿ ಕರಡಿ ಪ್ರತ್ಯಕ್ಷಗೊಂಡಿದೆ. ಆಂಜನೇಯ ದೇವಸ್ಥಾನಕ್ಕೆ ಬಂದ ಕರಡಿಯೊಂದು ದೀಪದ ಎಣ್ಣೆ ಕುಡಿದು ಹೋಗಿದೆ. ರಾತ್ರಿ ಕಾಣಿಸಿಕೊಂಡ ಕರಡಿ ಓಡಿಸಲು ಗ್ರಾಮಸ್ಥರು ಹರಸಾಹಸ ಪಟ್ಟರು.

ಕರಡಿಯಿಂದ ಜೀವ ಹಾನಿ ಆಗುವ ಭಯದಲ್ಲಿದ್ದು, ಹಲವು ಬಾರಿ ಕರಡಿ ಸೆರೆಗೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಮನವಿಗೆ ಸ್ಪಂದಿಸದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಕಿಡಿಕಾರಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
bengaluru power cut
ಬೆಂಗಳೂರು31 mins ago

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಪವರ್‌ ಕಟ್‌

Human-Elephant Conflict
ಕರ್ನಾಟಕ1 hour ago

Human-Elephant Conflict: ಮಾನವ-ಆನೆ ಸಂಘರ್ಷ ತಡೆಗೆ ಸರ್ಕಾರ ಬದ್ಧವಾಗಿದೆ: ಸಿಎಂ ಸಿದ್ದರಾಮಯ್ಯ

Bengaluru rain
ಮಳೆ1 hour ago

Bengaluru Rains : ಬೃಹತ್‌ ಗಾತ್ರದ ಮರದ ಕೊಂಬೆಗಳು ಬಿದ್ದು 6 ಮಂದಿಗೆ ಗಾಯ; ಆರೋಗ್ಯ ವಿಚಾರಿಸಿದ ಡಿಕೆ ಶಿವಕುಮಾರ್

Palika Bazar
ವಾಣಿಜ್ಯ1 hour ago

Palika Bazar: ಬೆಂಗಳೂರಿನಲ್ಲೂ ದೆಹಲಿಯಂತಹ ʼಪಾಲಿಕಾ ಬಜಾರ್ʼ; ಎಲ್ಲಿ ನಿರ್ಮಾಣ? ಯಾವಾಗ ಆರಂಭ?

Viral Video
Latest1 hour ago

Viral Video: ಕಂಠ ಪೂರ್ತಿ ಕುಡಿದ ಪಿಯು ಹುಡುಗನ ಕಾರು ಚಾಲನೆ; ಜೀವ ಕಳೆದುಕೊಂಡ ಅಮಾಯಕ

Self Harming
Latest1 hour ago

Self Harming: ಶಿಕ್ಷಕಿ, ಸಹಪಾಠಿಗಳ ಕಿರುಕುಳ ತಾಳಲಾರದೆ ನೇಣಿಗೆ ಶರಣಾದ ಬಾಲಕ

Mahesh Babu’s new look goes viral ahead of SSMB29
ಟಾಲಿವುಡ್2 hours ago

Mahesh Babu: ಮಹೇಶ್ ಬಾಬು ಲುಕ್‌ಗೆ ಫ್ಯಾನ್ಸ್‌ ಫಿದಾ; ಫೋಟೊ ವೈರಲ್‌!

Channaptna By Election
ರಾಜಕೀಯ2 hours ago

Channaptna By Election: ಚನ್ನಪಟ್ಟಣ ಉಪಚುನಾವಣೆ: ಮೈತ್ರಿ ಪಕ್ಷದ ಅಭ್ಯರ್ಥಿ ಆಗದಿದ್ದರೆ ಸ್ವತಂತ್ರ ಸ್ಪರ್ಧೆ ಎಂದ ಯೋಗೇಶ್ವರ್

submarines
ದೇಶ2 hours ago

Submarines: ಎರಡು ಪರಮಾಣು ಜಲಾಂತರ್ಗಾಮಿ ನೌಕೆಗಳಿಗಾಗಿ ಕೇಂದ್ರಕ್ಕೆ ಭಾರತೀಯ ನೌಕಾಪಡೆ ಮನವಿ

Urfi Javed 'LED Display Top' On Mumbai Streets
ಬಾಲಿವುಡ್3 hours ago

Urfi Javed: ಎಲ್ಇಡಿ ಡಿಸ್ಪ್ಲೇ ಇಂದ ಮಾನ ಮುಚ್ಚಿಕೊಂಡು ಬಂದ ಉರ್ಫಿ ಜಾವೇದ್!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು6 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ6 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌