ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ (Chitradurga News) ಚಳ್ಳಕೆರೆ ತಾಲೂಕಿನ ಮಲ್ಲ ಸಮುದ್ರ ಗ್ರಾಮದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊನೆಗೆ ತಾನೂ ಅಗ್ನಿ ಪ್ರವೇಶ ಮಾಡಿದ್ದಾಳೆ (Mother kills two Children and Ends life). ಕೌಟುಂಬಿಕ ಕಲಹದ (Family Dispute) ಹಿನ್ನೆಲೆಯಲ್ಲಿ ಈ ದುರಂತ ನಡೆದಿದೆ (Self Harming) ಎಂದು ಹೇಳಲಾಗಿದೆ.
ಮಾರಕ್ಕ ಎಂಬ 24 ವರ್ಷದ ಮಹಿಳೆಯೇ ತನ್ನ ಇಬ್ಬರು ಪುಟ್ಟ ಕಂದಮ್ಮಗಳಾದ ನಯನ (4) ಮತ್ತು ಹರ್ಷ ವರ್ಧನ್ (2)ಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ತಾನೂ ಸಾವನ್ನಪ್ಪಿದವರು.
ಮಕ್ಕಳನ್ನು ಮನೆಯಿಂದ ಹೊರಡಿಸಿ ಗ್ರಾಮದ ಹೊರವಲಯಕ್ಕೆ ಹೋಗಿ ಅಲ್ಲಿ ಈ ಅತಿರೇಕದ ಕೃತ್ಯ ನಡೆಸಿದ್ದಾರೆ ಎಂದು ಹೇಳಲಾಗಿದೆ. ಕೌಟುಂಬಿಕ ಕಲಹದಿಂದ ತೀವ್ರವಾಗಿ ನೊಂದಿದ್ದ ಆಕೆ ಬದುಕು ಬೇಡವೆಂದು ತೀರ್ಮಾನಿಸಿದ್ದಾರೆ. ನಾನು ಇಲ್ಲದಿದ್ದರೆ ಈ ಪುಟ್ಟ ಮಕ್ಕಳು ಹೇಗೆ ಬದುಕಿಯಾವು ಎಂಬ ಯೋಚನೆ ಬರುತ್ತಿದ್ದಂತೆಯೇ ಮೊದಲು ಅವರನ್ನು ಬೆಂಕಿಗೆ ಹಾಕಿ ಕೊನೆಗೆ ತಾನೂ ಆಹುತಿಯಾಗಿದ್ದಾರೆ.
ಬೆಂಕಿಯ ಕೆನ್ನಾಲಿಗೆಯಲ್ಲಿ ಮಕ್ಕಳು ಮತ್ತು ತಾಯಿ ಸುಟ್ಟು ಹೋದ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ಮೃತದೇಹಗಳನ್ನು ರವಾನೆ ಮಾಡಲಾಗಿದೆ. ಮಾರಕ್ಕ ಎದುರಿಸುತ್ತಿದ್ದ ಮಾನಸಿಕ ಹಿಂಸೆೈ ಬಗ್ಗೆ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.
ಕೌಟುಂಬಿಕ ಕಲಹ: ಹೆಂಡತಿ ಮೇಲೆ ಆಸಿಡ್ ದಾಳಿ ನಡೆಸಿದ ಧೂರ್ತ ಗಂಡ
ಆನೇಕಲ್: ಹೆಣ್ಮಕ್ಕಳ ಮೇಲೆ ದುಷ್ಟರು, ಕಾಮುಕರು ಆಸಿಡ್ ದಾಳಿ (Acid Attack) ನಡೆಸುವುದನ್ನು ಕೇಳಿದ್ದೇವೆ. ಆದರೆ, ಇಲ್ಲೊಬ್ಬ ದುಷ್ಟ ಪತಿಯೇ ತನ್ನ ಹೆಂಡತಿಯ ಮೇಲೆ ಆಸಿಡ್ ದಾಳಿ (Man throws Acid on wife) ನಡೆಸಿದ್ದಾನೆ. ಘಟನೆ ನಡೆದಿರುವುದು ಬೆಂಗಳೂರು ಹೊರವಲಯದ (Bangalore News) ಆನೆಕಲ್ ತಾಲೂಕಿನ ಗೌರೇನ ಹಳ್ಳಿಯಲ್ಲಿ.
ಚಾಂದ್ ಪಾಷಾ (45) ಎಂಬಾತ ತನ್ನ ಪತ್ನಿಯಾದ ನಾಜಿಯಾ ಬೇಗಂ (40) ಮೇಲೆ ದಾಳಿ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ನಾಜಿಯಾ ಬೇಗಂ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಾಂದ್ ಪಾಷಾ ಮತ್ತು ನಾಜಿಯಾ ಬೇಗಂ ಹಲವು ವರ್ಷದ ಹಿಂದೆ ಮದುವೆಯಾದವರು. ಆದರೆ, ಹಿಂದಿನಿಂದಲೇ ಸಂಬಂಧ ಅಷ್ಟೇನೂ ಚೆನ್ನಾಗಿರಲಿಲ್ಲ. ಗಂಡನ ಕಿರಿಕಿರಿಯಿಂದ ನಾಜಿಯಾ ಹತಾಶರಾಗಿದ್ದರು. ಆತ ಆಗಾಗ ಹೊಡೆಯುವುದು, ಮನೆಯಿಂದ ಹೊರಹಾಕುವ ಹಿಂಸೆ ನೀಡುತ್ತಿದ್ದ. ಆದರೆ ನಾಜಿಯಾ ಅದನ್ನೆಲ್ಲ ಸಹಿಸಿಕೊಂಡಿದ್ದರು.
ಇದನ್ನೂ ಓದಿ: Family Problem : ಹೆಂಡತಿಗೆ ಮಂಡೆ ಸರಿ ಇಲ್ಲ ಎಂದ ಗಂಡನಿಗೆ ಹೈಕೋರ್ಟ್ ದಂಡ!
ಕೌಟುಂಬಿಕ ಕಲಹ ಇತ್ತೀಚೆಗೆ ತೀವ್ರವಾಗಿತ್ತು. ಈ ಹಂತದಲ್ಲಿ ಗಂಡ ತನ್ನ ಹೆಂಡತಿಯ ಮೇಲೆ ಸೇಡು ತೀರಿಸಿಕೊಳ್ಳಲು ಮುಂದಾದ. ಮಾರ್ಚ್ 17ನೇ ತಾರೀಖಿನ ರಾತ್ರಿ ಪತ್ನಿ ಮಲಗಿದ್ದನ್ನು ಗಮನಿಸಿದ ಧೂರ್ತ ಗಂಡ ಆಕೆಯ ಮೇಲೆ ಮಲಗಿದಲ್ಲಿಗೇ ಆಸಿಡ್ ದಾಳಿ ನಡೆಸಿದ್ದಾನೆ. ಮನೆಯಲ್ಲಿ ಟಾಯ್ಲೆಟ್ ಕ್ಲೀನ್ ಮಾಡಲು ಬಳಸುವ ಆಸಿಡನ್ನೇ ಆತ ಆಕೆಯ ಮೇಲೆ ಎರಚಿದ್ದ.
ಮಲಗಿದ್ದಾಗ ಒಮ್ಮಿಂದೊಮ್ಮೆಗೇ ಮುಖದ ಮೇಲೆ ಏನೋ ಬಿದ್ದು ಉರಿ ಏಳುತ್ತಿದ್ದಂತೆಯೇ ನಾಜಿಯಾ ಎದ್ದು ಜೋರಾಗಿ ಬೊಬ್ಬೆ ಹೊಡೆದರು. ಹೆಂಡತಿ ಕಿರುಚಾಡುತ್ತಿದ್ದಂತೆಯೇ ಚಾಂದ್ ಪಾಷಾ ಬೈಕ್ ತೆಗೆದುಕೊಂಡು ಅಲ್ಲಿಂದ ಪರಾರಿಯಾಗಿದ್ದಾನೆ. ಬಳಿಕ ಸ್ಥಳೀಯರು ಸೇರಿ ನಾಜಿಯಾ ಅವರನ್ನು ಆನೇಕಲ್ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟಾಯ್ಲೆಟ್‌ಗೆ ಬಳಸುವ ಆಸಿಡ್ ಆಗಿದ್ದರಿಂದ ಸ್ವಲ್ಪ ದುರ್ಬಲವಾಗಿದೆ. ಹೀಗಾಗಿ ಆಕೆಯ ಪ್ರಾಣ ಉಳಿದಿದೆ ಎನ್ನಲಾಗಿದೆ.