Site icon Vistara News

Skeletons found : ಪಾಳು ಬಿದ್ದ ಮನೆ ಗೋಡೆ ಮೇಲೆ ಪತ್ತೆಯಾದ್ವು 5 ಕೈ ಗುರುತುಗಳು! ಅಸ್ಥಿಪಂಜರ ಕೇಸ್‌ಗೆ ಟ್ವಿಸ್ಟ್‌

skeletons found in chitradurga Hand marks on the wall of a dilapidated house

ಚಿತ್ರದುರ್ಗ: ಐವರ ಅಸ್ಥಿಪಂಜರ ಪತ್ತೆ ಪ್ರಕರಣವು ಕ್ಷಣಕ್ಕೊಂದು ತಿರುವು (Skeletons found) ಪಡೆದುಕೊಳ್ಳುತ್ತಿದೆ. ಕಾಲು ಕಟ್ಟಿದ ಸ್ಥಿತಿಯಲ್ಲಿ ಇಬ್ಬರ ಅಸ್ಥಿಪಂಜರ ಪತ್ತೆಯಾಗಿದೆ ಎಂಬ ಸುದ್ದಿ ಮಧ್ಯೆ ಇದೀಗ, ಮನೆ ಗೋಡೆ ಮೇಲೆ ಐದು ಕೈ ಗುರುತುಗಳು ಪತ್ತೆಯಾಗಿವೆ.

ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಬಳಿಯಿರುವ ದೊಡ್ಡ ಸಿದ್ದವ್ವನ ಹಳ್ಳಿಯ ನಿವಾಸಿ ಜಗನ್ನಾಥ್ ರೆಡ್ಡಿ ಎಂಬವರ ಇಡೀ ಕುಟುಂಬದವರ ಅಸ್ಥಿಪಂಜರ ಪತ್ತೆಯಾಗಿತ್ತು. ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿತ್ತು. ಕುಟುಂಬದ ಯಜಮಾನ ಜಗನ್ನಾಥ್ ರೆಡ್ಡಿ, ಅವರ ಪತ್ನಿ ಪ್ರೇಮ, ಮಕ್ಕಳಾದ ತ್ರಿವೇಣಿ, ನರೇಂದ್ರ ರೆಡ್ಡಿ, ಕೃಷ್ಣ ರೆಡ್ಡಿ ಅವರ ಮೃತದೇಹದ ಅಸ್ಥಿಪಂಜರಗಳು ಪತ್ತೆ ಆಗಿತ್ತು.

ಸದ್ಯ ಘಟನಾ ಸ್ಥಳವಾಗಿರುವ ಪಾಳು ಮನೆಯಲ್ಲೇ ಪೊಲೀಸರು, ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ, ಬೆರಳಚ್ಚು ತಜ್ಞರು ಬೀಡು ಬಿಟ್ಟಿದ್ದಾರೆ. ಮನೆಯೊಳಗೆ ಹೊರಗೆಲ್ಲ ಪರಿಶೀಲನೆ ನಡೆಸುತ್ತಿರುವ ಪೊಲೀಸರಿಗೆ ಸದ್ಯ ಜಗನ್ನಾಥ್ ರೆಡ್ಡಿ ಮನೆ ಹಾಲ್‌ನ ಗೋಡೆ ಮೇಲೆ ಐದು ಕೈ ಗುರುತುಗಳು ಪತ್ತೆಯಾಗಿವೆ.

ರಕ್ತದ ಮಾದರಿಯಲ್ಲಿ ಗೋಡೆ ಮೇಲೆ ಕೈ ಗುರುತುಗಳು ಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಮೂಡಿಸಿದೆ. ಐವರ ನಿಗೂಢ ಸಾವಿನ ಮಧ್ಯೆ 5 ಕೈ ಗುರುತುಗಳು ಪತ್ತೆಯಾಗಿವೆ. 5 ಅಸ್ತಿಪಂಜರ, 5 ಕೈ ಗುರುತಿನ ಹಿಂದಿನ ರಹಸ್ಯವನ್ನು ಭೇದಿಸುವುದೇ ಪೊಲೀಸರಿಗೆ ದೊಡ್ಡ ಟಾಸ್ಕ್‌ ಆಗಿದೆ. ಇಡೀ ಕುಟುಂಬ ಕೊಲೆಯಾಗಿ ಹೋದ್ರಾ ಎಂಬ ಶಂಕೆ ವ್ಯಕ್ತವಾಗಿದೆ. ಪೊಲೀಸರಿಗೂ ಈ ಪ್ರಕರಣವು ತಲೆ ನೋವಾಗಿದೆ.

ಇದನ್ನೂ ಓದಿ: Skeletons found : ಕಾಲು ಕಟ್ಟಿದ ಸ್ಥಿತಿಯಲ್ಲಿ ಇಬ್ಬರ ಅಸ್ಥಿಪಂಜರ ಪತ್ತೆ! ಕೊಲೆನಾ? ಆತ್ಮಹತ್ಯೆನಾ

50 ಎಕರೆ ಜಮೀನಿಗಾಗಿ ಚಿತ್ರಹಿಂಸೆ ಕೊಟ್ಟರಾ! ಡೆತ್‌ನೋಟ್‌ನಲ್ಲಿ ಏನಿದೆ?

ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗದಲ್ಲಿ (Chitradurga News) ಅಸ್ಥಿಪಂಜರ ಪತ್ತೆ ಪ್ರಕರಣವು (Skeletons Found) ಬಾರಿ ಸಂಚಲನ ಸೃಷ್ಟಿಸಿದೆ. ಒಂದೇ ಕುಟುಂಬದ ಐವರ ನಿಗೂಢ ಸಾವಿನ ಪ್ರಕರಣವು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪತ್ತೆಯಾಗಿರುವ ಅಸ್ಥಿಪಂಜರಗಳು ಪೊಲೀಸರ ನಿದ್ದೆಗೆಡಿಸಿದ್ದು, ಸದ್ಯ ಪಾಳು ಬಿದ್ದ ಮನೆಯಲ್ಲಿ ಡೆತ್‌ನೋಟ್‌ವೊಂದು ಸಿಕ್ಕಿದೆ.

ಜಗನ್ನಾಥ್ ರೆಡ್ಡಿ ಕುಟುಂಬಸ್ಥರ ಡೆತ್‌ನೋಟ್‌ ಸಿಕ್ಕಿದ್ದು, ಇಬ್ಬರು ವ್ಯಕ್ತಿಗಳ ಹೆಸರು ಉಲ್ಲೇಖವಾಗಿದೆ. ಜಮೀನು ವಿಚಾರಕ್ಕೆ ಚಿತ್ರಹಿಂಸೆ ಕೊಟ್ಟಿದಾರೆ ಎನ್ನಲಾಗಿದೆ. ಅವರಿಬ್ಬರ ಹಿಂಸೆ ತಾಳಲಾರದೇ ಐವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ದೊಡ್ದಸಿದ್ದವ್ವನ ಹಳ್ಳಿ ಮೂಲದ ಒಬ್ಬ ವ್ಯಕ್ತಿ ಹಾಗೂ ಚಿತ್ರದುರ್ಗ ಮೂಲದ ಮತ್ತೊಬ್ಬ ವ್ಯಕ್ತಿ ಜಮೀನು ವಿಚಾರಕ್ಕಾಗಿ ಚಿತ್ರಹಿಂಸೆ ಕೊಡುತ್ತಿದ್ದರು. ಸದ್ಯ ಜಮೀನು ವಿಚಾರವು ನ್ಯಾಯಾಲಯದಲ್ಲಿದೆ. ಡೆತ್‌ನೋಟ್‌ನಲ್ಲಿ ಇಬ್ಬರ ಹೆಸರು ಉಲ್ಲೇಖವಾಗಿರುವುದರಿಂದ ಅವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ: Skeletons Found: ರೆಡ್ಡಿ ಸಂಪ್ರದಾಯದಂತೆ 5 ಅಸ್ಥಿ ಪಂಜರಗಳ ಅಂತ್ಯ ಸಂಸ್ಕಾರ

ಏನಿದು ಪ್ರಕರಣ?

ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಬಳಿಯಿರುವ ದೊಡ್ಡ ಸಿದ್ದವ್ವನ ಹಳ್ಳಿಯ ನಿವಾಸಿ ಜಗನ್ನಾಥ್ ರೆಡ್ಡಿ ಎಂಬವರ ಇಡೀ ಕುಟುಂಬದವರ ಅಸ್ಥಿಪಂಜರ ಪತ್ತೆಯಾಗಿತ್ತು. ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿತ್ತು. ಜಗನ್ನಾಥ್ ರೆಡ್ಡಿ, ಪತ್ನಿ ಪ್ರೇಮ, ಮಕ್ಕಳಾದ ತ್ರಿವೇಣಿ, ನರೇಂದ್ರ ರೆಡ್ಡಿ, ಕೃಷ್ಣ ರೆಡ್ಡಿ ಅವರ ಮೃತದೇಹದ ಅಸ್ಥಿಪಂಜರಗಳು ಪತ್ತೆ ಆಗಿತ್ತು.

ಜಗನ್ನಾಥ್ ರೆಡ್ಡಿ ಲೋಕೋಪಯೋಗಿ ಇಲಾಖೆಯಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕುಟುಂಬದಲ್ಲಿ ಕೆಲವೊಂದು ಸಮಸ್ಯೆಗಳಿಂದ ಬಾರಿ ಮನನೊಂದು ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು.

ಇನ್ನು ಮನೆಯಲ್ಲಿ ಸಿಕ್ಕ 2019ರ ಕ್ಯಾಲೆಂಡರ್ ಪ್ರಕಾರ ಜಗನ್ನಾಥ್ ರೆಡ್ಡಿ ಕುಟುಂಬದವರು ಮೃತಪಟ್ಟು 5 ವರ್ಷಗಳು ಆಗಿರಬಹುದು ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು, ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ, ಬೆರಳಚ್ಚು ತಜ್ಞರು ಭೇಟಿ ನೀಡಿದ್ದು, ಅಸ್ತಿ ಪಂಜರಗಳನ್ನು ನಗರದ ಬಸವೇಶ್ವರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಿಗೂಢ ಸಾವಿಗೆ ಕಾರಣ ಹುಡುಕಲು ಪೊಲೀಸರು ಮುಂದಾಗಿದ್ದರು.

ಪಾಳು ಬಿದ್ದ ಮನೆಗೆ ಮತ್ತೆ ಅಧಿಕಾರಿಗಳ ಭೇಟಿ

ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಪುನಃ ಬೆಂಗಳೂರು ಮತ್ತು ದಾವಣಗೆರೆ ಎಫ್‌ಎಸ್‌ಎಲ್‌ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರದ ಬಸವೇಶ್ವರ ಆಸ್ಪತ್ರೆಗೆ ಅಸ್ಥಿಪಂಜರಗಳನ್ನು ಈಗಾಗಲೇ ರವಾನೆ ಮಾಡಲಾಗಿದ್ದು, ಇಂದು ಮರಣೋತ್ತರ ಪರೀಕ್ಷೆ ನಡೆಯಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version