ಚಿತ್ರದುರ್ಗ: ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ (SSLC Result 2024) ಬಂದ ಬಳಿಕ ಫೇಲ್ (SSLC exam fail) ಆದ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆ (Student self harming) ಮಾಡಿಕೊಳ್ಳುತ್ತಿರುವ ಮುಂದುವರಿದೆ. ಫೇಲ್ ಆಗಿದ್ದಕ್ಕೆ ಮನನೊಂದುಕೊಂಡು ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ (SSLC Student Death) ಮಾಡಿಕೊಂಡಿದ್ದಾಳೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೊಬ್ಬರಿಪೇಟೆ ಗ್ರಾಮದಲ್ಲಿ ಘಟನೆ ನಡೆದಿದೆ.
16 ವರ್ಷದ ಧನುಶ್ರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಧನುಶ್ರೀ ನೇಣಿಗೆ ಶರಣಾಗಿದ್ದಾಳೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಾಲ್ಕು ವಿಷಯಗಳಲ್ಲಿ ಫೇಲ್ ಆಗಿದ್ದಳು. ಇತ್ತ ಮಗಳು ಫೇಲ್ ಆಗಿದ್ದರು ಪೋಷಕರು ಆತ್ಮಸ್ಥೈರ್ಯ ತುಂಬಿದ್ದರು.
ಆದರೂ ಮನನೊಂದ ವಿದ್ಯಾರ್ಥಿನಿ ಧನುಶ್ರೀ ನೇಣಿಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ಹೊಸದುರ್ಗ ಪೊಲೀಸರು ಆಗಮಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ: Engineering Student : ಎಕ್ಸಾಂನಲ್ಲಿ ಫೇಲ್; ಕೆರೆಗೆ ಹಾರಿ ಆರ್‌ವಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಘಟನೆ-1 ಚಿಕ್ಕಬಳ್ಳಾಪುರದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ಚಿಕ್ಕಬಳ್ಳಾಪುರದ (chikkaballapur news) ಗಂಗರೇಕಾಲುವೆ ಗ್ರಾಮದ ಜಿ.ಎನ್ ವೈಷ್ಣವಿ (15) ಎಂಬಾಕೆಯು ಎಸ್‌ಎಸ್‌ಎಲ್‌ಸಿಯಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ವೈಷ್ಣವಿ ಮಂಚನಬೆಲೆ ಗ್ರಾಮದ ಬಿಜಿಎಸ್ ಶಾಲೆಯಲ್ಲಿ ಎಸ್ಎಸ್ಎಲ್‌ಸಿ ಓದುತ್ತಿದ್ದಳು. ಎಸ್ಎಸ್ಎಲ್‌ಸಿ ಫಲಿತಾಂಶ ನೋಡಿ ತಾನು ಫೇಲ್ ಆಗಿದ್ದಕ್ಕೆ ನೊಂದುಕೊಂಡಿದ್ದಳು. ನಂತರ ಮನೆಯಲ್ಲೇ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಳು.
ಘಟನೆ -2 ಹೊಲಕ್ಕೆ ತೆರಳಿ ಮರಕ್ಕೆ ನೇಣಿಗೆ ಶರಣಾದ
ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿಖಿಲ್ (16) ನೇಣಿಗೆ ಶರಣಾದ ವಿದ್ಯಾರ್ಥಿ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ನಿಖಿಲ್, ಫಲಿತಾಂಶ ನೋಡಿ 3 ವಿಷಯದಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಹೊಲಕ್ಕೆ ತೆರಳಿ ಮರವೊಂದಕ್ಕೆ ನೇಣಿಗೆ ಶರಣಾಗಿದ್ದಾನೆ. ಈ ಕುರಿತು ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ- 3 ಪಾಸಾದರೂ ನೇಣು ಹಾಕಿಕೊಂಡು ವಿದ್ಯಾರ್ಥಿನಿ
ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ. ಪರೀಕ್ಷೆಯಲ್ಲಿ ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ್ದಾಳೆ. ಅಮೃತ (16) ನೇಣಿಗೆ ಶರಣಾದ ವಿದ್ಯಾರ್ಥಿನಿ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅಮೃತ ನಗರಕೆರೆ ಗ್ರಾಮದ ಸರ್ಕಾರಿ ಅನುದಾನಿತ ಪೂರ್ಣಿಮಾ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ಅಮೃತ ಶೇ.57 ಅಂಕ ಪಡೆದು ತೇರ್ಗಡೆ ಹೊಂದಿದ್ದಳು. ಆದರೆ ಪರೀಕ್ಷೆಯಲ್ಲಿ ಫೇಲ್ ಆಗಿಬಿಟ್ಟೆ ಎಂದು ತಿಳಿದು ಮನೆಯಲ್ಲಿ ಯಾರು ಇಲ್ಲದಾಗ ನೇಣಿಗೆ ಶರಣಾಗಿದ್ದಾಳೆ.
ಘಟನೆ-4 ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ
ಬೆಳಗಾವಿ: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತಿರ್ಣಗೊಂಡ ವಿದ್ಯಾರ್ಥಿನಿಯೋರ್ವಳು ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ಜರುಗಿದೆ. ಸೃಷ್ಟಿ ಕಲ್ಲಪ್ಪ ಚೌವ್ಹಾಣ್ (16) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಯಾಗಿದ್ದಾಳೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಪೋಷಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ. ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಘಟನೆ- 5 ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ಆದ ಬಾಲಕ ನಾಪತ್ತೆ!
ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Student) ಬರೆದಿದ್ದ ಬಾಲಕನೊರ್ವ ನಾಪತ್ತೆಯಾಗಿದ್ದಾನೆ. ಎಸ್ಎಸ್ಎಲ್‌ಸಿ ಪರೀಕ್ಷೆಯ (SSLC Student Missing) ಫಲಿತಾಂಶ ಬರುವ ಮುನ್ನವೇ (Missing Case) ಕಾಣೆಯಾಗಿದ್ದಾನೆ. ಕೊಪ್ಪಳ ತಾಲೂಕಿನ ಹಲಗೇರಿ ಗ್ರಾಮದ ಬಾಲಕ ಜಗದೀಶ್ ಎಂಬಾತ ಮೇ 7 ರಂದು ಮನೆಯಿಂದ ಹೊರ ಹೋದವನು ವಾಪಸ್ ಬಂದಿಲ್ಲ. ರಾತ್ರಿಯಾದರೂ ಬಾರದೆ ಇದ್ದಾಗ ಪೋಷಕರು ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಇನ್ನೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ಆಗಿರುವ ಬಾಲಕ ಫಲಿತಾಂಶಕ್ಕೂ ಮುನ್ನವೇ ನಾಪತ್ತೆಯಾಗಿದ್ದಾನೆ. ಇತ್ತ ಬಾಲಕನನ್ನು ಯಾರಾದರೂ ಅಪಹರಿಸಿರಬಹುದು ಎಂದು ಪಾಲಕರು ಶಂಕಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ