Site icon Vistara News

SSLC Student : ಚಿತ್ರದುರ್ಗದಲ್ಲಿ ನೇಣಿಗೆ ಶರಣಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ

SSLC student commits suicide in Chitradurga

ಚಿತ್ರದುರ್ಗ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ (SSLC Student) ಮನೆಯಲ್ಲಿ ಮಫ್ಲರ್‌ನಿಂದ‌ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ರಂಗಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರಜ್ವಲ್ (16) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದಾನೆ.

ರಂಗಾಪುರ ಗ್ರಾಮದ ಚಂದ್ರಶೇಖರ್ ಎಂಬುವವರ ಪುತ್ರ ಪ್ರಜ್ವಲ್‌ ಹೊಳಲ್ಕೆರೆ ವಾಗ್ದೇವಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ. ಪರೀಕ್ಷೆಗೆ ಪ್ರಜ್ವಲ್ ಹಾಜರಾಗದ ಹಿನ್ನೆಲೆಯಲ್ಲಿ ಶಾಲೆ ಶಿಕ್ಷಕರು ಪೋಷಕರನ್ನು ಕರೆದುಕೊಂಡು ಬಾ ಎಂದಿದ್ದಾರೆ.

ನಿನ್ನೆ ಸಂಜೆ ಓದಿಕೊಳ್ತೀನಿ ಎಂದೇಳಿ ಹೋದ ಪ್ರಜ್ವಲ್‌ ನೇಣಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Fraud Case : ಮಸಾಜ್‌ ಥೆರಪಿಸ್ಟ್‌ಗೆ ಬ್ಲ್ಯಾಕ್‌ಮೇಲ್‌ ಮಾಡಿ ಲಕ್ಷ ಲೂಟಿ ಮಾಡಿದ ನಕಲಿ ಪೊಲೀಸ್‌

ಬೆಳಗಾವಿಯಲ್ಲಿ ಹರಿದ ನೆತ್ತರು; ಯುವಕನ ಬರ್ಬರ ಹತ್ಯೆ

ಬೆಳಗಾವಿ: ಬೆಳಗಾವಿಯಲ್ಲಿ (Belgavi News) ಬೆಳ್ಳಂ‌ಬೆಳಗ್ಗೆ ನೆತ್ತರಕೋಡಿ ಹರಿದಿದೆ. ಮಾರಕಾಸ್ತ್ರಗಳಿಂದ‌ ಕೊಚ್ಚಿ ಯುವಕನನ್ನು ಬರ್ಬರ ಹತ್ಯೆ (Murder case) ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಲಕ್ಷ್ಮೇಶ್ವರ ಬಳಿ ಈ ಕೃತ್ಯ ನಡೆದಿದೆ. ಲಕ್ಷ್ಮೇಶ್ವರ ನಿವಾಸಿ ಮೋಮಿನ್ (28) ಕೊಲೆಯಾದ ದುರ್ದೈವಿ.

ಹಾಡಹಗಲೇ ಮಚ್ಚು ಹಿಡಿದು ಬಂದ ವ್ಯಕ್ತಿಯೊಬ್ಬ ಏಕಾಏಕಿ ಯಾಸಿನ್‌ ಮೋಮಿನ್‌ ಮೇಲೆ ದಾಳಿ ಮಾಡಿದ್ದಾನೆ. ನೋಡ ನೋಡುತ್ತಿದ್ದಂತೆ ಎಲ್ಲರ ಮುಂದೆಯೇ ಯಾಸಿನ್‌ ಮೋಮಿನ್‌ ಮೇಲೆ ದಾಳಿ ಮಾಡಿ ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಬೀಸಿ ಕೊಂದಿದ್ದಾನೆ.

ಇನ್ನೂ ಯಾಸಿನ್‌ ಮೋಮಿನ್‌ನನ್ನು ಕೊಂದ ಆರೋಪಿ ಅಮೋಘ ಢವಳೇಶ್ವರ ಎಂಬಾತನನ್ನು ಕುಲಗೋಡ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಮೋಘನ ಪತ್ನಿ ಶಿಲ್ಪಾಳಾನ್ನು ಈ ಯಾಸಿನ್‌ ಮೋಮಿನ್‌ ಬೈಕ್ ಮೇಲೆ ಕರೆದೊಯ್ದುತ್ತಿದ್ದ. ಇದರಿಂದ ಸಿಟ್ಟಾದ ಅಮೋಘ, ಯಾಸಿನ್ ಮೋಮಿನ್‌ ಹಾಗೂ ಪತ್ನಿ ಶಿಲ್ಪಾ ಇಬ್ಬರ ಮೇಲೂ ಹಲ್ಲೆ ಮಾಡಿದ್ದಾನೆ.

ಘಟನೆಯಲ್ಲಿ ತೀವ್ರಗಾಯಗೊಂಡ ಶಿಲ್ಪಾ ಢವಳೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅಮೋಘ ಹೊಡೆತಕ್ಕೆ ಯಾಸಿನ್‌ ಮೋಮಿನ್‌ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾನೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆಯಿಂದ ಲಕ್ಷ್ಮೇಶ್ವರ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಕುಲಗೋಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ತಸಿಕ್ತವಾಗಿ ಬಿದ್ದಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version