Suspicious death : ಮನೆಯಲ್ಲಿ ನೇತಾಡುತ್ತಿತ್ತು ಹೆಂಡ್ತಿ ಶವ; ಚಿತೆಯ ಫೋಟೊ ಹಾಕಿದ ಗಂಡ! Vistara News

ಕರ್ನಾಟಕ

Suspicious death : ಮನೆಯಲ್ಲಿ ನೇತಾಡುತ್ತಿತ್ತು ಹೆಂಡ್ತಿ ಶವ; ಚಿತೆಯ ಫೋಟೊ ಹಾಕಿದ ಗಂಡ!

Suspicious death : ಚಿತ್ರದುರ್ಗದಲ್ಲಿ ಗೃಹಿಣಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೋಷಕರು ಕೊಲೆ ಎಂದು ಶಂಕೆ ವ್ಯ‌ಕ್ತಪಡಿಸಿದ್ದಾರೆ. ಇತ್ತ ಮೃತಳ ಪತಿ ಮಾರ್ಮಿಕವಾಗಿ ಸ್ಟೇಟಸ್‌ವೊಂದನ್ನು ಹಾಕಿದ್ದಾನೆ.

VISTARANEWS.COM


on

Prajwal and sathya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಇಲ್ಲಿನ ಆಂಜನೇಯ ಕ್ಲಾತ್ ಬಳಿ ಮನೆಯಲ್ಲಿ ಗೃಹಿಣಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ (Suspicious death) ಪತ್ತೆಯಾಗಿದ್ದಾಳೆ. ಚಳ್ಳಕೆರೆ ನಗರದ ಸತ್ಯ ತೆಲಗಿ (21) ಮೃತಳು.

3 ವರ್ಷದ ಹಿಂದೆ ಪ್ರಜ್ವಲ್ ತೆಲಗಿ ಎಂಬಾತನೊಂದಿಗೆ ಸತ್ಯಳಾ ಮದುವೆ ಆಗಿತ್ತು. ಆತನೇ ಹತ್ಯೆ ಮಾಡಿ ನೇಣು ಹಾಕಿದ್ದಾನೆ ಎಂದು ಮೃತ ಪೋಷಕರು ಆರೋಪಿಸಿದ್ದಾರೆ. ಪ್ರಜ್ವಲ್‌ ದಿನನಿತ್ಯ ಕುಡಿದು ಬಂದು ಪತ್ನಿ ಸತ್ಯಾಳಿಗೆ ಹೊಡೆಯುತ್ತಿದ್ದ ಎನ್ನಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಥಿತಿ ಸತ್ಯಳಿಗೆ ಇಲ್ಲ. ಅವಳ ಗಂಡನೇ ಅವಳನ್ನು ಹೊಡೆದು ಬಡಿದು ಕೊಲೆ ಮಾಡಿದ್ದಾನೆ ಎಂದು ಆಕ್ರೋಶ ಹೊರಹಾಕಿದ್ದಾರೆ.

sathya family Crying
ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಇದನ್ನೂ ಓದಿ: Road Accident : ಹಿಟ್‌ ಆ್ಯಂಡ್‌ ರನ್‌; ಬೈಕ್‌ ಸವಾರ ಸತ್ತರೂ ನೋಡದೆ ಹೋದ ಕಾರು ಚಾಲಕ!

ಆತನ ಸ್ಟೇಟಸ್‌ನಲ್ಲಿ ಏನಿದೆ?

ಇನ್ನು ಸತ್ಯಾಳ ಪತಿ ಪ್ರಜ್ವಲ್‌ ತನ್ನ ವಾಟ್ಸ್‌ಪ್‌ ಸ್ಟೇಟಸ್‌ನಲ್ಲಿ‌ ಮಾರ್ಮಿಕವಾಗಿ ಬರಹವೊಂದನ್ನು ಹಾಕಿಕೊಂಡಿದ್ದಾನೆ. ಉಸಿರಿನ ತೊಂದರೆಯಿಂದ ಅಸುನೀಗಿದ ಹೆಣವೊಂದು ಚಿತೆಯಲ್ಲಿ ಉರಿಯುತ್ತಿತ್ತು. ಉರಿಯುತ್ತಿದ್ದ ಹೆಣವು ಒಣ ಕಟ್ಟಿಗೆಯೊಂದಿಗೆ ವಾಗ್ವಾದಕ್ಕಿಳಿದಿತ್ತು. ನನ್ನನ್ನೇಕೆ ಸುಡುತ್ತಿರುವೆ? ಇದಕ್ಕೆ ಒಣ ಕಟ್ಟಿಗೆಯ ಉತ್ತರ ಹೀಗಿತ್ತು. ನನ್ನ ಹಸಿರಾಗಿರಲು ಬಿಟ್ಟಿದ್ದರೆ ಇಂದು ನಿನ್ನ ಉಸಿರು ಉಳಿಯುತ್ತಿತ್ತು. ನಾನು ಬೆಂದು ಕೆಂಡವಾಗುತ್ತಿರಲಿಲ್ಲ, ನೀನು ಸುಟ್ಟು ಬೂದಿಯೂ ಆಗುತ್ತಿರಲಿಲ್ಲ ಎಂದು ಚಿತೆಯ ಫೋಟೊದೊಂದಿಗೆ ಮೇಲಿನ ಬರಹವನ್ನು ಪ್ರಜ್ವಲ್‌ ಹಾಕಿದ್ದಾನೆ.

Prajwal And his status
ಪ್ರಜ್ವಲ್‌ನ ಹಾಕಿರುವ ಸ್ಟೇಟಸ್‌

ವಾಟ್ಸಪ್ ಸ್ಟೇಟಸ್‌ನಲ್ಲಿ ಈ ರೀತಿಯ ಮಾರ್ಮಿಕವಾಗಿ ಸ್ಟೇಟಸ್ ಹಾಕಿದ್ದಕ್ಕೆ ಸತ್ಯಳ ಸಹೋದರ ಕಿಶೋರ್‌ ಗಂಭೀರ ಆರೋಪವನ್ನು ಮಾಡಿದ್ದಾರೆ. ಆತ ವಾಟ್ಸಪ್‌ನಲ್ಲಿ ಆ ಸ್ಟೇಟಸ್ ಹಾಕಿದ್ದು ಯಾಕೆ ? ನನ್ನ ತಂಗಿಯನ್ನು ಅವನೇ ಏನೋ ಮಾಡಿದ್ದಾನೆ. ಪೊಲೀಸರು ಈ ಸಂಬಂಧ ಸೂಕ್ತವಾದ ತನಿಖೆಯನ್ನು ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಇತ್ತ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿದ್ದ ಮೃತದೇಹವನ್ನು ಕೆಳಗಿಸಿ, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Snake Bite : ವಿಯನಗರದಲ್ಲಿ ಹಾವು ಕಡಿತದಿಂದ ಮಹಿಳೆ ಸಾವು!

Snake Bite : ಮೆಕ್ಕೆ ಜೋಳ ಕಟಾವು ಮಾಡುತ್ತಿದ್ದ ಮಹಿಳೆಗೆ ಹಾವು ಕಚ್ಚಿದ್ದು, ಆಸ್ಪತ್ರೆಗೆ ಸೇರಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

VISTARANEWS.COM


on

By

snake bite in vijayanagar
Koo

ವಿಜಯನಗರ: ವಾರಕ್ಕೊಂದು ಹಾವು ಕಡಿತದಿಂದ (Snake Bite) ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ವಿಜಯನಗರದ ಹರಪನಹಳ್ಳಿ ತಾಲೂಕಿನ ಬಸವಾನಾಳು ಗ್ರಾಮದಲ್ಲಿ ಹಾವು ಕಡಿತದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ರತ್ನಮ್ಮ (45) ಮೃತ ದುರ್ದೈವಿ.

ರತ್ನಮ್ಮ ಹೊಲದಲ್ಲಿ ಮೆಕ್ಕೆಜೋಳದ ಕಟಾವು ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ ಹಾವೊಂದು ರತ್ನಮ್ಮರ ಕಾಲಿಗೆ ಕಚ್ಚಿದೆ. ಕೂಡಲೇ ಅವರನ್ನು ಅಲ್ಲಿದ್ದವರು ಕೊಟ್ಟೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಲು ಮುಂದಾಗಿದ್ದಾರೆ. ಆದರೆ ಆದಾಗಲೇ ಹಾವಿನ ವಿಷ ಮೈಗೆ ಆವರಿಸಿದ್ದರಿಂದ ಮಾರ್ಗಮಧ್ಯೆಯೇ ಉಸಿರು ಚೆಲ್ಲಿದ್ದಾರೆ.

ಕೊಟ್ಟೂರು ತಾಲೂಕು ಆರೋಗ್ಯಾಧಿಕಾರಿ ಡಾ. ಬಸವೇಶ್ವರ ಅವರು ಮೃತಪಟ್ಟಿದ್ದಾಗಿ ಖಚಿತಪಡಿಸಿದ್ದಾರೆ. ಕೊಟ್ಟರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಹಾವು ಕಡಿತಕ್ಕೆ ಬಲಿಯಾಗಿದ್ದ ಮಕ್ಕಳು

ರಾಜ್ಯದಲ್ಲಿ ಹಾವು ಕಡಿತಕ್ಕೆ (Snake Bite) ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಧಾರವಾಡದಲ್ಲಿ ನ.27ರಂದು ಹಾವು ಕಡಿತದಿಂದ ಬಾಲಕ ಮೃತಪಟ್ಟಿದ್ದ. ಈ ಘಟನೆ ಮಾಸುವ ಮುನ್ನವೇ ಬಾಲಕಿಯೊಬ್ಬಳು ಸಹ ಹಾವಿನ ಕಡಿತದಿಂದ ಮೃತಪಟ್ಟಿದ್ದಳು.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಿಲ್ವಾಡ್ (ಬಿ) ಗ್ರಾಮದಲ್ಲಿ ಸೋನಿಕಾ ಪಾಟೀಲ್ (10) ಎಂಬಾಕೆ ಹಾವು ಕಡಿದು ಮೃತಪಟ್ಟಿದ್ದಳು. ಸೋನಿಕಾ ಬಿಲ್ವಾಡ್ (ಬಿ) ಗ್ರಾಮದ ಸರ್ಕಾರಿ‌ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 4 ನೇ ತರಗತಿ ಓದುತ್ತಿದ್ದಳು. ಶಾಲೆ ಮುಗಿಸಿ ಮನೆಗೆ ಬರುತ್ತಿದ್ದಾಗ ಹಾವು ಕಡಿದಿತ್ತು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಸೋನಿಕಾ ಮೃತಪಟ್ಟಿದ್ದಾಳೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಧಾರವಾಡ: ಧಾರವಾಡದ ಹೆಬ್ಬಳ್ಳಿ ಗ್ರಾಮದಲ್ಲಿ ಹಾವು ಕಡಿತದಿಂದ ಅರುಣ್ ಬಡಿಗೇರ್ (9) ಎಂಬ ಬಾಲಕ ಮೃತಪಟ್ಟಿದ್ದ. ಅರುಣ್‌ ಮನೆಯ ಪಕ್ಕದಲ್ಲೇ ಆಟವಾಡಲು ಹೋಗಿದ್ದಾಗ ಹಾವು ಕಚ್ಚಿತ್ತು. ಕೂಡಲೇ ಚಿಕಿತ್ಸೆಗೆ ಆಸ್ಪತ್ರೆಗೆ ಕರೆತಂದರೂ ಫಲಕಾರಿಯಾಗಲಿಲ್ಲ.

ಇತ್ತ ಹಾವು ಕಡಿತದಿಂದ ಮಹಿಳೆ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಗೌರಗಾನಹಳ್ಳಿಯಲ್ಲಿ ನಡೆದಿತ್ತು. ನ. 13 ಸೋಮವಾರ ಸಂಜೆ ತೋಟದಲ್ಲಿ ಬೆಳೆದಿದ್ದ ಹೂಗಳನ್ನ ಕೊಯ್ಯಲು ಹೋಗಿದ್ದಾಗ ಮಹಿಳೆಗೆ ಹಾವು ಕಚ್ಚಿತ್ತು. ಶಾರದಮ್ಮ (42) ಮೃತ ದುರ್ದೈವಿ. ಹಾವು ಕಚ್ಚಿದ ಕೂಡಲೇ ಅವರನ್ನು ಕೊರಟಗೆರೆ ತಾಲೂಕು ಆಸ್ಪತ್ರೆಗೆ ಕರೆದೊಯ್ಯತ್ತಿದ್ದಾಗ ಮಾರ್ಗ ಮಧ್ಯೆ ಮಹಿಳೆ ಮೃತಪಟ್ಟಿದ್ದರು.

ಘಟಿಕೋತ್ಸವದಲ್ಲಿ ಪದವಿ ಪಡೆದ ಕೇರಳ ಮೂಲದ ವಿದ್ಯಾರ್ಥಿಗೆ ಹಾವು ಕಡಿದು ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿತ್ತು. ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ಘಟಿಕೋತ್ಸವ ನಡೆದಿತ್ತು. ಇದರಲ್ಲಿ ಕೇರಳ ಮೂಲದ ಅದಿತ್ ಬಾಲಕೃಷ್ಣನ್ ಎಂಬಿಬಿಎಸ್ ಪದವಿ ಪಡೆದಿದ್ದ. ಪದವಿ ಪಡೆದು ಪಾರ್ಕ್‌ನಲ್ಲಿ ನಿಂತಿದ್ದವನಿಗೆ ಹಾವು ಕಡಿದಿರುವ ಶಂಕೆ ವ್ಯಕ್ತವಾಗಿದೆ. ಹಾವು ಕಡಿತ ಗಮನಿಸದೇ ಮನೆಗೆ ಬಂದಾಗ ಕುಸಿದು ಬಿದ್ದು ಮೃತಪಟ್ಟಿದ್ದ. ಮೃತದೇಹವನ್ನು ಸಿದ್ದಾರ್ಥ ಮೆಡಿಕಲ್ ಕಾಲೇಜಿಗೆ ರವಾನೆ ಮಾಡಲಾಗಿತ್ತು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಕರ್ನಾಟಕ

Captain Pranjal: ಹುತಾತ್ಮ ಯೋಧ ಪ್ರಾಂಜಲ್‌ ಕುಟುಂಬಕ್ಕೆ 50 ಲಕ್ಷ ಪರಿಹಾರದ ಚೆಕ್‌ ಹಸ್ತಾಂತರ

Captain Pranjal: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ ಮಡಿದ ಕರ್ನಾಟಕದ ವೀರ ಯೋಧ ಪ್ರಾಂಜಲ್‌ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 50 ಲಕ್ಷ ರೂ. ಪರಿಹಾರ ನೀಡಲಾಗಿದೆ.

VISTARANEWS.COM


on

Captain Pranjal family
Koo

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಪಾಕ್‌ ಮೂಲದ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ (Rajouri Encounter) ಮಡಿದ ಕರ್ನಾಟಕದ ವೀರ ಯೋಧ ಪ್ರಾಂಜಲ್‌ (Captain Pranjal) ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಘೋಷಿಸಿದ್ದ 50 ಲಕ್ಷ ರೂ. ಪರಿಹಾರಧನವನ್ನು ಮಂಗಳವಾರ ಹಸ್ತಾಂತರಿಸಲಾಗಿದೆ. ಜಿಲ್ಲಾಧಿಕಾರಿ ದಯಾನಂದ್ ಅವರು ಅವರು ಪರಿಹಾರಧನದ ಚೆಕ್‌ ಅನ್ನು ಮೃತ ಯೋಧ ಪ್ರಾಂಜಲ್‌ ಕುಟುಂಬಸ್ಥರಿಗೆ ನೀಡಿದ್ದಾರೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದು, ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಹಸ್ತಾಂತರಿಸಲಾಗಿದೆ. ಪ್ರಾಣವನ್ನು ಪಣಕ್ಕೆ ಇಟ್ಟು ದೇಶ ಕಾಯುವ ಯೋಧರ ಬಗ್ಗೆ ನಮಗೆ ಅಪಾರವಾದ ಗೌರವ-ಅಭಿಮಾನ ಇದೆ, ಅಷ್ಟೇ ಗೌರವ ಮತ್ತು ಕಾಳಜಿ ಯೋಧರ ಕುಟುಂಬ ವರ್ಗದ ಬಗ್ಗೆಯೂ ಇದೆ.

ಇದನ್ನೂ ಓದಿ | CM Siddaramaiah : ಸಿದ್ದರಾಮಯ್ಯರಿಂದ ಮುಸ್ಲಿಂ ಓಲೈಕೆ ಎಂದ ಬಿಜೆಪಿ; ಹೇಳಿದ್ದರಲ್ಲಿ ತಪ್ಪಿಲ್ಲ ಎಂದ ಸಿಎಂ!

ಯೋಧರ ಸಾವು – ನೋವು ಮುಂದಿಟ್ಟುಕೊಂಡು ರಾಜಕಾರಣ ಮಾಡುವವರು ನಾವಲ್ಲ. ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಸುದ್ದಿ ಸೃಷ್ಟಿಸಿ ಅಪಪ್ರಚಾರ ಮಾಡುವದರಲ್ಲಿಯೇ ವಿಕೃತ ಆನಂದ ಪಡುತ್ತಿದ್ದಾರೆ. ಅಂತಹವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದಷ್ಟೇ ಹಾರೈಸಬಲ್ಲೆ ಎಂದು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಪಾಕ್‌ ಮೂಲದ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ (Rajouri Encounter) ಕರ್ನಾಟಕದ ವೀರ ಯೋಧ ಪ್ರಾಂಜಲ್‌ (Captain Pranjal) ಮೃತಪಟ್ಟಿದ್ದರು. ಇವರ ಮನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಸಮೀಪದ ನಿಸರ್ಗ ಬಡಾವಣೆಯಲ್ಲಿದೆ. ಯೋಧನ ಮನೆಯ ಆವರಣದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಸಂಸ್ಕಾರ ನಡೆದಿತ್ತು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಅಲ್ಲಿಗೆ ಭೇಟಿ ನೀಡಿ, ಹುತಾತ್ಮ ಯೋಧನ ಅಂತಿಮ ದರ್ಶನ ಪಡೆದಿದ್ದರು. ಸಂಬಂಧಿಕರು ಹಾಗೂ ಸಹಸ್ರಾರು ಸಾರ್ವಜನಿಕರ ಉಪಸ್ಥಿತಿಯಲ್ಲಿ ಅಂತ್ಯಸಂಸ್ಕಾರ ನಡೆದಿತ್ತು.

ಹುತಾತ್ಮ ಕ್ಯಾಪ್ಟನ್‌ ಎಂವಿ ಪ್ರಾಂಜಲ್‌

ಇದನ್ನೂ ಓದಿ | Elephant Arjuna: ಮಾವುತರಿಗೆ ಪ್ರತಿ ವರ್ಷ ಅರ್ಜುನ ಹೆಸರಲ್ಲಿ ಪ್ರಶಸ್ತಿ ನೀಡಿ: ದಿನೇಶ್‌ ಗೂಳಿಗೌಡ ಒತ್ತಾಯ

ಉಗ್ರರ ಜತೆಗಿನ ಹೋರಾಟದಲ್ಲಿ ಮುಂಚೂಣಿಯಲ್ಲಿ ನಿಂತು ಬಡಿದಾಡಿ ಪ್ರಾಣ ತ್ಯಾಗ ಮಾಡಿದ ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌ ಅವರು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನ (MRPL) ನಿವೃತ್ತ ಆಡಳಿತ ನಿರ್ದೇಶಕ ವೆಂಕಟೇಶ್ ಅವರ ಏಕೈಕ ಪುತ್ರ. (MRPL) ನ ಮಾಜಿ ನಿರ್ದೇಶಕ ಎಂ.ವೆಂಕಟೇಶ್ ಅವರ ಪುತ್ರ. ಎಂಆರ್‌ಪಿಎಲ್‌ನ ಬಳಿಯೇ ಇರುವ ದೆಹಲಿ ಪಬ್ಲಿಕ್ ಸ್ಕೂಲ್‌ನಲ್ಲೇ ಪ್ರಾಂಜಲ್‌ ವಿದ್ಯಾಭ್ಯಾಸ ಮಾಡಿದ್ದರು. ಕರಾವಳಿಯವರೇ ಆದ ವೆಂಕಟೇಶ್ ಅವರು ಮೇ 31ರಂದು ಸೇವಾ ನಿವೃತ್ತರಾಗಿದ್ದರು. ಕೆಲಕಾಲ ಮೈಸೂರಲ್ಲೂ ಇದ್ದರು. ತಂದೆಯ ನಿವೃತ್ತ ಸಮಾರಂಭಕ್ಕೆ ಪ್ರಾಂಜಲ್ ಆಗಮಿಸಿದ್ದರು. ನಿವೃತ್ತಿ ಬಳಿಕ ವೆಂಕಟೇಶ್ ಅವರು ಇದೀಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Hosanagara News: ಸತ್ಯನಾರಾಯಣ ಪೂಜೆಯಿಂದ ಸಂಕಷ್ಟ ದೂರ: ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ

Hosanagara News: ಸತ್ಯನಾರಾಯಣ ಪೂಜೆ ವ್ರತಾಚರಣೆಯಿಂದ ದಾರಿದ್ರ್ಯ ನಾಶವಾಗಿ ಸಂಕಷ್ಟಗಳು ದೂರವಾಗುತ್ತವೆ ಎಂದು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ತಿಳಿಸಿದ್ದಾರೆ.

VISTARANEWS.COM


on

Satyanarayana Vrata programme inauguration at Ganganakoppa
ಗಂಗನಕೊಪ್ದದ ಗಂಗಾಧರೇಶ್ವರ ದೇವಸ್ಥಾನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಏರ್ಪಡಿಸಿದ್ದ ಸಾಮೂಹಿಕ ಸತ್ಯನಾರಾಯಣ ವ್ರತದ ಧಾರ್ಮಿಕ ಸಭೆಗೆ ಚಾಲನೆ ನೀಡಲಾಯಿತು.
Koo

ಹೊಸನಗರ: ಸತ್ಯನಾರಾಯಣ ಪೂಜೆ (Satyanarayana Pooja) ಮಾಡಿದರೆ ಸಂಕಷ್ಟಗಳು ದೂರವಾಗುತ್ತವೆ. ಈ ಕಾರಣಕ್ಕಾಗಿಯೇ ಶುಭ ಸಮಾರಂಭಗಳ ಸಂದರ್ಭದಲ್ಲಿ ಪ್ರತಿಯೊಬ್ಬರ ಮನೆಯಲ್ಲಿಯೂ ಸತ್ಯನಾರಾಯಣ ವ್ರತಾಚರಣೆ ನಡೆಸುತ್ತಾರೆ ಎಂದು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ಹೇಳಿದರು.

ಪಟ್ಟಣಕ್ಕೆ ಸಮೀಪದ ಗಂಗನಕೊಪ್ದದ ಗಂಗಾಧರೇಶ್ವರ ದೇವಸ್ಥಾನದಲ್ಲಿ ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಏರ್ಪಡಿಸಿದ್ದ ಸಾಮೂಹಿಕ ಸತ್ಯನಾರಾಯಣ ವ್ರತದ ಧಾರ್ಮಿಕ ಸಭೆಯಲ್ಲಿ ಶ್ರೀಗಳು ಮಾತನಾಡಿದರು.

ನಂಬಿಕೆ ಇಲ್ಲದೇ ಫಲದ ನಿರೀಕ್ಷೆ ಮಾಡಬಾರದು. ಭಗವಂತನಲ್ಲಿ ನಂಬಿಕೆ ಇಟ್ಟು ಕೆಲಸ ಮಾಡುವುದರಿಂದ ನಿಶ್ಚಿತವಾಗಿ ಒಳಿತಾಗುತ್ತದೆ. ತಾಂತ್ರಿಕ ಜಗತ್ತಿಗೆ ಕಾಲಿಟ್ಟ ಬಳಿಕ ಧರ್ಮಾಚರಣೆಗಳು ಆಡಂಬರ ಹಾಗೂ ಪ್ರಚಾರಕ್ಕೆ ಸೀಮಿತ ಆಗುತ್ತಿವೆ. ದೇವರ ಅಸ್ತಿತ್ವವನ್ನೇ ಪ್ರಶ್ನಿಸುವ ಪ್ರಕರಣಗಳು ನಡೆಯುತ್ತಿವೆ. ಇಂದಿನ ಪೀಳಿಗೆಯ ಯುವಕರಲ್ಲಿ ಧಾರ್ಮಿಕ ಮನೋಭಾವ ಹೆಚ್ಚಬೇಕಿದೆ. ಸಾತ್ವಿಕ ನಡೆನುಡಿಗಳನ್ನು ರೂಡಿಸಿಕೊಳ್ಳುವ ವ್ಯಕ್ತಿ ಎಲ್ಲರಿಂದ ಗೌರವ ಪಡೆಯುತ್ತಾನೆ ಎಂದರು.

ಇದನ್ನೂ ಓದಿ: Belagavi Protest: ಬೆಳಗಾವಿಯನ್ನು 2ನೇ ರಾಜಧಾನಿ ಎಂದು ಘೋಷಿಸಿ; ಉ.ಕ. ಹೋರಾಟ ಸಮಿತಿ ಆಗ್ರಹ

ಸತ್ಯನಾರಾಯಣ ಪೂಜೆ ವ್ರತಾಚರಣೆಯಿಂದ ದಾರಿದ್ರ್ಯ ನಾಶವಾಗಿ ಸಂಕಷ್ಟಗಳು ದೂರವಾಗುತ್ತವೆ. ಕುಟುಂಬದಲ್ಲಿ ನಡೆಯುವ ಶುಭ ಕಾರ್ಯಗಳ ಸಂದರ್ಭದಲ್ಲಿ ನಡೆಸುವುದು ಹಿಂದಿನಿಂದಲೂ ನಡೆದು ಬಂದಿದೆ ಎಂದವರು ಹೇಳಿದರು.

ಹಿರಿಯ ಸಾಹಿತಿ ಡಾ. ಶಾಂತಾರಾಮ ಪ್ರಭು ಅವರು ದೇವಾಲಯಗಳ ಪ್ರಾಮುಖ್ಯತೆ, ದೇವರ ಆರಾಧನೆಯ ಕ್ರಮ, ಜೀವನದಲ್ಲಿ ಗುರುವಿನ ಮಹತ್ವದ ಕುರಿತು ಉಪನ್ಯಾಸ ನೀಡಿದರು.

ಇದನ್ನೂ ಓದಿ: Ajay Jadeja: ಇಶಾನ್​ ಕಿಶನ್​ ವಿಚಾರದಲ್ಲಿ ಆಯ್ಕೆ ಸಮಿತಿ ವಿರುದ್ಧ ಕಿಡಿಕಾರಿದ ಜಡೇಜಾ

ಜನಜಾಗೃತಿ ವೇದಿಕೆಯ ಎನ್.ಆರ್.ದೇವಾನಂದ, ಗ್ರಾಪಂ ಅಧ್ಯಕ್ಷ ಓಂಕೇಶ್, ದೇವಸ್ಥಾನ ಸಮಿತಿಯ ಉಪಾಧ್ಯಕ್ಷ ಎನ್.ಗಣೇಶ್, ಯೋಜನಾಧಿಕಾರಿ ಬೇಬಿ, ಮೇಲ್ವಿಚಾರಕ ಸುಭಾಷ್ ಮತ್ತಿತರರು ಪಾಲ್ಗೊಂಡಿದ್ದರು. ಸುತ್ತಮುತ್ತಲ ಗ್ರಾಮದ ವಿವಿಧ ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ಹಾಗೂ ಭಕ್ತರು ಆಗಮಿಸಿದ್ದರು.

Continue Reading

ತುಮಕೂರು

Tumkur News: ಹುಳಿಯಾರಿನಲ್ಲಿ ಚಿಕ್ಕನಾಯಕನಹಳ್ಳಿ-2 ಯೋಜನಾ ಕಚೇರಿ ಉದ್ಘಾಟನೆ

Tumkur News: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ ವತಿಯಿಂದ ಹುಳಿಯಾರಿನಲ್ಲಿ ನೂತನವಾಗಿ ಆರಂಭಿಸಲಾದ ಚಿಕ್ಕನಾಯಕನಹಳ್ಳಿ-2 ಯೋಜನಾ ಕಛೇರಿಯ ಉದ್ಘಾಟನಾ ಕಾರ್ಯಕ್ರಮ ಜರುಗಿತು.

VISTARANEWS.COM


on

Chikkanayakanahalli 2 project office inaugurated at Huliyar
ಹುಳಿಯಾರಿನಲ್ಲಿ ಚಿಕ್ಕನಾಯಕನಹಳ್ಳಿ-2 ನೂತನ ಯೋಜನಾ ಕಛೇರಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಲ್.ಎಚ್. ಮಂಜುನಾಥ್ ಉದ್ಘಾಟಿಸಿದರು.
Koo

ಹುಳಿಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಗ್ರಾಮೀಣ (Rural) ಭಾಗದಲ್ಲಿ ದುರ್ಬಲರನ್ನು ಹಾಗೂ ಮಹಿಳೆಯರನ್ನು ಸಂಘಟಿಸಿ ಅವರಿಗೆ ಉತ್ತಮ ಜೀವನ ನಡೆಸಲು ಸಹಕಾರ ನೀಡಲಾಗುತ್ತಿದೆ. ದುರ್ಬಲ ವರ್ಗದ ಮಹಿಳೆಯರಿಗೆ ಆತ್ಮವಿಶ್ವಾಸ ಮೂಡಿಸಿ ಆರ್ಥಿಕವಾಗಿ ಸಬಲೀಕರಣರನ್ನಾಗಿ ಮಾಡುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ ಸಂಘದಿಂದ ಯಶಸ್ವಿಯಾಗಿ ಸಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಲ್.ಎಚ್. ಮಂಜುನಾಥ್ ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ವತಿಯಿಂದ ಹುಳಿಯಾರಿನಲ್ಲಿ ನೂತನವಾಗಿ ಆರಂಭಿಸಲಾದ “ಚಿಕ್ಕನಾಯಕನಹಳ್ಳಿ-2 ಯೋಜನಾ ಕಚೇರಿಯ” ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಸ್ವಸಹಾಯ ಸಂಘಗಳ ಮೂಲಕ ಸರ್ಕಾರದ ಹಾಗೂ ಬ್ಯಾಂಕಿನ ಸಹಭಾಗಿತ್ವದೊಂದಿಗೆ ಹತ್ತು ಹಲವಾರು ಯೋಜನೆಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ವಹಿಸುತ್ತಿದೆ ಎಂದರು.

ಇದನ್ನೂ ಓದಿ: Viral News: ಹಸಿವಿನಿಂದ ಭಿಕ್ಷುಕ ಸಾವು; ಆತನ ಬಳಿ ಇತ್ತು 1 ಲಕ್ಷ ರೂ!

ನಮ್ಮೂರು ನಮ್ಮ ಕೆರೆ ಯೋಜನೆ ಇಡೀ ತುಮಕೂರು ಜಿಲ್ಲೆಯಲ್ಲಿ 49 ಕೆರೆಗಳನ್ನು ಸರಿಸುಮಾರು ಆರು ಕೋಟಿ ವೆಚ್ಚದಡಿ ಅಭಿವೃದ್ಧಿ ಪಡಿಸಲಾಗಿದೆ, ಶುದ್ಧ ನೀರು ಒದಗಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಒಟ್ಟು 75 ಶುದ್ಧಗಂಗಾ ಘಟಕಗಳನ್ನು ಸ್ಥಾಪಿಸಲಾಗಿದೆ, ಜಿಲ್ಲೆಯ 15 ರುದ್ರ ಭೂಮಿಗಳಿಗೆ 17.5 ಲಕ್ಷ ಅನುದಾನ ನೀಡಲಾಗಿದೆ, ಧಾರ್ಮಿಕ ಕ್ಷೇತ್ರದ ಪುನಶ್ಚೇತನಕ್ಕೆ ಜಿಲ್ಲೆಯಲ್ಲಿ 12 ಕೋಟಿ ಅನುದಾನ ನೀಡಲಾಗಿದೆ, ಜಿಲ್ಲೆಯ 4,245 ಸದಸ್ಯರಿಗೆ ಉದ್ಯೋಗ ತರಬೇತಿ ನೀಡಲಾಗಿದೆ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾರ್ಷಿಕ 22 ಸಾವಿರ ಕೋಟಿಗೂ ಅಧಿಕ ವಹಿವಾಟು ನಡೆಯುತ್ತಿದ್ದು ನಿತ್ಯ 100 ಕೋಟಿ ರೂಪಾಯಿಗೂ ಮೀರಿ ವ್ಯವಹಾರ ನಡೆಯುತ್ತಿದೆ ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆಂಕೆರೆ ಸತೀಶ್ ಮಾತನಾಡಿ, ನೊಂದವರಿಗೆ ದಾರಿದೀಪವಾಗಿರುವ ಧರ್ಮಸ್ಥಳ ಸಂಘವು ಮಹಿಳೆಯರಿಗೆ ಉದ್ಯೋಗ ಹಾಗೂ ಆರ್ಥಿಕ ಸಹಾಯ ನೀಡುವುದರ ಮೂಲಕ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುತ್ತಿದ್ದು, ಜಾತಿ ಮತ ಭೇದವಿಲ್ಲದೆ ಎಲ್ಲರನ್ನೂಳಗೊಂಡು ಅಭಿವೃದ್ಧಿ ಕೆಲಸಗಳು ಧರ್ಮಸ್ಥಳ ಸಂಘದಿಂದ ನಡೆಯುತ್ತಿದೆ ಎಂದರು.

ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಯೋಗೇಶ್, ಆಂಜನೇಯ ದೇವಸ್ಥಾನ ಸಮಿತಿಯ ಅಧ್ಯಕ್ಷ ಬಡಗಿ ರಾಮಣ್ಣ ಮಾತನಾಡಿದರು.

ಇದನ್ನೂ ಓದಿ: Byju’s Debt: ಸಿಬ್ಬಂದಿ ಸಂಬಳಕ್ಕಾಗಿ ಮನೆ ಅಡವಿಟ್ಟ ಬೈಜೂಸ್ ಕಂಪನಿ ಮಾಲಿಕ!

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್, ಹುಳಿಯಾರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಕಿರಣ್ ಕುಮಾರ್, ಮುಖಂಡರಾದ ಶೀನಪ್ಪ, ಸೌಜನ್ಯ, ಬಡಗೀರಾಜು, ಚಂದ್ರಶೇಖರ್, ಶಿವಕುಮಾರ್, ನಂದಿಹಳ್ಳಿ ಶಿವಣ್ಣ ಹಾಗೂ ಪ್ರೇಮಾನಂದ್, ರಾಮಚಂದ್ರ ಸೇರಿದಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮನ್ವಯಾಧಿಕಾರಿಗಳು, ಮೇಲ್ವಿಚಾರಕರು,ಸೇವಾ ಪ್ರತಿನಿಧಿಗಳು,ಪ್ರಗತಿ ಬಂಧು ಸ್ವಸಹಾಯ ಸಂಘಗಳ ಅಧ್ಯಕ್ಷರು ಮತ್ತು ಸದಸ್ಯರು, ಇತರರು ಪಾಲ್ಗೊಂಡಿದ್ದರು.

Continue Reading
Advertisement
snake bite in vijayanagar
ಕರ್ನಾಟಕ6 mins ago

Snake Bite : ವಿಯನಗರದಲ್ಲಿ ಹಾವು ಕಡಿತದಿಂದ ಮಹಿಳೆ ಸಾವು!

jaydev unadkat
ಕ್ರಿಕೆಟ್10 mins ago

‘ಅನಿಮಲ್’ ಸಿನಿಮಾ ನೋಡಿ 3 ಗಂಟೆ ವ್ಯರ್ಥವಾಯಿತು; ಟೀಮ್​ ಇಂಡಿಯಾ ವೇಗಿ ಅಸಮಾಧಾನ

Captain Pranjal family
ಕರ್ನಾಟಕ18 mins ago

Captain Pranjal: ಹುತಾತ್ಮ ಯೋಧ ಪ್ರಾಂಜಲ್‌ ಕುಟುಂಬಕ್ಕೆ 50 ಲಕ್ಷ ಪರಿಹಾರದ ಚೆಕ್‌ ಹಸ್ತಾಂತರ

Satyanarayana Vrata programme inauguration at Ganganakoppa
ಶಿವಮೊಗ್ಗ23 mins ago

Hosanagara News: ಸತ್ಯನಾರಾಯಣ ಪೂಜೆಯಿಂದ ಸಂಕಷ್ಟ ದೂರ: ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ

MS Dhoni
ಕ್ರಿಕೆಟ್24 mins ago

MS Dhoni : ಐಪಿಎಲ್​ಗೆ ಮೊದಲು ಇಷ್ಟ ದೇವತೆಯ ದರ್ಶನ ಪಡೆದ ಎಂ ಎಸ್ ಧೋನಿ

Chikkanayakanahalli 2 project office inaugurated at Huliyar
ತುಮಕೂರು25 mins ago

Tumkur News: ಹುಳಿಯಾರಿನಲ್ಲಿ ಚಿಕ್ಕನಾಯಕನಹಳ್ಳಿ-2 ಯೋಜನಾ ಕಚೇರಿ ಉದ್ಘಾಟನೆ

Thimmarajappa KIRDL ENgineer
ಕರ್ನಾಟಕ29 mins ago

Lokayukta Raid : 13 ಭ್ರಷ್ಟ ಅಧಿಕಾರಿಗಳಿಗೆ ಲೋಕಾ ಶಾಕ್;‌ ಕೋಟಿ ಕೋಟಿ ಹಣ ಲಾಕ್!

BJP to ask to mla winners to resign their mp post in Rajasthan
ದೇಶ38 mins ago

ರಾಜಸ್ಥಾನ ಚುನಾವಣೆಯಲ್ಲಿ ಗೆದ್ದ ನಾಲ್ವರು ಸಂಸದರ ರಾಜೀನಾಮೆಗೆ ಬಿಜೆಪಿ ಸೂಚನೆ?

Belagavi Protest
ಕರ್ನಾಟಕ53 mins ago

Belagavi Protest: ಬೆಳಗಾವಿಯನ್ನು 2ನೇ ರಾಜಧಾನಿ ಎಂದು ಘೋಷಿಸಿ; ಉ.ಕ. ಹೋರಾಟ ಸಮಿತಿ ಆಗ್ರಹ

MLC Dinesh Gooligowda discuss with Chaluvarayaswamy and Satish jarkiholi
ಕರ್ನಾಟಕ57 mins ago

Elephant Arjuna: ಮಾವುತರಿಗೆ ಪ್ರತಿ ವರ್ಷ ಅರ್ಜುನ ಹೆಸರಲ್ಲಿ ಪ್ರಶಸ್ತಿ ನೀಡಿ: ದಿನೇಶ್‌ ಗೂಳಿಗೌಡ ಒತ್ತಾಯ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ12 hours ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ2 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ2 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ3 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ4 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ4 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ5 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ5 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

ಟ್ರೆಂಡಿಂಗ್‌