Site icon Vistara News

Theft Case : ಹಂದಿ ಕಳವು ವೇಳೆ ಪೊಲೀಸರಿಗೆ ಕಲ್ಲು ತೂರಿ ಎಸ್ಕೇಪ್‌ ಆಗಿದ್ದ ಆಂಧ್ರ ಗ್ಯಾಂಗ್‌ನ ಸದಸ್ಯ ಅರೆಸ್ಟ್‌

theft case

ಚಿತ್ರದುರ್ಗ : ಪೊಲೀಸರ ಮೇಲೆ (Theft Case) ಕಲ್ಲು ತೂರಿ ಆಂಧ್ರದ ಡೆಡ್ಲಿ ಕಳ್ಳರ ಗ್ಯಾಂಗ್‌ವೊಂದು ಎಸ್ಕೇಪ್‌ ಆಗಿತ್ತು. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಘಟನೆ ನಡೆದಿತ್ತು. ಪೊಲೀಸರು ಏರ್ ಫೈರ್ ಮಾಡಿದರೂ ಜಗ್ಗದೆ ತಪ್ಪಿಸಿಕೊಂಡಿದ್ದರು. ಇದೀಗ ಒಂದೇ ವಾರದಲ್ಲಿ ಪ್ರಕರಣ ಭೇದಿಸಿದ ನಾಯಕನಹಟ್ಟಿ ಪೊಲೀಸರು, ಆಂಧ್ರ ಗ್ಯಾಂಗ್‌ನ ಓರ್ವನನ್ನು ಸೆರೆಹಿಡಿದಿದ್ದಾರೆ. ‌

ಆಂಧ್ರ ಗ್ಯಾಂಗ್‌ವೊಂದು ಕಳೆದ ಶನಿವಾರ ರಾತ್ರಿ ನಾಯಕನಹಟ್ಟಿಯಲ್ಲಿ ಹಂದಿ ಕಳ್ಳತನಕ್ಕೆ ಬಂದಿತ್ತು. ಹಂದಿ ಕಳ್ಳತನಕ್ಕೆ ಬಂದಿದ್ದ ಒರ್ವ ಶಂಕಿತ ಆರೋಪಿ ಅರೆಸ್ಟ್ ಆಗಿದ್ದ. ಆಂಧ್ರ ಮೂಲದ ಆನಂತಪುರ ನಗರದ ರಮಣ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುದಾಪುರ ಗ್ರಾಮದಲ್ಲಿ ಸ್ಥಳ ಮಹಜರ್ ನಡೆಸಿದ್ದಾರೆ.

ಬೊಲೆರೋ ವಾಹನದಲ್ಲಿ ಹಂದಿ ಕಳ್ಳತನಕ್ಕೆ ಬಂದಿದ್ದ 7 ಮಂದಿ ಕಳ್ಳರು ಪೊಲೀಸರಿಗೆ ಚಳ್ಳೇಹಣ್ಣು ತಿನಿಸಿ ಎಸ್ಕೇಪ್‌ ಆಗಿದ್ದರು. ಮಾತ್ರವಲ್ಲ ಹಿಡಿಯಲು ಬಂದ ಪೊಲೀಸರಿಗೆ ಕಲ್ಲು ತೂರಿದ್ದರು. ಈ ವೇಳೆ ಪಿಎಸ್‌ಐ ಶಿವಕುಮಾರ್ 4 ಸುತ್ತು ಏರ್ ಫೈರ್ ಮಾಡಿ, 25 ಕಿ.ಮೀ ದೂರ ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿದ್ದರು. ಕೊನೆಗೂ ಖತರ್ನಾಕ್ ಕಳ್ಳನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜತೆಗೆ ಕಳ್ಳತನಕ್ಕೆ ಬಳಸಿದ್ದ ಬೊಲೆರೋ ಪಿಕಪ್ ವಾಹನ ಸೀಸ್ ಮಾಡಿದ್ದಾರೆ. ಉಳಿದ 7 ಮಂದಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: Murder case : ಊಟ ಕೊಡಿಸುವ ನೆಪದಲ್ಲಿ ಕರೆದೊಯ್ದು ಮಹಿಳೆಯನ್ನು ಕೊಂದು, ಸುಟ್ಟು ಹಾಕಿದ ಕಿರಾತಕ

ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಹಂದಿ ಕಳ್ಳರು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಪೊಲೀಸ್‌ ಜೀಪ್ ಮೇಲೆ ಕಲ್ಲು ತೂರಿ ಕಳ್ಳರು ಕಾಲ್ಕಿತ್ತಿದ್ದರು. ಪೊಲೀಸರು ಏರ್ ಫೈರ್ ಮಾಡಿದರೂ ಜಗ್ಗದೆ ತಪ್ಪಿಸಿಕೊಂಡಿದ್ದರು. ಚಳ್ಳಕೆರೆ ತಾಲ್ಲೂಕಿನ ಕುದಾಪುರ ಬಳಿ ಕಳ್ಳರನ್ನು ಹಿಡಿಯಲು ಪೊಲೀಸರು ಬೊಲೆರೋ ವಾಹನವನ್ನು ಅಡ್ಡ ಹಾಕಿದ್ದರು. ಈ ವೇಳೆ ಕಳ್ಳರು ಪೊಲೀಸರ ಮೇಲೆ ಕಲ್ಲು ತೂರಿದ್ದರು. ಏಕಾಏಕಿ ಕಳ್ಳರು ದಾಳಿ ಮಾಡಿದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಏರ್ ಫೈರಿಂಗ್ ಮಾಡಿದ್ದರು.

ಇನ್ನೂ ಕಳ್ಳರು ಕಲ್ಲು ತೂರಿದ್ದರಿಂದ ಪೊಲೀಸರ ಜೀಪಿನ ಗ್ಲಾಸ್ ಡ್ಯಾಮೇಜ್ ಆಗಿತ್ತು. ಸುಮಾರು 7 ಮಂದಿ ಗ್ಯಾಂಗ್‌ ಆಂಧ್ರಪ್ರದೇಶದ ರಿಜಿಸ್ಟ್ರೇಷನ್‌ ಹೊಂದಿದ್ದ ಬೊಲೆರೋ ವಾಹನದಲ್ಲಿ ಬಂದಿದ್ದರು. ಇದನ್ನೂ ಗಮನಿಸಿದ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು, ತಡೆದು ಪರಿಶೀಲನೆಗೆ ಮುಂದಾಗಿದ್ದರು. ಈ ವೇಳೆ ಗಾಡಿ ನಿಲ್ಲಿಸದೇ ಖತರ್ನಾಕ್‌ ಕಳ್ಳರು, ಪೊಲೀಸರಿಗೆ ಕಲ್ಲು ತೂರಿದ್ದರು.

ದರೋಡೆಕೋರರು ಎಂಬ ಅನುಮಾನದಿಂದ ಪೊಲೀಸರು ಅಲರ್ಟ್ ಆಗಿದ್ದರು. ಬೊಸೇ ದೇವರಹಟ್ಟಿ, ಕೋಟೆ ನಗರ ಒಳ ಮಾರ್ಗದಲ್ಲಿ ಕುದಾಪುರ ಕಡೆ ಬರುತ್ತಿದ್ದ ಕಳ್ಳರಿಗೆ, ಪೊಲೀಸರು ಮನಮಯ್ಯನಹಟ್ಟಿ ಕುದಾಪುರ ಒಳ ಮಾರ್ಗದಲ್ಲಿ ಎದುರಾಗಿದ್ದರು. ನಾಯಕನಹಟ್ಟಿ ಠಾಣೆ ಪಿಎಸ್‌ಐ ಶಿವಕುಮಾರ್ ತಂಡ ಬೊಲೆರೋ ವಾಹನದಲ್ಲಿ ಬಂದಿದ್ದ ಕಳ್ಳರನ್ನು ಹಿಡಿಯಲು ಯತ್ನಿಸಿದ್ದರು. ಆದರೆ ಹಿರೇಹಳ್ಳಿ, ಬೇಡರೆಡ್ಡಿಹಳ್ಳಿ, ಬುಕ್ಕಂಬೂದಿ ಮಾರ್ಗದಲ್ಲಿ ಕಳ್ಳರು ಎಸ್ಕೇಪ್ ಆಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version