Twin murder | ಹೊಸದುರ್ಗ ಪಟ್ಟಣದಲ್ಲಿ ವೃದ್ಧ ದಂಪತಿಯ ಬರ್ಬರ ಹತ್ಯೆ - Vistara News

ಕ್ರೈಂ

Twin murder | ಹೊಸದುರ್ಗ ಪಟ್ಟಣದಲ್ಲಿ ವೃದ್ಧ ದಂಪತಿಯ ಬರ್ಬರ ಹತ್ಯೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ಮನೆಯಲ್ಲಿದ್ದ ವೃದ್ಧ ದಂಪತಿಯನ್ನು ಹಂತಕರು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. (Twin murder) ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಚುರುಕುಗೊಳಿಸಿದ್ದಾರೆ.

VISTARANEWS.COM


on

twin murder
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ವೃದ್ಧ ದಂಪತಿಯ ಬರ್ಬರ ಹತ್ಯೆಯಾಗಿದೆ. ವಿನಾಯಕ‌ ಬಡಾವಣೆಯಲ್ಲಿನ ನಿವಾಸದಲ್ಲಿಯೇ (Twin murder) ದಂಪತಿ ಹತ್ಯೆಗೀಡಾಗಿದ್ದಾರೆ.

ಪ್ರಭಾಕರ ಶೆಟ್ರು(75) ಹಾಗೂ ಪತ್ನಿ ವಿಜಯ ಲಕ್ಷ್ಮೀ(65) ಅವರನ್ನು ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ.

ಮನೆಯಲ್ಲಿ ಇಬ್ಬರೇ ವೃದ್ಧ ದಂಪತಿ ವಾಸವಾಗಿದ್ದರು. ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದರು. ಈ ತನಕ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹತ್ಯೆಗೀಡಾದ ದಂಪತಿ
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Suraj Revanna Case:  ಸಲಿಂಗ ಕಾಮ ಆರೋಪ; ಸಂತ್ರಸ್ತನ ವೈದ್ಯಕೀಯ ಪರೀಕ್ಷೆ ಬಳಿಕ ಇಂದೇ ಅರೆಸ್ಟ್‌ ಆಗ್ತರಾ ಸೂರಜ್‌ ರೇವಣ್ಣ?

Suraj Revanna Case: ವಿಧಾನ ಪರಿಷತ್ ಸದಸ್ಯ  ಸೂರಜ್‌ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿ ಬಂದಿದೆ. ಸದ್ಯ ಸಂತ್ರಸ್ತನನ್ನು ಪೊಲೀಸರು ಬೆಂಗಳೂರಿಗೆ ಕರೆ ತಂದಿದ್ದು, ಇಂದು (ಜೂನ್‌ 23) ವೈದ್ಯಕೀಯ ಪರೀಕ್ಷೆ ನಡೆಯಲಿದೆ. ವೈದ್ಯಕೀಯ ಪರೀಕ್ಷೆಯ ಪ್ರಾಥಮಿಕ ವರದಿ ವೈದ್ಯಕೀಯ ಪರೀಕ್ಷೆಯ ವರದಿ ಆಧರಿಸಿ ಸೂರಜ್‌ ಬಂಧನದ ಬಗ್ಗೆ ಪೊಲೀಸರು ತೀರ್ಮಾನಿಸಲಿದ್ದಾರೆ.

VISTARANEWS.COM


on

Suraj Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್‌.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಪ್ರಜ್ವಲ್‌ ಸಹೋದರ, ವಿಧಾನ ಪರಿಷತ್ ಸದಸ್ಯ  ಸೂರಜ್‌ ರೇವಣ್ಣ (Suraj Revanna Case) ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ (Unnatural sexual abuse) ಆರೋಪಗಳು ಕೇಳಿ ಬಂದಿದೆ. ಸದ್ಯ ಸಂತ್ರಸ್ತನನ್ನು ಪೊಲೀಸರು ಬೆಂಗಳೂರಿಗೆ ಕರೆ ತಂದಿದ್ದು, ಇಂದು (ಜೂನ್‌ 23) ವೈದ್ಯಕೀಯ ಪರೀಕ್ಷೆ ನಡೆಯಲಿದೆ.

ತನ್ನ ಮೇಲೆ ಸೂರಜ್‌ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿರುವ ಸಂತ್ರಸ್ತನಿಗೆ ಬೆಂಗಳೂರಿನಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಶನಿವಾರ ತಡರಾತ್ರಿ 2 ಗಂಟೆಗೆ ಹೊಳೆನರಸೀಪುರ ಪೊಲೀಸರು ಸಂತ್ರಸ್ತನನ್ನು ಹಾಸನದಿಂದ ಬೌರಿಂಗ್ ಆಸ್ಪತ್ರೆಗೆ ಕರೆ ತಂದಿದ್ದಾರೆ. ಸಂತ್ರಸ್ತನ ಮನವಿ ಮೇರೆಗೆ ಹಾಸನದ ಬದಲು ಬೆಂಗಳೂರಿನಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ.

ಸಂತ್ರಸ್ತ ಲೈಂಗಿಕ ಕ್ರಿಯೆ ನಡೆಸಲು ಸಮರ್ಥನಾಗಿದ್ದಾನ ಎನ್ನುವ ಬಗ್ಗೆ ವೈದ್ಯರು ಪರೀಕ್ಷೆ ಮಾಡಲಿದ್ದಾರೆ. ಬಿಪಿ, ಶುಗರ್, ಇಸಿಜಿ, ದೇಹದ ಮೇಲೆ ಕಚ್ಚಿರುವ ಕಲೆಗಳ ಬಗ್ಗೆ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ ಹಿರಿಯ ವೈದ್ಯರ ಸಮ್ಮುಖದಲ್ಲಿ ಪರೀಕ್ಷೆ ನಡೆಯಲಿದೆ.

ತೀವ್ರ ವಿಚಾರಣೆ

ಪ್ರಕರಣದ ಸಂಬಂಧ ಇತ್ತ ಹಾಸನದಲ್ಲಿ ಸೂರಜ್‌ ರೇವಣ್ಣ ಅವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳ ಪಡಿಸಿದರು. ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ತಡರಾತ್ರಿವರೆಗೂ ವಿಚಾರಣೆ ನಡೆಯಿತು. ಸಕಲೇಶಪುರ ಡಿವೈಎಸ್‌ಪಿ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಭಾನುವಾರ ಮುಂಜಾನೆ 4 ಗಂಟೆವರೆಗೂ ಸೂರಜ್‌ನನ್ನು ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು. ಬಳಿಕ ಹಾಸನ ನಗರದ ಸೆನ್ ಠಾಣೆಯಲ್ಲೇ ಸೂರಜ್‌ಗೆ ಮಲಗಲು ವ್ಯವಸ್ಥೆ ಮಾಡಲಾಯಿತು. ಇಂದು ಕೂಡ ವಿಚಾರಣೆ ಮುಂದುವರಿಯಲಿದೆ.

ಬಂಧನ ಸಾಧ್ಯತೆ

ಸೂರಜ್‌ ವಿರುದ್ಧ ಕೇಳಿ ಬಂದ ಅಸಹಜ ಲೈಂಗಿಕ ದೌರ್ಜನ್ಯ ಮತ್ತು ಸಂತ್ರಸ್ತನ ವಿರುದ್ಧ ಸೂರಜ್‌ ಆಪ್ತ ದಾಖಲಿಸಿದ ಬ್ಲ್ಯಾಕ್‌ಮೇಲ್‌ ಆರೋಪದ ಬಗ್ಗೆಯೂ ವಿಚಾರಣೆ ನಡೆಸಲಾಗುತ್ತಿದೆ. ಇನ್ನು ಸೂರಜ್ ವಿರುದ್ಧ ದೂರು ನೀಡಿರುವ ಸಂತ್ರಸ್ತನ ವೈದ್ಯಕೀಯ ಪರೀಕ್ಷೆಯ ಪ್ರಾಥಮಿಕ ವರದಿ ವೈದ್ಯಕೀಯ ಪರೀಕ್ಷೆಯ ವರದಿ ಆಧರಿಸಿ ಸೂರಜ್‌ ಬಂಧನದ ಬಗ್ಗೆ ಪೊಲೀಸರು ತೀರ್ಮಾನಿಸಲಿದ್ದಾರೆ.

ಸೂರಜ್ ವಿರುದ್ಧ ಐಪಿಸಿ ಸೆಕ್ಷೆನ್ 377, 342, 506 ಅಡಿ ಕೇಸ್ ದಾಖಲಾಗಿದ್ದು, ಬಂಧನ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ. ಸೂರಜ್ ಬಂಧನವಾದರೆ ವೈದ್ಯಕೀಯ ಪರೀಕ್ಷೆ ಬಳಿಕ ನ್ಯಾಯಾಧೀಶರ ಎದುರು ಪೊಲೀಸರು ಹಾಜರುಪಡಿಸಲಿದ್ದಾರೆ.

ಇದನ್ನೂ ಓದಿ: Suraj Revanna Case: ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎಂದ ಸೂರಜ್‌ ರೇವಣ್ಣ

ಏನಿದು ಪ್ರಕರಣ?

ಲೋಕಸಭಾ ಚುನಾವಣಾ ವೇಳೆ ಅರಕಲಗೂಡು ತಾಲೂಕಿನ ಜೆಡಿಎಸ್ ಕಾರ್ಯಕರ್ತನಾಗಿದ್ದ ಸಂತ್ರಸ್ತನನ್ನು ಪರಿಚಯ ಮಾಡಿಕೊಂಡು ಎಂಎಲ್‌ಸಿ ಸೂರಜ್‌ ಫೋನ್‌ ನಂಬರ್‌ ಪಡೆದುಕೊಂಡಿದ್ದರು. ಬಳಿಕ ಮನೆಗೆ ಕರೆಸಿ ದೌರ್ಜನ್ಯ ನಡೆಸಿದ್ದಾಗಿ ಸಂತ್ರಸ್ತ ಹೇಳಿಕೆ ನೀಡಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.

Continue Reading

ಕರ್ನಾಟಕ

Theft Case: ಶಿರಾದಲ್ಲಿ ಪೊಲೀಸರಂತೆ ನಟಿಸಿ ಮಹಿಳೆಯ ಮಾಂಗಲ್ಯ ಕಳವು!

Theft Case: ಶಿರಾ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಬಳಿ ಪೊಲೀಸ್ ಅಧಿಕಾರಿಗಳಂತೆ ನಟಿಸಿ, ವಂಚಕರಿಬ್ಬರು ಮಹಿಳೆಯೊಬ್ಬರ 1.50 ಲಕ್ಷ ರೂ. ಮೌಲ್ಯದ 48 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕದ್ದು ಪರಾರಿಯಾಗಿರುವ ಘಟನೆ ಜರುಗಿದೆ.

VISTARANEWS.COM


on

Mangalya chain was stolen by pretending to be a police in Shira
Koo

ಶಿರಾ: ಪೊಲೀಸ್ ಅಧಿಕಾರಿಗಳಂತೆ ನಟಿಸಿ, ವಂಚಕರಿಬ್ಬರು ಮಹಿಳೆಯೊಬ್ಬರ 1.50 ಲಕ್ಷ ರೂ. ಮೌಲ್ಯದ 48 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕದ್ದು (Theft Case) ಪರಾರಿಯಾಗಿರುವ ಘಟನೆ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಬಳಿ ಶುಕ್ರವಾರ ನಡೆದಿದೆ.

ತಾಲೂಕಿನ ಕಡವಿಗೆರೆ ಗ್ರಾಮದ ಅಶ್ವತ್ಥಮ್ಮ ಮಾಂಗಲ್ಯ ಸರ ಕಳೆದುಕೊಂಡವರು. ಅನಾರೋಗ್ಯದ ಹಿನ್ನೆಲೆಯಲ್ಲಿ ಮಾತ್ರೆಗಳನ್ನು ತೆಗೆದುಕೊಂಡು ಸ್ಥಳೀಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮುಂಭಾಗ ಹೋಗುತ್ತಿರುವ ವೇಳೆ ಪೊಲೀಸರು ಎಂದು ಹೇಳಿಕೊಂಡ ಇಬ್ಬರು ಅಪರಿಚಿತರು ಗಮನ ಬೇರೆಡೆಗೆ ಸೆಳೆದು ಅಶ್ವತ್ಥಮ್ಮ ಅವರ ಬಂಗಾರದ ಸರ ತೆಗೆಸಿ, ಪೇಪರ್ ಕವರ್‌ನಲ್ಲಿ ಹಾಕುವಂತೆ ತಿಳಿಸಿದ್ದರು. ಬಳಿಕ ಆ ಕವರನ್ನು ಅಶ್ವಥಮ್ಮ ಅವರ ಬ್ಯಾಗ್‌ನಲ್ಲಿರಿಸಿದ್ದರು ಎನ್ನಲಾಗಿದೆ.

ಇದನ್ನೂ ಓದಿ: Murder Case: ಹುಬ್ಬಳ್ಳಿಯಲ್ಲಿ ಚಾಕುವಿನಿಂದ ಇರಿದು ಯುವಕನ ಹತ್ಯೆ

ಅಲ್ಲಿಂದ ಸ್ವಲ್ಪ ದೂರ ತೆರಳಿದ್ದ ಅಶ್ವತ್ಥಮ್ಮ, ಬಳಿಕ ಬ್ಯಾಗ್‌ನಲ್ಲಿದ್ದ ಪೇಪರ್ ಕವರ್ ತೆಗೆದು ನೋಡಿದಾಗ ಆಘಾತ ಕಾದಿತ್ತು. ಪೇಪರ್ ಕವರ್‌ನಲ್ಲಿ ಚಿನ್ನದ ಮಾಂಗಲ್ಯ ಸರ ಇರಲಿಲ್ಲ. ಇದನ್ನು ಗಮನಿಸಿದ ತಕ್ಷಣವೇ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಬಳಿ ಬಂದು ನೋಡಿದಾಗ ವಂಚಕರು ಅಲ್ಲಿಂದ ಪರಾರಿಯಾಗಿದ್ದಾರೆ. ಈ ಕುರಿತು ಅಶ್ವಥಮ್ಮ ನೀಡಿದ ದೂರಿನ ಮೇರೆಗೆ ಶಿರಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕರ್ನಾಟಕ

Murder Case: ಹುಬ್ಬಳ್ಳಿಯಲ್ಲಿ ಚಾಕುವಿನಿಂದ ಇರಿದು ಯುವಕನ ಹತ್ಯೆ

Murder Case: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

VISTARANEWS.COM


on

Murder Case
Koo

ಹುಬ್ಬಳ್ಳಿ: ಚಾಕುವಿನಿಂದ ಇರಿದು ಯುವಕನ ಹತ್ಯೆ ಮಾಡಿರುವ ಘಟನೆ (Murder Case) ಹಳೇ ಹುಬ್ಬಳ್ಳಿಯ ಲೋಹಿಯಾ ನಗರದಲ್ಲಿ ಶನಿವಾರ ರಾತ್ರಿ ನಡೆದಿದೆ. ಎಲೆಕ್ಟ್ರಿಷಿಯನ್ ಆಕಾಶ ಮಠಪತಿ ಕೊಲೆಯಾದ ಯುವಕ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Actor Pratham: ನಟ ಪ್ರಥಮ್‌ಗೆ ಜೀವ ಬೆದರಿಕೆ; ದರ್ಶನ್ ಅಭಿಮಾನಿಗಳ ಮೇಲೆ ಬಿತ್ತು ಕೇಸ್‌

ಆಂತರಿಕ ಮಾಹಿತಿ ಸೋರಿಕೆ; ಮತ್ತಿಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು: ಅಪರಾಧಿಗಳಿಗೆ ಪೊಲೀಸ್ ಇಲಾಖೆಯ ಆಂತರಿಕ ಮಾಹಿತಿ ಸೋರಿಕೆ ಆರೋಪದಲ್ಲಿ ತುಮಕೂರಿನಲ್ಲಿ ಮತ್ತಿಬ್ಬರು ಪೊಲೀಸ್ ಸಿಬ್ಬಂದಿ ಅಮಾನತುಗೊಂಡಿದ್ದಾರೆ. ಹೊಸ ಬಡಾವಣೆ ಪೊಲೀಸ್ ಠಾಣೆ ಕಾನ್ಸ್‌ಟೇಬಲ್ ಅಬ್ದುಲ್ ಘನಿ ಹಾಗೂ ಕ್ಯಾತ್ಸಂದ್ರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಕಿರಣ್ ಅಮಾನತುಗೊಂಡವರು.

ಪತ್ರಕರ್ತರೊಬ್ಬರ ಕೊಲೆಯ ಸಂಚು ಸೇರಿ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧನದಲ್ಲಿರುವ ಆರೋಪಿಗಳಿಗೆ ಮಾಹಿತಿ ಸೋರಿಕೆ ಆರೋಪದಲ್ಲಿ ಜೂ.10ರಂದು ಐವರು ಪೊಲೀಸ್ ಸಿಬ್ಬಂದಿಯನ್ನು ಎಸ್‌ಪಿ ಅಶೋಕ್ ಅಮಾನತು ಮಾಡಿದ್ದರು. ಇದೀಗ ಮತ್ತೆ ಇಲಾಖೆಯ ಆಂತರಿಕ ಮಾಹಿತಿ ಸೋರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಅಮಾನತು ಮಾಡಲಾಗಿದೆ.

50 ವರ್ಷದ ಅಂಕಲ್‌ ಜತೆಗೆ 19ರ ಯುವತಿ ನಾಪತ್ತೆ

Love Case

ತುಮಕೂರು: ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ (Love case) ನಾಪತ್ತೆ (Missing Case) ಆಗಿದ್ದು, ಕೆರೆಯ ದಡದಲ್ಲಿ ಇಬ್ಬರ ಚಪ್ಪಲಿಗಳು ಪತ್ತೆಯಾಗಿವೆ. ಕೆರೆ ಬಳಿ ಕಾರು ನಿಲ್ಲಿಸಿ ಮೊಬೈಲ್‌ಗಳನ್ನು ಕಾರಿನೊಳಗೆ ಇಟ್ಟು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಘಟನೆ ನಡೆದಿದೆ.

ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ಅನನ್ಯ (19) ಹಾಗೂ ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ (50) ನಾಪತ್ತೆಯಾದವರು. ವಯಸ್ಸಿನ ಅಂತರ ಇದ್ದರೂ, ಇವರಿಬ್ಬರ ನಡುವೆ ಅದ್ಹೇಗೋ ಪ್ರೀತಿ ಚಿಗುರಿತ್ತು. ಕದ್ದುಮುಚ್ಚಿ ಇದ್ದ ಇವರಿಬ್ಬರ ಪ್ರೀತಿ ಕುಟುಂಬಸ್ಥರಿಗೆ ತಿಳಿದುಹೋಗಿತ್ತು. ಈ ಪ್ರೀತಿಗೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದರಿಂದ, ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಎನ್ನಲಾಗಿದೆ.

ಕಳೆದ 3 ದಿನಗಳ ಹಿಂದೆ ಅನನ್ಯ ಮನೆಯಿಂದ ನಾಪತ್ತೆಯಾಗಿದ್ದಳು. ಪೋಷಕರು ಆಕೆಗಾಗಿ ಹುಡುಕಾಟ ನಡೆಸಿದ್ದರು. ಈ ನಡುವೆ ಮಾವತ್ತೂರು ಕೆರೆ ಬಳಿ ಆಕೆಯ ಚಪ್ಪಲಿ ಪತ್ತೆಯಾಗಿದೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೋಟ್ ಸಹಾಯದಿಂದ ಕೆರೆಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ.

ಇದನ್ನೂ ಓದಿ | Road Accident : ಯಮರೂಪಿಯಾಗಿ ಬಂದ ಟಾಟಾ ಏಸ್‌ ವಾಹನಕ್ಕೆ ಮೂವರು ಬಲಿ

ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಅನಿಲ್, ಕೊಳಾಲ ಪಿಎಸ್‌ಐ ರೇಣುಕಾ ಯಾದವ್, ಯೋಗೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇನ್ನೂ ಈ ವಿಷಯ ಎಲ್ಲೆಡೆ ಹಬ್ಬುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಕೊಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ಕರ್ನಾಟಕ

Actor Pratham: ನಟ ಪ್ರಥಮ್‌ಗೆ ಜೀವ ಬೆದರಿಕೆ; ದರ್ಶನ್ ಅಭಿಮಾನಿಗಳ ಮೇಲೆ ಬಿತ್ತು ಕೇಸ್‌

Actor Pratham: ಫೇಸ್ ಬುಕ್‌ನಲ್ಲಿ ನಟ ಪ್ರಥಮ್‌ ಹಾಗೂ ಪತ್ನಿ ವಿರುದ್ಧ ಅವಹೇಳನಕಾರಿ ಮತ್ತು ಆಶ್ಲೀಲ ಪೋಸ್ಟ್ ಮಾಡಿ, ನಿರಂತರವಾಗಿ ಧಮ್ಕಿ ಮತ್ತು ಬೆದರಿಕೆ ಕರೆಗಳು ಮಾಡುತ್ತಿದ್ದ ಹಿನ್ನೆಲೆಯಲ್ಲಿ ದರ್ಶನ್ ಅಭಿಮಾನಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

VISTARANEWS.COM


on

Actor Pratham
Koo

ಬೆಂಗಳೂರು: ನಟ ಪ್ರಥಮ್ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ದರ್ಶನ್ ಅಭಿಮಾನಿಗಳ ವಿರುದ್ಧ ಜ್ಞಾನಭಾರತಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ದರ್ಶನ್ ವಿಚಾರದಲ್ಲಿ ದನಿ ಎತ್ತಿದ್ದಕ್ಕೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಪ್ರಥಮ್‌ (Actor Pratham) ದೂರು ನೀಡಿದ್ದರು. ಹೀಗಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಫೇಸ್ ಬುಕ್‌ನಲ್ಲಿ ನಟ ಪ್ರಥಮ್‌ ಹಾಗೂ ಪತ್ನಿ ವಿರುದ್ಧ ಅವಹೇಳನಕಾರಿ ಮತ್ತು ಆಶ್ಲೀಲ ಪೋಸ್ಟ್ ಮಾಡಿ, ನಿರಂತರವಾಗಿ ಧಮ್ಕಿ ಮತ್ತು ಬೆದರಿಕೆ ಕರೆಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಪ್ರಥಮ್‌ ದೂರು ನೀಡಿದ್ದರು, ಹೀಗಾಗಿ ಎಫ್‌ಐಆರ್ ದಾಖಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಬಂಧನವಾಗಿದ್ದರೂ ಅವರ ಅಭಿಮಾನಿಗಳು ಸಮರ್ಥಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ನಟ ಪ್ರಥಮ್‌ ಕಿಡಿಕಾರಿದ್ದರು. ನನಗೆ ಒಂದು ವಾರ ಪೊಲೀಸ್‌ ಕಾನ್‌ಸ್ಟೇಬಲ್‌ ಆಗಲು ಅವಕಾಶ ಕೊಟ್ಟರೆ, ದರ್ಶನ್‌ ಅಂಧ ಅಭಿಮಾನಿಗಳಿಗೆ ನಾಯಿಗೆ ಹೊಡೆದಂಗೆ ಹೊಡೆಯುತ್ತೇನೆ. ಆ ಪೊಲೀಸ್‌ ಸ್ಟೇಷನ್‌ ಬಳಿ ಇದ್ದವರಲ್ಲಿ ಒಬ್ಬನಾದರೂ ಅವರ ತಾಯಿಗೆ ಒಂದು ಹೊತ್ತು ಊಟ ಕೊಡಿಸಲು ಯೋಗ್ಯತೆ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದರು. ಹೀಗಾಗಿ ಪ್ರಥಮ್‌ಗೆ ನಟ ದರ್ಶನ್ ಅಭಿಮಾನಿಗಳಿಂದ ಬೆದರಿಕೆ ಕರೆಗಳು ಬಂದಿವೆ.

Actor Darshan

ಇದನ್ನೂ ಓದಿ | Darshan Arrested: ದರ್ಶನ್‌ ಸೇರಿ ನಾಲ್ವರು ಪೊಲೀಸ್‌ ಕಸ್ಟಡಿಗೆ, ಪವಿತ್ರಾ ಗೌಡ ಸೇರಿ 10 ಮಂದಿಗೆ ಜೈಲು

ದೂರು ನೀಡಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದ ಪ್ರಥಮ್‌ ಅವರು, ಜೀವನ ಬಹಳ ದೊಡ್ಡದು, ಯಾರಿಗೋಸ್ಕರವೋ ನೀವು ಅದನ್ನ ಹಾಳು ಮಾಡಿಕೊಳ್ಳಬೇಡಿ. ನಾನು ತುಂಬಾ ಶಾಂತಿಯಿಂದಲೇ ಇದ್ದೆ, ನೀವು ಅತಿಯಾಗಿ ನಮ್ಮ #ಕರ್ನಾಟಕದ_ಅಳಿಯ ತಂಡದ office no ಗೆ ಕಾಲ್ ಮಾಡಿ ಬೆದರಿಕೆ ಹಾಕುತ್ತಲೆ ಬಂದಿದ್ದೀರಿ. ಇನ್ಮೇಲೆ ನನಗೆ ಬರೋ ಕಾಲ್ msg ಅಥವಾ social media warning ಎಲ್ಲವೂ ಪೋಲೀಸರು ನೋಡಿಕೊಳ್ತಾರೆ. ಬದುಕು ಸುಂದರವಾದದ್ದು, ಅಂಧಾಭಿಮಾನಿಗಳೇ ನಿಮ್ಮ ತಂದೆ ತಾಯಿಗಳಿಗೆ ಮೀಸಲಿಡಿ; ಯಾರಿಗೋಸ್ಕರವೋ ಹಾಳುಮಾಡಿಕೊಳ್ಳಬೇಡಿ. ಕನ್ನಡಕ್ಕಾಗಿ, ಕಾವೇರಿಗಾಗಿ, ಸಂಸ್ಕೃತಿ ಉಳಿಸೋಕೆ ಬೇಕಾದ್ರೆ ಜೈಲಿಗೆ ಹೋಗಿ…; ಯಾರಿಗೋಸ್ಕರವೋ ಲೈಫ಼್ ಹಾಳುಮಾಡಿಕೊಳ್ಳಬೇಡಿ ಎಂದು ತಮಗೆ ಬೆದರಿಕೆ ಹಾಕಿರುವ ದರ್ಶನ್‌ ಅಭಿಮಾನಿಗಳಿಗೆ ಪರೋಕ್ಷವಾಗಿ ಸಲಹೆ ನೀಡಿದ್ದರು.

Continue Reading
Advertisement
Suraj Revanna Case
ಕರ್ನಾಟಕ10 mins ago

Suraj Revanna Case:  ಸಲಿಂಗ ಕಾಮ ಆರೋಪ; ಸಂತ್ರಸ್ತನ ವೈದ್ಯಕೀಯ ಪರೀಕ್ಷೆ ಬಳಿಕ ಇಂದೇ ಅರೆಸ್ಟ್‌ ಆಗ್ತರಾ ಸೂರಜ್‌ ರೇವಣ್ಣ?

Empty Stomach Foods
ಆರೋಗ್ಯ49 mins ago

Empty Stomach Foods: ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳನ್ನು ತಿನ್ನಬೇಡಿ!

karnataka weather Forecast
ಮಳೆ1 hour ago

Karnataka Weather : ಕರಾವಳಿ, ಮಲೆನಾಡಿಗೆ ಗುಡುಗು ಸಹಿತ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Menopausal Weight Gain
ಆರೋಗ್ಯ2 hours ago

Menopausal Weight Gain: ಋತುಚಕ್ರ ನಿಂತ ಬಳಿಕ ತೂಕ ಹೆಚ್ಚುವುದನ್ನು ತಡೆಯಬಹುದೇ?

Vastu Tips
ಧಾರ್ಮಿಕ2 hours ago

Vastu Tips: ತಿಳಿದಿರಲಿ, ಕನ್ನಡಿಯೂ ನುಡಿಯುತ್ತದೆ ನಮ್ಮ ಭವಿಷ್ಯ!

Virat kohli
ಪ್ರಮುಖ ಸುದ್ದಿ3 hours ago

Virat Kohli : ಐಸಿಸಿ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿ ವಿಶೇಷ ಮೈಲುಗಲ್ಲು ಸ್ಥಾಪಿಸಿದ ವಿರಾಟ್​ ಕೊಹ್ಲಿ

Dina bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರು ಮಡದಿಯ ಪ್ರೀತಿಗೆ ಸೋಲುವಿರಿ; ಮನೆಯಲ್ಲಿ ಸಂತೋಷದ ದಿನ

NEET UG
ಪ್ರಮುಖ ಸುದ್ದಿ8 hours ago

NEET UG : ನೀಟ್​ ಪರೀಕ್ಷೆ ಅಕ್ರಮಗಳ ತನಿಖೆ ಹೊಣೆ ಸಿಬಿಐಗೆ ಒಪ್ಪಿಸಿದ ಕೇಂದ್ರ ಸರ್ಕಾರ

T20 world cup 2024
ಪ್ರಮುಖ ಸುದ್ದಿ8 hours ago

T20 World Cup 2024 : ಬಾಂಗ್ಲಾದೇಶ ವಿರುದ್ಧ ಭಾರತಕ್ಕೆಭರ್ಜರಿ 50 ರನ್​ಗಳ ಭರ್ಜರಿ ಗೆಲುವು

Mangalya chain was stolen by pretending to be a police in Shira
ಕರ್ನಾಟಕ9 hours ago

Theft Case: ಶಿರಾದಲ್ಲಿ ಪೊಲೀಸರಂತೆ ನಟಿಸಿ ಮಹಿಳೆಯ ಮಾಂಗಲ್ಯ ಕಳವು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ2 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ7 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ7 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ7 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌