ಚಿತ್ರದುರ್ಗ
Venkatasubbu Mokshagundam: ಹಿರಿಯ ಪತ್ರಕರ್ತ ವೆಂಕಟಸುಬ್ಬು ಇನ್ನಿಲ್ಲ
Venkatasubbu Mokshagundam: ಹಿರಿಯ ಪತ್ರಕರ್ತ ವೆಂಕಟಸುಬ್ಬು ಮೋಕ್ಷಗುಂಡಂ ಅವರು ಚಳ್ಳಕೆರೆಯ ನಿವಾಸದಲ್ಲಿ ಗುರುವಾರ ಬೆಳಗ್ಗೆ ನಿಧನರಾದರು. ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ಸೂಚಿಸಿದೆ.
ಚಿತ್ರದುರ್ಗ: ಹಿರಿಯ ಪತ್ರಕರ್ತ ವೆಂಕಟಸುಬ್ಬು ಮೋಕ್ಷಗುಂಡಂ (Venkatasubbu Mokshagundam) ಅವರು ಚಳ್ಳಕೆರೆಯ ನಿವಾಸದಲ್ಲಿ ಗುರುವಾರ ಬೆಳಗ್ಗೆ ನಿಧನರಾದರು. ಸಂಯುಕ್ತ ಕರ್ನಾಟಕದಲ್ಲಿ ಸುದೀರ್ಘಕಾಲ ಸೇವೆ ಸಲ್ಲಿಸಿದ್ದ ಸ್ನೇಹಜೀವಿ ವೆಂಕಟಸುಬ್ಬು ಮೋಕ್ಷಗುಂಡಂ ಅವರು ಇಳಿವಯಸ್ಸಿನಲ್ಲಿಯೂ ಕ್ರಿಯಾಶೀಲರಾಗಿದ್ದರು. ಕುಟುಂಬಸ್ಥರು, ಸಂಬಂಧಿಕರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ ನೆರವೇರಿದೆ.
ಕೆಯುಡಬ್ಲ್ಯೂಜೆ ಸಂತಾಪ
ಹಿರಿಯ ಪತ್ರಕರ್ತ ವೆಂಕಟಸುಬ್ಬು ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ತೀವ್ರ ಸಂತಾಪ ವ್ಯಕ್ತಪಡಿಸಿದೆ. ಬೆಂಗಳೂರಿಗೆ ಬಂದಾಗಲೆಲ್ಲ ಕೆಯುಡಬ್ಲ್ಯೂಜೆ ಕಚೇರಿಗೆ ಭೇಟಿ ನೀಡುವ ಸೌಜನ್ಯ ಇಟ್ಟುಕೊಂಡಿದ್ದ ವೆಂಕಟಸುಬ್ಬು ಅವರು ಕಿರಿಯ ಪತ್ರಕರ್ತರ ಜತೆಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದರು. ಸದಾ ಹಸನ್ಮುಖಿಯಾದ ವೆಂಕಟಸುಬ್ಬು ಅವರ ನಿಧನದಿಂದ ಸುದ್ದಿಮನೆಯ ಹಿರಿಯ ಕೊಂಡಿ ಕಳಚಿದಂತಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶೋಕಿಸಿದ್ದಾರೆ.
ಇದನ್ನೂ ಓದಿ | Rajouri Encounter : ದಸರೆಗೆ ಬಂದಿದ್ದ ಕ್ಯಾ. ಪ್ರಾಂಜಲ್; ಜಿಗಣಿಯ ನಂದನವನವೀಗ ಶೋಕಸಾಗರ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ಚಿತ್ರದುರ್ಗ
Murder Case : ಕ್ಷುಲ್ಲಕ ಕಾರಣಕ್ಕೆ ಶುರುವಾದ ಅಪ್ಪ-ಮಗನ ಜಗಳ ಕೊಲೆಯಲ್ಲಿ ಅಂತ್ಯ
Murder Case : ಅಪ್ಪ-ಮಗನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಚಿತ್ರದುರ್ಗ: ಕ್ಷುಲ್ಲಕ ಕಾರಣಕ್ಕೆ ತಂದೆ-ಮಗನ ನಡುವೆ ಜಗಳವಾಗಿದ್ದು, ತಂದೆ ಮೇಲೆ ಹಲ್ಲೆ ಮಾಡಿ ಕೆಳಗೆ ಬೀಳಿಸಿ ಮಗನೇ ಕೊಲೆ (Murder Case) ಮಾಡಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕುಂದಲಗುರ ಗ್ರಾಮದಲ್ಲಿ ಘಟನೆ ನಡೆದಿದೆ. ರಂಗಸ್ವಾಮಿ (50) ಮಗನಿಂದಲೇ ಹತ್ಯೆಯಾದವರು. ದೇವರಾಜ್ ಆರೋಪಿ ಆಗಿದ್ದಾನೆ.
ಮನೆಯಲ್ಲಿ ಊಟದ ವಿಚಾರಕ್ಕೆ ತಂದೆ ಜತೆ ದೇವರಾಜ್ ಜಗಳ ಆರಂಭಿಸಿದ್ದ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿದ್ದು, ರಂಗಸ್ವಾಮಿಯನ್ನು ಕೆಳಗೆ ಬೀಳಿಸಿದ್ದಾನೆ. ಬಿದ್ದ ರಭಸಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸಿಪಿಐ (CPI)ಗುಡ್ಡಪ್ಪ, ಹಾಗೂ ಅಬ್ಬಿನಹೊಳೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಬ್ಬಿನಹೊಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಭೀಕರ ರಸ್ತೆ ಅಪಘಾತ ಆರು ಮಂದಿ ದಾರುಣ ಸಾವು
ಅನಂತಪುರ ಜಿಲ್ಲೆಯ ಶಿಂಗನಮಲ ಮಂಡಲದ ನಾಯನಪಲ್ಲಿ ಕ್ರಾಸ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿನ ಟಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಅನಂತಪುರ ಇಸ್ಕಾನ್‌ಗೆ ಸೇರಿದವರು ಎಂದು ವರದಿಯಾಗಿದೆ. ತಾಡಿಪತ್ರಿ ನಗರದಲ್ಲಿ ಇಸ್ಕಾನ್ ನಗರ ಸಂಕೀರ್ತನೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ತಾಡಿಪತ್ರಿಯಿಂದ ಅನಂತಪುರಕ್ಕೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸಂತೋಷ್, ಷಣ್ಮುಕ್, ವೆಂಕಣ್ಣ, ಶ್ರೀಧರ್ ಹಾಗೂ ಪ್ರಸನ್ನ, ವೆಂಕಿ ಮೃತ ದುರ್ದೈವಿಗಳು
ಬೆಂಗಳೂರು
Actor Darshan : ನಾಳೆ ಹೈಕೋರ್ಟ್‌ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ
Actor Darshan : ಹೈಕೋರ್ಟ್‌ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಬಳ್ಳಾರಿ ಜೈಲಿನಿಂದ ಬೆಂಗಳೂರಿಗೆ ಶಿಫ್ಟ್ ಮಾಡುವಂತೆ ವಕೀಲರು ವಾದ ಮಾಡಿಸಲಿದ್ದಾರೆ.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಕಂಬಿ ಎಣಿಸುತ್ತಿರುವ ನಟ ದರ್ಶನ್ (Actor Darshan) ಜಾಮೀನು ಭವಿಷ್ಯ ನಾಳೆ ಸೋಮವಾರ ನಿರ್ಧಾರವಾಗಲಿದೆ. ಹೈಕೋರ್ಟ್‌ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನಟ ದರ್ಶನ್‌ರ ಮೆಡಿಕಲ್ ರಿಪೋರ್ಟ್ ಸಲ್ಲಿಕೆ ಮಾಡುವಂತೆ ಬಳ್ಳಾರಿ ಜೈಲಾಧಿಕಾರಿಗಳಿಗೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಜೈಲಾಧಿಕಾರಿಗಳು ನಾಳೆ ಹೈಕೋರ್ಟ್‌ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಕೆ ಮಾಡಲಿದ್ದಾರೆ.
ವೈದ್ಯಾಧಿಕಾರಿಗಳು ಈಗಾಗಲೇ ನಟ ದರ್ಶನ್‌ಗೆ ಎಂಆರ್‌ಐ (MRI) ಸ್ಕ್ಯಾನ್ ಮಾಡಿದ್ದಾರೆ. ಸ್ಕ್ಯಾನಿಂಗ್ ವೇಳೆ ಬೆನ್ನುನೋವು ಇರುವುದರ ಬಗ್ಗೆ ಉಲ್ಲೇಖಿಸಿದ್ದಾರೆ. ಮತ್ತೊಂದು ಕಡೆ ಮೆಡಿಕಲ್ ರಿಪೋರ್ಟ್ ಇಟ್ಟುಕೊಂಡೇ ನಟ ದರ್ಶನ್ ಪರ ವಕೀಲರು ಜಾಮೀನು ಕೋರಿ ವಾದ ಮಂಡಿಸಲಿದ್ದಾರೆ. ದರ್ಶನ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಲಿದ್ದಾರೆ. ಮತ್ತೊಂದು ಕಡೆ ಜಾಮೀನು ಕೊಡದಂತೆ ಎಸ್ ಪಿ ಪಿ ಪ್ರಸನ್ನ ಕುಮಾರ್ ಆಕ್ಷೇಪಣೆಗೆ ತಯಾರಿ ಮಾಡಿಕೊಂಡಿದ್ದಾರೆ.
ಮಳೆ
Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ
Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.
ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.
ಮಳೆ
Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್!
Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.
ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.
ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.
ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.
ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.
ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.
ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.