Site icon Vistara News

ಸೆಲ್ಫಿ ವಿಡಿಯೋ ಮಾಡಿಕೊಂಡು ಇಬ್ಬರು ಮಕ್ಕಳ ಜತೆ ತಾಯಿ ಆತ್ಮಹತ್ಯೆ

suicide

ಚಿತ್ರದುರ್ಗ:‌ ಮಳಲಿ ಗ್ರಾಮದ ಬಳಿ ಇಬ್ಬರು ಮಕ್ಕಳ ಜತೆ ತಾಯಿಯೊಬ್ಬಳು ಚೆಕ್‌ಡ್ಯಾಂಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ಮುನ್ನ ಸೆಲ್ಫಿ ವಿಡಿಯೋ ಮಾಡಿಕೊಂಡಿದ್ದಾಳೆ.

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮಳಲಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಜಾನಕಲ್ ಲಂಬಾಣಿ ಹಟ್ಟಿಯ ಅರ್ಪಿತಾ (28), ಮಗಳು ಮಾನಸ(6) ಮತ್ತು ಮಗ ಮದನ್(4) ಮೃತರು ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಮನಕಲಕುವ ರೀತಿಯಲ್ಲಿ ಮೊಬೈಲ್ ವಿಡಿಯೋ ಮಾಡಿ ಇಟ್ಟಿದ್ದಾಳೆ.

8 ವರ್ಷದ ಹಿಂದೆ ಹೊಸದುರ್ಗ ತಾಲೂಕಿನ ಜಾನಕಲ್ ಲಂಬಾಣಿಹಟ್ಟಿಯ ಅರ್ಪಿತಾ, ಕೊಂಡಜ್ಜಿ ಲಂಬಾಣಿಹಟ್ಟಿಯ ಮಂಜಾನಾಯ್ಕ್ ಮದುವೆ ಆಗಿದ್ದರು. ಪತಿ ಮಂಜಾನಾಯ್ಕ್ ತನ್ನ ಮೇಲೆ ಅನುಮಾನ ಪಡುತ್ತಿದ್ದ. ಕುಡಿದ ಅಮಲಿನಲ್ಲಿ ಹಲ್ಲೆ, ಕಿರುಕುಳ ನೀಡುತ್ತಿದ್ದ ಎಂದು ಆಕೆ ವಿಡಿಯೋದಲ್ಲಿ ವಿವರಿಸಿದ್ದಾಳೆ. ಅರ್ಪಿತಾ ಆತ್ಮಹತ್ಯೆಗೆ ಮುನ್ನ ಮಾಡಿದ ಸೆಲ್ಫಿ ವಿಡಿಯೋದಲ್ಲಿ ಆಕೆಯ ಪುತ್ರ ಕೂಡ ಕಾಣಿಸಿಕೊಂಡಿದ್ದಾನೆ. ಪುಟ್ಟ ಬಾಲಕ ಮದನ್‌ ʼಅಪ್ಪಾʼ ಎಂದು ಕೂಗಿದ್ದಾನೆ.

ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Seer Suicide | ಬಂಡೇಮಠ ಶ್ರೀಗಳ ಆತ್ಮಹತ್ಯೆ ಪ್ರಕರಣ; ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿಗೆ 14 ದಿನ ನ್ಯಾಯಾಂಗ ಬಂಧನ

Exit mobile version