ಬೆಂಗಳೂರು: ಅತಿಸಾರ ಮತ್ತು ನಿರ್ಜಲೀಕರಣದರಿಂದ ಅಸ್ವಸ್ಥಗೊಂಡು (Cholera Outbreak) ವಿಕ್ಟೋರಿಯಾ ಆಸ್ಪತ್ರೆ ಸೇರಿದ್ದ ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಹಾಸ್ಟೆಲ್‌ನ 21 ವಿದ್ಯಾರ್ಥಿನಿಯರು ಚೇತರಿಸಿಕೊಂಡು ಶನಿವಾರ ರಾತ್ರಿ ಡಿಸ್ಚಾರ್ಜ್ ಆಗಿದ್ದು, ಉಳಿದ 21 ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ಮುಂದುವರಿದಿದೆ.
ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ(Bangalore Medical College and Research Institute-BMCRI) ಹಾಸ್ಟೆಲ್‌ನಲ್ಲಿ ಅತಿಸಾರ ಮತ್ತು ನಿರ್ಜಲೀಕರಣದರಿಂದ ಅಸ್ವಸ್ಥಗೊಂಡಿದ್ದ 47 ವಿದ್ಯಾರ್ಥಿನಿಯರನ್ನು ಶುಕ್ರವಾರ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ದೃಢಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿನಿಯ ಪರೀಕ್ಷಾ ವರದಿ ನಿರೀಕ್ಷಿಸಲಾಗುತ್ತಿದೆ.
ಇನ್ನು ಶನಿವಾರ ಚಿಕಿತ್ಸೆ ಪಡೆದ ಬಳಿಕ ಚೇತರಿಸಿಕೊಂಡ 21 ವಿದ್ಯಾರ್ಥಿನಿಯರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಉಳಿದ 21 ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.
ಕಾಲರಾ ಪ್ರಕರಣಗಳ ಸಂಖ್ಯೆ 10ಕ್ಕೆ ಏರಿಕೆ
ರಾಜ್ಯದಲ್ಲಿ ಪ್ರಸಕ್ತ ವರ್ಷದಲ್ಲಿ ಕಾಲರಾ ಪ್ರಕರಣಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಬಿಬಿಎಂಪಿ 3, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ 6 ಹಾಗೂ ರಾಮನಗರ ಜಿಲ್ಲೆಯಲ್ಲಿ 1 ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.
ಆಹಾರ ಪದಾರ್ಥಗಳ ಪರೀಕ್ಷೆ
ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಹಾಸ್ಟೆಲ್‌ನಲ್ಲಿ ಅಸ್ವಸ್ಥಗೊಂಡಿದ್ದ 47 ವಿದ್ಯಾರ್ಥಿನಿಯರ ಪೈಕಿ ಇಬ್ಬರಿಗೆ ಕಾಲರಾ ದೃಢಪಟ್ಟ ಹಿನ್ನೆಲೆಯಲ್ಲಿ ಹಾಸ್ಟೆಲ್ ಒಳಗಿದ್ದ ಆಹಾರ ಪದಾರ್ಥಗಳನ್ನು ಪರೀಕ್ಷೆ ಮಾಡಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಗೆ ಬಿಬಿಎಂಪಿ ಪತ್ರ ಬರೆದಿತ್ತು. ಹೀಗಾಗಿ ಆಹಾರ ಪದಾರ್ಥಗಳ ಮಾದರಿಯನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ.
ಇದನ್ನೂ ಓದಿ | Cholera Outbreak: ಬೆಂಗಳೂರಿನಲ್ಲಿ ವಿದ್ಯಾರ್ಥಿನಿಗೆ ಕಾಲರಾ ಪಾಸಿಟಿವ್; ನೀರು- ಆಹಾರ ಸೇವನೆಯಲ್ಲಿ ಹುಷಾರ್!
ಅನುಮಾನಸ್ಪದ ವಿಷಪೂರಿತ ಆಹಾರ ಮತ್ತು ನೀರು ಸೇವನೆ ಬಗ್ಗೆ ಪರೀಕ್ಷೆ ಮಾಡಲು ಬಿಬಿಎಂಪಿ ಅಧಿಕಾರಿಗಳು ಹಾಸ್ಟೆಲ್‌ಗೆ ಭೇಟಿ ನೀಡಿ, ಅಲ್ಲಿ ಬಳಕೆಯಾಗಿದ್ದ ಆಹಾರ ಪದಾರ್ಥಗಳು ಹಾಗೂ ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ.
ಬೆಂಗಳೂರು ಮೆಡಿಕಲ್ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ಪಾಸಿಟಿವ್; ಹಾಸ್ಟೆಲ್ ಕಿಚನ್ ಸೀಜ್!
ಬೆಂಗಳೂರು: ಬೆಂಗಳೂರಿನ ವೈದ್ಯಕೀಯ ಕಾಲೇಜಿನ 47 ಹಾಸ್ಟೆಲ್ ವಿದ್ಯಾರ್ಥಿನಿಯರು (Hostel Students) ಅಸ್ವಸ್ಥರಾಗಿರುವ ಪ್ರಕರಣದಲ್ಲಿ, ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ಪಾಸಿಟಿವ್ (Cholera test positive) ಇರುವುದು ಪತ್ತೆಯಾಗಿದೆ. ಹಾಸ್ಟೆಲ್‌ನ ಎಲ್ಲ 47 ವಿದ್ಯಾರ್ಥಿನಿಯರ ಟೆಸ್ಟ್ ವರದಿ (Cholera Outbreak) ಕೈ ಸೇರಿದ್ದು, ಇತರರು ಸೋಂಕಿನಿಂದ ಸೇಫ್ ಎಂದು ಹೇಳಲಾಗುತ್ತಿದೆ. ಇದರ ಜತೆಗೆ ಹಾಸ್ಟೆಲ್ ಅವ್ಯವಸ್ಥೆ ತನಿಖೆಗಾಗಿ ಸಮಿತಿಯೊಂದನ್ನು ರಚಿಸಲಾಗಿದೆ. ಹಾಲಿ ಹಾಸ್ಟೆಲ್‌ನ ಕಿಚನ್ ಅನ್ನು ಸೀಝ್ ಮಾಡಲಾಗಿದೆ. ಸದ್ಯ ವಿದ್ಯಾರ್ಥಿಗಳಿಗೆ ಹೊರಗಿನಿಂದ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ವಿಕ್ಟೋರಿಯಾ ಆಸ್ಪತ್ರೆ ಕಿಚನ್‌ನಿಂದ ಊಟ ಕೊಡಲಾಗುತ್ತಿದೆ.
ಸಾಮಾನ್ಯವಾಗಿ ಕಲುಷಿತ ನೀರು (Contaminated Water) ಹಾಗೂ ಆಹಾರದಿಂದ ಹರಡುವ ಕಾಲರಾ ಸಾಂಕ್ರಾಮಿಕ ಬೆಂಗಳೂರಿನ ಇನ್ನಿತರ ಕಡೆಯೂ ಹರಡುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಸಂಭಾವ್ಯ ಕಾಲರಾ ಸಾಂಕ್ರಾಮಿಕ (Cholera epidemic) ಪರಿಸ್ಥಿತಿಯನ್ನು ಎದುರಿಸಲು ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಇದನ್ನೂ ಓದಿ | Cholera Outbreak: ಕಾಲರಾ ಪ್ರಕರಣಗಳಲ್ಲಿ ತೀವ್ರ ಏರಿಕೆ ಇಲ್ಲ: ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್
ಪ್ರಕರಣದ ಬಳಿಕ ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಎಚ್ಚೆತ್ತಿದ್ದು, ಹಾಸ್ಟೆಲ್‌ನ ಕುಡಿಯುವ ನೀರನ್ನು ಪರಿಶೀಲಿಸಲು ಸೂಚನೆ ನೀಡಲಾಗಿದೆ. ಇಂಜಿನಿಯರ್‌ಗಳಿಂದ ನೀರಿನ ಪರೀಕ್ಷೆ ಮಾಡಿಸುತ್ತಿದ್ದು, ನೀರು ಕಲುಷಿತಗೊಂಡಿದ್ದು ಅದರಿಂದ ಸಮಸ್ಯೆ ಆಗಿದ್ದರೆ ಮುಂದಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಆಸ್ಪತ್ರೆ ಸೇರಿರುವ ವಿದ್ಯಾರ್ಥಿನಿಯರ ಆರೋಗ್ಯ ಸ್ಥಿರವಾಗಿದೆ, ಈ ಪೈಕಿ 21 ವಿದ್ಯಾರ್ಥಿನಿಯರು ಡಿಸ್ಚಾರ್ಜ್ ಆಗಿದ್ದಾರೆ.