Site icon Vistara News

Cholera outbreak: ಕಲುಷಿತ ನೀರು ಸೇವನೆ; ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ವ್ಯಕ್ತಿಗೆ ಕಾಲರಾ ದೃಢ

Cholera outbreak

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕು ಚಿನ್ನೇನಹಳ್ಳಿಯಲ್ಲಿ ಕಾಲರಾ ಪ್ರಕರಣ (Cholera outbreak) ಪತ್ತೆಯಾಗಿದೆ. ಕಲುಷಿತ ನೀರು ಸೇವನೆಯಿಂದ ಊರಿನ 200ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಇದೇ ಕಾರಣಕ್ಕೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಕೃಷ್ಣಪ್ಪ (32) ಎಂಬುವವರಿಗೆ ಕಾಲರಾ ದೃಢಪಟ್ಟಿದ್ದು, ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.

ಚಿನ್ನೇನಹಳ್ಳಿಯಲ್ಲಿ ಕಳೆದ ಭಾನುವಾರದಿಂದ ಹಲವು ಗ್ರಾಮಸ್ಥರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದ್ದರಿಂದ 200ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಸಾವನ್ನಪ್ಪಿದ್ದರು. ಅಸ್ವಸ್ಥಗೊಂಡ 100ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಕೆಲವರು ಗುಣಮುಖರಾಗಿದ್ದರೆ, ಇನ್ನು ಕೆಲವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಕಲುಷಿತ ನೀರು ಸೇವನೆಯಿಂದ ಗ್ರಾಮಸ್ಥರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಚಿನ್ನೇನಹಳ್ಳಿ ಗ್ರಾಮಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಶನಿವಾರ ಭೇಟಿ ನೀಡಿ ಮಾಹಿತಿ ಪಡೆದಿದ್ದರು. ಈ ವೇಳೆ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇೊ ಪ್ರಭು, ಡಿಎಚ್‌ಒ ಡಾ.ಮಂಜುನಾಥ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ | Drowns in lake: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲು

ಕಮಲ ಕೀಳಲು ಹೋಗಿದ್ದ ವ್ಯಕ್ತಿ ಕೆಸರಿನಲ್ಲಿ ಸಿಲುಕಿ ಸಾವು

ತುಮಕೂರು: ಕೆರೆಯಲು ಕಮಲ ಕೀಳಲು ಹೋಗಿದ್ದ ವ್ಯಕ್ತಿ ಕೆಸರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ಅರಕೆರೆ ಕೆರೆಯಲ್ಲಿ ನಡೆದಿದೆ.

ಕೊರಟಗೆರೆ ತಾಲೂಕಿನ ಮಧ್ಯವೆಂಕಟಪುರದ ನಿವಾಸಿ ಶ್ರೀನಿವಾಸ್ (35) ಮೃತ ದುರ್ದೈವಿ. ಹೂವಿನ ವ್ಯಾಪಾರಿಯಾಗಿದ್ದ ಶ್ರೀನಿವಾಸ್, ಅದೇ ಊರಿನ ಕೆಂಪರಾಮಯ್ಯ, ಚಿಕ್ಕಹನುಮಯ್ಯ ಜೊತೆ ಕಮಲದ ಹೂ ಕೀಳಲು ಹೋಗಿದ್ದರು. ಈ ವೇಳೆ ಕೆಸರಲ್ಲಿ ಸಿಲುಕಿ ಮೇಲೆ ಏಳಲಾಗದೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಜೊತೆಗಿದ್ದವರು ಊರಿಗೆ ಹೋಗಿ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version