Manipur Violence : ಬೆಂಗಳೂರಿನಲ್ಲಿ ಕ್ರೈಸ್ತರಿಂದ ಶಾಂತಿಯುತ ಪ್ರತಿಭಟನೆ - Vistara News

ಕರ್ನಾಟಕ

Manipur Violence : ಬೆಂಗಳೂರಿನಲ್ಲಿ ಕ್ರೈಸ್ತರಿಂದ ಶಾಂತಿಯುತ ಪ್ರತಿಭಟನೆ

ಬೆಂಗಳೂರಿನ ಟಿ.ಸಿ ಪಾಳ್ಯ ಡಾನ್ ಬಾಸ್ಕೋ ಕಾಲೇಜು ಮೈದಾನದಲ್ಲಿ ನಡೆದ ಪ್ರತಿಭಟನೆಯನ್ನು ಮಂಡ್ಯ ಧರ್ಮಪ್ರಾಂತ್ಯದ ಬಿಷಪ್ ಮಾರ್ ಸೆಬಾಸ್ಟ್ಯನ್ ಎಡಯಂತ್ರತ್ ಉದ್ಘಾಟಿಸಿದರು.

VISTARANEWS.COM


on

protest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಗಲಭೆ ಪೀಡಿತ ಮಣಿಪುರದ ನಿರಾಶ್ರಿತ ಜನರಿಗೆ ಬೆಂಬಲ ಸೂಚಿಸಿ, ಅಲ್ಲಿನ ಹಿಂಸೆ ಕೊನೆಗೊಳಿಸಿ ಶಾಂತಿ ಮರುಸ್ಥಾಪಿಸಬೇಕೆಂದು ಕೋರಿ ಮಂಡ್ಯ ಧರ್ಮಪ್ರಾಂತ್ಯದ ನೇತೃತ್ವದಲ್ಲಿ ನಗರದ ವಿವಿಧ ಕ್ರೈಸ್ತ ಸಭೆಗಳು ಜತೆಯಾಗಿ ಸೇರಿಕೊಂಡು ಭಾನುವಾರ ನಗರದಲ್ಲಿ ಶಾಂತಿಯುತ ಪ್ರತಿಭಟನೆಯನ್ನು ನಡೆಸಿದವು.

ಟಿ.ಸಿ ಪಾಳ್ಯ ಡಾನ್ ಬಾಸ್ಕೋ ಕಾಲೇಜು ಮೈದಾನದಲ್ಲಿ ನಡೆದ ಪ್ರತಿಭಟನೆಯನ್ನು ಮಂಡ್ಯ ಧರ್ಮಪ್ರಾಂತ್ಯದ ಬಿಷಪ್ ಮಾರ್ ಸೆಬಾಸ್ಟ್ಯನ್ ಎಡಯಂತ್ರತ್ ಉದ್ಘಾಟಿಸಿದರು.

ಮಾಜಿ ಸಂಸದ ರಾಜೀವ್ ಗೌಡ, ಕೇಂಬ್ರಿಡ್ಜ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಿ.ಕೆ. ಮೋಹನ್ ಬಾಬು, ವಿಧಾನ ಪರಿಷತ್ ಮಾಜಿ ಸದಸ್ಯ ನಾರಾಯಣ ಸ್ವಾಮಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಇದೇ ವೇಳೆ ಮಣಿಪುರದ ನಿರಾಶ್ರಿತರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಪ್ರತಿಭಟನೆಯ ಕೊನೆಯಲ್ಲಿ ಸಭೆಯಲ್ಲಿ ಭಾಗವಹಿಸಿದ್ದ ಸಾವಿರಾರು ಮಂದಿ ಮೊಂಬತ್ತಿ ಬೆಳಗಿಸಿ ಭಾವೈಕ್ಯತೆ ಪ್ರದರ್ಶಿಸಿದರು. ಹಲವು ಸಂಘ ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ : Manipur Violence: ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸೆ, ಮೂವರ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Election Results 2024: ಬೆಂ. ಗ್ರಾಮಾಂತರದಲ್ಲಿ ಸಹೋದರನಿಗೆ ಸೋಲು; ಜನರ ತೀರ್ಪಿನ ಬಗ್ಗೆ ಬೇರೆ ಮಾತಿಲ್ಲ ಎಂದ ಡಿಕೆಶಿ

Karnataka Election Results 2024: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚುನಾವಣೆಯಲ್ಲಿ ಸಹೋದರ, ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಸೋಲಿನ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

VISTARANEWS.COM


on

Karnataka election results 2024
Koo

ಬೆಂಗಳೂರು: ಜನರ ತೀರ್ಪನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಗೌರವ ನೀಡುತ್ತೇನೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ವೈಯುಕ್ತಿಕವಾಗಿ ಡಾ.ಸಿ.ಎನ್. ಮಂಜುನಾಥ್‌ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಅಲ್ಲಿ‌ ಪಕ್ಷ ಗೆದ್ದಿಲ್ಲ, ವ್ಯಕ್ತಿ ಗೆದ್ದಿದ್ದಾರೆ‌. ಚುನಾವಣೆಯಲ್ಲಿ (Karnataka Election Results 2024) ಇಷ್ಟು ಅಂತರದಲ್ಲಿ ಸೋಲುತ್ತೇವೆ ಎಂದು ಭಾವಿಸಿರಲಿಲ್ಲ. ಜನ ಸಂದೇಶ ನೀಡಿದ್ದಾರೆ, ನಾವು ಅರ್ಥ ಮಾಡಿಕೊಳ್ಳುತ್ತೇವೆ. ಜನರ ತೀರ್ಪಿನ ಬಗ್ಗೆ ಬೇರೆ ಮಾತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚುನಾವಣೆಯಲ್ಲಿ (Lok Election Results 2024) ಸಹೋದರ, ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಸೋಲಿನ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಜನರ ತೀರ್ಪನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಗೌರವ ನೀಡುತ್ತೇನೆ. ದೇಶ ಮತ್ತು ರಾಜ್ಯದಲ್ಲಿ ಇರಬಹುದು, ಅಧಿಕಾರ ರಾಜಕೀಯಕ್ಕಿಂದ ವಿಶ್ವಾಸ ರಾಜಕೀಯ ಗೆದ್ದಿದೆ. ಭಾವನೆ ಸೋತಿದೆ, ಬದುಕು ಗೆದ್ದಿದೆ. ನಮ್ಮ ಸಾಧನೆ 1 ರಿಂದ 9 ಹೆಚ್ಚಾಗಿದೆ. ಎಲ್ಲಿ ಹೆಚ್ಚು ಕಮ್ಮಿ ಆಗಿದೆ ಎಂದು ನಾವು ಪರಿಶೀಲನೆ ಮಾಡುತ್ತೇವೆ. ಸೀಟ್ ಬೈ ಸೀಟ್ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಮೋದಿ ಜನಪ್ರಿಯತೆ ಕುಗ್ಗಿದೆ. ಒಡಿಶಾ, ಬಿಹಾರದಲ್ಲಿ ಮೈತ್ರಿಕೂಟದಿಂದ ನಂಬರ್ ಆಗಿದೆ. ಅಯೋಧ್ಯೆಯಲ್ಲಿ ಬಿಜೆಪಿಗೆ ಮುಖ ಭಂಗ ಆಗಿದೆ. ನನಗೆ ಹೇಗೆ ನಿರೀಕ್ಷೆ ಇರಲಿಲ್ಲವೋ ಹಾಗೇ ಬಿಜೆಪಿ ಮುಖ ಭಂಗ ಆಗಿದೆ. ನನ್ನ ಸಹೋದರ ಡಿ.ಕೆ.ಸುರೇಶ್ ಒಳ್ಳೆಯ ಕೆಲಸ ಮಾಡಿದ್ದರು, ಒಳ್ಳೆ ಅಭ್ಯರ್ಥಿ ಎಂದು ಮಂಜುನಾಥ ಗೆದಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಮೇಲೆ ವಿಶ್ವಾಸ ಜನ ಹೆಚ್ಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಗ್ರಾಮಾಂತರ ಕ್ಷೇತ್ರದಲ್ಲಿ ಒಳ್ಳೆಯ ಅಭ್ಯರ್ಥಿ ಹಾಕಿದ್ದಾರೆ. ಮಂಜುನಾಥ್ ಅವರು ಅಭ್ಯರ್ಥಿ ಆಗಿದ್ದು ಸಕ್ಸಸ್ ಫುಲ್ ಸ್ಟೋರಿ‌ ಎಂದು ಮೆಚ್ಚುಗೆ ಸೂಚಿಸಿದ ಅವರು, ರಾಹುಲ್ ಗಾಂಧಿ, ಖರ್ಗೆ ಸಾಹೇಬರು ಹಾಗೂ ಭಾರತ ಜೋಡೋ ಪಕ್ಷದ ಬಗ್ಗೆ ವಿಶ್ವಾಸ ಹೆಚ್ಚಿಸಿದೆ. ಕಳೆದ ಚುನಾವಣೆಯಲ್ಲಿಕ್ಕಿಂತ ಈಗ ಮತ ಪ್ರಮಾಣ ಹೆಚ್ಚಾಗಿದೆ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡುವೆ ವ್ಯತ್ಯಾಸವಿದೆ. ಬಹಳ ಸಂತೋಷದಿಂದ ಜನ ತೀರ್ಪು ಸ್ವಾಗತ ಮಾಡುತ್ತೇನೆ. ವೈಯಕ್ತಿಕವಾಗಿ‌ ನನಗೆ ಕೆಲ ಅನುಮಾನಗಳಿವೆ. ನನ್ನ ಕ್ಷೇತ್ರದಲ್ಲಿ 50-60 ಸಾವಿರ ಲೀಡ್ ಬರಬೇಕಿತ್ತು ಹೆಚ್ಚೂ-ಕಮ್ಮಿ ಆಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ಗೆ 14 ರಿಂದ 15 ಸೀಟ್ ಬರುತ್ತದೆ ಎಂದು ಭಾವಿಸಿದ್ದೆವು. ಬೆಂಗಳೂರಿನಲ್ಲಿ ಒಂದು ಸ್ಥಾನ ಬರುತ್ತದೆ ಎಂದು ಭಾವಿಸಿದ್ದೆವು. ಕೆಲ ಸೆಕ್ಷನ್ ಶಿಫ್ಟ್ ಆಗಿದೆ ಎಂದ ಅವರು, ಎಕ್ಸಿಟ್ ಪೋಲ್ ಮೇಲೆ ನಂಬಿಕೆ ಇಲ್ಲ ಎಂದು ಮೊದಲೇ ಹೇಳಿದ್ದೆ. ಡಬಲ್ ಫಿಗರ್ ಕೊನೆಯವರೆಗೂ ಇತ್ತು. ಕೆಲಸಕ್ಕೆ ಮತ ಬಂದಿಲ್ಲ ಎಂದು ಬೇಸರ ಹೊರಹಾಕಿದರು.

ಇದನ್ನೂ ಓದಿ | Karnataka Election Results 2024: ಮೈಸೂರಿನಲ್ಲಿ ಮೈತ್ರಿ ಮುಂದೆ ಮಂಡಿಯೂರಿದ ಸಿದ್ದರಾಮಯ್ಯ ತಂತ್ರಗಾರಿಕೆ

ಬಿಜೆಪಿಗೆ ಮೆಜಾರಿಟಿ ಬಂದಿಲ್ಲ. ಅವರು ನೆರೆಟೀವ್ ಸೃಷ್ಟಿ ಮಾಡಿದರು. ಆದರೆ, ರಾಗಾ, ಖರ್ಗೆ, ಪ್ರಿಯಾಂಕಾ ಗಾಂಧಿ ಕಷ್ಟಪಟ್ಟು ಪಕ್ಷ ಸಂಘಟನೆ ಮಾಡಿದ್ದಾರೆ. ಕೇಂದ್ರದಲ್ಲಿ ನಮ್ಮ ನಾಯಕರು ಸಭೆ ಮಾಡುತ್ತಿದ್ದಾರೆ. ನೋಡೋಣ ಏನಾಗುತ್ತದೋ ಎಂದಿದ್ದಾರೆ.

Continue Reading

ದೇಶ

NEET UG Results 2024: ನೀಟ್‌ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಹೀಗೆ ಮಾಡಿ

NEET UG Results 2024 : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದಿದ್ದ ನೀಟ್ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದೆ. ರಿಸ್ಟಲ್‌ ನೋಡಲು ಈ ಲಿಂಕ್‌ ಕ್ಲಿಕ್‌ ಮಾಡಿ.

VISTARANEWS.COM


on

By

NEET UG Results 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು/ನವದೆಹಲಿ: ಈ ಬಾರಿಯ ನೀಟ್‌ ಪರೀಕ್ಷೆಯ (NEET UG 2024) ಫಲಿತಾಂಶ ಜೂ.4ರಂದು ಪ್ರಕಟಗೊಂಡಿದೆ. ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮೇ 5ರಂದು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು ನಡೆಸಿತ್ತು.

ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದಿದ್ದ ನೀಟ್ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಉತ್ತರ ಪತ್ರಿಕೆಗಳ ಮರುಪರಿಶೀಲನೆ ಅಥವಾ ಮರುಮೌಲ್ಯಮಾಪನಕ್ಕೆ ಅವಕಾಶವಿಲ್ಲ ಎನ್ನಲಾಗಿದೆ. ಇನ್ನೂ ನೀಟ್‌ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಮೇ 29 ರಂದು ಬಿಡುಗಡೆ ಮಾಡಲಾಗಿತ್ತು. ಇದಕ್ಕೆ ಆಕ್ಷೇಪಣೆ ಸಲ್ಲಿಸಿದ ಬಳಿಕ ಅಂತಿಮ ಕೀ ಉತ್ತರಗಳನ್ನು ಜೂನ್ 3 ರಂದು ಬಿಡುಗಡೆ ಮಾಡಲಾಗಿತ್ತು. ಈಗಾಗಲೇ ಬಿಡುಗಡೆಯಾಗಿರುವ ಅಂತಿಮ ಕೀ ಉತ್ತರಗಳ ಆಧಾರದ ಮೇಲೆ ನೀಟ್ ಯುಜಿ 2024ರ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ರಿಸಲ್ಟ್‌ ನೋಡಲು ಹೀಗೆ ಮಾಡಿ

-‌ NTA ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
-ಮುಖಪುಟದಲ್ಲಿ ಲಭ್ಯವಿರುವ ನೀಟ್ ಯುಜಿ ಫಲಿತಾಂಶ 2024 ಲಿಂಕ್ ಅನ್ನು ಕ್ಲಿಕ್ ಮಾಡಿ.
-ಲಾಗಿನ್ ವಿವರಗಳನ್ನು ನಮೂದಿಸಿ ಮತ್ತು ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ.
-ನಿಮ್ಮ ಫಲಿತಾಂಶವನ್ನು ಪರಿಶೀಲಿಸಿ ಮತ್ತು ಪುಟವನ್ನು ಡೌನ್‌ಲೋಡ್‌ ಮಾಡಿಕೊಳ್ಳಿ. ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಇರಿಸಿಕೊಳ್ಳಿ

ಇನ್ನೂ ಎನ್‌ಟಿಎ ಶೀಘ್ರದಲ್ಲೇ ಕಟ್ ಆಫ್ ಜತೆಗೆ ಟಾಪರ್ಸ್‌ಗಳ ಹೆಸರುಗಳನ್ನು ಪ್ರಕಟಿಸಲಿದೆ. ಈ ಬಾರಿ ಒಟ್ಟು 9,96,393 ಹುಡುಗರು, 13,31,321 ಹುಡುಗಿಯರು ಮತ್ತು 17 ತೃತೀಯ ಲಿಂಗಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಒಟ್ಟಾರೆ ಹಾಜರಾತಿ ಶೇಕಡಾ 96.94 ರಷ್ಟಿದ್ದರೆ, ಪುರುಷ ಅಭ್ಯರ್ಥಿಗಳು ಶೇಕಡಾ 96.92, ಮಹಿಳಾ ಅಭ್ಯರ್ಥಿಗಳು ಶೇಕಡಾ 96.96 ಮತ್ತು ತೃತೀಯ ಲಿಂಗಿ ಅಭ್ಯರ್ಥಿಗಳು ಶೇಕಡಾ 94.44 ರಷ್ಟು ಹಾಜರಾತಿ ಹೊಂದಿದ್ದರು.

ಇದನ್ನೂ ಓದಿ: UGCET 2024: ಸಿಇಟಿ ಅಪ್‌ಡೇಟ್‌; ಜೂ.10ರಿಂದ ವಿಕಲಚೇತನ ಅಭ್ಯರ್ಥಿಗಳಿಗೆ ವೈದ್ಯಕೀಯ ತಪಾಸಣೆ

ನೀಟ್ ಫಲಿತಾಂಶದ ಬಳಿಕ ಎಂಜಿನಿಯರ್ ಸೀಟು ಹಂಚಿಕೆ; 1.24 ಲಕ್ಷ ಸೀಟುಗಳು ಲಭ್ಯ, ಆನ್ ಲೈನ್ ಪ್ರಕ್ರಿಯೆ

ಬೆಂಗಳೂರು: ನೀಟ್‌ ಪರೀಕ್ಷೆಯ ಫಲಿತಾಂಶದ ಬಳಿಕವೇ ಎಂಜಿನಿಯರ್‌ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೆಇಎ ಕಾರ್ಯ ನಿವಾರ್ಹಕ ನಿರ್ದೇಶಕ ಪ್ರಸನ್ನ (Education News) ತಿಳಿಸಿದ್ದಾರೆ. ನೀಟ್ ಫಲಿತಾಂಶಕ್ಕೂ ಮುನ್ನವೇ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಹೀಗಾಗಿ ಮೊದಲು ಮೆಡಿಕಲ್ ಸೀಟ್ ಹಂಚಿಕೆ ಮಾಡಿ ನಂತರ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಲಾಗುವುದು ಎಂದರು.

ಬೇರೆ ಬೇರೆ ಕಾಲೇಜಿನಲ್ಲಿ ಈಗಾಗಲೇ ದಾಖಲಾತಿ ಪ್ರಕ್ರಿಯೆ ಆರಂಭವಾಗಿದೆ ಎಂಬ ದೂರಿನ ಕುರಿತು ಪ್ರತಿಕ್ರಿಯಿಸಿದ ಅವರು, ಸಿಇಟಿ ಪರೀಕ್ಷೆಯಲ್ಲಿ ಒಳ್ಳೆಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸೀಟ್ ಸಿಗುತ್ತದೆ. ಸೀಟ್ ಸಿಗುವುದಿಲ್ಲ ಎಂಬ ಆತಂಕದಲ್ಲಿ ಡೋನೇಷನ್ ಕೊಟ್ಟು ಅಡ್ಮಿಶನ್ ಮಾಡಿಸಬೇಡಿ. ಒಳ್ಳೆಯ ರ‍್ಯಾಂಕ್‌ ಪಡೆದವರಿಗೆ ಒಳ್ಳೆಯ ಕಾಲೇಜು ಸಿಗುತ್ತದೆ ಎಂದರು.

ಮತ್ತೊಂದು ಅವಕಾಶ


ನೀಟ್‌ ಪರೀಕ್ಷೆ ತೆಗೆದುಕೊಂಡಿದ್ದರೂ ರಾಜ್ಯದ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಬೇಕಾದರೆ ಕೆಇಎಗೆ ಅರ್ಜಿ ಸಲ್ಲಿಸುವುದು ಕಡ್ಡಾಯ. ಆದರೆ, ಕೆಲವರು ಈ ರೀತಿ ಅರ್ಜಿ ಸಲ್ಲಿಸಿಲ್ಲ ಎಂದು ಹೇಳುತ್ತಿದ್ದು, ಅಂತಹವರಿಗೆ ಅನುಕೂಲ ಮಾಡಲು ನೀಟ್‌ ಫಲಿತಾಂಶದ ನಂತರ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದರು.

ಇದನ್ನೂ ಓದಿ: KCET Result 2024: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಲಿಂಕ್‌ ಇಲ್ಲಿದೆ

1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯ

ಇನ್ನೂ ರಾಜ್ಯದಲ್ಲಿ 1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯವಿದೆ. ರ‍್ಯಾಂಕ್‌ ಆಧಾರದ ಮೇಲೆ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ. ಇನ್ನೂ ಕಾಲೇಜು ಶುಲ್ಕವನ್ನು ನಿಗದಿ ಮಾಡಿಲ್ಲ. ಕಳೆದ ವರ್ಷ 40,110 ರೂಪಾಯಿ ಶುಲ್ಕ ಸರ್ಕಾರಿ ಕಾಲೇಜುಗಳಿಗೆ ಇತ್ತು. ಪ್ರಸಕ್ತ ಸಾಲಿನ ಸೀಟ್ ಮ್ಯಾಟ್ರಿಕ್ ಇನ್ನೂ ಸರ್ಕಾರದಿಂದ ಬಂದಿಲ್ಲ. ಬಂದ ನಂತರ ಕಾಲೇಜು/ಕೋರ್ಸ್ ವಾರ ಸೀಟ್ ಮ್ಯಾಟ್ರಿಕ್ಸ್ ಅನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು. ಅದೇ ರೀತಿ ಕೋರ್ಸ್ ಗಳ ಶುಲ್ಕ ನಿಗದಿ ಸಂಬಂಧ ಒಂದು ಸಭೆ ನಡೆದಿದ್ದು, ಸದ್ಯದಲ್ಲೇ ಆ ಕುರಿತು ಸರ್ಕಾರದ ಮಟ್ಟದಲ್ಲಿ ತೀರ್ಮಾನವಾಗಲಿದೆ ಎಂದರು.

ವೃತ್ತಿಪರ ಕೋರ್ಸ್‌ಗಳಲ್ಲಿ ಸರ್ಕಾರಿ ಕೋಟಾದ ಸೀಟುಗಳನ್ನು ಕೆಇಎ ಮೂಲಕವೇ ಹಂಚಿಕೆ ಮಾಡಲಾಗುತ್ತದೆ. ಈ ವಿಷಯದಲ್ಲಿ ಗೊಂದಲ ಬೇಡ. ಫಲಿತಾಂಶ ತಡ ಆಯಿತು, ಹೀಗಾಗಿ ಎಲ್ಲ ಸೀಟುಗಳನ್ನು ಖಾಸಗಿ ಕಾಲೇಜು ಆಡಳಿತ ಮಂಡಳಿಗಳು ಹೆಚ್ಚಿನ ಡೊನೇಷ್‌ ಪಡೆದು ಭರ್ತಿ ಮಾಡಿಕೊಳ್ಳುತ್ತಿವೆ ಎಂದು ಕೆಲವರು ಗೊಂದಲ ಸೃಷ್ಟಿಸುತ್ತಿದ್ದು, ಅಂತಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಪ್ರಸನ್ನ ಮನವಿ ಮಾಡಿದರು. ಕೆಇಎ ಮೂಲಕವೇ ಮೆರಿಟ್‌ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುತ್ತದೆ. ಹೀಗಾಗಿ ಇಂತಹ ಸುಳ್ಳುಸುದ್ದಿಗಳಿಗೆ ಪೋಷಕರಾಗಲಿ/ ವಿದ್ಯಾರ್ಥಿಗಳಾಗಲಿ ಗಮನ ನೀಡಬಾರದು ಎಂದು ಅವರು ಹೇಳಿದರು.

ಆನ್‌ಲೈನ್‌ನಲ್ಲೇ ವೆರಿಫಿಕೇಶನ್‌

ಈ ಬಾರಿ ವಿಶೇಷ ಮಕ್ಕಳ ವೈದ್ಯಕೀಯ ತಪಾಸಣೆ ಬಿಟ್ಟರೆ ಬಹುತೇಕ ಎಲ್ಲ ದಾಖಲೆಗಳ ಪರಿಶೀಲನೆ ಆನ್ ಲೈನ್ ನಲ್ಲಿ ನಡೆಯುತ್ತದೆ. ಯಾರೂ ಕೆಇಎ ಕಚೇರಿಗೆ ಬರುವ ಅಗತ್ಯ ಇರುವುದಿಲ್ಲ. ಎಲ್ಲ ಪ್ರಕ್ರಿಯೆಗಳು ಆನ್ ಲೈನ್‌ನಲ್ಲೆ ನಡೆಯಲಿದೆ. ಶೇ.100 ರಷ್ಟು ಡಾಕ್ಯುಮೆಂಟ್ ಪರಿಶೀಲನೆ ಆನ್‌ಲೈನ್‌ನಲ್ಲಿ ಮಾಡಲಾಗುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳು ಕೆಇಎ ಮುಂದೆ ಬಂದು ಕ್ಯೂ ನಿಲ್ಲುವ ಅವಶ್ಯಕತೆ ಇಲ್ಲ. ಎಲ್ಲಾ ದಾಖಲಾತಿಗಳನ್ನು ಆನ್‌ಲೈನ್‌ನಲ್ಲೇ ಪರಿಶೀಲನೆ ನಡೆಯಲಿದೆ ಎಂದರು. ನಿನ್ನೆ ಶನಿವಾರ (ಜೂ.1) ಸಂಜೆ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಹಠಾತ್ ಪ್ರಕಟಿಸಿದ ಬೆನ್ನಲ್ಲೇ ಭಾನುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನ ಸುದ್ದಿಗೋಷ್ಠಿ ನಡೆಸಿ ಎಲ್ಲ ಮಾಹಿತಿಯನ್ನು ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

UGCET 2024: ಸಿಇಟಿ ಅಪ್‌ಡೇಟ್‌; ಜೂ.10ರಿಂದ ವಿಕಲಚೇತನ ಅಭ್ಯರ್ಥಿಗಳಿಗೆ ವೈದ್ಯಕೀಯ ತಪಾಸಣೆ

UGCET 2024 ಸಿಇಟಿ ವಿಕಲಚೇತನ ಅಭ್ಯರ್ಥಿಗಳಿಗೆ ಜೂ 10 ರಿಂದ ವೈದ್ಯಕೀಯ ತಪಾಸಣೆ ನಡೆಯಲಿದೆ. ಅಭ್ಯರ್ಥಿಗಳು ತಮಗೆ ನಿಗದಿ ಮಾಡಿದ ದಿನದಂದು ಬಂದು ತಪಾಸಣೆಗೆ ಒಳಪಡಬೇಕಿದೆ. ಇನ್ನೂ ವೈದ್ಯಕೀಯ ಸಮಿತಿಯು ಪರಿಶೀಲಿಸಿ ನೀಡುವ ವಿಕಲಚೇತನರ ಅರ್ಹತೆಯು ವೈದ್ಯಕೀಯ ಸಮಿತಿಯ ನಿರ್ಧಾರವೇ ಅಂತಿಮವಾಗಿರಲಿದೆ.

VISTARANEWS.COM


on

By

UGCET 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳಿಗೆ ವಿಕಲಚೇತನಾ ಕೋಟಾದಲ್ಲಿ ಮೀಸಲಾತಿ ಕ್ಲೇಮ್‌ ಮಾಡಿರುವ ಅಭ್ಯರ್ಥಿಗಳಿಗೆ (UGCET 2024) ಜೂನ್‌ 10 ರಿಂದ 12ರವರೆಗೆ ವೈದ್ಯಕೀಯ ತಪಾಸಣೆಯನ್ನು (Medical Test) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಆಯೋಜಿಸಿದೆ. ಅಭ್ಯರ್ಥಿಗಳು ಬೆಳಗ್ಗೆ 9:30ಕ್ಕೆ ವರದಿ ಮಾಡಿಕೊಳ್ಳಬೇಕು. 10 ಗಂಟೆಯಿಂದ ವೈದ್ಯಕೀಯ ತಪಾಸಣೆ ನಡೆಯಲಿದೆ.

ಬೆಂಗಳೂರಿನ ಮಲ್ಲೇಶ್ವರದ ಕೆಇಎ ಕಚೇರಿಯಲ್ಲಿ ತಜ್ಞ ವೈದ್ಯರು ಅಭ್ಯರ್ಥಿಗಳನ್ನು ತಪಾಸಣೆ ಮಾಡಲಿದ್ದಾರೆ. ಸಿಇಟಿಗೆ ಅರ್ಜಿ ಸಲ್ಲಿಸುವಾಗ ಒಟ್ಟು 783 ಮಂದಿ ವಿಕಲಚೇತನರ ಕೋಟಾದಲ್ಲಿ ಮೀಸಲಾತಿ ಕ್ಲೇಮ್‌ ಮಾಡಿದ್ದು, ಅಷ್ಟೂ ಮಂದಿಗೆ ಮೂರು ದಿನಗಳ ಕಾಲ ತಪಾಸಣೆ ನಡೆಸಲಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್‌.ಪ್ರಸನ್ನ ತಿಳಿಸಿದ್ದಾರೆ.

ತಪಾಸಣೆಗೆ ಹಾಜರಾಗಬೇಕಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಮಗೆ ಸೂಚಿಸಿದ ದಿನಾಂಕಗಳಂದು ಖುದ್ದು ವೈದ್ಯಕೀಯ ತಪಾಸಣೆಗೆ ಬರಬೇಕು. ವೈದ್ಯಕೀಯ ಸಮಿತಿಯು ಪರಿಶೀಲಿಸಿ ನೀಡುವ ವಿಕಲಚೇತನರ ಅರ್ಹತೆ ವಿಷಯದಲ್ಲಿ ವೈದ್ಯಕೀಯ ಸಮಿತಿಯ ನಿರ್ಧಾರವೇ ಅಂತಿಮವಾಗಿರಲಿದೆ.

UGCET 2024

ತಪಾಸಣೆ ವೇಳೆ ಅಭ್ಯರ್ಥಿಗಳು ಏನೆಲ್ಲ ತರಬೇಕು?

ಯುಜಿಸಿಇಟಿ ಅರ್ಜಿಯ ಪ್ರತಿ, ಪ್ರವೇಶ ಪತ್ರ, ಅಭ್ಯರ್ಥಿಯ ಭಾವಚಿತ್ರ ಇರುವ ಗುರುತಿನ ಚೀಟಿ, ವೈದ್ಯಕೀಯ ಪ್ರಮಾಣಪತ್ರ, ಕಿವುಡುತನದ ಸಮಸ್ಯೆ ಇರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಅಖಿಲ ಭಾರತ ವಾಕ್‌ ಮತ್ತು ಶ್ರವಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರಗಳನ್ನು ತಪಾಸಣೆ ಸಂದರ್ಭದಲ್ಲಿ ತಂದಿರಬೇಕು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Pradeep Eshwar: ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ ಭರ್ಜರಿ ಗೆಲುವು; ಶಾಸಕ ಪ್ರದೀಪ್‌ ಈಶ್ವರ್‌ ರಾಜೀನಾಮೆ ಘೋಷಣೆ?

Pradeep Eshwar: ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಒಂದು ಮತದ ಲೀಡ್‌ನಿಂದ ಗೆದ್ದರೂ ರಾಜೀನಾಮೆ ನೀಡುವುದಾಗಿ ಶಾಸಕ ಪ್ರದೀಪ್‌ ಈಶ್ವರ್‌ ಸವಾಲು ಹಾಕಿದ್ದರು. ಇದೀಗ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಗೆದ್ದಿರುವುದರಿಂದ ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

VISTARANEWS.COM


on

Pradeep Eshwar
Koo

ಚಿಕ್ಕಬಳ್ಳಾಪುರ: ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಡಾ.ಕೆ.ಸುಧಾಕರ್‌ ಭರ್ಜರಿ ಗೆಲುವು ದಾಖಲಿಸಿದ್ದರಿಂದ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ಅವರ ರಾಜೀನಾಮೆಗೆ ಒತ್ತಾಯ ಕೇಳಿಬಂದಿದೆ. ಈ ಹಿಂದೆ ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಒಂದು ಮತದ ಲೀಡ್‌ನಿಂದ (Karnataka election results 2024) ಗೆದ್ದರೂ ರಾಜೀನಾಮೆ ನೀಡುವುದಾಗಿ ಶಾಸಕ ಪ್ರದೀಪ್‌ ಈಶ್ವರ್‌ ಸವಾಲು ಹಾಕಿದ್ದರು. ಹೀಗಾಗಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ (Chikballapur Election Result 2024) ಬಿಜೆಪಿಯ ಡಾ.ಕೆ. ಸುಧಾಕರ್ (​Dr K Sudhakar) ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ 1,62,099 ಮತಗಳ ಅಂತರದಿಂದ ಜಯಭೇರಿ ಮೊಳಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಮಾಜಿ ಸಚಿವ ಸುಧಾಕರ್ ಅವರು ಈ ಬಾರಿ ಲೋಕಸಭಾ ಟಿಕೆಟ್ ಪಡೆದು ಗೆದ್ದು ಬೀಗಿದ್ದಾರೆ. ಹೀಗಾಗಿ ಶಾಸಕ ಪ್ರದೀಪ್‌ ಈಶ್ವರ್‌ ಈ ಹಿಂದೆ ಹೇಳಿದ್ದ ಮಾತುಗಳನ್ನು ಉಲ್ಲೇಖಿಸಿ ಬಿಜೆಪಿ ಕಾರ್ಯಕರ್ತರು ಟ್ರೋಲ್‌ ಮಾಡುತ್ತಿದ್ದಾರೆ.

ಶಾಸಕ ಪ್ರದೀಪ್‌ ಈಶ್ವರ್‌ ರಾಜೀನಾಮೆ ಘೋಷಣೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಪೋಸ್ಟರ್. ‌

“ನನ್ನ ಮಾತಿಗೆ ನಾನು ಬದ್ಧ. ಚಿಕ್ಕಬಳ್ಳಾಪುರ ವಿಧಾನಸಭಾ ಕಾಂಗ್ರೆಸ್‌ ಅಭ್ಯರ್ಥಿಗಿಂತ ಬಿಜೆಪಿ ಅಭ್ಯರ್ಥಿ ಹೆಚ್ಚು ಮತಗಳನ್ನು ಪಡೆದಿರುವುದರಿಂದ ನಾನು ನೈತಿಕ ಹೊಣೆ ಹೊತ್ತು, ಶಾಸಕ ಸ್ಥಾನಕ್ಕೆ ಜೂನ್‌ 5ರಂದು ಬೆಳಗ್ಗೆ 5ಗಂಟೆಗೆ ರಾಜೀನಾಮೆ ನೀಡಲಿದ್ದೇನೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಿನ್ನಡೆಗೆ ನಾನೇ ನೇರ ಹೊಣೆ ಎಂದು” ಶಾಸಕ ಪ್ರದೀಪ್‌ ಈಶ್ವರ್‌ ಅವರು ಹೇಳಿದಂತಿರುವ ಪೋಸ್ಟರ್‌ ವೈರಲ್‌ ಮಾಡಲಾಗಿದೆ. ಆದರೆ, ಇದು ಶಾಸಕ ಪ್ರದೀಪ್‌ ಈಶ್ವರ್‌ ಅವರ ಅಧಿಕೃತ ಪೋಸ್ಟರ್‌ ಅಲ್ಲ. ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಟ್ರೋಲ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ | Chikballapur Election Result 2024 : ಚಿಕ್ಕಬಳ್ಳಾಪುರದಲ್ಲಿ ಡಾ. ಸುಧಾಕರ್​ಗೆ ಭರ್ಜರಿ ಗೆಲುವು

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರು ಕಾಂಗ್ರೆಸ್​ನ ಎಂ.ವೀರಪ್ಪ ಮೊಯ್ಲಿ ಅವರನ್ನು 1,82,110 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.53.74ರಷ್ಟು ಮತಗಳನ್ನು ಪಡೆದಿತ್ತು. ಈ ಬಾರಿ ಹಾಲಿ ಸಂಸದ ಬಚ್ಚೇಗೌಡರ ಬದಲಿಗೆ ವಿಧಾನಸಭಾ ಚುನಾವಣೆಯಲ್ಲಿ ಸೋಲುಕಂಡಿದ್ದ ಮಾಜಿ ಸಚಿವ ಡಾ.ಕೆ.ಸುಧಾಕರ್‌ ಅವರಿಗೆ ಬಿಜೆಪಿ ಲೋಕಸಭಾ ಚುನಾವಣಾ ಟಿಕೆಟ್‌ ನೀಡಿತ್ತು. ಇದೀಗ ಸುಧಾಕರ್‌ ಅವರು ಭಾರಿ ಅಂತರರಿಂದ ಗೆಲುವು ದಾಖಲಿಸಿದ್ದು, ಕಾರ್ಯಕರ್ತರರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

Continue Reading
Advertisement
Kharge calls Modi's defeat, says 'we saved Constitution': Rahul Gandhi
ಪ್ರಮುಖ ಸುದ್ದಿ1 min ago

Election Results 2024 : ಮೋದಿಯ ಸೋಲು ಎಂದ ಖರ್ಗೆ, ಸಂವಿಧಾನ ಉಳಿಸಿದೆವು ಎಂದ ರಾಹುಲ್​ ಗಾಂಧಿ

Karnataka election results 2024
ಕರ್ನಾಟಕ13 mins ago

Karnataka Election Results 2024: ಬೆಂ. ಗ್ರಾಮಾಂತರದಲ್ಲಿ ಸಹೋದರನಿಗೆ ಸೋಲು; ಜನರ ತೀರ್ಪಿನ ಬಗ್ಗೆ ಬೇರೆ ಮಾತಿಲ್ಲ ಎಂದ ಡಿಕೆಶಿ

NEET UG Results 2024
ದೇಶ25 mins ago

NEET UG Results 2024: ನೀಟ್‌ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಹೀಗೆ ಮಾಡಿ

Election Results 2024
ದೇಶ35 mins ago

Election results 2024: ಜೈಲಿನಿಂದಲೇ ಕಣಕ್ಕಿಳಿದು ಜಯಭೇರಿ ಬಾರಿಸಿದ ಪ್ರತ್ಯೇಕತಾವಾದಿಗಳು; ಇವರ ಹಿನ್ನೆಲೆ ಏನು?

Election Results 2024
ದೇಶ40 mins ago

Election Results 2024: 10 ಲಕ್ಷ ಮತಗಳಿಂದ ಗೆದ್ದು ಇತಿಹಾಸ ಸೃಷ್ಟಿಸಿದ ಬಿಜೆಪಿಯ ಶಂಕರ್‌ ಲಾಲ್ವಾನಿ! ಗರಿಷ್ಠ ವೋಟುಗಳಿಂದ ಗೆದ್ದವರ ಮಾಹಿತಿ ಇಲ್ಲಿದೆ

India vs Ireland
ಕ್ರೀಡೆ43 mins ago

India vs Ireland: ರೋಹಿತ್​ ಜತೆ ಇನಿಂಗ್ಸ್​ ಆರಂಭಿಸುವುದು ಯಾರು? ರೇಸ್​ನಲ್ಲಿ ಕೊಹ್ಲಿ, ಜೈಸ್ವಾಲ್​!

Actor Chetan Ahimsa says NDA is needed for BJP to come to power
Lok Sabha Election 202443 mins ago

Actor Chetan Ahimsa: ಮತ್ತೆ ಮೋದಿಯೇ ಪ್ರಧಾನಿ, ಆದರೆ ಬಿಜೆಪಿಗಿದು ಪಾಠ ಎಂದ ನಟ ಚೇತನ್!

Narendra Modi
ಪ್ರಮುಖ ಸುದ್ದಿ49 mins ago

Narendra Modi : ವಾರಾಣಸಿಯಲ್ಲೂ ಮೋದಿ ಜನಪ್ರಿಯತೆ ಮಸುಕು; ಗೆಲುವಿನ ಅಂತರ ಕೇವಲ 1.5 ಲಕ್ಷ ಮತಗಳು

Election Results 2024 in celebrities
Lok Sabha Election 202457 mins ago

Election Results 2024: ಕಂಗನಾ, ಸುರೇಶ್‌ ಗೋಪಿ, ಶತ್ರುಘ್ನ ಸಿನ್ಹಾ ಸೇರಿ ಹಲವು ನಟ–ನಟಿಯರ ಗೆಲುವು

UGCET 2024
ಬೆಂಗಳೂರು1 hour ago

UGCET 2024: ಸಿಇಟಿ ಅಪ್‌ಡೇಟ್‌; ಜೂ.10ರಿಂದ ವಿಕಲಚೇತನ ಅಭ್ಯರ್ಥಿಗಳಿಗೆ ವೈದ್ಯಕೀಯ ತಪಾಸಣೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ12 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 day ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ7 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌