ರಾಮನಗರ: ಕನಕಪುರ ತಾಲ್ಲೂಕಿನಲ್ಲಿರುವ ಚುಂಚಿಫಾಲ್ಸ್‌ನಲ್ಲಿ (Chunchi Falls) ಸೆಲ್ಫೀ ತೆಗೆದುಕೊಳ್ಳುತ್ತಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ.
ಬೆಂಗಳೂರಿನ ಶಂಕರ ಮಠದ ನಿವಾಸಿ ಪ್ರವೀಣ್ ಚಂದ್ರ (26) ಸಾವೀಗಿಡಾದ ಯುವಕ. ಈತ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಎನ್ನಲಾಗಿದೆ. ಭಾನುವಾರ ತನ್ನ ಸ್ನೇಹಿತರ ಜತೆ ಚುಂಚಿಫಾಲ್ಸ್‌ಗೆ ಬಂದಿದ್ದ ವೇಳೆ ಅವಘಡ ಸಂಭವಿಸಿದೆ.
ಅಪಾಯದ ಸ್ಥಳದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದಾಗ ಕಾಲು ಜಾರಿ ಬಿದ್ದಿದ್ದಾರೆ. ಈ ವೇಳೆ ಅವರಿಗೆ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ. ಮಂಗಳವಾರ (ಆ.೧೬) ಶವ ಪತ್ತೆಯಾಗಿದ್ದು, ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಬಳ್ಳಾರಿ ಬಳಿ ಬೈಕ್-ಕಾರು ಮಧ್ಯೆ ಅಪಘಾತ: ಸವಾರ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ