ಬೆಂಗಳೂರು: ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣದಲ್ಲಿ (Teacher Recruitment Scam) ಐವರು ಆರೋಪಿಗಳನ್ನು ಸಿಐಡಿ ಪೊಲೀಸರು ಸೋಮವಾರ ಬಂಧಿಸಿದ್ದು, ಮುಖ್ಯ ಮಹಾನಗರ ದಂಡಾಧಿಕಾರಿಗಳ ನ್ಯಾಯಾಲಯ(ಸಿಎಂಎಂಸಿ) ಆದೇಶದ ಮೇರೆಗೆ ಅಕ್ಟೋಬರ್ 1ರವರೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪದಲ್ಲಿ ವಿಧಾನಸೌಧ ಠಾಣೆಯಲ್ಲಿ ಶಿಕ್ಷಣ ಇಲಾಖೆಯ ಬೆಂಗಳೂರು ವಿಭಾಗದ ಸಮಗ್ರ ಶಿಕ್ಷಣ ಅಭಿಯಾನ ನಿರ್ದೇಶಕಿ ಗೀತಾ, ಪಠ್ಯ ಪುಸ್ತಕಗಳ ನಿರ್ದೇಶಕ ಮಾದೇಗೌಡ, ನಿವೃತ್ತ ಜಂಟಿ ನಿರ್ದೇಶಕರಾದ ಜಿ.ಆರ್.ಬಸವರಾಜು, ನಿವೃತ್ತ ಜಂಟಿ ನಿರ್ದೇಶಕ ಕೆ.ರತ್ನಯ್ಯ, ನಿವೃತ್ತ ಜಂಟಿ ನಿರ್ದೇಶಕ ಡಿ.ಕೆ.ಶಿವಕುಮಾರ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಹೆಚ್ಚಿನ ತನಿಖೆ ಸಲುವಾಗಿ ಪ್ರಕರಣ ಸಿಐಡಿಗೆ ವರ್ಗಾಯಿಸಲಾಗಿತ್ತು. ಇದೀಗ ಆರೋಪಿಗಳನ್ನು ಬಂಧಿಸಿರುವ ಸಿಐಡಿ ಪೊಲೀಸರು, ಆರೋಪಿಗಳನ್ನು ಮುಖ್ಯ ಮಹಾನಗರ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ (ಸಿಎಂಎಂಸಿ) ಹಾಜರಿಪಡಿಸಿ, ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡಲು ಮನವಿ ಮಾಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಅಕ್ಟೋಬರ್ 1ರವರೆಗೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಇದನ್ನೂ ಓದಿ | Shivamogga terror | ಬಂಧಿತರ ಪೊಲೀಸ್ ಕಸ್ಟಡಿ ಅವಧಿ ಸೆಪ್ಟೆಂಬರ್ 30ರವರೆಗೆ ವಿಸ್ತರಣೆ, ಸಿಗದ ಶಾರಿಕ್ ಸುಳಿವು