Site icon Vistara News

ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣ; ಸಿಐಡಿ ಪೊಲೀಸರಿಂದ 38 ಶಿಕ್ಷಕರ ಬಂಧನ

ಶಿಕ್ಷಕರ ಬಂಧನ

ಬೆಂಗಳೂರು: 2012-14 ಮತ್ತು 2014-15ರಲ್ಲಿ ನಡೆದ ಸಹ ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣಗಳಲ್ಲಿ ಸಿಐಡಿ ಪೊಲೀಸರು 51 ಸ್ಥಳಗಳಲ್ಲಿ ದಾಳಿ ನಡೆಸಿ 38 ಶಿಕ್ಷಕರನ್ನು ಬಂಧಿಸಿದ್ದಾರೆ.

ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕಾಗಿ ಸಿಐಡಿಯು 30 ವಿಶೇಷ ತಂಡ ರಚಿಸಲಾಗಿತ್ತು. ಸೋಮವಾರ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ, ಚಿತ್ರದುರ್ಗ ಜಿಲ್ಲೆಗಳ 51 ಸ್ಥಳಗಳಲ್ಲಿ ಸಿಐಡಿ ಪೊಲೀಸರು ದಾಳಿ ನಡೆಸಿ 38 ಶಿಕ್ಷಕರನ್ನು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯಲ್ಲಿ 24, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ 5, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 3, ಚಿತ್ರದುರ್ಗ ಜಿಲ್ಲೆಯಲ್ಲಿ 5 ಶಿಕ್ಷಕರು ಸೇರಿ 38 ಶಿಕ್ಷಕರನ್ನು ದಸ್ತಗಿರಿ ಮಾಡಲಾಗಿದೆ.

ಇದನ್ನೂ ಓದಿ | Traffic Rules | ಸೀಟ್‌ ಬೆಲ್ಟ್‌ ದಂಡದ ಪ್ರಮಾಣ ಹೆಚ್ಚಳ; ಹಿಂಬದಿ ಸವಾರರಿಗೂ ಬೀಳುತ್ತೆ 1000 ರೂ. ಫೈನ್‌!

Exit mobile version