ಮೈಸೂರು: ಡಾ. ಬಿ.ಆರ್.ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ (Group Clash) ಉಂಟಾಗಿ, ಪೊಲೀಸರು ಸೇರಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ನಾಯಕ ಹಾಗೂ ದಲಿತ ಸಮುದಾಯಗಳ ನಡುವೆ ಘರ್ಷಣೆ ಉಂಟಾಗಿದ್ದು, ಈ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಪೊಲೀಸರು ಸೇರಿ ಹಲವರು ಗಾಯಗೊಂಡಿದ್ದಾರೆ. ಕಲ್ಲು ತೂರಾಟದಿಂದ ಮನೆಗಳ ಮುಂದೆ ನಿಲ್ಲಿಸಿದ್ದ ಹಲವು ವಾಹನಗಳು ಜಖಂಗೊಂಡಿವೆ.
ಇದನ್ನೂ ಓದಿ | Ballari News: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ; 17 ಲಕ್ಷ ರೂ. ಮೌಲ್ಯದ ಗಾಂಜಾ ವಶ
ಎರಡೂ ಸಮುದಾಯದ ಬೀದಿಯಲ್ಲೂ ಕಲ್ಲು ತೂರಾಟ ನಡೆದಿದೆ. ಗಲಭೆಯಿಂದ ಹಲ್ಲರೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ದೌಡಾಯಿಸಿದ್ದು, ಬಿಗಿ ಭದ್ರತೆ ಏರ್ಪಡಿಸಲಾಗಿದೆ.