Anand Mahindra: ಹಣ್ಣು ಮಾರುವ ಹಾಲಕ್ಕಿ ಮಹಿಳೆಯ ಪರಿಸರ ಪ್ರೇಮ; ಸ್ವಚ್ಛ ಭಾರತ್‌ನ ಹೀರೊಗಳು ಇವರೇ ಎಂದು ಕೊಂಡಾಡಿದ ಆನಂದ್‌ ಮಹೀಂದ್ರ - Vistara News

ಉತ್ತರ ಕನ್ನಡ

Anand Mahindra: ಹಣ್ಣು ಮಾರುವ ಹಾಲಕ್ಕಿ ಮಹಿಳೆಯ ಪರಿಸರ ಪ್ರೇಮ; ಸ್ವಚ್ಛ ಭಾರತ್‌ನ ಹೀರೊಗಳು ಇವರೇ ಎಂದು ಕೊಂಡಾಡಿದ ಆನಂದ್‌ ಮಹೀಂದ್ರ

ಅಂಕೋಲಾ ಬಸ್‌ ನಿಲ್ದಾಣದಲ್ಲಿ ಹಾಲಕ್ಕಿ ಮಹಿಳೆಯೊಬ್ಬರ ಸ್ವಚ್ಛತಾ ಕಾರ್ಯಕ್ಕೆ ಮಹೀಂದ್ರ ಸಂಸ್ಥೆಯ ಆನಂದ್‌ ಮಹೀಂದ್ರ (Anand Mahindra) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

ಅಂಕೋಲಾ ಬಸ್‌ ನಿಲ್ದಾಣ ಹಾಲಕ್ಕಿ ಮಹಿಳೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಹಾಲಕ್ಕಿ ಮಹಿಳೆಯೊಬ್ಬರ ಕಾರ್ಯವೂ ಇದೀಗ ದೇಶದ ಗಮನ ಸೆಳೆಯುತ್ತಿದೆ. ಅಂಕೋಲಾ ಬಸ್‌ ನಿಲ್ದಾಣದಲ್ಲಿ (Ankola Bus stop) ಹಣ್ಣು ಮಾರುವ ಹಾಲಕ್ಕಿ ಮಹಿಳೆಯ‌ ಸ್ವಚ್ಛತಾ ಕಾರ್ಯವನ್ನು (Swachh Bharat) ಮಹೀಂದ್ರಾ ಸಂಸ್ಥೆಯ ಮಾಲೀಕ ಆನಂದ್ ಮಹೀಂದ್ರಾ (Anand Mahindra) ಕೊಂಡಾಡಿದ್ದಾರೆ.

ಸದ್ದಿಲ್ಲದೆ ಸ್ವಚ್ಛ ಭಾರತದ ಪ್ರಯತ್ನವನ್ನು ಸಹಕಾರಗೊಳಿಸುವ ಇಂತಹವರೇ ಸ್ವಚ್ಛ ಭಾರತ್‌ನ ನಿಜವಾದ ಹೀರೋಗಳು ಎಂದಿದ್ದಾರೆ. ಇವರ ಕಾರ್ಯವನ್ನು ಗಮನಿಸದಿರುವುದು, ಶ್ಲಾಘಿಸದೆ ಇರುವುದು ದುರಂತ ಎಂದು ಟ್ವೀಟ್‌ ಮೂಲಕ ಹಾಲಕ್ಕಿ ಮಹಿಳೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟ್ವೀಟ್‌ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ ಆನಂದ್‌ ಮಹೀಂದ್ರಾ

ಅಂದಹಾಗೆ, ಪಟ್ಟಣದ ಬಸ್ ನಿಲ್ದಾಣದಲ್ಲಿ ಹಾಲಕ್ಕಿ ಮಹಿಳೆಯೊಬ್ಬರು ಜೀವನೋಪಾಯಕ್ಕಾಗಿ ಪ್ರತಿನಿತ್ಯ ಎಲೆಯ ಕೊಟ್ಟೆಯಲ್ಲಿ ನೇರಳೆ ಹಣ್ಣುಗಳನ್ನು ತಂದು ಮಾರಾಟ ಮಾಡುತ್ತಾರೆ. ಮಹಿಳೆಯಿಂದ ನೇರಳೆ ಹಣ್ಣು ಖರೀದಿಸುವ ಪ್ರಯಾಣಿಕರು ಹಣ್ಣುಗಳನ್ನು ತಿಂದು, ಎಲೆಯನ್ನು ಬಸ್‌ನ ಕಿಟಕಿಯಿಂದ ಹೊರಗೆ ಬಿಸಾಡಿ ತೆರಳುತ್ತಾರೆ.

ಹೀಗೆ ಪ್ರಯಾಣಿಕರು ಎಸೆದ ಎಲೆಗಳನ್ನು ಹಾಲಕ್ಕಿ ಮಹಿಳೆ ಆರಿಸಿ ತಂದು ಕಸದ ಬುಟ್ಟಿಗೆ ಹಾಕುವುದನ್ನು ರೂಢಿಸಿಕೊಂಡಿದ್ದಾರೆ. ಹೀಗೆ ಮಹಿಳೆ ಎಲೆ ಹೆಕ್ಕುತ್ತಿದ್ದ ವೇಳೆ ಆದರ್ಶ ಹೆಗಡೆ ಎಂಬುವವರು ಮೊಬೈಲ್‌ನಲ್ಲಿ ವಿಡಿಯೊ ಮಾಡಿ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Elephant attack: ಯುವತಿಯನ್ನು ಕೊಂದ ಆನೆ ಹಿಡಿಯಲು ಶತಪ್ರಯತ್ನ; ಅನಸ್ತೇಷಿಯಾ ಕೊಡಲು ಹತ್ತಿರ ಹೋದ ಡಾಕ್ಟರ್‌ ಮೇಲೇ ಅಟ್ಯಾಕ್‌

ಈ ವಿಡಿಯೊ ಸಾಕಷ್ಟು ವೈರಲ್ ಆಗಿದ್ದು, ಆನಂದ್ ಮಹೀಂದ್ರಾ ತಮ್ಮ ಟ್ವಿಟರ್ ಖಾತೆಯಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ. ಅಲ್ಲದೇ ಹಾಲಕ್ಕಿ ಮಹಿಳೆಯ ಕಾರ್ಯವನ್ನು ಶ್ಲಾಘಿಸಿ ಸ್ವಚ್ಛ ಭಾರತದ ನಿಜವಾದ ಹೀರೋ ಇವರೇ ಎಂದು ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೇ ಮಹಿಳೆಯನ್ನು ಸಂಪರ್ಕಿಸಿ ಮಾತನಾಡಿಸಲು ಅವಕಾಶ ಮಾಡಿಕೊಡಿ ಎಂದು ಕೂಡ ಕೇಳಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಇನ್ನಷ್ಟು ವೈರಲ್ ಆಗಿದ್ದು 3.59 ಲಕ್ಷ ವೀಕ್ಷಣೆ ಕಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Modi in Karnataka: ಏಪ್ರಿಲ್‌ 28 – 29ಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ; ಯಾವ ಯಾವ ಕ್ಷೇತ್ರದಲ್ಲಿ ಮತ ಬೇಟೆ?

Modi in Karnataka: ಏಪ್ರಿಲ್‌ 28ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ಮೂರು ಕಡೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ದಾವಣಗೆರೆ, ಬೆಳಗಾವಿ ಹಾಗೂ ಉತ್ತರಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಈ ಮೂಲಕ ಇವುಗಳೂ ಸೇರಿದಂತೆ ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳ ಮತದಾರರನ್ನೂ ಸೆಳೆಯಲು ಬಿಜೆಪಿ ಪ್ಲ್ಯಾನ್‌ ಮಾಡಿಕೊಂಡಿದೆ.

VISTARANEWS.COM


on

Modi in Karnataka PM Narendra Modi to visit from April 28 and 29
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಈಗಾಗಲೇ ಒಂದು ಸುತ್ತಿನ ಮತ ಬೇಟೆ ಮುಗಿಸಿ ತೆರಳಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಎರಡನೇ ಹಂತದ ಚುನಾವಣೆಗೆ ರಿಎಂಟ್ರಿ ಕೊಡಲಿದ್ದಾರೆ. ಈ ವೇಳೆ ಮೋದಿ (Modi in Karnataka) ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಏಪ್ರಿಲ್‌ 28 ಹಾಗೂ 29ರಂದು ಕರ್ನಾಟಕದಲ್ಲಿ ಜನರನ್ನು ಮೋಡಿ ಮಾಡಲು ಮೋದಿ ಮುಂದಾಗಿದ್ದಾರೆ.

ಏಪ್ರಿಲ್‌ 28ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ಮೂರು ಕಡೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ದಾವಣಗೆರೆ, ಬೆಳಗಾವಿ ಹಾಗೂ ಉತ್ತರಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಈ ಮೂಲಕ ಇವುಗಳೂ ಸೇರಿದಂತೆ ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳ ಮತದಾರರನ್ನೂ ಸೆಳೆಯಲು ಬಿಜೆಪಿ ಪ್ಲ್ಯಾನ್‌ ಮಾಡಿಕೊಂಡಿದೆ.

ಮೂರು ಕಡೆಯೂ ಬೃಹತ್‌ ಸಮಾವೇಶ

ಈ ಮೂರು ಲೋಕಸಭಾ ಕ್ಷೇತ್ರಗಳಲ್ಲಿಯೂ ಬೃಹತ್‌ ಸಮಾವೇಶ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಂದು ಬೆಳಗಾವಿಯಲ್ಲಿ 28 ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.

29ರಂದು 4 ಕಡೆ ಸಮಾವೇಶ

ಏಪ್ರಿಲ್‌ 29ರಂದು ಕಲಬುರಗಿ, ಬಳ್ಳಾರಿ, ರಾಯಚೂರು ಅಥವಾ ಕೊಪ್ಪಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶವನ್ನು ನಡೆಸಲಿದ್ದಾರೆ.

ಕರ್ನಾಟಕದಲ್ಲಿ ಇಂದು ಅಮಿತ್‌ ಶಾ, ಪ್ರಿಯಾಂಕಾ ವಾದ್ರಾ ಪ್ರಚಾರ

ಮಂಗಳವಾರ (ಏಪ್ರಿಲ್‌ 23) ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಹಾಗೂ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ (Priyanka Vadra) ಅವರು ಅಬ್ಬರದ ಪ್ರಚಾರ ಮಾಡಲಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿಯೇ ಮಂಗಳವಾರ ಅಮಿತ್‌ ಶಾ ಹಾಗೂ ಪ್ರಿಯಾಂಕಾ ವಾದ್ರಾ ಅವರು ಪ್ರಚಾರ ಮಾಡುತ್ತಿರುವುದು ವಿಶೇಷವಾಗಿದೆ. ಇಂದು ಸಂಜೆ 7.50ಕ್ಕೆ ಅಮಿತ್‌ ಶಾ ಅವರು ತೇಜಸ್ವಿ ಸೂರ್ಯ ಪರ ರೋಡ್‌ ಶೋ ನಡೆಸಲಿದ್ದಾರೆ. ಸ್ವಾಮಿ ವಿವೇಕಾನಂದ ವೃತ್ತದಿಂದ ಸೇಂಟ್‌ ಫ್ರಾನ್ಸಿಸ್‌ ಶಾಲೆವರೆಗೂ ಅಮಿತ್‌ ಶಾ ಅವರು ರೋಡ್‌ ಶೋ ನಡೆಸುವ ಮೂಲಕ ತೇಜಸ್ವಿ ಸೂರ್ಯ ಪರ ಮತಯಾಚನೆ ಮಾಡಲಿದ್ದಾರೆ. ರೋಡ್‌ ಶೋಗಾಗಿ ಬಿಜೆಪಿ ಸಕಲ ಸಿದ್ಧತೆ ಮಾಡಿಕೊಂಡಿದೆ. 8.45ರವರೆಗೆ ರೋಡ್‌ ಶೋ ನಡೆಯಲಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರು ಮಧ್ಯಾಹ್ನ 2 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸಲಿದ್ದು, ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಪ್ರಿಯಾಂಕಾ ವಾದ್ರಾ ಅವರು ಭಾಷಣ ಮಾಡಲಿದ್ದಾರೆ. ಇದಾದ ನಂತರ ಸಂಜೆ ಬೆಂಗಳೂರಿಗೆ ಆಗಮಿಸುವ ಪ್ರಿಯಾಂಕಾ ವಾದ್ರಾ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರ ಪರವಾಗಿ ಪ್ರಚಾರ ನಡೆಸುವ ಮೂಲಕ ಹೆಣ್ಣುಮಕ್ಕಳ ಮತ ಸೆಳೆಯುವ ಪ್ರಯತ್ನ ಮಾಡಲಿದ್ದಾರೆ.

ಅಮಿತ್‌ ಶಾ ಅವರು ಬೊಮ್ಮನಹಳ್ಳಿ ವೃತ್ತದಿಂದ ಪ್ರಚಾರ ಆರಂಭಿಸಿದರೆ, ಪ್ರಿಯಾಂಕಾ ವಾದ್ರಾ ಅವರು ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಎಚ್.ಎಸ್. ಆರ್ ಬಡಾವಣೆಯಿಂದ ಪ್ರಚಾರ ಆರಂಭಿಸಲಿದ್ದಾರೆ. ಕರ್ನಾಟಕದಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಏಪ್ರಿಲ್‌ 24ರಂದೇ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಇದರಿಂದಾಗಿ ಮಂಗಳವಾರದ ಪ್ರಚಾರವು ಪ್ರಾಮುಖ್ಯತೆ ಪಡೆದಿದೆ. ಕರ್ನಾಟಕದಲ್ಲಿ ಈಗಾಗಲೇ ನರೇಂದ್ರ ಮೋದಿ ಅವರು ಪ್ರಚಾರ ನಡೆಸಿದ್ದಾರೆ.

Continue Reading

ಪ್ರಮುಖ ಸುದ್ದಿ

Tulsi Gowda: ಮನೆಯಲ್ಲಿ ಕಾಲು ಜಾರಿ ಬಿದ್ದು ಪದ್ಮಶ್ರೀ ತುಳಸಿ ಗೌಡ ಅಸ್ವಸ್ಥ

Tulsi Gowda: ಲಕ್ಷಾಂತರ ಮರಗಳನ್ನು ಬೆಳೆಸಿ ವೃಕ್ಷಮಾತೆ ಎನಿಸಿಕೊಂಡಿರುವ ತುಳಸಿ ಗೌಡ ಅವರಿಗೆ ಸದ್ಯ ಕಾರವಾರದ ಜಿಲ್ಲಾಸ್ಪತ್ರೆಯ ಐಸಿಯು‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

VISTARANEWS.COM


on

Tulsi Gowda
Koo

ಕಾರವಾರ: ಮನೆಯಲ್ಲಿ ಕಾಲು ಜಾರಿ ಬಿದ್ದು ಪದ್ಮಶ್ರೀ ತುಳಸಿ ಗೌಡ ಅವರು ಅಸ್ವಸ್ಥರಾಗಿದ್ದು, ಅವರನ್ನು ಕಾರವಾರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ಮನೆಯಲ್ಲಿ ವೃಕ್ಷಮಾತೆ ತುಳಸಿಗೌಡ (Tulsi Gowda) ಅವರು ಜಾರಿ ಬಿದ್ದಿದ್ದರಿಂದ ಕಾಲಿಗೆ ಪೆಟ್ಟಾಗಿತ್ತು.

ಲಕ್ಷಾಂತರ ಮರಗಳನ್ನು ಬೆಳೆಸಿ ವೃಕ್ಷಮಾತೆ ಎನಿಸಿಕೊಂಡಿರುವ ತುಳಸಿ ಗೌಡ ಅವರಿಗೆ ಸದ್ಯ ಐಸಿಯು‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಲು ಜಾರಿ ಬಿದ್ದ ಪರಿಣಾಮ ತುಳಸಜ್ಜಿ ಅಸ್ವಸ್ಥಗೊಂಡಿದ್ದಾರೆ.

ಇದನ್ನೂ ಓದಿ | Car Accident: ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಮಗು ಸಾವು; ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಓಮ್ನಿಗೆ ಬ್ಯಾಲೆನೊ ಡಿಕ್ಕಿ, ಬಾಲಕಿ ಸಾವು, 7 ಮಂದಿಗೆ ಗಾಯ, ಸುಟ್ಟುಹೋದ ಓಮ್ನಿ

madavara road accident

ಬೆಂಗಳೂರು: ಮಾದಾವರ ಟೋಲ್‌ಗೇಟ್ ಬಳಿ ಮಾರುತಿ ಒಮ್ನಿ (Maruti Omni) ವಾಹನಕ್ಕೆ ಬ್ಯಾಲೆನೋ ಕಾರು (Baleno) ಹಿಂದಿನಿಂದ ಬಂದು ಡಿಕ್ಕಿಯಾದ (Road Accident) ಪರಿಣಾಮ ಬಾಲಕಿಯೊಬ್ಬಳು (girl death) ಮೃತಪಟ್ಟಿದ್ದು, ಇನ್ನೂ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ತುಮಕೂರು ರಸ್ತೆ ಹೈವೇಯಲ್ಲಿ 10 ಗಂಟೆ ರಾತ್ರಿಯಲ್ಲಿ ಘಟನೆ ನಡೆದಿದೆ. ಓಮ್ನಿಯಲ್ಲಿದ್ದವರು ಅಬ್ಬಿಗೆರೆ, ದಾಸಾನುಪುರದ ಸಂಬಂಧಿಕರ ಮನೆಯಿಂದ ಬರುತ್ತಿದ್ದಾಗ ದುರಂತ ಘಟಿಸಿದೆ. ಒಟ್ಟು ಎಂಟು ಜನ ಮಾರುತಿ ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಬ್ಯಾಲೆನೋ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಬ್ಯಾಲೆನೋ ಕಾರು ಹಿಂದಿನಿಂದ ಬಂದು ಡಿಕ್ಕಿ ಹೊಡೆದ ರಭಸಕ್ಕೆ ಓಮ್ನಿ ಮೂರು ಪಲ್ಟಿಯಾಗಿದೆ. ಪಲ್ಟಿಯಾಗುತ್ತಿದ್ದಂತೆ ಓಮ್ನಿ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.

ಎಂಟು ಜನರಲ್ಲಿ 14 ವರ್ಷದ ಬಾಲಕಿ ದಿವ್ಯ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ನಾಲ್ಕು ಜನರ ಸ್ಥಿತಿ ಗಂಭೀರವಾಗಿದ್ದು, ಸದ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬ್ಯಾಲೆನೋ ಕಾರಿನಲ್ಲಿದ್ದ ಮೂರು ಜನರಲ್ಲಿ ಒಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ಶಂಕಿಸಲಾಗಿದ್ದು, ಮೂವರೂ ಸ್ಥಳದಿಂದ ನಾಪತ್ತೆಯಾಗಿದ್ದಾರೆ. ಸ್ಥಳದಲ್ಲಿ ಕ್ರೇನ್ ಮೂಲಕ ಸುಟ್ಟ ಕಾರನ್ನು ತೆರವು ಮಾಡಲಾಯಿತು.

ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಎಂಟು ಜನರಲ್ಲಿ ಮಾಯಾಂಕ್, ಮಂಜುಳ, ಸುನಿತಾ, ತರುಣ್, ಮಹೇಶ್, ನಮನ್, ಶಾಂತಿಲಾಲ್ ಗಾಯಾಳುಗಳು. ದಿವ್ಯಾ (14) ಮೃತ ಬಾಲಕಿ. ಎಲ್ಲರೂ ದಾಸನಪುರ ನಿವಾಸಿಗಳು. ನಮನ್, ಸುನಿತಾ, ಮಾಯಾಂಕ್ ಸ್ಥಿತಿ ಗಂಭೀರವಾಗಿದೆ. ಓಮ್ನಿಯ ಪೆಟ್ರೋಲ್ ಟ್ಯಾಂಕ್‌ನಿಂದ ಪೆಟ್ರೋಲ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ | Rain News: ಪ್ರತ್ಯೇಕ ಮಳೆ ಅವಘಡ; ಬೀದರ್‌ನಲ್ಲಿ ಸಿಡಿಲು ಬಡಿದು ಇಬ್ಬರು ಯುವಕರ ದುರ್ಮರಣ

ಬ್ಯಾಲೆನೋ ಕಾರಿನಲ್ಲಿದ್ದ ಮೂರು ಜನ‌ರಿಗಾಗಿ ಪೊಲೀಸರಿಂದ ತೀವ್ರ ಹುಡುಕಾಟ ನಡೆದಿದೆ. ಮೂವರಲ್ಲಿ ಒಬ್ಬ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಶಂಕೆ ಇದೆ. ಘಟನೆ ನಡೆಯುತ್ತಿದ್ದಂತೆ ಇವರು ಸ್ಥಳದಿಂದ ನಾಪತ್ತೆಯಾಗಿದ್ದಾರೆ. ಇವರನ್ನು ಪರಿಶೀಲನೆ ನಡೆಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ ಬಾಲಾದಂಡಿ ಹೇಳಿಕೆ ನೀಡಿದ್ದಾರೆ.

Continue Reading

ಮಳೆ

Karnataka Weather : ಸಿಡಿಲಿಗೆ 7 ಕುರಿಗಳು ಸಾವು, ಕೊಡಗಿನಲ್ಲಿ ಭಾರಿ ಮಳೆಗೆ ಮಗುಚಿದ ಲಾರಿ; ನಾಳೆ ಎಲ್ಲೆಲ್ಲಿ ಆರ್ಭಟ

Rain News : ರಾಜ್ಯದ ಹಲವಡೆ ವ್ಯಾಪಕ ಮಳೆಯಾಗುತ್ತಿದ್ದು, ಏ.24ರ ವರೆಗೆ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ. ಕೊಡಗಿನಲ್ಲಿ ವರುಣಾರ್ಭಟಕ್ಕೆ ಚಾಲಕನ ನಿಯಂತ್ರಣ ತಪ್ಪಿದ್ದು, ಲಾರಿಯೊಂದು ತಿರುವಿನಲ್ಲಿ ಮಗುಚಿ ಬಿತ್ತು.

VISTARANEWS.COM


on

By

Karnataka Weather Forecast
Koo

ಕೊಡಗು/ಬೆಂಗಳೂರು: ಸೋಮವಾರ (ಏ.22) ಕೊಡಗಿನ ಹಲವೆಡೆ ಗುಡುಗು ಸಹಿತ ಮಳೆಯು (Rain News) ಅಬ್ಬರಿಸುತ್ತಿದೆ. ಮಡಿಕೇರಿ, ನಾಪೋಕ್ಲು, ಮೂರ್ನಾಡು ಭಾಗದಲ್ಲಿ ಭರ್ಜರಿ (Karnataka Weather Forecast) ಮಳೆಯಾಗಿದೆ. ಒಂದು ಕಡೆಗೆ ಮಳೆಯಿಂದ ಕೊಡಗಿನ ಕೃಷಿಕರಲ್ಲಿ ಮಂದಹಾಸ ಮೂಡಿದರೆ ಮತ್ತೊಂದು ಕಡೆ ಮಳೆ ಅನಾಹುತವು ಆತಂಕ ಹೆಚ್ಚಿಸಿದೆ.

ಮಡಿಕೇರಿ‌‌ ಸಮೀಪದ ಜೋಡುಪಾಲ ಬಳಿ ಭಾರಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು‌ ಮಗುಚಿ ಬಿತ್ತು. ಬೆಂಗಳೂರಿನಿಂದ‌‌ ಮಂಗಳೂರಿಗೆ ಲಾರಿಯಲ್ಲಿ ಜ್ಯೂಸ್ ಸಾಗಿಸಲಾಗುತ್ತಿತ್ತು. ಮಳೆಯಿಂದ ಜೋಡುಪಾಲದ ತಿರುವಿನಲ್ಲಿ ಲಾರಿಯ ವೀಲ್ ಜಾರಿ, ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಿಡಿಲು ಬಡಿದು 7 ಕುರಿಗಳು ಸಾವು

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಹೇಮಗುಡ್ಡ ಬಳಿ ಸಿಡಿಲು ಬಡಿದು 7 ಕುರಿಗಳು ಮೃತಪಟ್ಟಿವೆ. ಹೇಮಗುಡ್ಡ ಗ್ರಾಮದ ರಾಮಣ್ಣ ಬಂಡಿ ಎಂಬುವವರಿಗೆ ಸೇರಿದ 7 ಕುರಿಗಳು ಸಿಡಿಲಿಗೆ ಬಲಿಯಾಗಿವೆ. 8ಕ್ಕೂ ಹೆಚ್ಚು ಕುರಿಗಳು ಗಾಯಗೊಂಡಿವೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡ ನಗರದಲ್ಲಿ ಗುಡುಗು ಸಹಿತ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ಹೆಚ್ಚಾಗಿದ್ದ ಬಿಸಿಲಿನ ತಾಪಮಾನವು ಮಳೆಯಿಂದಾಗಿ ತಣ್ಣಗಾಗಿತ್ತು. ಕೊಪ್ಪಳ‌ದಲ್ಲಿ ಗಾಳಿ, ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಿದೆ. ಮುಂಜಾನೆ ಮೋಡ ಕವಿದ ವಾತಾವರಣ ಇತ್ತು, ಮಧ್ಯಾಹ್ನದ ಹೊತ್ತಿಗೆ ಶುರುವಾದ ಸಣ್ಣ ಮಳೆಯು ನಂತರ ರಭಸವಾದ ಗಾಳಿಯೊಂದಿಗೆ ಗುಡುಗು ಸಿಡಿಲಿನ ಶಬ್ಧವು ಜನರನ್ನು ಬೆಚ್ಚಿ ಬೀಳಿಸಿತ್ತು.

ಇದನ್ನೂ ಓದಿ: Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

ಮುಂದಿನ 48 ಗಂಟೆಯಲ್ಲಿ ಗಾಳಿ ಜತೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಏ.23ರಂದು ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಬೆಳಗಾವಿ, ಬಾಗಲಕೋಟೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಕೆಲವೊಮ್ಮೆ 30-40 ಕಿ.ಮೀ ವ್ಯಾಪ್ತಿಯಲ್ಲಿ ರಭಸವಾದ ಗಾಳಿಯು ಬೀಸಲಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯದ ಕೆಲವೆಡೆ ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಇರುವ ಸಾಧ್ಯತೆ ಇದೆ.

ಏ.24ರಂದು ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯದ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಬಿಸಿ ಗಾಳಿ ಮುನ್ನೆಚ್ಚರಿಕೆ

ಬೀದರ್‌, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಗದಗ, ಧಾರವಾಡ, ದಾವಣಗೆರೆ, ಕೋಲಾರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಮತ್ತು ಆರ್ದ್ರತೆ

ಮುಂದಿನ 5 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಜತೆಗೆ ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂಜಾನೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನ ಅಥವಾ ಸಂಜೆಗೆ ಆಕಾಶವು ನಿರ್ಮಲವಾಗಿರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Karwar News: ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಸಾವು; ಪ್ರವಾಸಕ್ಕೆ ಬಂದಾಗ ದುರಂತ

Karwar News: ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳು ಪ್ರವಾಸಕ್ಕೆಂದು ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ್ದರು. ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿಯ ಕಾಳಿ ನದಿಯಲ್ಲಿ ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿದ್ದಾರೆ.

VISTARANEWS.COM


on

Karwar News
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯ (Karwar News) ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿಯ ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ನದಿಯಲ್ಲಿ ಈಜಲು ಇಳಿದಿದ್ದ ವೇಳೆ ದುರಂತ ನಡೆಸಿದ್ದು, ಮೃತ ದೇಹಗಳನ್ನು ಪೊಲೀಸರು ಹೊರತೆಗೆದಿದ್ದಾರೆ.

ಹುಬ್ಬಳ್ಳಿಯ ನಜೀರ್ ಅಹ್ಮದ್ (40), ಅಲ್ಛೀಯಾ ಅಹ್ಮದ್ (10), ಮೋಹಿನ್ ಅಹ್ಮದ್(6), ರೇಷಾ ಉನ್ನಿಸಾ (38), ಇಫ್ರಾ‌ ಅಹ್ಮದ್ (15), ಅಬೀದ್ ಅಹ್ಮದ್(12) ಮೃತ ದುರ್ದೈವಿಗಳು. ಮೃತರು ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳಾಗಿದ್ದು, ಪ್ರವಾಸಕ್ಕೆಂದು ಅಕ್ವಾಡಕ್ಕೆ ಬಂದಿದ್ದ ವೇಳೆ ನದಿಯಲ್ಲಿ ಈಜಲು ಹೋಗಿದ್ದಾಗ ಮುಳುಗಿದ್ದಾರೆ.

ಇದನ್ನೂ ಓದಿ | Murder Case : ಕುಡಿದಾಗ ಯಾವಾಗಲೂ ಬೈಯುತ್ತಾನೆಂದು ಗೆಳೆಯನನ್ನೇ ಕೊಂದುಬಿಟ್ಟರು

ಒಟ್ಟು ಎಂಟು ಮಂದಿ ನದಿಯಲ್ಲಿ ಈಜಲು ಹೋಗಿದ್ದರು. ಆದರೆ, ಈ ಪೈಕಿ ಆರು ಮಂದಿ ಮುಳುಗಿದ್ದು, ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಆರು ಮಂದಿಯ ಮೃತ ದೇಹಗಳನ್ನು ಪೊಲೀಸರು ಹೊರತೆಗೆದು, ದಾಂಡೇಲಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಮದುವೆಗೆ ಬಂದವಳು ಮಸಣಕ್ಕೆ

ಕೊಡಗು: ಕಾರು ಡಿಕ್ಕಿಯಾಗಿ ರಸ್ತೆ ಬದಿ ನಿಂತಿದ್ದ ಮಹಿಳೆ ಮೃತಪಟ್ಟ ಘಟನೆ ಕೊಡಗಿನ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದಲ್ಲಿ ನಡೆದಿದೆ. ಕಾಸರಗೋಡುವಿನ ರಾಬಿಯ ಮೃತ ದುರ್ದೈವಿ. ಸಂಬಂಧಿಕರ ವಿವಾಹಕ್ಕೆಂದು ಆಗಮಿಸಿದ್ದ ರಾಬಿಯಾ, ರಸ್ತೆ ಬದಿ ನಿಂತಿದ್ದರು. ಆದರೆ ವೇಗವಾಗಿ ಬಂದ ಮಾರುತಿ ಕಾರು ಮೂವರು ಮಹಿಳೆಯರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಮೂವರು ಗಾಯಾಳುಗಳಿಗೆ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಟಿಪ್ಪರ್‌ ಲಾರಿ ಹರಿದು 4 ವರ್ಷದ ಮಗು ಛಿದ್ರ ಛಿದ್ರ; ತಾಯಿ ಕಣ್ಣೇದುರಿಗೆ ನಡೆಯಿತು ದುರಂತ

road Accident in Bengaluru

ಬೆಂಗಳೂರು: ಮಕ್ಕಳನ್ನು ಎಷ್ಟು ಜಾಗ್ರತೆಯಿಂದ ನೋಡಿಕೊಂಡರು ಕಡಿಮೆಯೇ.. ಪೋಷಕರು ಸದಾ ಮಕ್ಕಳ ಮೇಲೊಂದು ಕಣ್ಣೀಡಲೆಬೇಕು, ಇಲ್ಲದಿದ್ದರೆ ದುರಂತಗಳೇ ನಡೆದು ಹೋಗುತ್ತವೆ. ಸದ್ಯ ಇದಕ್ಕೆ ಪೂರಕ ಎಂಬಂತೆ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ (Road Accident) ನಾಲ್ಕು ವರ್ಷದ ಮಗುವೊಂದು ದಾರುಣವಾಗಿ ಮೃತಪಟ್ಟಿದೆ.

ಟಿಪ್ಪರ್‌ ಲಾರಿ ಹರಿದು 4 ವರ್ಷದ ಮಗುವೊಂದು ಮೃತಪಟ್ಟಿದೆ. ಲಾರಿ ಚಕ್ರಕ್ಕೆ ಸಿಲುಕಿದ ಮಗುವಿನ ತಲೆ ಹಾಗೂ ದೇಹ ಛಿದ್ರ ಛಿದ್ರವಾಗಿತ್ತು. ಬೆಂಗಳೂರಿನ ರಾಮೋಹಳ್ಳಿ ಬಸ್ ನಿಲ್ದಾಣದಲ್ಲಿ ಬಳಿ ಶನಿವಾರ ಸಂಜೆ 5.30ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಆಯುಷ್ಯ್ (4) ಮೃತ ದುರ್ದೈವಿ.

ಅಮರ್ ಹಾಗೂ ಪೂಜಾ ದಂಪತಿಗೆ ಅವಳಿ ಮಕ್ಕಳಿದ್ದು, ಉತ್ತರ ಭಾರತದಿಂದ ಬೆಂಗಳೂರಿನ ರಾಮೋಹಳ್ಳಿಯಲ್ಲಿ ಪೇಟಿಂಗ್ ಕೆಲಸ ಮಾಡಲು ಬಂದಿದ್ದರು. ನಿನ್ನೆ ಶನಿವಾರ ಸಂಜೆ ಪೂಜಾ ತನ್ನಿಬ್ಬರು ಮಕ್ಕಳ ಜತೆಗೆ ಮೊಬೈಲ್ ಅಂಗಡಿಗೆ ಬಂದಿದ್ದರು. ಒಬ್ಬ ಮಗು ತಾಯಿ ಜತೆಗೆ ಅಂಗಡಿಯೊಳಗೆ ಇದ್ದ.

ಈ ವೇಳೆ ಮತ್ತೊಬ್ಬ ಮಗ ಆಯ್ಯುಷ್‌ ತಾಯಿ ಕೈ ಬಿಡಿಸಿಕೊಂಡಿದ್ದ. ಬಳಿಕ ಆಟವಾಡುತ್ತಾ ಏಕಾಏಕಿ ರಸ್ತೆಗೆ ಓಡಿದ್ದ. ಇದೇ ವೇಳೆ ಆ ರಸ್ತೆಯಲ್ಲಿ ಬಸ್‌ ಅನ್ನು ಓವರ್ ಟೆಕ್ ಮಾಡಲು, ವೇಗವಾಗಿ ಬಂದ ಟಿಪ್ಪರ್ ಲಾರಿಯು ಆಯ್ಯುಷ್‌ಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಆಯ್ಯುಷ್‌ನ ಮೇಲೆ ಚಕ್ರ ಹರಿದಿದ್ದು, ಮಾಂಸದ ಮುದ್ದೆಯಾಗಿತ್ತು. ಈ ಘಟನೆಯಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಲಾರಿ ಗ್ಲಾಸ್‌ ಪುಡಿ ಪುಡಿ ಮಾಡಿದ ಸ್ಥಳೀಯರು

ನೋಡನೋಡುತ್ತಿದ್ದ ತಾಯಿ ಕಣ್ಮುಂದೆಯೇ ಮಗ ಆಯ್ಯುಷ್‌ ಲಾರಿ ಚಕ್ರಕ್ಕೆ ಸಿಲುಕಿ ಛಿದ್ರ ಛಿದ್ರವಾಗಿದ್ದ. ಇನ್ನು ಘಟನೆಯಿಂದ ಸಿಟ್ಟಾದ ಸ್ಥಳೀಯರು ಟಿಪ್ಪರ್ ಲಾರಿಗೆ ಕಲ್ಲು ತೂರಿ, ಲಾರಿ ಗ್ಲಾಸ್‌ ಪುಡಿ ಪುಡಿ ಮಾಡಿದರು. ಲಾರಿ ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು. ಸದ್ಯ ಮೃತ ಕುಟುಂಬಸ್ಥರಿಂದ ಕುಂಬಳಗೋಡು ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ. ಲಾರಿಯನ್ನು ಹಾಗೂ ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Continue Reading
Advertisement
Bridge Collapse
ದೇಶ3 mins ago

Bridge Collapse: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ; ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ

dimond smuggling
ದೇಶ20 mins ago

Diamond Smuggling : ನೂಡಲ್ಸ್​ ಪ್ಯಾಕೆಟ್​​ನಲ್ಲಿ ಸಿಕ್ಕಿತು 6.46 ಕೋಟಿ ರೂಪಾಯಿ ಮೌಲ್ಯದ ವಜ್ರ!

Tongue Reveals Health
ಆರೋಗ್ಯ21 mins ago

Tongue Reveals Health: ನಮ್ಮ ಆರೋಗ್ಯದ ಚರಿತ್ರೆಯನ್ನು ನಮ್ಮ ನಾಲಿಗೆಯೇ ಹೇಳುತ್ತದೆ!

HD Devegowda
ಕರ್ನಾಟಕ27 mins ago

HD Devegowda: ನಾನು ಇನ್ನೆರಡು ವರ್ಷ ಬದುಕಬಹುದು ಎಂದು ಕಣ್ಣೀರು ಹಾಕಿದ ದೇವೇಗೌಡರು

Lok Sabha Election 2024 Only a guaranteed wave in Karnataka says Cm Siddaramaiah
ಕರ್ನಾಟಕ33 mins ago

Lok Sabha Election 2024: ಇಲ್ಲಿರೋದು ಗ್ಯಾರಂಟಿ ಅಲೆ ಮಾತ್ರ; ಹಸಿ ಸುಳ್ಳು ಹೇಳುತ್ತಿರುವ ಮೋದಿ, ದೇವೇಗೌಡ: ಸಿಎಂ ಸಿದ್ದರಾಮಯ್ಯ

Virat kohli
ಪ್ರಮುಖ ಸುದ್ದಿ48 mins ago

Virat Kohli : ವಿರಾಟ್ ಕೊಹ್ಲಿಯ 50ನೇ ಏಕದಿನ ಕ್ರಿಕೆಟ್​ ಶತಕಕ್ಕೆ ಅಂತಾರಾಷ್ಟ್ರೀಯ ಗೌರವ

Job Alert
ಉದ್ಯೋಗ50 mins ago

Job Alert: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 4ರೊಳಗೆ ಅಪ್ಲೈ ಮಾಡಿ

Murder case In Bengaluur
ಬೆಂಗಳೂರು51 mins ago

Murder Case : ಕೊಲೆಯಾದ ಮಹಿಳೆಗೆ 20 ಹುಡುಗರ ಸಹವಾಸ! ಅವರಿಗೆ ಆಕೆ ಇಟ್ಟಿದ್ದ ಹೆಸರು ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ!

Summer Hairstyles
ಫ್ಯಾಷನ್51 mins ago

Summer Hairstyles: ಸೆಕೆಗಾಲದಲ್ಲಿ ಟ್ರೆಂಡಿಯಾದ 3 ಮಿಕ್ಸ್‌ ಮ್ಯಾಚ್‌ ಹೇರ್‌ಸ್ಟೈಲ್ಸ್!

hardik pandya
ಕ್ರೀಡೆ51 mins ago

IPL 2024: ಹಾರ್ದಿಕ್​ ಪಾಂಡ್ಯ ನಿಜವಾಗಿಯೂ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರಾ?; ವಿಚಿತ್ರ ವರ್ತನೆಯ ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು1 day ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ1 day ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌