Site icon Vistara News

Koppal News: ಕೊಪ್ಪಳದಲ್ಲಿ 100 ಆಹಾರ ಸಂಸ್ಕರಣಾ ಘಟಕ: ಸಿಎಂ

CM Basavaraj Bommai 100 food processing units to be set up in Koppal

#image_title

ಕೊಪ್ಪಳ: ಜಿಲ್ಲೆಯಲ್ಲಿ 100 ಆಹಾರ ಸಂಸ್ಕರಣಾ ಘಟಕಗಳನ್ನು (Koppal News) ಸ್ಥಾಪಿಸಲಾಗುವುದು. ಇದರಿಂದ ರೈತರು ಬೆಳೆದ ಬೆಳೆಗಳು ಸ್ಥಳೀಯ ಮಟ್ಟದಲ್ಲಿ ಸಂಸ್ಕರಣಗೊಂಡು, ಬ್ರ್ಯಾಂಡ್ ನೇಮ್ ಇರುವ ಮಾರುಕಟ್ಟೆ ಹಾಗೂ ರೈತನ ಬೆಳೆಗೆ ಉತ್ತಮ ಬೆಲೆ ದೊರಕಲು ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗಂಗಾವತಿಯಲ್ಲಿ ಮಂಗಳವಾರ ಆಯೋಜಿಸಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಕೊಪ್ಪಳ ಜಿಲ್ಲೆ ಏತ ನೀರಾವರಿಯನ್ನು ನಾರಾಯಣಪುರ ಯೋಜನೆಗೆ ಜೋಡಿಸಿ, ಗೋದಾವರಿಯ 1.8 ಟಿಎಂಸಿ ನೀರನ್ನು ಇಲ್ಲಿನ ಏತನೀರಾವರಿಗೆ ನೀಡಲಾಯಿತು. ಸ್ಕೀಂ ಬಿ ಯೋಜನೆಯೆಂದು ಇದನ್ನು ವಿಲೇ ಇಡಲಾಗಿತ್ತು. ನಾನು ನೀರಾವರಿ ಸಚಿವನಾಗಿದ್ದಾಗ, ಸುಮಾರು 9 ನೀರಾವರಿ ಯೋಜನೆಗಳಿಗೆ ಚಾಲನೆ ನೀಡಲಾಯಿತು. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಸಾಕಾರಗೊಳ್ಳದಿದ್ದ ಕೊಪ್ಪಳ ಏತನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರದ ಅವಧಿಯಲ್ಲಿ ಕಾಯಕಲ್ಪ ಕಾಣುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ | Narendra Modi: ಪ್ರಧಾನಿ ನರೇಂದ್ರ ಮೋದಿಗೆ ಗುರು ರಾಘವೇಂದ್ರರ ವಿಗ್ರಹ ಉಡುಗೊರೆ ಕೊಟ್ಟ ಜಗ್ಗೇಶ್‌

ಗಂಗಾವತಿ ತಾಲೂಕಿನಲ್ಲಿ 41 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮಂಜೂರಾತಿ ನೀಡಲಾಗಿದೆ. ಮುಳವಾಡಿ, ಚಿಮ್ಮಲಗಿ, ಗುತ್ತಿಬಸವಣ್ಣ ಏತನೀರಾವರಿ ಯೋಜನೆಗಳಿಗೆ ಕಾಯಕಲ್ಪ ನೀಡಲಾಗುತ್ತಿದೆ. ತುಂಗಭದ್ರಾ ಯೋಜನೆ, ತುಂಗಾ ಮೇಲ್ದಂಡೆ ಯೋಜನೆ, ಸಿಂಗಟಾಲೂರು ಯೋಜನೆ, ಎನ್‌ಎಲ್‌ಬಿಸಿ ಯೋಜನೆಗಳಿಂದ ಸುಮಾರು 7 ಲಕ್ಷ ಎಕರೆ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದರು.

ಪ್ರಧಾನಿ ಮೋದಿಯವರ ದೂರದೃಷ್ಟಿಯಿಂದ ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೇ ಫಲಾನುಭವಿಗಳಿಗೆ ನೇರವಾಗಿ ಡಿಬಿಟಿ ಮೂಲಕ ಸಹಾಯಧನ ತಲುಪಿಸಲಾಗುತ್ತಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 53.43 ಲಕ್ಷ ರೈತರಿಗೆ 16 ಸಾವಿರ ಕೋಟಿ ರೂ. ನೀಡಲಾಗಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ 1.57 ಲಕ್ಷ ರೈತರಿಗೆ 456 ಕೋಟಿ ರೂ. ಪಾವತಿಯಾಗಿದೆ. ರೈತರಿಗೆ ಜೀವವಿಮೆ ಸೌಲಭ್ಯ ಜಾರಿಗೊಳಿಸಿದ್ದು, 180 ಕೋಟಿ ರೂ.ಗಳ ಪ್ರೀಮಿಯಂ ಮೊತ್ತವನ್ನು ಸರ್ಕಾರ ಭರಿಸುವ ಯೋಜನೆ ಇದಾಗಿದೆ. ರೈತರ ಉತ್ತಮ ಆರೋಗ್ಯ ಚಿಕಿತ್ಸೆಗೆ ಯಶಸ್ವಿನಿ ಯೋಜನೆಯನ್ನು ಪುನರಾರಂಭಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ | Caste Politics: ಕಾಂಗ್ರೆಸ್‌ ಸಮಾವೇಶದ ಬೆನ್ನಿಗೇ ತಿಗಳ ಸಮುದಾಯದ ನಿಗಮ ಸ್ಥಾಪಿಸಿದ ಬಿಜೆಪಿ ಸರ್ಕಾರ

ಸಚಿವರಾದ ಆನಂದ್ ಸಿಂಗ್, ಮುನಿರತ್ನ, ಹಾಲಪ್ಪ ಆಚಾರ್, ಶಾಸಕರಾದ ಪರಣ್ಣ ಮುನವಳ್ಳಿ ಬಸವರಾಜ ದಢೇಸಗೂರು ಮೊದಲಾದವರು ಉಪಸ್ಥಿತರಿದ್ದರು.

Exit mobile version