Site icon Vistara News

Kalasipalya Bus Stand: ಬಿಎಂಟಿಸಿಗೆ 1300 ವಿದ್ಯುತ್ ಚಾಲಿತ ಬಸ್ ಸೇರ್ಪಡೆ: ಸಿಎಂ ಬಸವರಾಜ ಬೊಮ್ಮಾಯಿ

Approval for release of funds for various infrastructure projects in state cabinet meeting

ಬೆಂಗಳೂರು: ಕೇಂದ್ರ ಸರ್ಕಾರದ ಸಹಯೋಗದೊಂದಿಗೆ 1300 ವಿದ್ಯುತ್ ಚಾಲಿತ ಬಸ್‌ಗಳನ್ನು ಬಿಎಂಟಿಸಿ ಸೇವೆಗೆ ಸೇರ್ಪಡೆ ಮಾಡಲಾಗುತ್ತಿದೆ. ಪರಿಸರ ಹಾನಿಯನ್ನು ತಡೆಗಟ್ಟುವ ಎಲೆಕ್ಟ್ರಿಕಲ್ ಬಸ್ ಸೇವೆ ಜನರಿಗೆ ದೊರೆಯಲಿದೆ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದಲ್ಲಿ ಬಿಎಂಟಿಸಿ ವತಿಯಿಂದ ನಿರ್ಮಿಸಿರುವ ಕಲಾಸಿಪಾಳ್ಯ ನೂತನ ಬಸ್ ನಿಲ್ದಾಣವನ್ನು (Kalasipalya Bus Stand) ಉದ್ಘಾಟಿಸಿ ಮಾತನಾಡಿದ ಅವರು, ಬಿಎಂಟಿಸಿ ನಗರದ ಜನರಿಗೆ ಉತ್ತಮ ಸೇವೆ ಸಲ್ಲಿಸುತ್ತಿದೆ. ಮುಂಬರುವ ದಿನಗಳಲ್ಲಿ ಸಾರ್ವಜನಿಕ ಸಾರಿಗೆಯಲ್ಲಿ ಬಿಎಂಟಿಸಿ ಪ್ರಮುಖ ಪಾತ್ರ ವಹಿಸಲಿದ್ದು, ಬಿಎಂಟಿಸಿ ಯಶಸ್ವಿಯಾಗಿ ಕಾರ್ಯನಿರ್ವಹಿಸುವುದರಿಂದ ಬೆಂಗಳೂರಿನಲ್ಲಿ ವಾಹನ ದಟ್ಟಣೆ ಕಡಿಮೆಯಾಗುತ್ತದೆ ಎಂದು ಹೇಳಿದರು.

ಕೋವಿಡ್‌ನಿಂದಾಗಿ ಕೆಲವು ವರ್ಷಗಳಿಂದ ಬಿಎಂಟಿಸಿ ಟಿಕೆಟ್ ದರಗಳನ್ನು ಹೆಚ್ಚಿಸದ ಕಾರಣ ಬಿಎಂಟಿಸಿ ನಷ್ಟದಲ್ಲಿದೆ. ಕಳೆದ ಎರಡು ವರ್ಷಗಳಲ್ಲಿ ಸರ್ಕಾರ 2915 ಕೋಟಿ ರೂ.ಗಳನ್ನು ಸಂಸ್ಥೆಗೆ ನೀಡಿರುವುದರಿಂದ ಬಿಎಂಟಿಸಿ, ತನ್ನ ಸೇವೆಯನ್ನು ಸಲ್ಲಿಸಲು ಸಾಧ್ಯವಾಗಿದೆ. ಈಗ ಬಿಎಂಟಿಸಿಗೆ 3445 ಹೊಸ ಬಸ್‌ಗಳನ್ನು ಒದಗಿಸಲಾಗುತ್ತಿದೆ ಎಂದರು.

ಇದನ್ನೂ ಓದಿ | Siddaramaiah: ಸದನದಲ್ಲಿ ನಾನಿಲ್ಲದಿರುವಾಗ ಸಿಎಂ ಆರೋಪ ಮಾಡಿದ್ದಾರೆ: ಸುದೀರ್ಘ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ

ಕಲಾಸಿಪಾಳ್ಯ ಬಸ್ ನಿಲ್ದಾಣವನ್ನು ಮೆಟ್ರೋ ಸ್ಟೇಷನ್‌ಗೆ ಜೋಡಿಸುವ ಬಗ್ಗೆ ಸೂಕ್ತ ನಿರ್ಧಾರ

ಬಿಎಂಟಿಸಿ ಹಾಗೂ ಮೆಟ್ರೋ ಅಧಿಕಾರಿಗಳ ಜತೆ ಚರ್ಚಿಸಿ ಕಲಾಸಿಪಾಳ್ಯ ಬಸ್ ನಿಲ್ದಾಣವನ್ನು ಮೆಟ್ರೋ ಸ್ಟೇಷನ್‌ಗೆ ಜೋಡಿಸುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಬೆಂಗಳೂರಿನಲ್ಲಿ ಬಿಎಂಟಿಸಿ ಅತ್ಯಂತ ದಕ್ಷತೆಯಿಂದ ಕೆಲಸ ಮಾಡಬೇಕಿದೆ. ಬಿಎಂಟಿಸಿಯನ್ನು ಲಾಭದಾಯಕಗೊಳಿಸಲು ಶ್ರೀನಿವಾಸಮೂರ್ತಿ ಅವರ ಸಮಿತಿ ವರದಿಯನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಬಿಎಂಟಿಸಿ ನೌಕರರ ಕಲ್ಯಾಣಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು ಎಂದರು.

ಸಚಿವರಾದ ಆರ್.ಅಶೋಕ್ ಹಾಗೂ ಮುನಿರತ್ನ, ಶಾಸಕ ಉದಯ್ ಗರುಡಾಚಾರ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಮೊದಲಾದವರು ಉಪಸ್ಥಿತರಿದ್ದರು.

Exit mobile version