Site icon Vistara News

Belagavi News: ಈ ವರ್ಷ 25 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಒದಗಿಸುವ ಗುರಿ: ಸಿಎಂ ಬೊಮ್ಮಾಯಿ

CM Basavaraj Bommai says Aim to provide drinking water connections to 25 lakh households this year

#image_title

ಬೆಳಗಾವಿ: ಪಿಎಂ ಕಿಸಾನ್ ಯೋಜನೆಯಡಿ ಬೆಳಗಾವಿ ಜಿಲ್ಲೆಯಲ್ಲಿ (Belagavi News) 5.61 ಲಕ್ಷ ರೈತರಿಗೆ ಸುಮಾರು 1,130 ಕೋಟಿ ರೂ. ತಲುಪಿದೆ. ಜಲ್ ಜೀವನ್ ಮಿಷನ್ ಅಡಿ ಕಳೆದ 3 ವರ್ಷಗಳಲ್ಲಿ 12 ಕೋಟಿ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 40 ಲಕ್ಷ ಮನೆಗಳಿಗೆ ನೀರು ಒದಗಿಸಲಾಗಿದೆ. ಈ ವರ್ಷ ಇನ್ನೂ 25 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಒದಗಿಸುವ ಗುರಿ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಳಗಾವಿ ಜಿಲ್ಲಾಡಳಿತದ ವತಿಯಿಂದ ರಾಮದುರ್ಗ ತಾಲೂಕಿನ ಬಟಕುರ್ಕಿಯಲ್ಲಿ ಆಯೋಜಿಸಿದ್ದ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಹಕ್ಕುಪತ್ರ ವಿತರಣಾ ಸಮಾವೇಶ, ಅನುಷ್ಠಾನ ಹಾಗೂ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಬೆಳೆ ನಾಶಕ್ಕೆ ದುಪ್ಪಟ್ಟು ಪರಿಹಾರ

ಬೆಳಗಾವಿಯಲ್ಲಿ ಒಟ್ಟು 6.57 ಲಕ್ಷ ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ಕಳೆದ 2 ವರ್ಷಗಳ ಹಿಂದೆ ಬೆಳಗಾವಿಯ ಪ್ರವಾಹದ ಸಂದರ್ಭದಲ್ಲಿ ಮನೆ ಬಿದ್ದವರಿಗೆ 5 ಲಕ್ಷ ರೂ. ನೀಡಲಾಗಿತ್ತು. ಮಲಪ್ರಭಾ ದಡದಲ್ಲಿ ಕೊರೆತ ಆಗಿದ್ದ ಸಂದರ್ಭದಲ್ಲಿ 125 ಕೋಟಿ ಅನುದಾನ ನೀಡಿ ರಕ್ಷಣಾ ಗೋಡೆಯನ್ನು ಕಟ್ಟಲು ಟೆಂಡರ್ ಆಗಿ ಕೆಲಸ ಪ್ರಾರಂಭವಾಗಿದೆ. ಬೆಳೆ ನಾಶಕ್ಕೆ ಕೇಂದ್ರ ಸರ್ಕಾರದ ಅನುದಾನಕ್ಕೆ ಎರಡು ಪಟ್ಟು ಹಣ ಒದಗಿಸಲಾಯಿತು. ಒಣ ಬೇಸಾಯಕ್ಕೆ ಒಂದು ಹೆಕ್ಟೇರಿಗೆ 13,600 ರೂಪಾಯಿ ನೀಡಲಾಯಿತು. ನೀರಾವರಿಗೆ ಪ್ರತಿ ಹೆಕ್ಟೇರ್‌ಗೆ ಹಿಂದಿನ ಸರ್ಕಾರ 12,500 ಕೊಟ್ಟರೆ, ನಮ್ಮ ಸರ್ಕಾರ 25 ಸಾವಿರ ರೂ.ನೀಡಿತು ಎಂದು ತಿಳಿಸಿದರು.

ಇದನ್ನೂ ಓದಿ | Border Dispute: ಡಿ.ಕೆ. ಶಿವಕುಮಾರ್‌ ಅವರಿಂದ ಪಾಠ ಹೇಳಿಸಿಕೊಳ್ಳಬೇಕಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ ಉತ್ತರ

7768 ಮನೆಗಳಿಗೆ 200 ಕೋಟಿ ರೂ.ಗಳ ಹೆಚ್ಚುವರಿ ಪರಿಹಾರ

ಏಳೆಂಟು ಸಾವಿರ ಮನೆಗಳಿಗೆ ಪರಿಹಾರ ದೊರೆಯದಿದ್ದ ಸಂದರ್ಭದಲ್ಲಿ 200 ಕೋಟಿ ರೂ.ಗಳನ್ನು ಅಧಿಕವಾಗಿ ಬಿಡುಗಡೆ ಮಾಡಲಾಗಿದೆ. 7768 ಮನೆಗಳಿಗೆ ಪರಿಹಾರ ಹೆಚ್ಚುವರಿಯಾಗಿ ನೀಡಲಾಗಿದೆ. ಹಾಗೆಯೇ ಬೆಳಗಾವಿಯಲ್ಲಿ 1,2,370 ಮಕ್ಕಳಿಗೆ ರೈತ ವಿದ್ಯಾ ನಿಧಿ ನೀಡಲಾಗಿದೆ. ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ 16 ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗಿದ್ದು, 53 ಲಕ್ಷ ರೈತರಿಗೆ ನೇರವಾಗಿ ಅವರ ಖಾತೆಗಳಿಗೆ ಡಿಬಿಟಿ ಮೂಲಕ ಹಣ ಪಾವತಿಯಾಗಿದೆ. ಸ್ತ್ರೀ ಸಾಮರ್ಥ್ಯ ಯೋಜನೆಯಡಿ 50 ಸಾವಿನ ಸಂಘಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ | Border Dispute: ʼಮಹಾʼ ಸರ್ಕಾರವನ್ನು ಕೇಂದ್ರ ವಜಾ ಮಾಡಬೇಕು ಎಂದ ಸಿದ್ದರಾಮಯ್ಯ

ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್, ಶಾಸಕ ದುರ್ಯೋಧನ ಐಹೊಳೆ, ರಾಜ್ಯ ಸಭಾ ಸದಸ್ಯ ಈರಣ್ಣ ಕಾಡಾಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೀಣಾ ಬೈಗಾಣ, ಪ್ರಾದೇಶಿ ಆಯುಕ್ತ ಹಿರೇಮಠ್ ಮೊದಲಾದವರು ಉಪಸ್ಥಿತರಿದ್ದರು.

Exit mobile version