Kittur Utsav | ಬ್ರಿಟಿಷರ ವಿರುದ್ಧ ಹೋರಾಡಿದ ಮೊದಲ ರಾಣಿ ಲಕ್ಷ್ಮೀಬಾಯಿ ಅಲ್ಲ, ಕಿತ್ತೂರು ಚೆನ್ನಮ್ಮ: ಸಿಎಂ ಬೊಮ್ಮಾಯಿ - Vistara News

ಕರ್ನಾಟಕ

Kittur Utsav | ಬ್ರಿಟಿಷರ ವಿರುದ್ಧ ಹೋರಾಡಿದ ಮೊದಲ ರಾಣಿ ಲಕ್ಷ್ಮೀಬಾಯಿ ಅಲ್ಲ, ಕಿತ್ತೂರು ಚೆನ್ನಮ್ಮ: ಸಿಎಂ ಬೊಮ್ಮಾಯಿ

ರಾಣಿ ಚೆನ್ನಮ್ಮ ಸೈದ್ಧಾಂತಿಕವಾಗಿ ಹೋರಾಟ ಮಾಡಿದರು. ಈ ಮಣ್ಣು ನನ್ನದು, ಈ ದೇಶ ನನ್ನದು, ಅದನ್ನು ಉಳಿಸಿಕೊಳ್ಳಬೇಕು ಎಂದು ಹೋರಾಡಿದ್ದರು ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

VISTARANEWS.COM


on

Kittur Utsav
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಬ್ರಿಟಿಷರ ವಿರುದ್ಧ ಝಾನ್ಸಿ ರಾಣಿ ಲಕ್ಷ್ಮಿಬಾಯಿ ಹೋರಾಡಿದ್ದು 1857ರಲ್ಲಿ, ಆದರೆ ಕಿತ್ತೂರು ರಾಣಿ ಚೆನ್ನಮ್ಮ ಹೋರಾಡಿದ್ದು 1824ರಲ್ಲೇ ಹೋರಾಡಿದ್ದರು. ಹೀಗಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಮೊದಲ ರಾಣಿ ಝಾನ್ಸಿ ಲಕ್ಷ್ಮೀಬಾಯಿ ಅಲ್ಲ, ಕಿತ್ತೂರು ರಾಣಿ ಚೆನ್ನಮ್ಮ(Kittur Utsav) ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಪಾದನೆ ಮಾಡಿದರು.

ಜಿಲ್ಲೆಯ ಕಿತ್ತೂರಿನಲ್ಲಿ ಆಯೋಜಿಸಿದ್ದ ಕಿತ್ತೂರು ಉತ್ಸವ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಬ್ರಿಟಿಷರ ವಿರುದ್ಧ ಹೋರಾಡಿದ ಮೊದಲ ಮಹಿಳೆ ಝಾನ್ಸಿ ಲಕ್ಷ್ಮೀಬಾಯಿ ಅಲ್ಲ, ನಮ್ಮ ಕಿತ್ತೂರು ಚೆನ್ನಮ್ಮ. ಆದರೆ ಬ್ರಿಟಿಷರ ವಿರುದ್ಧ ಹೋರಾಡಿದ ಮೊದಲ ಮಹಿಳೆ ಝಾನ್ಸಿ ಲಕ್ಷ್ಮೀಬಾಯಿ ಎಂದು ಇತಿಹಾಸದಲ್ಲಿ ಬರೆಯಲಾಗಿದೆ. ಹೀಗಾಗಿ ಸತ್ಯವನ್ನು ದೇಶಕ್ಕೆ ತಿಳಿಸುವ ಕೆಲಸ ಮಾಡಲು ನಮ್ಮ ಸರ್ಕಾರ ಕ್ರಮ ವಹಿಸಲಿದೆ. ಚೆನ್ನಮ್ಮ ಸೈದ್ಧಾಂತಿಕವಾಗಿ ಹೋರಾಟ ಮಾಡಿದರು. ಈ ಮಣ್ಣು ನನ್ನದು, ಈ ದೇಶ ನನ್ನದು, ಅದನ್ನು ಉಳಿಸಿಕೊಳ್ಳಬೇಕು ಎಂದು ಹೋರಾಡಿದರು. ಅವರ ಧೀರತನ, ಶೂರತನ ಮೆಚ್ಚಿಯೇ ಸುತ್ತಮುತ್ತಲಿನ ಎಲ್ಲ ವೀರರು ಅವರ ಬೆನ್ನಿಗೆ ನಿಂತರು. ಅಮಟೂರು ಬಾಳಪ್ಪ, ಸಂಗೊಳ್ಳಿ ರಾಯಣ್ಣ ಚೆನ್ನಮ್ಮ ಬೆಣ್ಣಿಗೆ ನಿಂತರು ಎಂದು ಹೇಳಿದರು.

ಇದನ್ನೂ ಓದಿ | SCST ಮೀಸಲು | ಸುಗ್ರೀವಾಜ್ಞೆಗೆ ಮುಂದಿನ ಅಧಿವೇಶನದಲ್ಲಿ ಅನುಮೋದನೆ: ಸಿಎಂ ಬೊಮ್ಮಾಯಿ ಭರವಸೆ

1824ರ ಅ.24ರಂದು ಬ್ರಿಟಿಷ್ ಅಧಿಕಾರಿ ಥ್ಯಾಕರೆ ರುಂಡವನ್ನು ರಾಣಿ ಚೆನ್ನಮ್ಮ ಚೆಂಡಾಡಿದರು. ಆ ಮೂಲಕ ಬ್ರಿಟಿಷರ ವಿರುದ್ಧ ಗೆಲುವು ದಾಖಲಿಸಿ ಸಾಮ್ರಾಜ್ಯ ಉಳಿಸಿಕೊಂಡರು. ಆ ವಿಜಯೋತ್ಸವ ಸಂಕೇತವಾಗಿ ಕಿತ್ತೂರು ಉತ್ಸವ ಆಚರಿಸಿಕೊಂಡು ಬರುತ್ತಿದ್ದೇವೆ. ಬ್ರಿಟಿಷರು ಮತ್ತೆ ಚೆನ್ನಮ್ಮಳನ್ನು ಬಂಧಿಸಿ ಜೈಲಿಗೆ ಕಳುಹಿಸಿದರು. ಆದರೂ ಅವರು ಭರವಸೆ, ಧೈರ್ಯ ಎಂದೂ ಕಳೆದುಕೊಳ್ಳಲಿಲ್ಲ. ಸಂಗೊಳ್ಳಿ ರಾಯಣ್ಣ ಕಿತ್ತೂರು ಸಂಸ್ಥಾನ ರಕ್ಷಿಸುತ್ತಾನೆ ಎಂದು ಚೆನ್ನಮ್ಮ ನಂಬಿದ್ದರು. ಆದರೆ ಬ್ರಿಟಿಷರು ಸಂಗೊಳ್ಳಿ ರಾಯಣ್ಣನನ್ನು ಮೋಸದಿಂದ ಸೆರೆ ಹಿಡಿಯುತ್ತಾರೆ. ರಾಯಣ್ಣನ ಬಂಧನದ ಸುದ್ದಿ ಕೇಳಿ ಜೈಲಲ್ಲೇ ಚೆನ್ನಮ್ಮ ಕುಸಿದು ಬೀಳುತ್ತಾರೆ ಎಂದು ವಿವರಿಸಿದರು.

ಕಿತ್ತೂರು ರಾಣಿ ಚೆನ್ನಮ್ಮಳ ಕ್ಷೇತ್ರದ ಎಷ್ಟೇ ಅಭಿವೃದ್ಧಿ ಮಾಡಿದರೂ ಅವರ ಹೋರಾಟದ ಮುಂದೆ ಏನೂ ಇಲ್ಲ. ಎರಡು ನೂರು ವರ್ಷ ಕಳೆದರೂ ಕಿತ್ತೂರು ರಾಣಿ ಚೆನ್ನಮ್ಮ ನಮಗೆಲ್ಲಾ ಪ್ರೇರಣೆಯಾಗಿದ್ದಾರೆ. ಸಮೃದ್ಧ ನಾಡು ಕಟ್ಟಲು ಅವರು ಪ್ರೇರಣೆಯಾಗಬೇಕು. ಸ್ವಾಭಿಮಾನ ಉಳಿಯಬೇಕೆಂದರೆ ದುಡಿಯುವತ್ತ ಎಲ್ಲರೂ ಚಿತ್ತ ಹರಿಸಬೇಕು. ದುಡಿಯುವ ವರ್ಗಕ್ಕೆ ಗೌರವ ಬರಬೇಕು, ವಿದ್ಯೆ ಕಳಿತವರಿಗೆ ಗೌರವ ದೊರೆಯಬೇಕು. ಈ ದೇಶದ ಪ್ರಗತಿಗೆ ಕಾರಣವಾದವರನ್ನು ಗೌರವಿಸಬೇಕು ಎಂದರು.

ಸಮಾಜದಲ್ಲಿ ಗಲಭೆ ಉಂಟು ಮಾಡುವ ಶಕ್ತಿಗಳ ಧಮನ ಆಗಬೇಕು. ದೇಶದ ಭದ್ರತೆ ಬಹಳ ಮುಖ್ಯ, ಒಗ್ಗಟ್ಟು ಮುರಿಯುವ ಪ್ರಯತ್ನ ನಡೆದಿದೆ. ಆದರೆ ನಮ್ಮೆಲ್ಲರ ಸುದೈವ, ನಮಗೆ ನರೇಂದ್ರ ಮೋದಿ ಅವರಂತಹ ಉತ್ತಮ ನಾಯಕರು ಸಿಕ್ಕಿದ್ದು, ಭಯೋತ್ಪಾದನೆ ದಮನ ಮಾಡಲು ಕ್ರಮ ಕೈಗೊಂಡಿದ್ದಾರೆ. ದೇಶ ಹಿಂದೆಂದಿಗಿಂತಲೂ ಆರ್ಥಿಕವಾಗಿ, ಸಾಮಾಜಿಕ ಪ್ರಗತಿ ಹೊಂದುತ್ತಿದೆ. ಅಮೇರಿಕ, ಯೂರೋಪ್‌ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಆದರೆ, ಭಾರತದಲ್ಲಿ ಹೀಗಾಗಿಲ್ಲ, ಅದಕ್ಕೆ ಕಾರಣ ನರೇಂದ್ರ ಮೋದಿ ಅವರ ದೂರದೃಷ್ಟಿ. ಅವರ ಆಡಳಿತದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಧೈರ್ಯ, ಶೌರ್ಯ, ಮುಂದಾಲೋಚನೆಯ ಗುಣಗಳು ಇವೆ ಎಂದು ಹೇಳಿದರು.

ಉತ್ತರ ಕರ್ನಾಟಕ ಭಾಗದ ಪ್ರಮುಖ ನೀರಾವರಿ ಯೋಜನೆಗಳಿಗೆ ಶೀಘ್ರವೇ ಚಾಲನೆ ದೊರೆಯಲಿದೆ. ಈ ಭಾಗದ ಅಭಿವೃದ್ಧಿ ಆಗಬೇಕು ಎಂದರೆ ನೀರಾವರಿ ಯೋಜನೆಗಳಿಗೆ ಚಾಲನೆ ದೊರೆಯಬೇಕಿದೆ. ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆಗೆ ಕೋರ್ಟ್‌ನಲ್ಲಿ ನಮ್ಮ ಪರವಾಗಿ ತೀರ್ಪು ಬರುವ ಸಂಪೂರ್ಣ ಭರವಸೆ ಇದೆ, ಆಗ ಯೋಜನೆಗೆ ಚಾಲನೆ ನೀಡುತ್ತೇವೆ. ಕಳಸಾ ಬಂಡೂರಿ ಯೋಜನೆ ಜಾರಿಗೆಗೆ ಕ್ರಮ ವಹಿಸಿದ್ದೇವೆ. ಶೀಘ್ರವೇ ಕೇಂದ್ರದ ಒಪ್ಪಿಗೆ ಪಡೆದು ಕೆಲಸ ಆರಂಭಿಸುತ್ತೇವೆ ಎಂದರು.

ಕಿತ್ತೂರು ಉತ್ಸವಕ್ಕೆ ಬಂದರೆ ಅಧಿಕಾರ ಹೋಗುತ್ತದೆ?
ಕಿತ್ತೂರು ಉತ್ಸವಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬ ಮೌಢ್ಯ ಎಲ್ಲ ಮುಖ್ಯಮಂತ್ರಿಗಳಲ್ಲಿದೆ. ಎಸ್. ಬಂಗಾರಪ್ಪ ಸಿಎಂ ಆಗಿದ್ದಾಗ ಕಿತ್ತೂರು ಉತ್ಸವ ಆಚರಣೆಗೆ ಚಾಲನೆ ನೀಡಿದ್ದರು. ಯಾರೇ ಮುಖ್ಯಮಂತ್ರಿ ಇರಲಿ, ಒಳ್ಳೆಯ ಕೆಲಸ ಮಾಡಿದರೆ ಸ್ಮರಿಸುವುದು ನಮ್ಮ ಧರ್ಮ. ಎಸ್. ಬಂಗಾರಪ್ಪ ಸಿಎಂ ಆಗಿ ಕಿತ್ತೂರಿಗೆ ಬಂದು ಹೋಗಿ ಕೆಲವೇ ದಿನಗಳಲ್ಲಿ ಅವರ ಸಿಎಂ ಸ್ಥಾನ ಹೋಯಿತು. ಇದರಿಂದ ಕಿತ್ತೂರು ಉತ್ಸವಕ್ಕೆ ಬಂದರೆ ಸಿಎಂ ಸ್ಥಾನ ಹೋಗುತ್ತದೆ ಎಂದು ಬಿಂಬಿಸಲಾಯಿತು. ಅಂದಿನಿಂದ ಹಲವು ಮುಖ್ಯಮಂತ್ರಿಗಳು ಕಿತ್ತೂರು ಉತ್ಸವಕ್ಕೆ ಬರಲೇ ಇಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಕಳೆದ ವರ್ಷ ನನಗೂ ಕಿತ್ತೂರು ಉತ್ಸವಕ್ಕೆ ಹೋಗಬೇಡಿ ಎಂದು ಕೆಲವರು ಸಲಹೆ ನೀಡಿದ್ದರು. ಇಲ್ಲಿಗೆ ಬಂದರೆ ಅಧಿಕಾರ ಹೋಗುತ್ತದೆ ಎಂಬುವುದು ಎಂತಹ ಮೂಡನಂಬಿಕೆ ಎಂದ ಅವರು, ಚಾಮರಾಜ ನಗರಕ್ಕೆ ಹೋದರೂ ಅಧಿಕಾರ ಹೋಗುತ್ತದೆ ಎಂದು ಹೇಳುತ್ತಾರೆ. ಕಿತ್ತೂರು ರಾಣಿ ಚೆನ್ನಮ್ಮಳ ಕ್ಷೇತ್ರದಂತಹ ಪವಿತ್ರ ಸ್ಥಾನಕ್ಕೆ ಬರುವುದೇ ನನ್ನ ಪುಣ್ಯ. ಕಿತ್ತೂರು ಹಾಗೂ ಚಾಮರಾಜನಗರ ಎರಡೂ ಕಡೆ ನಾನು ಹೋಗಿ ಬಂದಿದ್ದೇನೆ. ಕಳೆದ ವರ್ಷವೂ ನಾನು ಇಲ್ಲಿಗೆ ಬಂದಿದ್ದೆ, ಆದರೆ ನನ್ನ ಮುಖ್ಯಮಂತ್ರಿ ಸ್ಥಾನವೇನೂ ಹೋಗಲಿಲ್ಲ. ಈ ವರ್ಷವೂ ಮುಖ್ಯಮಂತ್ರಿ ಆಗಿಯೇ ಬಂದಿದ್ದೇನೆ ಎಂದು ಹೇಳಿದರು.

ಸುವರ್ಣಸೌಧ ಎದುರು ಮೂವರು ಮಹಾನ್‌ ವ್ಯಕ್ತಿಗಳ ಪುತ್ಥಳಿ
ಸುವರ್ಣಸೌಧ ಎದುರು ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿ ಅನಾವರಣ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದರು. ಈಗಾಗಲೇ ಪುತ್ಥಳಿಗಳ ನಿರ್ಮಾಣಕ್ಕೆ ಒಪ್ಪಿಗೆ ನೀಡಿದ್ದೇವೆ. ಈ ಇಬ್ಬರು ಮಹಾನ್ ವ್ಯಕ್ತಿಗಳ ಜತೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯನ್ನೂ ನಿರ್ಮಿಸುತ್ತೇವೆ. ನವೆಂಬರ್ ತಿಂಗಳಲ್ಲಿ ನಾನೇ ಸುವರ್ಣಸೌಧದ ಎದುರು ಪುತ್ಥಳಿ ನಿರ್ಮಾಣಕ್ಕೆ ಅಡಿಗಲ್ಲು ಹಾಕುತ್ತೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ | BJP Target 150 | ಹಳೆ ಮೈಸೂರಿನಲ್ಲಿ ಗುರಿ ಸಾಧಿಸಲು ಬಿಜೆಪಿಯ 11 ಪ್ರಯತ್ನಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : 7 ಜಿಲ್ಲೆಗಳಲ್ಲಿ ವ್ಯಾಪಿಸಲಿದೆ ಭರ್ಜರಿ ಮಳೆ

Karnataka Weather Forecast : ರಾಜ್ಯಾದ್ಯಂತ ನೈರುತ್ಯ ಮುಂಗಾರು ದುರ್ಬಲಗೊಂಡಿದೆ. ಕರಾವಳಿ ಹಾಗೂ ಮಲೆನಾಡಿನ ಕೆಲವಡೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ (Rain News) ಅಬ್ಬರ ಕಡಿಮೆ ಆಗುತ್ತಿದ್ದು, ಕೆಲವಡೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather forecast) ನೀಡಿದೆ. 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಗಾಳಿಯು 30-40 ಕಿ.ಮೀ ವೇಗದಲ್ಲಿ ಬೀಸಲಿದ್ದು,ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಮತ್ತು ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: Teachers Transfer : ಇಂದಿನಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಶುರು; ವಿವಿಧ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ಐತಿಹಾಸಿಕ ಕಿತ್ತೂರು ಕೋಟೆಯ ವಾಚ್ ಟವರ್ ಕುಸಿತ

ಬೆಳಗಾವಿ ಜಿಲ್ಲೆಯಾದ್ಯಂತ ನಿರಂತರ ಮಳೆಯಿಂದಾಗಿ ಐತಿಹಾಸಿಕ ಕಿತ್ತೂರು ಕೋಟೆಯ ವಾಚ್ ಟವರ್ ಕುಸಿದು ಬಿದ್ದಿದೆ. 15ನೇ ಶತಮಾನದಲ್ಲಿ ನಿರ್ಮಿಸಲಾಗಿದ್ದ ವಾಚ್ ಟವರ್ ಮಧ್ಯಾಹ್ನ ಸುರಿದ ಭಾರಿ ಮಳೆಗೆ ಕುಸಿದಿದೆ.

ಹಾವೇರಿಯಲ್ಲಿ ಬಾಲಕನ ಮೇಲೆ ಕುಸಿದ ಚಾವಣಿ

ಹಾವೇರಿ ಜಿಲ್ಲೆಯಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ನಿರಂತರ ಮಳೆಗೆ ಶಾಲೆಯ ಚಾವಣಿ ಕುಸಿದು ಬಾಲಕನಿಗೆ ಗಾಯವಾಗಿದೆ. ಹಾವೇರಿಯ ನೀರಲಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. 25 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 5 ನೇ ತರಗತಿಯಲ್ಲಿ ಓದುತ್ತಿದ್ದ ವಿನಾಯಕ್ ಮೋರೆ ಗಾಯಗೊಂಡವನು. ಬಾಲಕನ ಕಾಲಿನ ಮೇಲೆ ಚಾವಣಿ ಕಂಬ ಬಿದ್ದಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗುತ್ತಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹರವಿ ಗ್ರಾಮದಲ್ಲೂ ಮನೆ ಕುಸಿದಿದೆ. ಕುಮಾರ ಮಳೆಪ್ಪನವರ ಮನೆಯು ಕುಸಿದು ಬಿದ್ದಿದೆ. ಬೆಳಗಿನ ಜಾವದಲ್ಲಿ ಮಣ್ಣು ಕುಸಿದಿದೆ. ಅದೃಷ್ಟವಶಾತ್ ಕುಟುಂಬಸ್ಥರು ಪಾರಾಗಿದ್ದಾರೆ.

ಇದನ್ನೂ ಓದಿ: Governor Versus State: ಶುರುವಾಯ್ತು ರಾಜ್ಯದಲ್ಲಿ ರಾಜ್ಯ ಸರ್ಕಾರ ವರ್ಸಸ್ ರಾಜ್ಯಪಾಲ ಸಂಘರ್ಷ; ರಾಜ್ಯಪಾಲರ ಮುಂದಿನ ನಡೆ ಏನು?

ಸೌಪರ್ಣಿಕ ನದಿ ತೀರದಲ್ಲಿ ಮತ್ತೆ ನೆರೆ

ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಸೌಪರ್ಣಿಕ ನದಿ ತೀರದಲ್ಲಿ ಮತ್ತೆ ನೆರೆ ಸೃಷ್ಟಿಯಾಗಿದೆ. ಸತತ ಮೂರನೇ ಬಾರಿಗೆ ನೆರೆ ಹಾವಳಿಯಿಂದಾಗಿ ಬೈಂದೂರು ತಾಲೂಕಿನ ನಾವುಂದ ಕುದ್ರು ವಿನಲ್ಲಿ ವಾಸವಾಗಿರುವ ಏಳು ಮನೆಗಳಿಗೆ ಜಲದಿಗ್ಬಂದನ ಹಾಕಲಾಗಿದೆ. ದೋಣಿಯ ಮೂಲಕವೇ ದೈನಂದಿನ ಕೆಲಸಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮನೆ ಮುಂಭಾಗವೇ ಭೂಮಿ ಛಿದ್ರ

ಚಿಕ್ಕಮಗಳೂರಿನಲ್ಲಿ ಮಳೆಯ ಅಬ್ಬರ ನಿಲ್ಲುವಂತೆ ಕಾಣುತ್ತಿಲ್ಲ. ಭಾರಿ ಮಳೆಗೆ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿದೆ. ಕೊಪ್ಪ ತಾಲೂಕಿನ ಬಸರಿ ಕಟ್ಟೆ ಚೆನ್ನಕಲ್ಲು ಗ್ರಾಮದಲ್ಲಿ ನಾಗರಾಜ್ ಎಂಬುವವರ ಮನೆ ಮುಂದೆ ಭೂಮಿ ಛಿದ್ರ ಛಿದ್ರಗೊಂಡಿದೆ. 300 ಅಡಿಯಷ್ಟು ದೂರಕ್ಕೆ ಭೂಮಿ ಜಾರಿ ಹೋಗಿದೆ. ಭೂಮಿ ಕುಸಿತದ ರಭಸಕ್ಕೆ ಮನೆಯ ಅಡಿಪಾಯ, ಗೋಡೆಗಳಲ್ಲಿ ಬಿರುಕು ಉಂಟಾಗಿದೆ. ಮಳೆ ಹೆಚ್ಚಾದಂತೆ ಮನೆಯ ಮುಂಭಾಗ ಮತ್ತಷ್ಟು ಧರೆ ಕುಸಿತ ಉಂಟಾಗುವ ಸಾಧ್ಯತೆ ಇದೆ. ಭೂ ಕುಸಿತದಿಂದಾಗಿ 4-5 ಎಕರೆ, ಅಡಿಕೆ ತೋಟವು ನಾಶವಾಗಿದೆ.

ಶಿರಾಡಿಘಾಟ್ ಭೂ ಕುಸಿತ; ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಟೀಂ ಭೇಟಿ

ಹಾಸನದ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಸಮೀಪದ ಗುಡ್ಡಕುಸಿತ ಸ್ಥಳಕ್ಕೆ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾದ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕುಸಿತಕ್ಕೆ ಕಾರಣ ತಿಳಿಯಲು ಸ್ಥಳ ಪರಿಶೀಲನೆ ನಡೆಸಿದ್ದರು. ಒಂದೇ ಸ್ಥಳದಲ್ಲಿ ನಿರಂತರವಾಗಿ ಭೂಮಿ ಕುಸಿಯುತ್ತಿದೆ. ಸಕಲೇಶಪುರ ತಾಲೂಕಿನ ಹಾರ್ಲೇ ಕೂಡಿಗೆ ಗ್ರಾಮದ ಸಮೀಪ ಭೂಮಿ ಕುಸಿದಿತ್ತು. ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಕುಸಿತವಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

RRB ALP Recruitment: ರೈಲ್ವೆ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆ ಕನ್ನಡದಲ್ಲೂ ಬರೆಯಲು ಅವಕಾಶ

RRB ALP Recruitment: ಆಗಸ್ಟ್ 3ರಂದು ನೈಋತ್ಯ ರೈಲ್ವೆಯ ಸಹಾಯಕ ಲೋಕೋ ಪೈಲಟ್‌ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಯಲಿದೆ. ಇಂಗ್ಲಿಷ್‌, ಹಿಂದಿ ಜತೆಗೆ ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

VISTARANEWS.COM


on

RRB ALP Recruitment
Koo

ಬೆಂಗಳೂರು: ನೈಋತ್ಯ ರೈಲ್ವೆ ವತಿಯಿಂದ ನಡೆಯಬೇಕಿರುವ ಸಹಾಯಕ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿ (RRB ALP Recruitment) ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ರೈಲ್ವೆ ಇಲಾಖೆ ಅವಕಾಶ ಮಾಡಿಕೊಟ್ಟಿದೆ. ರೈಲ್ವೆ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಂಸದ ತೇಜಸ್ವಿ ಸೂರ್ಯ ಧನ್ಯವಾದ ಸಲ್ಲಿಸಿದ್ದಾರೆ.

ನೈಋತ್ಯ ರೈಲ್ವೆ ವಲಯದ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ಮಾಡಿಕೊಡಬೇಕೆಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿರುವ ರೈಲ್ವೆ ಇಲಾಖೆ, ನೈಋತ್ಯ ರೈಲ್ವೆ ವಲಯದ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿ ಬರೆಯಲು ಅವಕಾಶ ನೀಡಿದೆ. ಇದರಿಂದ ಕರ್ನಾಟಕದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೇಮಕವಾಗಲು ಅನುಕೂಲವಾಗಲಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು, ನೈಋತ್ಯ ರೈಲ್ವೆ ವತಿಯಿಂದ ನಡೆಯಬೇಕಿದ್ದ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷಾ ಸುತ್ತೋಲೆಯಲ್ಲಿ ಕನ್ನಡಕ್ಕೆ ಅವಕಾಶ ನೀಡದಿರುವುದನ್ನು ರೈಲ್ವೆ ಇಲಾಖೆ ರಾಜ್ಯ ಸಚಿವರಾದ ವಿ.ಸೋಮಣ್ಣ ರವರ ಗಮನಕ್ಕೆ ತಂದಿದ್ದು, ಕನ್ನಡದಲ್ಲಿಯೂ ಪರೀಕ್ಷೆಗೆ ಅವಕಾಶ ಕಲ್ಪಿಸುವಂತೆ ಮಾಡಿದ್ದ ಮನವಿಯನ್ನು ತಕ್ಷಣವೇ ಪುರಸ್ಕರಿಸಿ ಆದೇಶ ಹೊರಡಿಸಿರುವುದು ಅಭಿನಂದನಾರ್ಹ ಕ್ರಮ.

ಕರ್ನಾಟಕ & ಕನ್ನಡಿಗರ ಹಿತಾಸಕ್ತಿಯ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಎಂದೆಂದಿಗೂ ಕಟಿಬದ್ಧವಾಗಿದೆ. ಇದರಿಂದ ಮಾತೃಭಾಷೆ ಕನ್ನಡದಲ್ಲಿ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ತುರ್ತಾಗಿ ಸ್ಪಂದಿಸಿ ಕ್ರಮ ಕೈಗೊಂಡಿರುವ ನಮ್ಮ ಕನ್ನಡದವರೇ ಆದ ಸಚಿವ ವಿ ಸೋಮಣ್ಣ ರವರಿಗೆ ಸಮಸ್ತ ಕನ್ನಡಿಗರ ಪರವಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ನೈಋತ್ಯ ರೈಲ್ವೆಯು ಸಹಾಯಕ ಲೋಕೋಪೈಲಟ್‌ ಹುದ್ದೆಗಳಿಗೆ ಮೇ ತಿಂಗಳಲ್ಲಿ ಸಾಮಾನ್ಯ ವಿಭಾಗದ ಸ್ಪರ್ಧಾತ್ಮಕ ಪರೀಕ್ಷೆಯ (ಜಿಡಿಸಿಇ) ಸುತ್ತೋಲೆ ಹೊರಡಿಸಿತ್ತು. ಆಗಸ್ಟ್ 3ರಂದು ಪರೀಕ್ಷೆ ನಡೆಯಲಿದ್ದು, ಪರೀಕ್ಷಾರ್ಥಿಗಳಿಗೆ ನೀಡಲಾದ ಹಾಲ್ ಟಿಕೆಟ್‌ನಲ್ಲಿ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ಬರೆಯುವಂತೆ ಆಯ್ಕೆ ನೀಡಲಾಗಿದೆ. ಹೀಗಾಗಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದ ಕನ್ನಡಿಗ ಅಭ್ಯರ್ಥಿಗಳಲ್ಲಿ ಆತಂಕ ಶುರುವಾಗಿತ್ತು. ಅಲ್ಲದೆ, ತೀವ್ರ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಆದರೆ, ಇದೀಗ ಕನ್ನಡದಲ್ಲೂ ಪರೀಕ್ಷೆ ಬರೆಯಲು ರೈಲ್ವೆ ಇಲಾಖೆ ಅವಕಾಶ ನೀಡಿದೆ.

Continue Reading

ಮೈಸೂರು

Mysore News: ದೇವರ ಅನುಗ್ರಹ ದೊರೆತರೆ ಜೀವನದ ಎಲ್ಲ ತಾಪಗಳೂ ನಿವಾರಣೆ: ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ

Mysore News: ಸೋಸಲೆ ಗ್ರಾಮದಲ್ಲಿ ಶುಕ್ರವಾರ ವ್ಯಾಸರಾಜರ ಮಠಾಧೀಶ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ, 8ನೇ ಚಾತುರ್ಮಾಸ ವ್ರತ ಸ್ವೀಕರಿಸಿ, ಹಸಿ ದರ್ಬಾರ್ ನಡೆಸಿ ಅನುಗ್ರಹ ಸಂದೇಶ ನೀಡಿದರು. ಚಾತುರ್ಮಾಸ ಸಂಕಲ್ಪಕ್ಕೂ ಮುನ್ನ ಸ್ವಾಮೀಜಿ, ಸಂಸ್ಥಾನ ಪ್ರತಿಮಾ ಶ್ರೀ ಮೂಲ ಗೋಪಾಲಕೃಷ್ಣದೇವರ ಪೂಜೆ ನೆರವೇರಿಸಿ, ಪರಂಪರೆಯ ಹಿರಿಯ ಗುರುಗಳ ವೃಂದಾವನಗಳಿಗೆ ಹಸ್ತೋದಕ ಸಮರ್ಪಣೆ ಮಾಡಿದರು. ವಿದ್ವಾಂಸರಿಂದ ವೇದಘೋಷವಾದನಂತರ ವ್ರತ ಸಂಕಲ್ಪ ಮಾಡಿದಾಗ ಶ್ರೀ ರಾಮೇಶ್ವರಂನಿಂದ ಆಗಮಿಸಿದ್ದ ಪ್ರಧಾನ ಅರ್ಚಕರು ಶ್ರೀಗಳಿಗೆ ದೇವರ ಪ್ರಸಾದ, ಪುಷ್ಪಮಾಲೆ ಪ್ರದಾನ ಮಾಡಿದರು.

VISTARANEWS.COM


on

Sri Vidyashreesha Theertha Swamiji ashirvachan at Vyasaraja Matha of Sosale village
Koo

ಮೈಸೂರು: ದೇವರ ಅನುಗ್ರಹ ದೊರೆತರೆ ಜೀವನದ ಎಲ್ಲ ತಾಪಗಳೂ ನಿವಾರಣೆ ಆಗುತ್ತವೆ ಎಂದು ಸೋಸಲೆ ಶ್ರೀ ವ್ಯಾಸರಾಜರ ಮಠಾಧೀಶ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ (Mysore News) ತಿಳಿಸಿದರು.

ಸೋಸಲೆ ಗ್ರಾಮದ ವ್ಯಾಸರಾಜರ ಮಠದಲ್ಲಿ ಶುಕ್ರವಾರ ವಿಧ್ಯುಕ್ತವಾಗಿ 8ನೇ ಚಾತುರ್ಮಾಸ ವ್ರತ ದೀಕ್ಷೆ ಸ್ವೀಕರಿಸಿ ಅಮೃತೋಪದೇಶ ನೀಡಿದ ಶ್ರೀಗಳು, ಸಮೃದ್ಧವಾಗಿ ಮಳೆ ಸುರಿದರೆ ಇಳೆ ತಂಪಾಗುತ್ತದೆ. ಹಲವು ರೀತಿಯ ಸಸ್ಯಗಳು ಹೂವು, ಕಾಯಿ, ಹಣ್ಣು ಬಿಡುತ್ತವೆ. ಹಾಗೆಯೇ ಶ್ರೀಕೃಷ್ಣನ ಕೃಪೆ ನಮ್ಮ ಮೇಲೆ ಬಿದ್ದರೆ ಸಂಕಷ್ಟಗಳೆಲ್ಲವೂ ಕರಗಿ ಜೀವನ ಸಮೃದ್ಧಿಯಾಗುತ್ತದೆ. ಆದ ಕಾರಣ ನಾವು ಬೇಡುವುದಾದರೆ ದೇವರ ಅನುಗ್ರಹವನ್ನೇ ಬೇಡೋಣ ಎಂದು ಅವರು ಹೇಳಿದರು.

ಇದನ್ನೂ ಓದಿ: Pralhad Joshi: ಪ್ರಸಕ್ತ ಸಕ್ಕರೆ ಋತುವಿನಲ್ಲಿ 1 ಲಕ್ಷ ಕೋಟಿ ರೂ. ರೈತರ ಬಾಕಿ ಪಾವತಿ

ಸಜ್ಜನರು, ಸಾಧಕರು, ತಪಸ್ವಿಗಳು ಮತ್ತು ಜ್ಞಾನಿಗಳು ಯಾವಾಗಲೂ ಚಾತಕ ಪಕ್ಷಿಗಳಂತೆ ಭಗವಂತನ ಕರುಣಾ ದೃಷ್ಟಿಗಾಗಿ ಕಾಯುತ್ತಿರುತ್ತಾರೆ. ಶ್ರೀಕೃಷ್ಣನೆಂಬ ಮೇಘವು ಅನುಗ್ರಹವೆಂಬ ಮಳೆಯನ್ನು ಸುರಿಸಲಿ ಎಂದು ಪ್ರಾರ್ಥಿಸುತ್ತಾರೆ. ಕೃಪೆಯ ವೃಷ್ಟಿಯಾದರೆ ಲೌಕಿಕ ಜೀವನದ ಯಾವ ಸಮಸ್ಯೆಗಳೂ ನಮ್ಮನ್ನು ಕಾಡಲಾರವು. ಆದಕಾರಣ ದಕ್ಷಿಣಾಯಣ ಪುಣ್ಯಕಾಲದ ಚಾತುರ್ಮಾಸ ವ್ರತ ಸ್ವೀಕಾರದ ಈ ಸಂದರ್ಭದಲ್ಲಿ ನಾವೆಲ್ಲರೂ ಭಗವಂತನ ಮಹಾಕೃಪೆಗಾಗಿ ಶ್ರದ್ಧೆಯಿಂದ ಪ್ರಾರ್ಥನೆ ಸಮರ್ಪಿಸೋಣ ಎಂದು ಶ್ರೀ ವಿದ್ಯಾಶ್ರೀಶ ತೀರ್ಥರು ಹೇಳಿದರು.

ಲೋಕಹಿತಕ್ಕಾಗಿ ಪ್ರಾರ್ಥನೆ ಮಾಡೋಣ

ಚಾತುರ್ಮಾಸ ಪರ್ಯಂತ ನಾವೆಲ್ಲರೂ ವ್ರತ, ನಿಯಮ ಮತ್ತು ಆಹಾರ ಪದ್ಧತಿ ಅನುಸರಿಸೋಣ. ಶಾರೀರಿಕವಾಗಿ, ಮಾನಸಿಕವಾಗಿ ಸದೃಢರಾಗಿ ಜ್ಞಾನ ಕಾರ್ಯಗಳನ್ನು ಹೆಚ್ಚಾಗಿ ನಡೆಸೋಣ. ಮಹಾಗುರು ಶ್ರೀ ವ್ಯಾಸರಾಜರು ಹೇಳಿದ ಮಾರ್ಗದಲ್ಲಿ ಸಾಗಿ, ಮುಖ್ಯಪ್ರಾಣನನ್ನು ಅನಂತವಾಗಿ ಅರ್ಚಿಸೋಣ. ನಮ್ಮ ಪರಂಪರೆಯ 8 ಯತಿಗಳು ವೃಂದಾನವಸ್ಥರಾಗಿರುವ ಈ ಕ್ಷೇತ್ರದಲ್ಲಿ ನಮ್ಮ ಶ್ರದ್ಧಾಪೂರ್ವಕ ಆಚರಣೆಗಳನ್ನು ಮಾಡುತ್ತಾ, ಲೋಕಹಿತಕ್ಕಾಗಿ ಪ್ರಾರ್ಥನೆ ಮಾಡೋಣ ಎಂದು ಶ್ರೀಗಳು ನುಡಿದರು.

ಮಹಾ ಸಂಸ್ಥಾನದ ದಿವಾನರಾದ ಬ್ರಹ್ಮಣ್ಯ ಆಚಾರ್ಯ, ಚಾತುರ್ಮಾಸ ಸಂಕಲ್ಪ ವಿಧಿಗಳನ್ನು ಪಠಿಸಿದರು. ಸೋಸಲೆ ಮಠದ ವ್ಯವಸ್ಥಾಪಕ ಶ್ರೀಧರ, ಸಿಇಒ ಬದರೀನಾಥ, ಬಲಸೇವೆ ಕೃಷ್ಣಾಚಾರ್ಯ, ಚಾತುರ್ಮಾಸ ಸಮಿತಿ ಮುಖ್ಯಸ್ಥ ರಾಯರ ಹುಂಡಿ ಆನಂದ ಆಚಾರ್ಯ, ಮಠಾಧಿಕಾರಿಗಳಾದ ಪವಮಾನಾಚಾರ್ಯ ಕಂಬಾಲೂರು ಮತ್ತು ವೆಂಕಟಣ್ಣ ಇತರರು ಹಾಜರಿದ್ದರು.

ಸಂಸ್ಥಾನ ಪೂಜೆ- ಹಸಿ ದರ್ಬಾರ್

ಚಾತುರ್ಮಾಸ ಸಂಕಲ್ಪಕ್ಕೂ ಮುನ್ನ ಸ್ವಾಮೀಜಿ, ಸಂಸ್ಥಾನ ಪ್ರತಿಮಾ ಶ್ರೀ ಮೂಲ ಗೋಪಾಲಕೃಷ್ಣದೇವರ ಪೂಜೆ ನೆರವೇರಿಸಿ, ಪರಂಪರೆಯ ಹಿರಿಯ ಗುರುಗಳ ವೃಂದಾವನಗಳಿಗೆ ಹಸ್ತೋದಕ ಸಮರ್ಪಣೆ ಮಾಡಿದರು. ವಿದ್ವಾಂಸರಿಂದ ವೇದಘೋಷವಾದನಂತರ ವ್ರತ ಸಂಕಲ್ಪ ಮಾಡಿದಾಗ ಶ್ರೀ ರಾಮೇಶ್ವರಂನಿಂದ ಆಗಮಿಸಿದ್ದ ಪ್ರಧಾನ ಅರ್ಚಕರು ಶ್ರೀಗಳಿಗೆ ದೇವರ ಪ್ರಸಾದ, ಪುಷ್ಪಮಾಲೆ ಪ್ರದಾನ ಮಾಡಿದರು. ನಂತರ ವಿಶೇಷ ವೇದಿಕೆಯಲ್ಲಿ ಶ್ರೀಗಳು ಸಾಂಪ್ರದಾಯಿಕ ವಸ್ತ್ರ, ಪೇಟಾ ಧರಿಸಿ ಹಸಿ ದರ್ಬಾರ್ ನಡೆಸಿ, ನೂರಾರು ಭಕ್ತರಿಗೆ ಮಂತ್ರಾಕ್ಷತೆ ಅನುಗ್ರಹ ಮಾಡಿದ್ದು ವಿಶೇಷವಾಗಿತ್ತು.

Continue Reading

ಮಳೆ

Koppala News: ತುಂಗಭದ್ರಾ ನದಿಗೆ ಅಪಾರ ಪ್ರಮಾಣದ ನೀರು; ನದಿಪಾತ್ರದ ಗ್ರಾಮಗಳಿಗೆ ತಂಗಡಗಿ ಭೇಟಿ

Koppala News: ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣ ನೀರು ನದಿಗೆ ಹರಿಸುತ್ತಿರುವ ಪರಿಣಾಮ ಕಂಪ್ಲಿ ಸೇತುವೆ ಮುಳಗಡೆಯಾಗಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

VISTARANEWS.COM


on

Minister Shivaraj tangadagi visited and inspected Tungabhadra river side villages
Koo

ಗಂಗಾವತಿ: ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣ ನೀರು ನದಿಗೆ ಹರಿಸುತ್ತಿರುವ ಪರಿಣಾಮ ಕಂಪ್ಲಿ ಸೇತುವೆ ಮುಳಗಡೆಯಾಗಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಶುಕ್ರವಾರ ಭೇಟಿ ನೀಡಿ ಪರಿಶೀಲನೆ (Koppala News) ನಡೆಸಿದರು.

ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಗ್ರಾಮದ ಬಳಿ ಹರಿಯುವ ತುಂಗಭದ್ರಾ ನದಿಯಿಂದ ಪಂಪ್ ಮೂಲಕ ಕನಕಗಿರಿ ಕ್ಷೇತ್ರದ ನಾನಾ ಗ್ರಾಮಗಳ ಕೆರೆ ತುಂಬಿಸುವ ಯೋಜನೆಯಡಿ ಕೈಗೊಂಡ ಕಾಮಗಾರಿಗೆ ನದಿಪ್ರವಾಹದಿಂದ ಏನಾದರೂ ಧಕ್ಕೆಯಾಗಿದೆಯೇ ಎಂದು ಸಚಿವ ಖುದ್ದು ನೀರಿನಲ್ಲಿ ಇಳಿದು ವೀಕ್ಷಣೆ ಮಾಡಿದರು.

ಸ್ಥಳದಲ್ಲಿದ್ದ ಗಂಗಾವತಿ ತಹಸೀಲ್ದಾರ್ ಯು. ನಾಗರಾಜ್ ಹಾಗೂ ಕಂದಾಯ ಅಧಿಕಾರಿಗಳಿಂದ, ನದಿಯಲ್ಲಿನ ಪ್ರವಾಹದಿಂದ ಜನರ ವಸತಿ, ಜಾನುವಾರು ಪ್ರಾಣಹಾನಿ, ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟಾಗಿದೆಯೇ ಎಂಬ ಮಾಹಿತಿ ಪಡೆದುಕೊಂಡರು.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಆ.4ರಂದು ʼರಣಧುರಂಧರʼ ಗ್ರಂಥ ಲೋಕಾರ್ಪಣೆ

ನಿತ್ಯ ಕಂಪ್ಲಿ-ಗಂಗಾವತಿ ಮಧ್ಯೆ ಸಾವಿರಾರು ಜನ ಚಿಕಿತ್ಸೆ, ವ್ಯಾಪಾರ ವಹಿವಾಟು, ಮಕ್ಕಳು ಶಾಲಾ-ಕಾಲೇಜು ಸೇರಿದಂತೆ ನಾನಾ ಕಾರಣಕ್ಕೆ ಓಡಾಡುತ್ತಿದ್ದು, ಕಂಪ್ಲಿ ಸೇತುವೆ ಮುಳಗಡೆಯಿಂದಾಗಿ ಜನರಿಗೆ ಭಾರೀ ಸಮಸ್ಯೆಯಾಗಿದೆ ಎಂದು ಸ್ಥಳೀಯರು ತಿಳಿಸಿದರು.

ಅಲ್ಲದೇ ನದಿಯಲ್ಲಿ ಪ್ರವಾಹ ಉಂಟಾದ ಕಾರಣಕ್ಕೆ ನದಿ ಪಾತ್ರದ ಗ್ರಾಮಗಳ ಹೊಲ-ಗದ್ದೆ, ತೋಟಗಳಿಗೆ ಹಾನಿಯಾಗಿದೆ. ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತವಾಗಿವೆ. ಅಧಿಕಾರಿಗಳು ಇದುವರೆಗೂ ಸಮೀಕ್ಷೆ ನಡೆಸಿಲ್ಲ ಎಂದು ಸ್ಥಳೀಯ ರೈತರು ಈ ಸಂದರ್ಭದಲ್ಲಿ ಸಚಿವರ ಬಳಿ ಅಳಲು ತೋಡಿಕೊಂಡರು.

ಈ ಬಗ್ಗೆ ಮಾತನಾಡಿದ ಸಚಿವ, ಶನಿವಾರ ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಲ್ಲಾ ತಾಲೂಕಿನ ತಹಸೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಕೃಷಿ, ತೋಟಗಾರಿಕಾ ಇಲಾಖೆಯ ಅಧಿಕಾರಿಗಳ ಸಭೆ ನಡೆಸಲಿದ್ದೇನೆ. ಸಭೆಯಲ್ಲಿ ಮಳೆ ಕೊರತೆಯಿಂದ ಮಳೆಯಾಶ್ರಿತ ಪ್ರದೇಶದಲ್ಲಾದ ಹಾನಿಯ ಬಗ್ಗೆ ಚರ್ಚಿಸಲಾಗುವುದು. ಅಲ್ಲದೇ ನದಿಗೆ ಹೆಚ್ಚುವರಿ ನೀರು ಹರಿಸಿದ್ದರಿಂದ ಆಗಿರುವ ಹಾನಿಯ ಬಗ್ಗೆಯೂ ಚರ್ಚಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.

ತುಂಗಭದ್ರಾ ಜಲಾಶಯದಿಂದ ನದಿಗೆ ನಿತ್ಯ ಎರಡು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿಸಿದರೆ ನದಿಪಾತ್ರದ ಗ್ರಾಮಗಳಿಗೆ ಮತ್ತು ಹೊಲ-ಗದ್ದೆಗಳಿಗೆ ಹಾನಿಯಾಗಲಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಇದನ್ನೂ ಓದಿ: Workshop: ಬೆಂಗಳೂರಿನಲ್ಲಿ ಆ.10ರಂದು ಸಿನಿಮಾಸಕ್ತರಿಗೆ ಕಾರ್ಯಾಗಾರ

ಸೇತುವೆ ಬಗ್ಗೆ ಸಿಎಂ ಗಮನಕ್ಕೆ

ನದಿಗೆ ನೀರು ಬಿಟ್ಟಾಗಲೊಮ್ಮೆ ಕಂಪ್ಲಿ ಸೇತುವೆ ಮುಳಗಡೆಯಾಗಿ ಸಂಚಾರಕ್ಕೆ ತೊಂದರೆಯಾಗಿ ಎರಡು ಜಿಲ್ಲೆಯ ಜನ ಪರದಾಡುತ್ತಿರುವ ಬಗ್ಗೆ ಈಗಾಗಲೆ ಸಿಎಂ ಗಮನಕ್ಕೆ ತರಲಾಗಿದೆ. ಸೇತುವೆಯ ಎತ್ತರವನ್ನು ಇನ್ನಷ್ಟು ಹೆಚ್ಚಿಸಬೇಕಿದೆ. ಇಲ್ಲಿನ ಸಮಗ್ರ ಮಾಹಿತಿಯನ್ನು ವರದಿ ರೂಪದಲ್ಲಿ ಸಿಎಂ ಗಮನಕ್ಕೆ ತರಲಾಗುವುದು ಎಂದು ಸಚಿವ ಹೇಳಿದರು.

Continue Reading
Advertisement
Paris Olympics 2024
ಪ್ರಮುಖ ಸುದ್ದಿ17 mins ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಯಾವ ಸ್ಪರ್ಧಿಗಳು ಕಣಕ್ಕೆ ಇಳಿಯಲಿದ್ದಾರೆ? ಎಲ್ಲ ಮಾಹಿತಿ ಇಲ್ಲಿದೆ

karnataka weather forecast
ಮಳೆ17 mins ago

Karnataka Weather : 7 ಜಿಲ್ಲೆಗಳಲ್ಲಿ ವ್ಯಾಪಿಸಲಿದೆ ಭರ್ಜರಿ ಮಳೆ

Dina Bhavishya
ಭವಿಷ್ಯ47 mins ago

Dina bhavishya : ನಿಮ್ಮ ಅನುಮಾನಗಳು ಮನೆಯ ವಾತಾವರಣವನ್ನು ಹದಗೆಡಿಸುತ್ತೆ

Bigg Boss OTT 3
ಪ್ರಮುಖ ಸುದ್ದಿ4 hours ago

Bigg Boss OTT 3 : ಸನಾ ಮಕ್ಬುಲ್​ ಬಿಗ್​ಬಾಸ್​ ಒಟಿಟಿ 3 ವಿನ್ನರ್​, ನೈಜಿ ರನ್ನರ್​​ಅಪ್​​

Paris Olympics 2024
ಪ್ರಮುಖ ಸುದ್ದಿ6 hours ago

Paris Oylmpics 2024 : ಹಳದಿ ಬಣ್ಣದ ಜೆರ್ಸಿಯವರನ್ನು ಸೋಲಿಸುವುದೆಂದರೆ ಖುಷಿ; ಹಾಕಿ ತಂಡದ ಗೆಲುವನ್ನು ಮುಂದಿಟ್ಟುಕೊಂಡು ಸಿಎಸ್​​ಕೆಯನ್ನು ಲೇವಡಿ ಮಾಡಿದ ಆರ್​ಸಿಬಿ

ಪ್ರಮುಖ ಸುದ್ದಿ7 hours ago

Lakshya Sen : ಒಲಿಂಪಿಕ್ಸ್​ನ ಸೆಮಿ ಫೈನಲ್​ಗೇರಿ ಇತಿಹಾಸ ನಿರ್ಮಿಸಿದ ಷಟ್ಲರ್ ಲಕ್ಷ್ಯ ಸೇನ್​

IND vs SL ODI
ಕ್ರಿಕೆಟ್7 hours ago

IND vs SL ODI : ನಾಟಕೀಯ ತಿರುವು; ಲಂಕಾ ವಿರುದ್ಧದ ಮೊದಲ ಏಕ ದಿನ ಪಂದ್ಯ ಟೈ

Border Security Force
ಪ್ರಮುಖ ಸುದ್ದಿ7 hours ago

Border Security Force : ಗಡಿಯಲ್ಲಿ ಭಯೋತ್ಪಾದನೆ ಹೆಚ್ಚಳ; ಬಿಎಸ್​ಎಫ್​ ಮುಖ್ಯಸ್ಥರನ್ನು ಹುದ್ದೆಯಿಂದ ತೆಗೆದು ಹಾಕಿದ ಕೇಂದ್ರ ಸರ್ಕಾರ

African Culture
ವಿದೇಶ8 hours ago

Breast Ironing: ಆಫ್ರಿಕಾದಲ್ಲಿದೆ ಬಿಸಿ ವಸ್ತುಗಳಿಂದ ಯುವತಿಯರ ಸ್ತನ ಚಪ್ಪಟೆಗೊಳಿಸುವ ಕ್ರೂರ ಪದ್ಧತಿ!

high-speed road corridor
ಪ್ರಮುಖ ಸುದ್ದಿ8 hours ago

High Speed Road Corridor : 8 ಹೊಸ ಹೈಸ್ಪೀಡ್​ ರೋಡ್​ ಕಾರಿಡಾರ್​​​ಗೆ ಒಪ್ಪಿಗೆ ಕೊಟ್ಟ ಕೇಂದ್ರ ಸರ್ಕಾರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌