Site icon Vistara News

Vijay Diwas | ದೇಶಕ್ಕಾಗಿ ಮಡಿದ ಸೈನಿಕರ ಕುಟುಂಬಕ್ಕೆ ಅಗತ್ಯ ನೆರವು ನೀಡಲು ಸರ್ಕಾರ ಬದ್ಧ: ಸಿಎಂ ಭರವಸೆ

cm basavaraj bommai

ಬೆಂಗಳೂರು: ದೇಶಕ್ಕಾಗಿ ಮಡಿದ ಸೈನಿಕರ ಕುಟುಂಬದವರಿಗೆ ಎಲ್ಲ ಸಹಾಯ, ಸಹಕಾರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಭರವಸೆ ನೀಡಿದರು. ರಾಷ್ಟ್ರೀಯ ಸೈನಿಕ ಸ್ಮಾರಕ ಮ್ಯಾನೇಜ್ಮೆಂಟ್ ಟ್ರಸ್ಟ್ ಆಯೋಜಿಸಿದ್ದ ವಿಜಯ ದಿವಸ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ಸ್ವಾತಂತ್ರ್ಯಪೂರ್ವ ಹಾಗೂ ನಂತರದಲ್ಲಿ ಬಾಂಗ್ಲಾ ವಿಮೋಚನೆ, ಕಾರ್ಗಿಲ್ ಸೇರಿದಂತೆ ಅನೇಕ ಯುದ್ಧಗಳಲ್ಲಿ ಕರ್ನಾಟಕದ ಯೋಧರು ತಮ್ಮ ಪ್ರಾಣ ತ್ಯಾಗ ಮಾಡಿ ಭಾರತಕ್ಕೆ ವಿಜಯ ತಂದುಕೊಟ್ಟಿದ್ದಾರೆ. ಅದರ ಸ್ಮರಣಾರ್ಥವಾಗಿ ವಿಜಯ ದಿವಸ ಆಚರಣೆ ಮಾಡಲಾಗುತ್ತದೆ.

ಎಲ್ಲ ತ್ಯಾಗಕ್ಕೂ ಸಿದ್ಧರಾಗಿರಬೇಕು
ʻʻರಕ್ಷಣಾ ಪಡೆಗಳ ಸೇವೆ ಅತ್ಯಂತ ಶ್ರೇಷ್ಠ ಸೇವೆ, ಅಲ್ಲಿಗೆ ಸೇರುವ ಮುನ್ನವೇ ಎಲ್ಲಾ ತ್ಯಾಗಕ್ಕೂ ಸಿದ್ಧರಾಗಿರಬೇಕು ಎಂದು ಮನಗಂಡು ಸೇರುತ್ತೇವೆ. ದೇಶದ ರಕ್ಷಣೆ ಹಾಗೂ ಅದರ ಜನರಿಗಾಗಿ ಪ್ರಾಣ ತ್ಯಾಗ ಮಾಡುವ ಮೂಲಕ ದೇಶಕ್ಕೆ ವಿಜಯ ಪ್ರಾಪ್ತಿ ಯಾಗಿದ್ದನ್ನು ನೋಡಲೂ ಅವರಿರುವುದಿಲ್ಲ. ಮಾನವೀಯತೆಯ ಅತ್ಯಂತ ಶ್ರೇಷ್ಠ ಗುಣವನ್ನು ಹೊಂದಿರುವ ಸೇವೆ ಇದುʼʼ ಎಂದರು.

ʻʻಯಾವುದೇ ಸಮಯದಲ್ಲಿ ಯುದ್ಧಕ್ಕೆ ತಯಾರಿರಲು ಅತ್ಯಂತ ಕಠಿಣ ಪರಿಶ್ರಮ ಹಾಗೂ ಶಿಸ್ತಿನ ಅಭ್ಯಾಸವನ್ನು ಬೇಡುವ ರಕ್ಷಣಾ ಪಡೆ ಮಾನಸಿಕವಾಗಿಯೂ ಸನ್ನದ್ಧರಾಗಿರಬೇಕು ಎಂದರು. ಆಧುನಿಕ ಕಾಲದಲ್ಲಿ ತಮ್ಮ ಸರಹದ್ದನ್ನು ವಿಸ್ತರಿಸಲು ಪ್ರಯತ್ನಿಸುತ್ತವೆ. ಆದರೆ ಈ ಕಾಲದಲ್ಲಿ ಅದಕ್ಕೆ ಅವಕಾಶವಿಲ್ಲ. ಆದರೂ ಸಾಹಸವನ್ನು ಮಾಡುತ್ತಿರುತ್ತಾರೆ. ಕೆಲವು ಹಿಂದಿನ ಅನುಭವದಿಂದ ಸೈನಿಕರು ಗಡಿಯಲ್ಲಿ ಸದಾ ಸನ್ನದ್ಧರಾಗಿದ್ದಾರೆ. ಯಾವುದೇ ದೇಶ ಒಂದಿಚು ಒಳಗೆ ಬಂದರೂ ಹಿಮ್ಮೆಟ್ಟಿಸಿ ಸೋಲಿಸುವ ಶಕ್ತಿ ನಮ್ಮ ಸೈನಿಕರಿಗಿದೆ. ರಕ್ಷಣಾ ಪಡೆಗಳಿಂದಾಗಿ ನಮ್ಮ ದೇಶ ಸುರಕ್ಷಿತವಾಗಿದ್ದು, ಪ್ರಗತಿಯತ್ತ ಸಾಗಬೇಕು. ನಾಗರಿಕರಾಗಿ ದೇಶವಾಸಿಗಳಿಗೆ ಉತ್ತಮ ಜೀವನ ನೀಡುವ ಹೊಣೆಗಾರಿಕೆ ನಮ್ಮ ಮೇಲಿದೆʼʼ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿರ್ದೇಶಕ ಬ್ರಿಗೇಡಿಯರ್ ಎಂ.ಬಿ ಶಶಿಧರ್ ಉಪಸ್ಥಿತರಿದ್ದರು.

ಇದನ್ನೂ ಓದಿ | Vijay Diwas | 1971 ಡಿಸೆಂಬರ್‌ 16 | ಈ ದಿನ ಪಾಕಿಸ್ತಾನದ 93 ಸಾವಿರ ಸೈನಿಕರು ಭಾರತೀಯ ಸೇನೆ ಎದುರು ಮಂಡಿಯೂರಿ ಪ್ರಾಣ ಭಿಕ್ಷೆ ಬೇಡಿದ್ದರು!

Exit mobile version