ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹಾಗೂ ಸಂಪುಟ ಸಚಿವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಈ ಸಮಯದಲ್ಲಿ ಸಚಿವರಾದ ಆರ್. ಅಶೋಕ್, ವಿ.ಸೋಮಣ್ಣ, ಬೈರತಿ ಬಸವರಾಜ್, ಮುನಿರತ್ನ, ಗೋಪಾಲಯ್ಯ ಜೆ.ಸಿ. ಮಾಧುಸ್ವಾಮಿ ಜತೆಗಿದ್ದರು.
ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, “ದೇವೇಗೌಡರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಬಹಳ ಆತ್ಮೀಯವಾಗಿ, ಲವಲವಿಕೆಯಿಂದ ಮಾತನಾಡಿದ್ದಾರೆ. ಸಾಕಷ್ಟು ಹಳೆಯ ವಿಚಾರಗಳನ್ನು ಮೆಲಕು ಹಾಕಿದರಲ್ಲದೆ ರಾಜ್ಯಕ್ಕೆ ಒಳ್ಳೆಯದು ಮಾಡಬೇಕೆಂಬ ನಿಟ್ಟಿನಲ್ಲಿ ಅವರ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅವರ ಆರೋಗ್ಯ ಚೆನ್ನಾಗಿರಲಿ. ನೂರ್ಕಾಲ ಚೆನ್ನಾಗಿ ಬಾಳಲಿ. ರಾಜ್ಯಕ್ಕೆ ಅವರಿಂದ ಇನ್ನಷ್ಟು ಮಾರ್ಗದರ್ಶನ ಸಿಗುವಂತಾಗಲಿ” ಎಂದು ತಿಳಿಸಿದರು.
ದೇವೇಗೌಡರನ್ನು ಭೇಟಿ ಮಾಡಲು ಮಂಗಳವಾರ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಸೋಮವಾರ ಮಾಜಿ ಸಿಎಂ ಸಿದ್ದರಾಮಯ್ಯ ತೆರಳಿದ್ದರು.
ಇದನ್ನೂ ಓದಿ | ದೇವೇಗೌಡರ ಆರೋಗ್ಯ ವಿಚಾರಿಸಿದ ಬಿಎಸ್‌ವೈ, ಕಾಲು ಮುಟ್ಟಿ ನಮಸ್ಕರಿಸಿದ ಮಾಜಿ ಮುಖ್ಯಮಂತ್ರಿ