ಮೈಸೂರು: ಮೇಕೆದಾಟು ಯೋಜನೆ ವಿರೋಧಿಸುತ್ತಿರುವ ತಮಿಳುನಾಡು ಸರಕಾರವು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡುವಂತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ತಮಿಳುನಾಡು ಸಲ್ಲಿಸಿರುವ ಅರ್ಜಿಯ ಅನುಸಾರ ಸರ್ವೋಚ್ಚ ನ್ಯಾಯಾಲಯ ನಮಗೆ ನೋಟಿಸ್ ಜಾರಿ ಮಾಡಬೇಕು. ಅದಕ್ಕೆ ನಾವು ಸೂಕ್ತ ರೀತಿಯಲ್ಲಿ ಉತ್ತರ ನೀಡುತ್ತೇವೆ. ಹೊರತಾಗಿ ಕೇಂದ್ರ ಸರಕಾರಕ್ಕೆ ಸೂಚನೆ ನೀಡುವ ಪ್ರಯತ್ನ ಮಾಡುವುದು ಸರಿಯಲ್ಲ ಎಂದರು.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸರ್ವೋಚ್ಚ ನ್ಯಾಯಾಲಯದ ಆದೇಶದ ಮೇರೆಗೆ ರಚಿಸಲ್ಪಟ್ಟಿರುವ ಸಂಸ್ಥೆಯಾಗಿದೆ. ಯಾವುದೇ ಯೋಜನೆಗೆ ಅನುಮೋದನೆ ನೀಡಲು ಪ್ರಾಧಿಕಾರಕ್ಕೆ ಮಾತ್ರ ಅಧಿಕಾರವಿದೆ. ನ್ಯಾಯಮಂಡಳಿಯ ಆದೇಶ ಪಾಲನೆಯಾಗಿದೆಯೇ, ಯಾವ ರೀತಿ ಆಗಬೇಕು ಎಂದು ಸೂಚಿಸುವ ಅಧಿಕಾರ ಅದಕ್ಕಿದೆ. ಈ ಬಗ್ಗೆ ಈಗಾಗಲೇ 15-16 ಸಭೆಗಳಾಗಿವೆ ಎಂದರು.
ಇದನ್ನೂ ಓದಿ | ಪ್ರಧಾನಿ ಭಾಗವಹಿಸುವ ಯೋಗ ದಿನ ಆಚರಣೆ ಸಿದ್ಧತೆ ಪರಿಶೀಲನೆ ನಡೆಸಿದ ಸಿಎಂ ಬೊಮ್ಮಾಯಿ