ಬೆಂಗಳೂರು: ಕೇಂದ್ರ ಸರ್ಕಾರದ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪೈಕಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ್ದ ʼನಾದದ ನವನೀತ ಡಾ. ಪಂಡಿತ್ ವೆಂಕಟೇಶ್ ಕುಮಾರ್ʼ ಸಾಕ್ಷ್ಯಚಿತ್ರವು ರಜತ ಕಮಲ ಪ್ರಶಸ್ತಿ ಸ್ವೀಕರಿಸಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ದೇಶಕ ಗಿರೀಶ್ ಕಾಸರವಳ್ಳಿ ಹಾಗೂ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಧಾರವಾಡದ ಖ್ಯಾತ ಹಿಂದುಸ್ತಾನಿ ಗಾಯಕ ಪಂಡಿತ್ ಎಂ. ವೆಂಕಟೇಶ್ ಕುಮಾರ್ ಅವರ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020ರಲ್ಲಿ ಸಾಕ್ಷ್ಯಚಿತ್ರ ನಿರ್ಮಿಸಿತ್ತು. ಇದು 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ಚಲನಚಿತ್ರೇತರ ವಿಭಾಗದ ಕಲೆ ಮತ್ತು ಸಂಸ್ಕೃತಿ ವಿಭಾಗದಲ್ಲಿ ರಜತ ಕಮಲ ಪ್ರಶಸ್ತಿಗೆ ಭಾಜನವಾಗಿದೆ. ಸೆ. 30ರಂದು ನವ ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ರಜತ ಕಮಲ ಪ್ರಶಸ್ತಿ ಪ್ರದಾನ ಮಾಡಿದರು.
68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪೈಕಿ ಕನ್ನಡದ ʼಡೊಳ್ಳುʼ ಅತ್ಯುತ್ತಮ ಕನ್ನಡ ಚಲನಚಿತ್ರ ಮತ್ತು ಪರಿಸರ ಸಂರಕ್ಷಣೆ ವಿಭಾಗದಲ್ಲಿ ʼತಲೆದಂಡʼ ಚಲನಚಿತ್ರವು ಅತ್ಯುತ್ತಮ ಪ್ರಶಸ್ತಿಯನ್ನು ಸ್ವೀಕರಿಸಿವೆ. ಈ ತಂಡಗಳ ಸಾಧನೆಗೂ ಸಿಎಂ ಬೊಮ್ಮಾಯಿ ಅಭಿನಂದನೆ ತಿಳಿಸಿದ್ದಾರೆ.
ಇದನ್ನೂ ಓದಿ |