ಬೆಂಗಳೂರು: ನಗರದ ವಿಧಾನಸೌಧದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡ ಹಾಗೂ ಬಸವೇಶ್ವರರ ಪ್ರತಿಮೆ ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನುಮೋದನೆ ನೀಡಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜತೆಗೂಡಿ ಪ್ರತಿಮೆ ಸ್ಥಾಪನೆಗೆ ನಿರ್ದಿಷ್ಟ ಸ್ಥಳ ಗುರುತಿಸುವಂತೆ ರಾಜ್ಯ ಲೋಕೋಪಯೋಗಿ ಇಲಾಖೆಗೆ ಸೂಚನೆ ನೀಡಿದ್ದಾರೆ.
ನವೆಂಬರ್ 1ರಂದು ಕೆಂಪೇಗೌಡ ಮತ್ತು ಬಸವೇಶ್ವರರ ಪ್ರತಿಮೆ ಅನಾವರಣಗೊಳಿಸಲು ಕ್ರಮ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಗೆ ಸೂಚನೆ ನೀಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಕಳೆದ ಕೆಂಪೇಗೌಡ ಜಯಂತಿ ವೇಳೆ ವಿಧಾನಸೌಧ ಬಳಿ ಪ್ರತಿಮೆ ಸ್ಥಾಪನೆ ಬಗ್ಗೆ ಘೋಷಣೆ ಮಾಡಿದ್ದರು.
ಸಚಿವ ಡಾ.ಅಶ್ವತ್ಥ ನಾರಾಯಣ ಮತ್ತು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದರು. ಅದೇ ರೀತಿ ಬಿ.ಎಸ್. ಯಡಿಯೂರಪ್ಪ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಬಸವೇಶ್ವರ ಪುತ್ಥಳಿ ಸ್ಥಾಪಿಸುವುದಾಗಿ ಘೋಷಿಸಿದ್ದರು. ಇದನ್ನೂ ಓದಿ | ಉಡುಪಿ ಶ್ರೀಕೃಷ್ಣನಿಗೆ ಇಂದು ಸಂಭ್ರಮದ ಲೀಲೋತ್ಸವ