ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಫೆಬ್ರವರಿ 17ರಂದು ಮಂಡಿಸಿದ 2023-24ನೇ ವರ್ಷದ ರಾಜ್ಯ ಬಜೆಟ್‌ನಲ್ಲಿ (karnataka budget 2023) ಕ್ರೀಡಾ ಕ್ಷೇತ್ರಕ್ಕೂ ಭರಪೂರ ಕೊಡುಗೆಗಳನ್ನು ನೀಡಲಾಗಿದೆ. ಕ್ರೀಡಾಂಗಣಗಳಲ್ಲಿ ಹೈಟೆಕ್ ಸೌಲಭ್ಯಗಳು, ಅಭ್ಯಾಸಕ್ಕಾ ಜಿಮ್ಗಳು, ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ, ಹೊಸ ಕ್ರೀಡಾಂಗಣಗಳ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳನ್ನು ಪ್ರಕಟಿಸಲಾಗಿದೆ.
ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣ, ಮಂಡ್ಯ ಮತ್ತು ಉಡುಪಿ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸುಸಜ್ಜಿತ ಕ್ರೀಡಾ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸುವುದಾಗಿ ಸಿಎಂ ಬೊಮ್ಮಾಯಿ ಅವರು ಬಜೆಟ್‌ನಲ್ಲಿ ಪ್ರಕಟಿಸಿದ್ದಾರೆ.
ಮುಂದಿನ ವರ್ಷಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕ್ರೀಡಾಂಗಣಗಳ ಸಮಗ್ರ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು. ಈ ಕ್ರೀಡಾಂಗಣಗಳಲ್ಲಿ ಮಹಿಳೆಯರು ಮತ್ತು ವಿಶೇಷಚೇತನರಿಗೆ ಸೂಕ್ತ ಸೌಕರ್ಯಗಳು ಹಾಗೂ ಯುವಜನರಿಗೆ ಹೊರಾಂಗಣ ಜಿಮ್ ಸೌಲಭ್ಯಗಳನ್ನು ಒದಗಿಸಲಾಗುವುದು. ಅದಕ್ಕಾಗಿ 100 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ
ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ರೂಪಿಸುವ ನೋಂದಣಿಯಾಗಿರುವ ಖಾಸಗಿ ಕ್ರೀಡಾ ಸಂಸ್ಥೆಗಳಿಗೆ 25 ಲಕ್ಷ ರೂ. ಗಳವರೆಗೆ ಪ್ರೋತ್ಸಾಹಧನವನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ.
ಬಾಸ್ಕೆಟ್ ಬಾಲ್ ಮತ್ತು ವಾಲಿಬಾಲ್ ಕ್ರೀಡೆಗಳನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ಹಾಗೂ ಮಕ್ಕಳಿಗೆ ಅದನ್ನು ಕಲಿಸುವುದಕ್ಕಾಗಿ ಹೊಸ ಗ್ರೌಂಡ್ ಮತ್ತು ತರಬೇತಿ ಕೇಂದ್ರಗಳನ್ನು ನಿರ್ಮಿಸುವುದಾಗಿ ಸಿಎಂ ಘೋಷಿಸಿದ್ದಾರೆ.
ಗ್ರಾಮೀಣ ಕ್ರೀಡೆಗಳಾದ ಖೋಖೋ, ಕುಸ್ತಿ, ಕಬಡ್ಡಿ, ಕಂಬಳ, ಎತ್ತಿನಗಾಡಿ ಓಟವನ್ನು ಯುವ ಜನತೆಗೆ ಪರಿಚಯ ಮಾಡಿಕೊಡುವ ಉದ್ದೇಶದಿಂದ ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸಲಾಗುವುದು. ನರೇಗಾ ಯೋಜನೆಯಡಿ 5 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಸುಸಜ್ಜಿತವಾದ ನಿರ್ಮಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.
ರಾಜ್ಯದ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಮಾಡಿರುವ ಐದು ಯುವ ಜನರಿಗೆ ಪ್ರಸಕ್ತ ಸಾಲಿನಿಂದ ಸ್ವಾಮಿ ವಿವೇಕಾನಂದ ಯುವ ಪ್ರಶಸ್ತಿ ನೀಡುವುದಾಗಿ ಸರಕಾರ ಬಜೆಟ್‌ನಲ್ಲಿ ಘೋಷಿಸಿದೆ.
ಒಲಿಂಪಿಕ್ಸ್ ಮತ್ತು ಉಳಿದ ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ರಾಜ್ಯದ ಕ್ರೀಡಾಪಟುಗಳು ಹೆಚ್ಚು ಪದಕ ಗೆಲ್ಲಬೇಕು ಎಂಬ ಉದ್ದೇಶದಿಂದ 50 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಒಲಿಂಪಿಕ್ ಕನಸಿನ ಯೋಜನೆ ಘೋಷಿಸಲಾಗಿದೆ.
ಇದನ್ನೂ ಓದಿ : Karnataka Budget 2023 : ಒಂದು ಲಕ್ಷ ಸರ್ಕಾರಿ ಹುದ್ದೆಗಳಿಗೆ ನೇಮಕ; ಬಜೆಟ್‌ನಲ್ಲಿ ಬೊಮ್ಮಾಯಿ ಘೋಷಣೆ
Karnataka Olympic Dream Project Fund ಸ್ಥಾಪಿಸುವ ಮೂಲಕ ಈ ಯೋಜನೆಯಡಿ 12ರಿಂದ 19 ವರ್ಷದ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿದ ಯುವ ಪ್ರತಿಭಾವಂತ ಕ್ರೀಡಾಪಟುಗಳಿಗೆ ಪ್ರಾಯೋಜಕತ್ವ ಲಭಿಸಿದೆ.