ಬೆಂಗಳೂರು: ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಸ್ಟಾಲಿನ್ ಪದೇಪದೆ ಕ್ಯಾತೆ ತೆಗೆಯುತ್ತಿರುವ ಹಿನ್ನೆಲೆಯಲ್ಲಿ ಇಂದು (ಶುಕ್ರವಾರ) ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಮೇಕೆದಾಟು ಯೋಜನೆಯನ್ನು ನಮ್ಮ ರಾಜ್ಯಕ್ಕೆ ಸೇರಿದ ಭೂಪ್ರದೇಶದಲ್ಲಿ ಮಾಡಲಾಗುತ್ತಿದೆ. ಇದರಿಂದ ತಮಿಳುನಾಡಿಗೂ ಅನುಕೂಲವಾಗಲಿದೆ. ಸಮುದ್ರಕ್ಕೆ ಹರಿಯುವ ನೀರನ್ನು ತಡೆಯದೆ ಬೆಂಗಳೂರಿಗೆ ನೀರು ಕೊಡುವ ಯೋಜನೆ ಇದಾಗಿದೆ. ಜತೆಗೆ ಈ ಯೋಜನೆಯಿಂದ ವಿದ್ಯುತ್ ಸಹ ಉತ್ಪಾದನೆ ಮಾಡಬಹುದಾಗಿದೆ. ಆದರೆ, ತಮಿಳುನಾಡು ಸಿಎಂ ಸ್ಟಾಲಿನ್ ಸುಖಾಸುಮ್ಮನೆ ಈ ಯೋಜನೆಗೆ ಅಡ್ಡಿಪಡಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಇದಕ್ಕೆ ಮನ್ನಣೆ ಕೊಡಬಾರದು ಎಂದು ಬೊಮ್ಮಾಯಿ ಅವರು ಸಚಿವ ಶೆಖಾವತ್ ಬಳಿ ಮನವಿ ಮಾಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಜೊತೆಗೆ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಕೂಡ ಉಪಸ್ಥಿತರಿದ್ದರು.
ಇದನ್ನು ಓದಿ| ವಿಸ್ತಾರ TOP 10 NEWS | ಮೋದಿಯಿಂದ ಮೇಕೆದಾಟುವರೆಗೆ ಇಡೀ ದಿನ ಏನೇನಾಯ್ತು?