Site icon Vistara News

Border dispute | ಬೆಳಗಾವಿಗೆ ಮಹಾರಾಷ್ಟ್ರ ಸಚಿವರ ಭೇಟಿಗೆ ಸಿಎಂ ಆಕ್ಷೇಪ, ನೆರೆ ರಾಜ್ಯಕ್ಕೂ ಸಂದೇಶ ರವಾನೆ

CM Bommai Basaveshwara

ಬೆಳಗಾವಿ: ಎರಡು ರಾಜ್ಯಗಳ ಮಧ್ಯೆ ಈಗ ನಿರ್ಮಾಣವಾಗಿರುವ ಪರಿಸ್ಥಿತಿಯಲ್ಲಿ (Border dispute) ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ. ಅವರು ಇಲ್ಲಿಗೆ ಬರಬಾರದು ಎಂಬ ಸಂದೇಶವನ್ನು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳು ಅಲ್ಲಿನ ಮುಖ್ಯ ಕಾರ್ಯದರ್ಶಿಗಳಿಗೆ ಫ್ಯಾಕ್ಸ್ ಮೂಲಕ ಸಂದೇಶ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಶುಕ್ರವಾರ ರಾಮದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಡಿಸೆಂಬರ್ 06ರಂದು ಬೆಳಗಾವಿಗೆ ಮಹಾರಾಷ್ಟ್ರದ ಸಚಿವರು ಆಗಮಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಹಿಂದೆ ಹಲವಾರು ಬಾರಿ ಈ ಪ್ರಯತ್ನಗಳಾದಾಗ ಕರ್ನಾಟಕ ಸರ್ಕಾರ ಏನು ಕ್ರಮ ಕೈಗೊಂಡಿತ್ತೋ ಅದೇ ಕ್ರಮವನ್ನು ನಾವು ತೆಗೆದುಕೊಳ್ಳುತ್ತೇವೆ ಎಂದರು.

ಕುಡಿಯುವ ನೀರಿನ ಯೋಜನೆ ಸಾಕಾರಗೊಳ್ಳಲಿ
ಕನ್ನಡ ಕುಲಬಾಂಧವರಿರುವ ಜತ್ ತಾಲ್ಲೂಕಿನವರು ಹಲವಾರು ವರ್ಷಗಳಿಂದ ನೀರಿಲ್ಲದೆ ಬಳಲುತ್ತಿದ್ದರು. ಅಂತಹುದರಲ್ಲಿ ಮಹಾರಾಷ್ಟ್ರ ನೀರಿನ ಯೋಜನೆ ರೂಪಿಸಿದೆ ಎಂದಿದ್ದಾರೆ. ಆ ಯೋಜನೆ ಸಾಕಾರಗೊಳ್ಳಲಿ. ಆ ಭಾಗದ ಜನರಿಗೆ ನೀರು ತಲುಪುವ ಕೆಲಸವಾಗಲಿ ಎಂದರು.

ಪುತ್ಥಳಿ ಅನಾವರಣ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ರಾಮದುರ್ಗದ ಬಸವೇಶ್ವರ ವೃತ್ತದಲ್ಲಿ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಸಿಸಿ ಪಾಟೀಲ್, ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಬಿ.ಎ. ಬಸವರಾಜ ಹಾಗೂ ಸ್ಥಳೀಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ | Voter Data | ಅಲ್ಪಸಂಖ್ಯಾತ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿಲ್ಲ: ಸಿಎಂ ಬೊಮ್ಮಾಯಿ

Exit mobile version