ಸಿರಿಗೆರೆ(ಚಿತ್ರದುರ್ಗ): ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ ಶನಿವಾರ ಆಯೋಜಿಸಿದ್ದ ಶ್ರೀ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ 30ನೇ ಶ್ರದ್ಧಾಂಜಲಿ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಅವರು ಪಾಲ್ಗೊಂಡಿದ್ದರು.
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಪೀಠಾಧಿಪತಿ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು,
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಜೆ.ಸಿ.ಮಾಧುಸ್ವಾಮಿ, ಸಂಸದ ಜಿ.ಎಂ. ಸಿದ್ದೇಶ್ವರ ಸೇರಿದಂತೆ ಹಲವು ನಾಯಕರು ವೇಳೆ ಹಾಜರಿದ್ದರು.
ಈ ಕಾರ್ಯಕ್ರಮಕ್ಕೂ ಮೊದಲು ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಪೇಸಿಎಂ (PayCM) ಅಭಿಯಾನವು ಕಾಂಗ್ರೆಸ್ ಪಕ್ಷದ ನೈತಿಕ ಅದಃಪತನವನ್ನು ತೋರಿಸುತ್ತದೆ ಎಂದರು.
ಕಾಂಗ್ರೆಸ್ ಕೊಳಕು ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಈ ಅಭಿಯಾನದ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪೇಸಿಎಂ ಪೋಸ್ಟರ್ ಅಂಟಿಸಿದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಿರುದ್ಧವೂ ಕ್ರಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಇದೇ ವೇಳೆ ತಿಳಿಸಿದರು.
ಪಿಎಫ್ಐ ನಾಯಕರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ದಾಳಿ ಸಂಬಂಧ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪಿಎಫ್ಐ, ಎಸ್‌ಡಿಪಿಐ ಕಚೇರಿ, ಮುಖಂಡರ ಮನೆ ಮೇಲೆ ದಾಳಿ ನಡೆಸಿದ ಎನ್ಐಎ ಈಗಾಗಲೇ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು. ಕಾಂಗ್ರೆಸ್ ಲಿಂಗಾಯತ ಮುಖ್ಯಮಂತ್ರಿಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂಬ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ನಾನು ಇದರ ಭಾಗವಲ್ಲ ಮತ್ತು ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲಎಂದರು.
ಇದನ್ನೂ ಓದಿ |PayCM | ಪೇಸಿಎಂ ಪೋಸ್ಟರ್ ಅಂಟಿಸಿದ ಸಿದ್ದು, ಡಿಕೆಶಿ ವಿರುದ್ದ ಕಾನೂನು ಕ್ರಮ ಖಚಿತ ಎಂದ ಸಿಎಂ ಬೊಮ್ಮಾಯಿ