Site icon Vistara News

Siddheshwar swamiji | ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆಗೆ ಶಾಂತಿಯಿಂದ ಸಹಕರಿಸಿ ಎಂದು ಮನವಿ ಮಾಡಿದ ಸಿಎಂ ಬೊಮ್ಮಾಯಿ

Siddheshwar sri- CM Bommai

ಬೆಂಗಳೂರು: ಸೋಮವಾರ ನಿಧನರಾದ ವಿಜಯಪುರದ ಶ್ರೀ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ (Siddheshwar swamiji) ಎಲ್ಲಾ ಭಕ್ತರು ಶಾಂತಿ, ಸಂಯಮ ಹಾಗೂ ಶಿಸ್ತಿನಿಂದ ದರ್ಶನ ಪಡೆದು ಅಂತ್ಯಕ್ರಿಯೆಗೆ ಸಹರಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ. ಅವರು ಮಂಗಳವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ವಿಜಯಪುರ ಜಿಲ್ಲಾಡಳಿತ, ಎಲ್ಲಾ ಜನಪ್ರತಿನಿಧಿಗಳು, ಸಮಾಜದ ಮುಖಂಡ ಎಂ.ಬಿ.ಪಾಟೀಲ್, ಬಸನಗೌಡ ಪಾಟೀಲ್‌ ಯತ್ನಾಳ್‌, ಶಾಸಕರು ಎಲ್ಲರೂ ಸೇರಿ ಅಚ್ಚುಕಟ್ಟಾಗಿ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದರು.

ಸಿದ್ದೇಶ್ವರ ಶ್ರೀಗಳು ಒಂದು ಸಂಸ್ಕೃತಿಯನ್ನೇ ಬಿಟ್ಟುಹೋಗಿದ್ದಾರೆ
ವಿಜಯಪುರದ ಜನ ದೊಡ್ಡ ಪ್ರಮಾಣದಲ್ಲಿ ಸಹಕಾರ ನೀಡುತ್ತಿದ್ದಾರೆ. ಸಿದ್ದೇಶ್ವರ ಗುರುಗಳು ಎಷ್ಟು ಪ್ರೀತಿ, ವಿಶ್ವಾಸ ಹಾಗೂ ಸಂಸ್ಕೃತಿಯನ್ನೇ ಬಿಟ್ಟುಹೋಗಿದ್ದಾರೆ ಎನ್ನುವುದು ಅಲ್ಲಿನ ಜನತೆ ನಡೆದುಕೊಂಡ ರೀತಿಯನ್ನು ನೋಡಿದಾಗ ನಿಜವಾಗಿಯೂ ಸಿದ್ದೇಶ್ವರರ ಮಾತಿನಂತೆ ನಡೆದುಕೊಳ್ಳುವ ಜನ ಎಂದೆನಿಸಿದೆ. ಸಹಾಯ, ಸಹಕಾರ, ಊಟ, ತಿಂಡಿ, ನೀರು ನೀಡುತ್ತಿದ್ದಾರೆ. ಇದಕ್ಕಾಗಿ ವಿಜಯಪುರದ ಸಮಸ್ತ ಜನತೆಗೆ ಧನ್ಯವಾದಗಳನ್ನು ಮುಖ್ಯ ಮಂತ್ರಿಗಳು ತಿಳಿಸಿದರು.

ಮಧ್ಯಾಹ್ನ ೨.೪೦ಕ್ಕೆ ಸಿಎಂ ಅವರಿಂದ ಅಂತಿಮ ನಮನ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಧ್ಯಾಹ್ನ ೨.೪೦ಕ್ಕೆ ವಿಜಯಪುರ ತಲುಪಿ ಅಲ್ಲಿ ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ. ಅದೇ ಹೊತ್ತಿನಲ್ಲಿ ಸರ್ಕಾರಿ ಗೌರವವನ್ನು ಕೂಡಾ ನೀಡಲಾಗುತ್ತದೆ.

ಇದನ್ನೂ ಓದಿ | Siddheshwar Swamiji | ಸಿದ್ದೇಶ್ವರ ಶ್ರೀಗಳ ಜತೆಗಿನ ಒಡನಾಟ ನನ್ನ ಜೀವನದ ಅಮೃತ ಗಳಿಗೆ ಎಂದ ಸಿಎಂ ಬೊಮ್ಮಾಯಿ

Exit mobile version