Site icon Vistara News

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡನೆಗೆ ಕಾನೂನು ತಜ್ಞರ ನೇಮಕ ಎಂದ ಬೊಮ್ಮಾಯಿ

ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಸರ್ವೋಚ್ಚ ನ್ಯಾಯಾಲಯದಲ್ಲಿ ನವೆಂಬರ್ 23ರಂದು ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ವಿಷಯ ವಿಚಾರಣೆಗೆ ಬರಲಿದ್ದು, ರಾಜ್ಯದ ಪರವಾಗಿ ವಾದ ಮಂಡಿಸಲು ಅನುಭವಿ ಹಾಗೂ ಹಿರಿಯ ಕಾನೂನು ತಜ್ಞರ ತಂಡ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾತನಾಡಿದ ಅವರು, ಗಡಿವಿವಾದ ಕುರಿತು ಸಾಕಷ್ಟು ಅಧ್ಯಯನ ಸಹ ನಡೆಸಲಾಗಿದ್ದು, ವಾದ ಮಂಡನೆಗೆ ಹಿರಿಯ, ಅನುಭವಿ ವಕೀಲರನ್ನು ನೇಮಿಸಲು ಹಾಗೂ ಅಡ್ವೊಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ, ಅಗತ್ಯ ಸಲಹೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ವೃತ್ತಿಶಿಕ್ಷಣ ಪ್ರವೇಶಕ್ಕೆ ಸಿಇಟಿ ಅಂಕ ಪರಿಗಣನೆಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶ ಅಧ್ಯಯನ ಮಾಡಿ ವರದಿ ಸಲ್ಲಿಸಲು ಅಡ್ವೊಕೇಟ್ ಜನರಲ್ ಅವರಿಗೆ ನಿರ್ದೇಶನ ನೀಡಲಾಗಿದೆ. ಕಾನೂನು ತಜ್ಞರೊಂದಿಗೆ ಚರ್ಚಿಸಿ ಮೇಲ್ಮನವಿ ಸಲ್ಲಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಪೊಲೀಸ್ ಸಿಬ್ಬಂದಿಗೆ ಸಂಬಂಧಿಸಿದ ರಾಘವೇಂದ್ರ ಔರಾದ್ಕರ್ ವರದಿ ಅನುಷ್ಠಾನಗೊಳ್ಳುತ್ತಿದೆ. ಸಿಬ್ಬಂದಿಯೂ ಹೆಚ್ಚಿನ ಕೌಶಲ ಬೆಳೆಸಿಕೊಳ್ಳಬೇಕು. ಕಂಪ್ಯೂಟರ್ ಶಿಕ್ಷಣ ಕಡ್ಡಾಯಗೊಳಿಸಲಾಗಿದ್ದು, ಎಲ್ಲ ಇಲಾಖೆಯ ಸಿಬ್ಬಂದಿಗೂ ಇದು ಕಡ್ಡಾಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ | ಅರವಿಂದ ಲಿಂಬಾವಳಿ ಹೇಳಿಕೆ ವಿರೋಧಿಸಿ ಬೀದಿಗಿಳಿದ ಮಹಿಳಾ ಕಾಂಗ್ರೆಸ್‌

Exit mobile version