Site icon Vistara News

BJP Janasankalpa Yatre | ಬಿಜೆಪಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯಗೆ ಆಹ್ವಾನ: ಸಿಎಂ ಬೊಮ್ಮಾಯಿ

janaspandana CM bommai

ಚಿತ್ರದುರ್ಗ: ಜನಸಂಕಲ್ಪ ಯಾತ್ರೆಯಲ್ಲಿ ಎಷ್ಟು ಜನರು ಭಾಗವಹಿಸುತ್ತಿದ್ದಾರೆ ಎನ್ನುವುದನ್ನು ನೋಡಿ ತಿಳಿದುಕೊಳ್ಳಲು ಸಿದ್ದರಾಮಯ್ಯ ಅವರಿಗೇ ಆಹ್ವಾನ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಾಣೇಹಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಜನಸಂಕಲ್ಪ ಯಾತ್ರೆಯಲ್ಲಿ ಜನರೇ ಸೇರುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡುತ್ತೇನೆ, ಬಂದು ನೋಡಲಿ ಎಂದರು. ಮಾಧ್ಯಮದಲ್ಲಿ ತೋರಿಸುವ ಜನಸಾಗರವೇ ಉತ್ತರ. ಜನಸಂಕಲ್ಪ ಯಾತ್ರೆ, ವಿಜಯಸಂಕಲ್ಪವಾಗಿ ಪರಿವರ್ತನೆಯಾಗಲಿದೆ ಎಂದರು.

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ಎಂದು ಅರ್ಜಿ ಬಂದಿರುವ ಕುರಿತು ಪ್ರತಿಕ್ರಿಯಿಸಿ, ನೇಮಿಸುವ ಪೂರ್ವದಲ್ಲಿ ಏನು ನಡೆದಿದೆ ಎನ್ನುವುದರ ಬಗ್ಗೆ ನ್ಯಾಯ ಸಮ್ಮತ ಪ್ರಕ್ರಿಯೆ ನಡೆಯುತ್ತಿದ್ದು, ಕಂದಾಯ ಇಲಾಖೆಯಿಂದ ಸ್ಥಿತಿಗತಿಗಳ ಬಗ್ಗೆ ವರದಿ ಕೇಳಿದ್ದು, ವರದಿ ಬಂದ ನಂತರ ನಿರ್ಧರಿಸಲಾಗುವುದು ಎಂದು ತಿಳಿಸಿದರು.

ಮುರುಘಾ ಶ್ರೀ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ವ್ಯಾಖ್ಯಾನ ಮಾಡುವುದಿಲ್ಲ. ನ್ಯಾಯಾಲಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ನಂಬಿಕೆಗಳಿಗೆ ಕೊಡಲಿ ಏಟು ಕೊಡುವ ಕೆಲಸ
ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಶತಮಾನಗಳಿಂದ ಯಾವುದೇ ಧರ್ಮ ನಡೆಯುವುದು ನಂಬಿಕೆ, ವಿಶ್ವಾಸದ ಮೇಲೆ ಸ್ಥಾಪಿತವಾಗಿರುವ ನಂಬಿಕೆಗಳಿಗೆ ಕೊಡಲಿ ಏಟು ಕೊಡುವ ಕೆಲಸ ಮಾಡಿದ್ದಾರೆ. ಅದರ ಮೇಲೆ ಚರ್ಚೆ ಮಾಡುವುದೇನಿದೆ? ತಾಂತ್ರಿಕವಾಗಿ ಅವರ ಶಾಲಾ, ಕಾಲೇಜುಗಳ ಪ್ರಮಾಣಪತ್ರದಲ್ಲಿ ಹಿಂದು ಎಂದೇ ನಮೂದಾಗಿದೆ. ನಂಬಿಕೆಗಳು ಶತಮಾನಗಳಿಂದ ಇದೆ. ಜನರ ನಂಬಿಕೆಯನ್ನು ಘಾಸಿ ಮಾಡುವಂಥ ಕೆಲಸ ಮಾಡಿ ಪುನಃ ಚರ್ಚೆ ಮಾಡುವುದು ಏನೂ ಇಲ್ಲ. ಅವರ ಕ್ಷಮೆಯೂ ಬೇಕಾಗಿಲ್ಲ. ಜನ ತೀರ್ಮಾನ ಮಾಡುತ್ತಾರೆ ಎಂದರು.

ಇದನ್ನೂ ಓದಿ | Satish Jarakiholi | ಹಿಂದು ಪದದ ಕುರಿತು ʼಕೀಳುʼ ಮಾತಿಗೆ ಸತೀಶ್‌ ಜಾರಕಿಹೊಳಿ ಬಿಡುಗಡೆ ಮಾಡಿದ ದಾಖಲೆ ಇಲ್ಲಿದೆ

Exit mobile version