Site icon Vistara News

CM Bommai | ಕೇಂದ್ರ ಜಲಶಕ್ತಿ ಸಚಿವರ ಜತೆ ಸಿಎಂ ಬೊಮ್ಮಾಯಿ ಚರ್ಚೆ: ರಾಜ್ಯದ ಯೋಜನೆಗಳಿಗೆ ಶೀಘ್ರ ಅನುಮತಿ ಕೋರಿಕೆ

Shekhawath bommai

ನವ ದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚಿಸಿದರು.

ಭದ್ರಾ ಮೇಲ್ದಂಡೆ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ, ಕಳಸಾ ಬಂಡೂರಿ ಯೋಜನೆ ಹಾಗೂ ಮೇಕೆದಾಟು ಯೋಜನೆಗಳ ಕುರಿತು ಈ ವೇಳೆ ಚರ್ಚೆ ನಡೆಯಿತು. ರಾಜ್ಯದ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ದೊರೆಯ ಬೇಕಾದ ತೀರುವಳಿಗಳನ್ನು ಶೀಘ್ರವೇ ಒದಗಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆ ತೀವ್ರಗತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ರಾಸಾಯನಿಕ, ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ರಾಜ್ಯ ಸಚಿವರಾದ ಭಗವಂತ ಖೂಬ, ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ,ಮುಖ್ಯಮಂತ್ರಿಗಳ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ನಗರಾಭಿವೃದ್ಧಿ ಇಲಾಖೆ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು.

ಫಾಲಿ ನಾರಿಮನ್‌ ಜತೆಗೂ ಮಾತುಕತೆ

ಬಸವರಾಜ ಬೊಮ್ಮಾಯಿ ಅವರು ಹಿರಿಯ ವಕೀಲ ಫಾಲಿ ಎಸ್‌. ನಾರಿಮನ್‌ ಅವರನ್ನೂ ಭೇಟಿಯಾಗಿ, ಸೌಹಾರ್ದಯುತ ಮಾತುಕತೆ ನಡೆಸಿದರು. “ರಾಜ್ಯಕ್ಕೆ 5 ದಶಕಗಳ ಕಾಲ ಸೇವೆ ಸಲ್ಲಿಸಿರುವ ನಾರಿಮನ್ ಅವರು ಕರ್ನಾಟಕದ ನೀರಿನ ಹಿತರಕ್ಷಣೆ ಮಾಡಿದ್ದಾರೆ. ಈಗಲೂ ಅವರ ಸಲಹೆ ಸೂಚನೆಗಳಿಗೆ ಮೌಲ್ಯ ಇದೆ. ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ, ಎಸ್.ಆರ್.ಬೊಮ್ಮಾಯಿ ಎಚ್.ಡಿ.ದೇವೇಗೌಡರ ಕಾಲದಲ್ಲಿ ಅವರು ಅನನ್ಯ ಸೇವೆ ಸಲ್ಲಿಸಿದ್ದಾರೆ” ಎಂದು ಹೇಳಿದರು. “ಇದೊಂದು ಸೌಜನ್ಯದ ಭೇಟಿಯಾಗಿದ್ದು ಅವರಿಗೆ ಧನ್ಯವಾದ ಹೇಳಲು ತೆರಳಿದ್ದೆ. ಗಡಿ, ಜಲ ವಿವಾದದ ಬಗ್ಗೆ ಯಾವುದೇ ವಿಶೇಷ ಚರ್ಚೆ ಮಾಡಿಲ್ಲ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ | PM Mitra Scheme | 3 ಜಿಲ್ಲೆಗಳಲ್ಲಿ ಮೆಗಾ ಜವಳಿ ಪಾರ್ಕ್ ಸ್ಥಾಪನೆಗೆ ಅನುದಾನ ನೀಡಲು ಕೇಂದ್ರಕ್ಕೆ ಸಿಎಂ ಬೊಮ್ಮಾಯಿ ಮನವಿ

Exit mobile version