Site icon Vistara News

ಸುಳ್ಯದ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

CM basavaraja bommai

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಅವರ ಹತ್ಯೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.

” ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದಲ್ಲಿ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ನಡೆದಿರುವುದು ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿʼʼ ಎಂದು ಬಸವರಾಜ ಬೊಮ್ಮಾಯಿ ಅವರು ಟ್ವೀಟ್‌ ಮಾಡಿದ್ದಾರೆ.

ಬೆಳ್ಳಾರೆ ಮಾಸ್ತಿಕಟ್ಟೆಯಲ್ಲಿ ಚಿಕನ್ ಸೆಂಟರ್ ನಡೆಸುತ್ತಿದ್ದ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು (೨೯) ಅವರನ್ನು ಅವರ ಅಂಗಡಿಯಲ್ಲಿಯೇ ಹತ್ಯೆ ಮಾಡಲಾಗಿದೆ. ಬೈಕ್‌ನಲ್ಲಿ ಬಂದಿದ್ದ ಮೂವರು ಅವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಕ್ಷುಲ್ಲಕ ಕಾರಣಕ್ಕೆ ಮಸೂದ್ ಎಂಬ ಯುವಕನ ಮೇಲೆ ಹಲ್ಲೆ ನಡೆದಿದ್ದು ಚಿಕಿತ್ಸೆ ಫಲಕಾರಿಯಾಗದೆ ಆತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಎಂಟು ಜನ ಹಿಂದೂ ಸಂಘಟನೆಯ ಕಾರ್ಯಕರ್ತರು ಮಸೂದ್ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಜೈಲು ಸೇರಿದ್ದಾರೆ. ಈ ಪ್ರಕರಣಕ್ಕೆ ಪ್ರತಿಕಾರವಾಗಿ ಈ ಹತ್ಯೆ ನಡೆದಿರಬಹುದು ಎಂದು ಅನುಮಾನಿಸಲಾಗುತ್ತಿದೆ.

Exit mobile version