ಕೊಡಗು: ಜಿಲ್ಲೆಯ ಕರ್ತೋಜಿಯಲ್ಲಿ ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಉಬ್ಬುತ್ತಿದ್ದ ಜಾಗ ಮತ್ತು ಗುಡ್ಡ ಕುಸಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ಹೆದ್ದಾರಿಗೆ ಹಾನಿಯಾಗುತ್ತಿರುವ ಬಗ್ಗೆ ಅಧಿಕಾರಿಗಳಿಂದ ಸಿಎಂ ಮಾಹಿತಿ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ತೀವ್ರ ಮಳೆಗೆ ಬೆಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಕರ್ತೋಜಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಉಬ್ಬುತ್ತಿದೆ. ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿ ರಸ್ತೆ ದುರಸ್ತಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯದ ಮಲೆನಾಡು ಮತ್ತು ಕರಾವಳಿಯಲ್ಲಿ ಸಾಕಷ್ಟು ಮಳೆಯಾಗಿದೆ. ಹೀಗಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಬಯಲು ಸೀಮೆಯ ನದಿ ಪಾತ್ರದಲ್ಲಿ ಮಾತ್ರ ಪ್ರವಾಹದ ಸ್ಥಿತಿ ಇದೆ. ಉಳಿದಂತೆ ಯಾವುದೇ ಸಮಸ್ಯೆ ಆಗಿಲ್ಲ ಎಂದು ತಿಳಿಸಿದರು.
ಇದಕ್ಕೂ ಮುನ್ನಾ ಜಿಲ್ಲೆಯ ಕೊಯನಾಡುವಿನ ಗಣಪತಿ ದೇವಾಲಯದ ಸಮುದಾಯಭನದಲ್ಲಿ ಇರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದ ಸಿಎಂ, ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಸಂತ್ರಸ್ತರಿಗೆ ಎಲ್ಲ ಸೌಲಭ್ಯ ಒದಗಿಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಯಸ್ವಿನಿ ನದಿ ಪ್ರವಾಹ ಉಂಟಾಗಿದ್ದರಿಂದ ಸಂತ್ರಸ್ತರು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿದ್ದಾರೆ.
ಇದನ್ನೂ ಓದಿ | Rain News| ಭೀಕರ ಮಳೆಗೆ ಬೀಳುತ್ತಿವೆ ಮನೆಗಳು, ತತ್ತರಿಸುತ್ತಿದೆ ಬದುಕು