Site icon Vistara News

CM Siddaramaiah: ಅಪ್ರಾಪ್ತ ಹೆಣ್ಣುಮಕ್ಕಳ ಮದುವೆ ಹೆಚ್ಚಳ; ಅಧಿಕಾರಿಗಳಿಗೆ ಸಿಎಂ ತರಾಟೆ

CM Siddaramaiah Meeting

ಕೋಲಾರ: ಅಪ್ರಾಪ್ತ ಹೆಣ್ಣುಮಕ್ಕಳ ಮದುವೆಗೆ ಕಡಿವಾಣ ಹಾಕದ ಅಧಿಕಾರಿಗಳನ್ನು ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ತರಾಟೆ ತೆಗೆದುಕೊಂಡ ಪ್ರಸಂಗ ಬುಧವಾರ ನಡೆಯಿತು. ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮದುವೆ ಪ್ರಮಾಣ ಹೆಚ್ಚಾಗಿದ್ದು ಹೇಗೆ ಎಂದು ಪತ್ರಿಕಾ ವರದಿ ತೋರಿಸಿ ಅಧಿಕಾರಿಗಳನ್ನು ಸಿಎಂ ಪ್ರಶ್ನಿಸಿದ್ದಾರೆ. ಈ ವೇಳೆ ಅಧಿಕಾರಿಗಳಿಂದ ಸಮರ್ಪಕ ಉತ್ತರ ಬರದಿದ್ದಾಗ, ಇಂತಹ ಘಟನೆಗಳು ಮರುಕಳಿಸಿದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಖಚಿತ ಎಂದು ಸಿಎಂ (CM Siddaramaiah) ಎಚ್ಚರಿಕೆ ನೀಡಿದರು.

ಇದೇ ವೇಳೆ ಭ್ರೂಣ ಹತ್ಯೆಗಳನ್ನು ತಪ್ಪಿಸಬೇಕು ಎಂದು ಎಸ್ಪಿಗೆ ಸಿಎಂ ಸೂಚಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು ನಿಯಮ ಉಲ್ಲಂಘಿಸಿದವರ ಮೇಲೆ ಎಫ್‌ಐಆರ್ ದಾಖಲಾಗಿದೆ ಎಂದು ಮಾಹಿತಿ ನೀಡಿದರು. ಇನ್ನು ಬರಗಾಲ, ಕುಡಿಯುವ ನೀರು, ಗ್ರಾಮೀಣಾಭಿವೃದ್ಧಿ, ಕೆ.ಸಿ.ವ್ಯಾಲಿ, ಯರಗೋಳ್ ಕುಡಿಯುವ ನೀರಿನ ಯೋಜನೆ, ಸಮಾಜ ಕಲ್ಯಾಣ ಇಲಾಖೆ, ಕಾನೂನು ಸುವ್ಯವಸ್ಥೆ ಕುರಿತಾಗಿ ಸಭೆಯಲ್ಲಿ ಆದ್ಯತೆ ಮೇಲೆ ಚರ್ಚೆ ನಡೆಸಲಾಯಿತು.

ಇದನ್ನೂ ಓದಿ | ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ಸಿಎಸ್‌ಆರ್‌ ನಿಧಿ; 100 ಕೋಟಿ ಒಪ್ಪಂದಕ್ಕೆ ಆರೋಗ್ಯ ಇಲಾಖೆ ಸಹಿ

ಸಭೆಯಲ್ಲಿ ಸಿಎಂ ನೀಡಿದ ಸೂಚನೆಗಳು

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version