ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಈಗ ಸಾರ್ವಜನಿಕರಿಂದ ಬರುವ ಸಾಮಾಜಿಕ ಹಿತಾಸಕ್ತಿಯ ವಿಚಾರಗಳಿಗೆ (Subjects of Social interest) ತ್ವರಿತವಾಗಿ ಸ್ಪಂದಿಸುವ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ. ಇತ್ತೀಚೆಗೆ ಬಾಲಕನೊಬ್ಬ ಶಾಲೆ ಬಿಟ್ಟು ಕುರಿಗಾಹಿಯಾಗಿದ್ದಾನೆ ಎಂಬ ಸುದ್ದಿ ತಿಳಿಯುತ್ತಲೇ ಅಧಿಕಾರಿಗಳನ್ನು ಕಳುಹಿಸಿ ಶಾಲೆಗೆ ಸೇರಿಸುವ ವ್ಯವಸ್ಥೆ ಮಾಡಿಸಿದ್ದರು. ಇದೀಗ ಮಕ್ಕಳಿಗೆ ಸಂಬಂಧಿಸಿದ ಇನ್ನೊಂದು ಸಮಸ್ಯೆ ಬಗೆಹರಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ (Dakshina Kannada News ಕಡಬ ತಾಲೂಕು ಕೈಕಂಬದ ಸರ್ಕಾರಿ ಶಾಲೆಯಲ್ಲಿ (Kaikamba Govrnment School) ಕಲಿಯುತ್ತಿರುವ ಪುಟಾಣಿ ಅಯಾರ ತನ್ನ ಶಾಲೆಯ ಪಕ್ಕದ ಅಂಗಡಿಗಳಲ್ಲಿ ತಂಬಾಕು ಮಾರಾಟ (Tobacco products being sold) ಮಾಡಲಾಗುತ್ತಿದೆ. ಇದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿಗೆ ಪತ್ರ (Letter to CM) ಬರೆದಿದ್ದಳು. ಮುಖ್ಯಮಂತ್ರಿ ಕಾರ್ಯಾಲಯದಿಂದ (CM Office) ತ್ವರಿತವಾಗಿ ಸ್ಪಂದಿಸಿ ಅಧಿಕಾರಿಗಳನ್ನು ಅಂಗಡಿಗೆ ಕಳುಹಿಸಿ ಕ್ರಮ ಕೈಗೊಳ್ಳಲಾಗಿದೆ. ಈ ವಿಚಾರವನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಟ್ವೀಟ್ ಮಾಡಿದ್ದಾರೆ.
ಸಿದ್ದರಾಮಯ್ಯ ಅವರು ಹಂಚಿಕೊಂಡಿರುವ ವಿಷಯ ಇಂತಿದೆ.
ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕು ಕೈಕಂಬದ 3ನೇ ತರಗತಿಯಲ್ಲಿ ಓದುವ ಪುಟ್ಟ ಬಾಲಕಿ ಅಯಾರ ತನ್ನ ಶಾಲೆಯ ಸಮೀಪದ ಅಂಗಡಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುತ್ತಿದ್ದಾರೆ, ಇದನ್ನು ನಿಲ್ಲಿಸಬೇಕು ಎಂದು ನಮಗೆ ಪತ್ರ ಬರೆದು ಮನವಿ ಮಾಡಿದ್ದಳು. ಬಾಲಕಿಯ ಸಮಸ್ಯೆ ಚಿಕ್ಕದಾದರೂ ಕಾನೂನಿನ ಬಗ್ಗೆ ಆಕೆಗಿರುವ ಅರಿವು ಮತ್ತು ಅಕ್ರಮದ ವಿರುದ್ಧ… pic.twitter.com/ZagZXcbDie
— CM of Karnataka (@CMofKarnataka) September 30, 2023
ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕು ಕೈಕಂಬದದ 3ನೇ ತರಗತಿಯಲ್ಲಿ ಓದುವ ಪುಟ್ಟ ಬಾಲಕಿ ಅಯಾರ ತನ್ನ ಶಾಲೆಯ ಸಮೀಪದ ಅಂಗಡಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುತ್ತಿದ್ದಾರೆ, ಇದನ್ನು ನಿಲ್ಲಿಸಬೇಕು ಎಂದು ನಮಗೆ ಪತ್ರ ಬರೆದು ಮನವಿ ಮಾಡಿದ್ದಳು. ಬಾಲಕಿಯ ಸಮಸ್ಯೆ ಚಿಕ್ಕದಾದರೂ ಕಾನೂನಿನ ಬಗ್ಗೆ ಆಕೆಗಿರುವ ಅರಿವು ಮತ್ತು ಅಕ್ರಮದ ವಿರುದ್ಧ ಧ್ವನಿಯೆತ್ತುವ ಧೈರ್ಯ ಕಂಡು ಖುಷಿಯಾಯಿತು. ಬಾಲಕಿಯ ಪತ್ರ ತಲುಪಿದ ಕೆಲವೇ ಕೆಲವು ಗಂಟೆಗಳ ಒಳಗೆ ನಮ್ಮ ಕಚೇರಿಯ ಸಾರ್ವಜನಿಕ ಕುಂದುಕೊರತೆಗಳ ವಿಭಾಗದ ವಿಶೇಷಾಧಿಕಾರಿಗಳು ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದ್ದಾರೆ. ಕೂಡಲೆ ಅಧಿಕಾರಿಗಳ ತಂಡ ಅಕ್ರಮವಾಗಿ ತಂಬಾಕು ಉತ್ಪನ್ನಗಳನ್ನು ಮಾರುತ್ತಿದ್ದ ಸ್ಥಳಕ್ಕೆ ತೆರಳಿ, ತಪ್ಪಿತಸ್ಥನಿಗೆ ದಂಡ ವಿಧಿಸಿ, ಎಚ್ಚರಿಕೆ ನೀಡಿದೆ.
ಬಾಲಕಿಯ ಕೋರಿಕೆ ಚಿಕ್ಕದಾದರೂ ಸರ್ಕಾರ ತಮ್ಮ ಅಹವಾಲನ್ನೂ ಆಲಿಸಿ, ಸಮಸ್ಯೆ ಬಗೆಹರಿಸುತ್ತದೆ ಎಂಬ ವಿಶ್ವಾಸ ಮಕ್ಕಳಲ್ಲಿ ಬಂದರೆ ತಮ್ಮ ಸುತ್ತಮುತ್ತ ನಡೆಯುವ ಅಕ್ರಮ, ಅನ್ಯಾಯಗಳನ್ನು ಖಂಡಿಸುತ್ತಾರೆ. ಅವರಲ್ಲಿ ಈ ಆತ್ಮಸ್ಥೈರ್ಯ ತುಂಬುವುದು ನಮ್ಮ ಜವಾಬ್ದಾರಿಯಾಗಿದೆ- ಎಂದು ಸಿಎಂ ಅವರು ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: CM Siddaramaiah : ಮಧು ಬಂಗಾರಪ್ಪರನ್ನು ಮತ್ತೆ ಶಾಲೆಗೆ ಸೇರಿಸಿದ ಸಿಎಂ ಸಿದ್ದರಾಮಯ್ಯ!