ಯಾದಗಿರಿ: ಸುರಪುರದ ಕಾಂಗ್ರೆಸ್ ಶಾಸಕ ರಾಜ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ (Raja Venkatappa Nayaka) ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಿಬಾರದ ನಷ್ಟ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ.
ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ.
— Siddaramaiah (@siddaramaiah) February 25, 2024
ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ… pic.twitter.com/Fls5GfaRGs
ಮಲ್ಲಿಕಾರ್ಜುನ ಖರ್ಗೆ ಸಂತಾಪ
ಶಾಸಕ ರಾಜಾವೆಂಕಟಪ್ಪ ನಾಯಕ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದ್ದು, ರಾಜ ವೆಂಕಟಪ್ಪ ನಾಯಕ ನಿಧನದಿಂದ ಮನಸ್ಸಿಗೆ ಅತೀವ ನೋವಾಗಿದೆ. ಅವರ ನಿಧನದಿಂದ ಕಲಬುರಗಿ ವಿಭಾಗದ ಪಕ್ಷದ ಕಾರ್ಯಕರ್ತರಿಗೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಸ್ಥರಿಗೆ ಭಗವಂತ ದು:ಖವನ್ನು ಸಹಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ | Death News : ಹಿರಿಯ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಇನ್ನಿಲ್ಲ
ಶಾಸಕರ ನಿಧನ ಸುದ್ದಿ ಕೇಳಿ ಬಹಳ ನೋವುಂಟಾಯಿತು: ಎಚ್‌ಡಿಕೆ
ಸುರಪುರ ವಿಧಾನಸಭೆ ಕ್ಷೇತ್ರದ ಶಾಸಕರಾದ ಶ್ರೀ ರಾಜಾ ವೆಂಕಟಪ್ಪ ನಾಯಕ ಅವರ ನಿಧನದ ವಾರ್ತೆ ಕೇಳಿ ನನಗೆ ಬಹಳ ನೋವುಂಟಾಯಿತು. ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ನಾಯಕರು, ಜನಾನುರಾಗಿಗಳೂ ಆಗಿದ್ದ ಅವರ ನಿಧನ ರಾಜ್ಯ ರಾಜಕಾರಣಕ್ಕೆ ಆಗಿರುವ ಬಹುದೊಡ್ಡ ನಷ್ಟ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಭಿಮಾನಿಗಳು, ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಸುರಪುರ ವಿಧಾನಸಭೆ ಕ್ಷೇತ್ರದ ಶಾಸಕರಾದ ಶ್ರೀ ರಾಜಾ ವೆಂಕಟಪ್ಪ ನಾಯಕ ಅವರ ನಿಧನದ ವಾರ್ತೆ ಕೇಳಿ ನನಗೆ ಬಹಳ ನೋವುಂಟಾಯಿತು. ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ನಾಯಕರು, ಜನಾನುರಾಗಿಗಳೂ ಆಗಿದ್ದ ಅವರ ನಿಧನ ರಾಜ್ಯ ರಾಜಕಾರಣಕ್ಕೆ ಆಗಿರುವ ಬಹುದೊಡ್ಡ ನಷ್ಟ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 25, 2024
ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಭಿಮಾನಿಗಳು, ಕುಟುಂಬದ ಸದಸ್ಯರಿಗೆ… pic.twitter.com/ZYeM6DCM7a
ಸೋಮವಾರ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ
ನಾಲ್ಕು ಬಾರಿ ಶಾಸಕರಾಗಿದ್ದ ರಾಜ ವೆಂಕಟಪ್ಪ ನಾಯಕ ಅವರು ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ನಾಯಕ ಅವರು ಕಟ್ಟಾ ಕಾಂಗ್ರೆಸ್ ನಾಯಕನಾಗಿಯೇ ಮುಂದುವರಿದಿದ್ದರು. ಕೆಲವು ದಿನದ ಹಿಂದಷ್ಟೇ ಉಗ್ರಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ | H D Deve Gowda: ಎಚ್.ಡಿ.ದೇವೇಗೌಡರಿಗೆ ‘ಮಣ್ಣಿನ ಮಗ’ ಕೃತಿಯ ಪ್ರಥಮ ಪ್ರತಿ; ಫೆ.29ರಂದು ಬಿಡುಗಡೆ
ರಾಜಾ ವೆಂಕಟಪ್ಪ ನಾಯಕ ಅವರ ಅಂತಿಮ ದರ್ಶನಕ್ಕಾಗಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಆಸ್ಪತ್ರೆಗೆ ತೆರಳಲಿದ್ದಾರೆ. ಸೋಮವಾರ (ಫೆ. 26) ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.