CM Siddaramaiah: ರಾಷ್ಟ್ರಪತಿಗೆ ಏಕವಚನ ಪ್ರಯೋಗ; ಸಿದ್ದರಾಮಯ್ಯ ಕ್ಷಮೆಯಾಚನೆ - Vistara News

ಕರ್ನಾಟಕ

CM Siddaramaiah: ರಾಷ್ಟ್ರಪತಿಗೆ ಏಕವಚನ ಪ್ರಯೋಗ; ಸಿದ್ದರಾಮಯ್ಯ ಕ್ಷಮೆಯಾಚನೆ

CM Siddaramaiah: ರಾಷ್ಟ್ರದ ಪ್ರಥಮ ಪ್ರಜೆ ಕುರಿತು ಏಕವಚನ ಬಳಸಿದ್ದಕ್ಕೆ ವಿಪಕ್ಷ ನಾಯಕರು ಆಕ್ರೋಶ ಹೊರಹಾಕಿದ್ದರು. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಕ್ಷಮೆಯಾಚಿಸಿದ್ದಾರೆ.

VISTARANEWS.COM


on

droupadi murmu and siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಏಕವಚನ ಪ್ರಯೋಗ ಮಾಡಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕ್ಷಮೆಯಾಚಿಸಿದ್ದಾರೆ. ರಾಷ್ಟ್ರದ ಪ್ರಥಮ ಪ್ರಜೆ ಕುರಿತು ಏಕವಚನ ಬಳಸಿದ್ದಕ್ಕೆ ವಿಪಕ್ಷ ನಾಯಕರು ಆಕ್ರೋಶ ಹೊರಹಾಕಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ (CM Siddaramaiah) ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ ಬಿಜೆಪಿ ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು, ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು. ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ‌ ಸಂಭೋದಿಸಿದೆ.

ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಅಪ್ಪ-ಅಮ್ಮ ಸೇರಿದಂತೆ ಹಿರಿಯರನ್ನು ಕೂಡ ಏಕವಚನದಲ್ಲಿ ಸಂಭೋದಿಸುವುದು ರೂಢಿ. ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ‌ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದರು?

ಚಿತ್ರದುರ್ಗದಲ್ಲಿ ಭಾನುವಾರ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕನ್ನು ಟೀಕಿಸುತ್ತಾ, ರಾಷ್ಟ್ರಪತಿ ದ್ರೌಪದಿ ಮುರ್ಮು… ಶೋಷಿತ ಸಮುದಾಯಕ್ಕೆ ಸೇರಿದವಳು… ಅವರು ಸಂವಿಧಾನದ ರಕ್ಷಕರು(custodian of constitution), ಅವಳನ್ನು ನೂತನ ಸಂಸತ್‌ ಭವನ ಉದ್ಘಾಟನೆ ಹಾಗೂ ರಾಮಮಂದಿರ ಉದ್ಘಾಟನೆಗೆ ಕರೆಯಲಿಲ್ಲ. ಇವರ ಯೋಗ್ಯತೆಗೆ ನನ್ನ ವಿರುದ್ಧ ಮಾತನಾಡುತ್ತಾರೆ ಎಂದು ಕಿಡಿಕಾರಿದ್ದರು. ಹೀಗಾಗಿ ರಾಷ್ಟ್ರಪತಿಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡಿ ಅಪಮಾನ ಮಾಡಿದ್ದಾರೆ ಎಂದು ವಿಪಕ್ಷಗಳ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ | Hanuman Flag: ಕೆರಗೋಡಿನಲ್ಲಿ ಉದ್ವಿಗ್ನ ಸ್ಥಿತಿ; ಆರ್‌.ಅಶೋಕ್‌ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

HD Kumaraswamy: ರಾಷ್ಟ್ರಪತಿಗಳನ್ನು ʼಅವಳುʼ ಎಂದ ಸಿದ್ದರಾಮಯ್ಯ; ಆಚಾರಗೆಟ್ಟ ಸಿಎಂ ಎಂದು ಎಚ್‌ಡಿಕೆ ಕಿಡಿ

Siddaramaiah and HD Kumaraswamy

ಬೆಂಗಳೂರು: ಚಿತ್ರದುರ್ಗದಲ್ಲಿ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧನೆ ಮಾಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ, ರಾಷ್ಟ್ರಪತಿಗಳಿಗೆ ಅಪಚಾರ ಎಸಗಿರುವ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು, ಇಲ್ಲವೇ ಅವರನ್ನು ಆ ಸ್ಥಾನದಿಂದ ವಜಾ ಮಾಡಬೇಕು ಎಂದು ರಾಜ್ಯಪಾಲರನ್ನು ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ | Karnataka Drought: ರೈತರಿಗೆ ಬರ ಪರಿಹಾರ ಕೊಡದ ಟೋಪಿ ಸಿದ್ದರಾಮಯ್ಯ; ನಾಳೆ ಕೋಲಾರದಲ್ಲಿ ಪ್ರತಿಭಟನೆ ಎಂದ ಅಶೋಕ್‌

ಆಚಾರಗೆಟ್ಟ ಮುಖ್ಯಮಂತ್ರಿ

ರಾಷ್ಟ್ರಪತಿಗಳು, ದೇಶದ ಪ್ರಥಮ ಪ್ರಜೆ ಆಗಿರುವ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ತುಚ್ಛವಾಗಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಿಗೆಯ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು ಎಂದಿರುವ ಕುಮಾರಸ್ವಾಮಿ ಅವರು, ಸಿಎಂ ಬಳಸಿರುವ ಪದವನ್ನು ಬರೆಯಲಾರೆ ಎಂದು ಎಂದಿದ್ದಾರಲ್ಲದೆ, ಸಿದ್ದರಾಮಯ್ಯ ಆಚಾರಗೆಟ್ಟ ಮುಖ್ಯಮಂತ್ರಿ ಎಂದು ಕಟುವಾಗಿ ಟೀಕಿಸಿದ್ದಾರೆ.

ಈ ಡೋಂಗೀ ಪ್ರಜಾಪ್ರಭುತ್ವವಾದಿಯ ಅಸಲಿ ಮುಖ ಕಳಚಿಬಿದ್ದಿದೆ. ಒಂದು ಕ್ಷಣವೂ ಮುಖ್ಯಮಂತ್ರಿ ಪದವಿಯಲ್ಲಿ ಇರಲು ಅವರು ಅರ್ಹರಲ್ಲ. ಕೂಡಲೇ ತಾವೆಸಗಿರುವ ಅಪಚಾರಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಅಥವಾ ಮಾನ್ಯ ರಾಜ್ಯಪಾಲರೇ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕಿತ್ತೆಸೆಯಬೇಕು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಶೋಷಿತರ ಜಾಗೃತಿ ಸಮಾವೇಶದಲ್ಲೇ ಅಪಮಾನ

ಆಚಾರವಿಲ್ಲದ ನಾಲಿಗೆ, ನಿನ್ನ ನೀಚಬುದ್ಧಿಯ ಬಿಡು ನಾಲಿಗೆ ಎಂದು ದಾಸರು ಹೇಳಿದ್ದಾರೆ. ಸಿದ್ದರಾಮಯ್ಯಗೆ ಆಚಾರ ಹತ್ತಿರಕ್ಕೂ ಸುಳಿಯದ ವಿಚಾರ. ಶೋಷಿತ ಬುಡಕಟ್ಟು ಸಮುದಾಯದಿಂದ ಬಂದ ದೇಶದ ಮೊತ್ತ ಮೊದಲ ರಾಷ್ಟ್ರಪತಿಗಳು, ಅದರಲ್ಲಿಯೂ ಮಹಿಳೆ.. ಶೋಷಿತರ ಜಾಗೃತಿ ಸಮಾವೇಶದಲ್ಲೇ ಅವರಿಗೆ ಮುಖ್ಯಮಂತ್ರಿ ಅಪಮಾನ ಎಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಕೀಲರಂತೆ, ಸ್ವಯಂಘೋಷಿತ ಸಂವಿಧಾನ ತಜ್ಞರಂತೆ.. ನಾಚಿಕೆಯಾಗಬೇಕು ಇವರಿಗೆ. ಸಾರ್ವಜನಿಕ ವೇದಿಕೆಯಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಮುಖ್ಯಮಂತ್ರಿಯೊಬ್ಬರು ಸಂಬೋಧಿಸುವ ರೀತಿಯೇ ಇದು. ಸಿದ್ದರಾಮಯ್ಯನವರ ನಡವಳಿಕೆ ಕರ್ನಾಟಕಕ್ಕೆ ಅಂಟಿದ ಅಳಿಸಲಾಗದ ಕಳಂಕ. ಅವರ ಈ ಕೀಳುಮಾತು ದೇಶಕ್ಕೆ, ಸಂವಿಧಾನಕ್ಕೆ ಆಗಿರುವ ಘೋರ ಅಪಚಾರ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದ್ದಾರೆ.

ಶನಿವಾರದಂದು ಚಾಮರಾಜನಗರದಲ್ಲಿ ಇದೇ ಸಿದ್ದರಾಮಯ್ಯನವರ ಸುಪುತ್ರ ಯತೀಂದ್ರ ಭಾಷಣ ಮಾಡುತ್ತಿದ್ದಾಗ ಯಾರೋ ಒಬ್ಬರು ಏಕವಚನದಲ್ಲಿ ಪ್ರಶ್ನಿಸಿದರೆಂಬ ಕಾರಣಕ್ಕೆ ಪೊಲೀಸರು ಆತನನ್ನು ಅಟ್ಟಾಡಿಸಿಕೊಂಡು ಹೋಗಿ ಬಂಧಿಸಿ ದರದರನೇ ಎಳೆದುಕೊಂಡು ಹೋದರು. ಹಾಗಿದ್ದರೆ, ರಾಷ್ಟ್ರಪತಿಗಳನ್ನೇ ಏಕವಚನದಲ್ಲಿ ಸಂಬೋಧಿಸಿದ ಈ ಮುಖ್ಯಮಂತ್ರಿಗೇನು ಶಿಕ್ಷೆ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | Hanuman Flag: ಕೆರಗೋಡಿನಲ್ಲಿ ಉದ್ವಿಗ್ನ ಸ್ಥಿತಿ; ಆರ್‌.ಅಶೋಕ್‌ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

ಮಾತೆತ್ತಿದರೆ ಸಂವಿಧಾನ, ಪ್ರಜಾಪ್ರಭುತ್ವ, ವಕೀಲಿಕೆ ನಮ್ಮಪ್ಪನ ಮನೆ ಆಸ್ತಿ ಎಂದು ಜಾಗಟೆ ಹೊಡೆಯುವ ಸಿದ್ದರಾಮಯ್ಯನವರು ಮಾನ, ಮರ್ಯಾದೆ, ಮಹಿಳೆಯರ ಮೇಲೆ ಗೌರವ ಏನಾದರೂ ಇಟ್ಟುಕೊಂಡಿದ್ದರೆ, ಈ ಕ್ಷಣದಲ್ಲಿಯೇ ಸಿಎಂ ಕುರ್ಚಿಯನ್ನು ಖಾಲಿ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಗುಡುಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಪ್ರಜ್ವಲ್‌ ರೇವಣ್ಣ ಕೊನೆಗೂ ಬಂಧನ; ಮುಂದೇನಾಗುತ್ತದೆ? ಏನಿದೆ ಪ್ರಕ್ರಿಯೆ?

Prajwal Revanna Case: ಪ್ರಜ್ವಲ್‌ ರೇವಣ್ಣ ಸಂಸದರಾಗಿರುವ ಕಾರಣ, ಅವರ ಬಳಿ ಡಿಪ್ಲೋಮ್ಯಾಟಿಕ್‌ ಪಾಸ್‌ಪೋರ್ಟ್‌ ಇರುವ ಕಾರಣ ವಿಮಾನ ನಿಲ್ದಾಣದಲ್ಲಿಯೇ ಇನ್ನಷ್ಟು ಪ್ರಕ್ರಿಯೆ ನಡೆಯಲಿದೆ. ಪ್ರಜ್ವಲ್‌ ರೇವಣ್ಣ ಬಂಧನದ ಕುರಿತು ಲೋಕಸಭೆ ಸ್ಪೀಕರ್‌ಗೆ ಎಸ್‌ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಸಿಲುಕಿ, ಕಳೆದ 34 ದಿನಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರನ್ನು ಕೊನೆಗೂ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Air Port) ಬಂಧಿಸಲಾಗಿದೆ. ದೇವನಹಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್‌ 2ಗೆ ಆಗಮಿಸುತ್ತಲೇ ಇಮಿಗ್ರೇಷನ್‌ ಅಧಿಕಾರಿಗಳು ವಿಚಾರಣೆ ನಡೆಸಿ, ಸಂಸದನನ್ನು ಎಸ್‌ಐಟಿ ಅಧಿಕಾರಿಗಳಿಗೆ ವಹಿಸಿದ್ದಾರೆ.

ಮುಂದೇನಾಗುತ್ತದೆ?

ಪ್ರಜ್ವಲ್‌ ರೇವಣ್ಣ ಸಂಸದರಾಗಿರುವ ಕಾರಣ, ಅವರ ಬಳಿ ಡಿಪ್ಲೋಮ್ಯಾಟಿಕ್‌ ಪಾಸ್‌ಪೋರ್ಟ್‌ ಇರುವ ಕಾರಣ ವಿಮಾನ ನಿಲ್ದಾಣದಲ್ಲಿಯೇ ಇನ್ನಷ್ಟು ಪ್ರಕ್ರಿಯೆ ನಡೆಯಲಿದೆ. ಪ್ರಜ್ವಲ್‌ ರೇವಣ್ಣ ಬಂಧನದ ಕುರಿತು ಲೋಕಸಭೆ ಸ್ಪೀಕರ್‌ಗೆ ಎಸ್‌ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲ, ಸುಮಾರು 45 ಪುಟಗಳ ದಾಖಲೆಗಳನ್ನು ಎಸ್‌ಐಟಿ ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ. ಇಮಿಗ್ರೇಷನ್‌ ಅಧಿಕಾರಿಗಳ ಬಳಿ ಎಸ್‌ಐಟಿ ಅಧಿಕಾರಿಗಳು ಹಲವು ದಾಖಲೆಗಳ ಪರಿಶೀಲನೆ ಸೇರಿ ವಿವಿಧ ಪ್ರಕ್ರಿಯೆ ನಡೆಯಲಿದೆ. ಇದಾದ ಬಳಿಕವೇ ಎಸ್‌ಐಟಿ ಅಧಿಕಾರಿಗಳ ವಶಕ್ಕೆ ನೀಡಲಾಗುತ್ತದೆ.

ಇಮಿಗ್ರೇಷನ್‌ ಅಧಿಕಾರಿಗಳಿಂದ ಪ್ರಜ್ವಲ್‌ ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡಿರುವ ಎಸ್‌ಐಟಿ ಅಧಿಕಾರಿಗಳು ನಂತರ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯುವ ಸಾಧ್ಯತೆ ಇದೆ. ವೈದ್ಯಕೀಯ ತಪಾಸಣೆ ಬಳಿಕ ಸಿಐಡಿ ಕಚೇರಿಗೆ ಕರೆದೊಯ್ಯಲಿದ್ದಾರೆ. ಬೆಳಗ್ಗೆ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಹಾಗಾಗಿ, ಸಿಐಡಿ ಕಚೇರಿಗೆ ಎದುರು ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ನಾಳೆ ಜಾಮೀನು ಅರ್ಜಿ ವಿಚಾರಣೆ

ಲೈಂಗಿಕ ದೌರ್ಜನ್ಯ, ಸಂತ್ರಸ್ತೆಯ ಅಪಹರಣ ಸೇರಿ ಎಫ್‌ಐಆರ್‌ ದಾಖಲಾಗಿರುವ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಬೇಕು ಎಂಬುದಾಗಿ ಪ್ರಜ್ವಲ್‌ ರೇವಣ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮೇ 31ರಂದು ಅರ್ಜಿಯ ವಿಚಾರಣೆ ನಡೆಯಲಿದೆ. ಇನ್ನು, ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತ ತೀರ್ಪು ಕೂಡ ಶುಕ್ರವಾರವೇ ಹೊರಬೀಳಲಿದೆ. ಇದರಿಂದಾಗಿ ಶುಕ್ರವಾರವು ಎಚ್‌.ಡಿ.ರೇವಣ್ಣ ಕುಟುಂಬಕ್ಕೆ ಬಿಗ್‌ ಡೇ ಆಗಿದೆ.

ಇದನ್ನೂ ಓದಿ: Bhavani Revanna: ಭವಾನಿ ರೇವಣ್ಣ ‘ಜಾಮೀನು’ ತೀರ್ಪು ಕಾಯ್ದಿರಿಸಿದ ಕೋರ್ಟ್;‌ ಮೇ 31 ಅಮ್ಮ-ಮಗನಿಗೆ ಬಿಗ್‌ ಡೇ!

Continue Reading

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್ ರೇವಣ್ಣ ಬಂಧನ ಆಗಿದ್ದು ಹೇಗೆ? ಏರ್​ಪೋರ್ಟ್​​ನಲ್ಲಿ ನಡೆದ ಪ್ರಕ್ರಿಯೆಗಳೇನು?

Prajwal Revanna Case: ಪ್ರಜ್ವಲ್ ರೇವಣ್ಣ ನೇರವಾಗಿ ಎಸ್ಐಟಿ ವಶಕ್ಕೆ ಸಿಗಲಿಲ್ಲ. ರಾಜತಾಂತ್ರಿಕ ಪಾಸ್ ಪೋರ್ಟ್ ಇದ್ದ ಕಾರಣ ಅವರನ್ನು ನೇರವಾಗಿ ವಶಕ್ಕೆ ಪಡೆಯಲು ಸಾಧ್ಯವಾಗಲಿಲ್ಲ. ಲೋಕಸಭಾ ಸ್ಪೀಕರ್ ಗೆ ಮನವಿ ಮಾಡಿದ ವಲಸೆ ಅಧಿಕಾರಿಗಳು ಅನುಮತಿ ಪಡೆದುಕೊಂಡಿದ್ದರು. ಅಂತೆಯ ಪ್ರಕರಣಕ್ಕೆ ಸಂಬಂಧಿಸಿದ 55 ಪುಟಗಳ ದಾಖಲೆಗಳನ್ನು ತಂದು ಎಸ್ಐಟಿ ಮುಖ್ಯಸ್ಥ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲರ ಮುಂದೆ ಸಹಿ ಹಾಕಲಾಯಿತು. ಅಲ್ಲಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ, ಮತ್ತು ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಾಸನ ಜೆಡಿಎಸ್‌ ಸಂಸದ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್‌ ರೇವಣ್ಣನನ್ನು (Prajwal Revanna Case) ಕೊನೆಗೂ ಎಸ್​ಐಟಿ ಪೊಲೀಸರ ವಶಕ್ಕೆ ಸಿಕ್ಕಿದ್ದಾರೆ. ವಿಡಿಯೊಗಳು ವೈರಲ್‌ ಆಗುತ್ತಲೇ ವಿದೇಶಕ್ಕೆ ಪರಾರಿಯಾಗಿದ್ದ ಪ್ರಜ್ವಲ್‌ ರೇವಣ್ಣ, ಶುಕ್ರವಾರ (ಮೇ 31) ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಬಂಧನಕ್ಕೆ ಒಳಗಾಧರು.

ಜರ್ಮನಿಯ ಮ್ಯೂನಿಚ್​​ನಿಂದ ಮಧ್ಯಾಹ್ನ ಹೊರಟ ಲುಫ್ತಾನ್ಸಾ ಸಂಸ್ಥೆಯ ವಿಮಾನದಲ್ಲಿ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಆಗಮಿಸಿದರು. ಸಂಸದರಾಗಿರುವ ಕಾರಣ ಹಲವು ಪ್ರಕ್ರಿಯೆಗಳನ್ನು ನಡೆಸಿದ ಬಳಿಕ ಎಸ್‌ಐಟಿ ಅಧಿಕಾರಿಗಳ ವಶಕ್ಕೆ ಪಡೆದರು.

ಪ್ರಜ್ವಲ್ ರೇವಣ್ಣ ನೇರವಾಗಿ ಎಸ್ಐಟಿ ವಶಕ್ಕೆ ಸಿಗಲಿಲ್ಲ. ರಾಜತಾಂತ್ರಿಕ ಪಾಸ್ ಪೋರ್ಟ್ ಇದ್ದ ಕಾರಣ ಅವರನ್ನು ನೇರವಾಗಿ ವಶಕ್ಕೆ ಪಡೆಯಲು ಸಾಧ್ಯವಾಗಲಿಲ್ಲ. ಲೋಕಸಭಾ ಸ್ಪೀಕರ್ ಗೆ ಮನವಿ ಮಾಡಿದ ವಲಸೆ ಅಧಿಕಾರಿಗಳು ಅನುಮತಿ ಪಡೆದುಕೊಂಡಿದ್ದರು. ಅಂತೆಯ ಪ್ರಕರಣಕ್ಕೆ ಸಂಬಂಧಿಸಿದ 55 ಪುಟಗಳ ದಾಖಲೆಗಳನ್ನು ತಂದು ಎಸ್ಐಟಿ ಮುಖ್ಯಸ್ಥ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲರ ಮುಂದೆ ಸಹಿ ಹಾಕಲಾಯಿತು. ಅಲ್ಲಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಜ್ವಲ್ ರೇವಣ್ಣ ವಿಮಾನದಿಂದಿಳಿದ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಪ್ರಕ್ರಿಯೆ ನಡೆಯಿತು.

ಬಿಗಿ ಬಂದೋಬಸ್ತ್​

ಪ್ರಜ್ವಲ್​ ರೇವಣ್ಣ ಬೆಂಗಳೂರಿಗೆ ವಾಪಸಾದ ಕಾರಣ ಏರ್​ಪೋರ್ಟ್​ ಸುತ್ತಮುತ್ತು ಭಾರಿ ಬಂದೋಬಸ್ತ್​ ಏರ್ಪಡಿಸಲಾಗಿತ್ತು. ವಿಮಾನ ನಿಲ್ದಾಣದ ಟರ್ಮಿನಲ್​ 2 ಬಳಿ ಬ್ಯಾರಿಕೇಡ್​ಗಳನ್ನು ಹಾಕಿ ಜನ ದಟ್ಟಣೆ ನಿಯಂತ್ರಿಸಲಾಗಿತ್ತು. ಅದೇ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಆಗಮಿಸುವ ರಸ್ತೆಯುದ್ದಕ್ಕೂ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿತ್ತು. ಪ್ರತಿಭಟನಾಕಾರರು ಅಥವಾ ಇನ್ಯಾವುದೇ ದಾಳಿಯನ್ನು ತಡೆಯುವ ಉದ್ದೇಶ ಪೊಲೀಸರದ್ದಾಗಿತ್ತು.

ಸಿಐಡಿ ಕಚೇರಿ ಮುಂದೆಯೂ ಬಿಗಿ ಪೊಲೀಸ್ ಬಂದೋಬಸ್ತೆ ಏರ್ಪಡಿಸಲಾಗಿತ್ತು. ಅಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿತ್ತು. ಹೆಚ್ಚುವರಿಯಾಗಿ ಕೆಎಸ್​ಆರ್​​ಪಿ ತುಕಡಿ ನಿಯೋಜನೆ ಮಾಡಲಾಗಿತ್ತು. ಐಡಿ ಕಚೇರಿ ಮುಂದೆ ಬ್ಯಾರಿಕೇಡ್ ಗಳನ್ನು ಸಿದ್ಧಪಡಿಸಿ ಇಟ್ಟುಕೊಂಡಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯನ್ನು ಪೊಲೀಸರು ವಹಿಸಿದ್ದರು.

ಮುಂದೇನು?

ಪ್ರಜ್ವಲ್‌ ರೇವಣ್ಣ ವಿರುದ್ಧ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದ ಕಾರಣ ಪ್ರಜ್ವಲ್‌ ರೇವಣ್ಣ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಇಮಿಗ್ರೇಷನ್‌ ಅಧಿಕಾರಿಗಳು ಸಂಸದನ ಪಾಸ್‌ಪೋರ್ಟ್‌ಗೆ ಶೀಲ್‌ ಹಾಕಿದರು. ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿರುವ ಎಸ್‌ಐಟಿ ಅಧಿಕಾರಿಗಳು ಮೊದಲು ಅವರನ್ನು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಲಿದ್ದಾರೆ. ಅಲ್ಲಿನ ಪ್ರಕ್ರಿಯೆ ಮುಗಿಸಿ ಬಳಿಕ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಬಂಧಿಸಿದ 24 ಗಂಟೆಯೊಳಗೆ ಎಸ್‌ಐಟಿ ಅಧಿಕಾರಿಗಳು ಸಂಸದನನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Continue Reading

ಕರ್ನಾಟಕ

Prajwal Revanna Case: ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣ ಕೊನೆಗೂ ಬಂಧನ; ಏರ್‌ಪೋರ್ಟ್‌ನಲ್ಲೇ ಅರೆಸ್ಟ್!

Prajwal Revanna Case: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣನನ್ನು ಕೊನೆಗೂ ಭಾನುವಾರ ಬಂಧಿಸಲಾಗಿದೆ. ವಿದೇಶದಿಂದ ವಿಮಾನದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಬಂಧಿಸಲಾಯಿತು. ಆ ಮೂಲಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯ ಅಪಹರಣ ಮಾಡಿದ ಕೇಸ್‌ನಲ್ಲಿ ಎಚ್‌.ಡಿ.ರೇವಣ್ಣ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ್ದಕ್ಕಾಗಿ ಅವರ ಪುತ್ರ ಪ್ರಜ್ವಲ್‌ ರೇವಣ್ಣ ಬಂಧನಕ್ಕೀಡಾಗಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಲೈಂಗಿಕ ದೌರ್ಜನ್ಯಕ್ಕೀಡಾದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಾಸನ ಜೆಡಿಎಸ್‌ ಸಂಸದ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್‌ ರೇವಣ್ಣನನ್ನು (Prajwal Revanna Case) ಕೊನೆಗೂ ಬಂಧಿಸಲಾಗಿದೆ. ಅಶ್ಲೀಲ ವಿಡಿಯೊಗಳು ವೈರಲ್‌ ಆಗುತ್ತಲೇ ವಿದೇಶಕ್ಕೆ ಪರಾರಿಯಾಗಿದ್ದ ಪ್ರಜ್ವಲ್‌ ರೇವಣ್ಣ, ಶುಕ್ರವಾರ (ಮೇ 31) ಭಾರತಕ್ಕೆ ಲುಫ್ತಾನ್ಸಾ ವಿಮಾನಯಾನ ಸಂಸ್ಥೆಯ ಎಲ್‌ಎಚ್‌764 ವಿಮಾನದಲ್ಲಿ ಆಗಮಿಸಿದರು. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಎಸ್‌ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದರು.

ಜರ್ಮನಿಯ ಮ್ಯೂನಿಕ್‌ನಿಂದ ಲುಫ್ತಾನ್ಸಾ ವಿಮಾನದಲ್ಲಿ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಇಮಿಗ್ರೇಷನ್‌ ಪ್ರಜ್ವಲ್‌ ರೇವಣ್ಣನನ್ನು ವಿಚಾರಣೆ ನಡೆಸಿದರು. ಇದಾದ ಬಳಿಕ ವಿಮಾನ ನಿಲ್ದಾಣದ ಸಿಬ್ಬಂದಿಯು ಎಸ್‌ಐಟಿ ಅಧಿಕಾರಿಗಳ ವಶಕ್ಕೆ ನೀಡಲಾಯಿತು. ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಈಗಾಗಲೇ ಮಾಜಿ ಸಚಿವ, ಪ್ರಜ್ವಲ್‌ ರೇವಣ್ಣ ತಂದೆ ಎಚ್‌.ಡಿ.ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಪ್ರಜ್ವಲ್‌ ರೇವಣ್ಣ ಕಾಮಕೇಳಿಯ ಸಾವಿರಾರು ವಿಡಿಯೊಗಳು ಪೆನ್‌ಡ್ರೈವ್‌ ಮೂಲಕ ಲಭ್ಯವಾಗಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಅವರು ವಿದೇಶಕ್ಕೆ ಹಾರಿದ್ದರು. ಇದಾದ ಬಳಿಕ ಅವರ ಬಂಧನಕ್ಕಾಗಿ ಲುಕ್‌ಔಟ್‌ ನೋಟಿಸ್‌ ಹೊರಡಿಸಲಾಗಿತ್ತು. ಅಲ್ಲದೆ, ಎಸ್‌ಐಟಿ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದ ರೇವಣ್ಣ, ವಿಚಾರಣೆಗೆ ಹಾಜರಾಗಲು ಒಂದು ವಾರ ಸಮಯ ಕೇಳಿದ್ದರು. ಆದರೆ, ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಪೊಲೀಸರು ಬಂಧಿಸುತ್ತಲೇ ಪ್ರಜ್ವಲ್‌ ಕೂಡ ಬೆಂಗಳೂರಿಗೆ ಆಗಮಿಸಲು ತೀರ್ಮಾನಿಸಿದರು ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ವಿರುದ್ಧ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದ ಕಾರಣ ಪ್ರಜ್ವಲ್‌ ರೇವಣ್ಣ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಇಮಿಗ್ರೇಷನ್‌ ಅಧಿಕಾರಿಗಳು ಸಂಸದನ ಪಾಸ್‌ಪೋರ್ಟ್‌ಗೆ ಶೀಲ್‌ ಹಾಕಿದರು. ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿರುವ ಎಸ್‌ಐಟಿ ಅಧಿಕಾರಿಗಳು ಮೊದಲು ಅವರನ್ನು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಲಿದ್ದಾರೆ. ಅಲ್ಲಿನ ಪ್ರಕ್ರಿಯೆ ಮುಗಿಸಿ ಬಳಿಕ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಬಂಧಿಸಿದ 24 ಗಂಟೆಯೊಳಗೆ ಎಸ್‌ಐಟಿ ಅಧಿಕಾರಿಗಳು ಸಂಸದನನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ಗೆ ವೋಟ್‌ ಹಾಕಿ ಎಂಬ ಸಿದ್ದರಾಮಯ್ಯ ಟ್ವೀಟ್‌; ಬಿಜೆಪಿಯಿಂದ ಫುಲ್‌ ಕ್ಲಾಸ್‌!

Continue Reading

ದೇಶ

Reliance Industries: ಟೈಮ್ ಮ್ಯಾಗಜೀನ್‌ನ ಜಗತ್ತಿನ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌

Reliance Industries: ಅಮೆರಿಕದ ಜನಪ್ರಿಯ ನಿಯತಕಾಲಿಕ ಟೈಮ್‌ ಬಿಡುಗಡೆ ಮಾಡಿರುವ ಜಗತ್ತಿನ ಪ್ರಮುಖ 100 ಪ್ರಭಾವಿ ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌, ಸೀರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಮತ್ತು ಟಾಟಾ ಸಮೂಹವು ಸ್ಥಾನ ಪಡೆದುಕೊಂಡಿವೆ. ಟೈಮ್‌ ನಿಯತಕಾಲಿಕವು ರಿಲಯನ್ಸ್‌ ಇಂಡಸ್ಟ್ರೀಸ್‌ಗೆ ʼಭಾರತದ ಶಕ್ತಿʼ ಎನ್ನುವ ಉಪನಾಮವನ್ನು ನೀಡಿದೆ.

VISTARANEWS.COM


on

3 Indian companies have featured in Time magazines list of 100 most influential companies in the world
ರಿಲಯನ್ಸ್ ಇಂಡಸ್ಟ್ರೀಸ್‌.
Koo

ನವದೆಹಲಿ: ಅಮೆರಿಕದ ಜನಪ್ರಿಯ ನಿಯತಕಾಲಿಕ ಟೈಮ್‌ (Time magazine) ಬಿಡುಗಡೆ ಮಾಡಿರುವ ಜಗತ್ತಿನ ಪ್ರಮುಖ 100 ಪ್ರಭಾವಿ ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌ (Reliance Industries) ಸೇರಿದಂತೆ ಭಾರತದ ಮೂರು ಕಂಪನಿಗಳು ಸ್ಥಾನ ಪಡೆದುಕೊಂಡಿವೆ.

ರಿಲಯನ್ಸ್‌ ಇಂಡಸ್ಟ್ರೀಸ್‌, ಸೀರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಮತ್ತು ಟಾಟಾ ಸಮೂಹವು ʼಟೈಮ್‌ʼ ಬಿಡುಗಡೆ ಮಾಡಿರುವ 100 ಕಂಪನಿಗಳಲ್ಲಿ ಸ್ಥಾನ ಪಡೆದುಕೊಂಡಿವೆ.

ಇದನ್ನೂ ಓದಿ: Modi Meditation: ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಧ್ಯಾನ ಆರಂಭಿಸಿದ ಮೋದಿ; ಹಗಲು-ರಾತ್ರಿ ಪ್ರಧಾನಿ ಮೆಡಿಟೇಷನ್

ಈ ಪಟ್ಟಿಯನ್ನು 5 ವಿಭಾಗಗಳಾಗಿ ವರ್ಗೀಕರಿಸಲಾಗಿದ್ದು, ನಾಯಕ, ಆವಿಷ್ಕಾರ, ನಾವೀನ್ಯ, ಟೈಟಾನ್‌ (ಶಕ್ತಿಶಾಲಿ) ಮತ್ತು ಪ್ರವರ್ತಕ ಎಂದು ವರ್ಗೀಕರಿಸಲಾಗಿದೆ. ರಿಲಯನ್ಸ್‌ ಇಂಡಸ್ಟ್ರೀಸ್‌ ಮತ್ತು ಟಾಟಾ ಸಮೂಹವು ಟೈಟಾನ್‌ (ಶಕ್ತಿಶಾಲಿ) ವಿಭಾಗದಲ್ಲಿ ಸ್ಥಾನ ಪಡೆದುಕೊಂಡಿವೆ. ಸೀರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಪ್ರವರ್ತಕರ ವಿಭಾಗದಲ್ಲಿ ಸ್ಥಾನ ಪಡೆದುಕೊಂಡಿದೆ.

ಟೈಮ್‌ ನಿಯತಕಾಲಿಕವು ರಿಲಯನ್ಸ್‌ ಇಂಡಸ್ಟ್ರೀಸ್‌ಗೆ ʼಭಾರತದ ಶಕ್ತಿʼ ಎನ್ನುವ ಉಪನಾಮವನ್ನು ನೀಡಿದೆ. ಜವಳಿ ಮತ್ತು ಪಾಲಿಸ್ಟರ್‌ ಉದ್ದಿಮೆಯಾಗಿ ಆರಂಭವಾದ ರಿಲಯನ್ಸ್‌ ಕಂಪನಿಯು ಇಂದು ಅತಿದೊಡ್ಡ ಮತ್ತು ಶಕ್ತಿಶಾಲಿ ಉದ್ಯಮ ಸಮೂಹವಾಗಿ ಹೊರಹೊಮ್ಮಿದೆ. ಮಾತ್ರವಲ್ಲ ದೇಶದ ಅತ್ಯಂತ ಮೌಲ್ಯಯುತ ಕಂಪನಿ ಕೂಡಾ ಆಗಿದೆ ಎಂದು ಟೈಮ್‌ ನಿಯತಕಾಲಿಕವು ರಿಲಯನ್ಸ್‌ ಇಂಡಸ್ಟ್ರೀಸ್‌ ಬಗ್ಗೆ ಬರೆದಿದೆ. ಮುಕೇಶ್‌ ಅಂಬಾನಿ ಅವರ ನಾಯಕತ್ವದಲ್ಲಿ ಕಂಪನಿಯು ಇಂಧನ, ರಿಟೇಲ್‌ ಮತ್ತು ದೂರಸಂಪರ್ಕ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತನ್ನ ವಹಿವಾಟನ್ನು ವಿಸ್ತರಿಸಿಕೊಂಡಿದೆ.

ಇದನ್ನೂ ಓದಿ: Fortis Hospital: ರಾಜ್ಯದಲ್ಲೇ ಮೊದಲ ಬಾರಿಗೆ ಅಪರೂಪದ ಶಸ್ತ್ರಚಿಕಿತ್ಸೆ

ಭಾರತದ ಅತಿದೊಡ್ಡ ಡಿಜಿಟಲ್‌ ಸೇವಾ ಪೂರೈಕೆದಾರ ಮತ್ತು ದೂರಸಂಪರ್ಕ ಕಂಪನಿ ಜಿಯೊ ಪ್ಲಾಟ್‌ಫಾರಂ 2021ರಲ್ಲಿ ಈ ಪಟ್ಟಿಗೆ ಸೇರಿಕೊಂಡಿತು. ರಿಲಯನ್ಸ್‌ ಮತ್ತು ಡಿಸ್ನಿ ನಡುವಿನ 8.5 ಬಿಲಿಯನ್‌ ಡಾಲರ್‌ ಒಪ್ಪಂದದ ಬಗ್ಗೆಯೂ ಟೈಮ್‌ ನಿಯತಕಾಲಿಕ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

Continue Reading
Advertisement
Prajwal Revanna Case
ಕರ್ನಾಟಕ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೊನೆಗೂ ಬಂಧನ; ಮುಂದೇನಾಗುತ್ತದೆ? ಏನಿದೆ ಪ್ರಕ್ರಿಯೆ?

Prajwal Revanna Case
ಪ್ರಮುಖ ಸುದ್ದಿ1 hour ago

Prajwal Revanna Case: ಪ್ರಜ್ವಲ್ ರೇವಣ್ಣ ಬಂಧನ ಆಗಿದ್ದು ಹೇಗೆ? ಏರ್​ಪೋರ್ಟ್​​ನಲ್ಲಿ ನಡೆದ ಪ್ರಕ್ರಿಯೆಗಳೇನು?

Prajwal Revanna Case
ಕರ್ನಾಟಕ1 hour ago

Prajwal Revanna Case: ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣ ಕೊನೆಗೂ ಬಂಧನ; ಏರ್‌ಪೋರ್ಟ್‌ನಲ್ಲೇ ಅರೆಸ್ಟ್!

3 Indian companies have featured in Time magazines list of 100 most influential companies in the world
ದೇಶ3 hours ago

Reliance Industries: ಟೈಮ್ ಮ್ಯಾಗಜೀನ್‌ನ ಜಗತ್ತಿನ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌

Murder News
ಪ್ರಮುಖ ಸುದ್ದಿ4 hours ago

Murder News : ಬಾಯ್​ಫ್ರೆಂಡ್​ ಜತೆ ಸೇರಿ ಅಪ್ಪ, ತಮ್ಮನನ್ನು ಕೊಂದು ಕತ್ತರಿಸಿ ಫ್ರಿಜ್​ನಲ್ಲಿಟ್ಟಿದ್ದ 16ರ ಬಾಲಕಿ

Reserve Bank of India
ದೇಶ4 hours ago

Reserve Bank of India : ಭಾರತದ ಬ್ಯಾಂಕ್​ಗಳಲ್ಲಿವೆ ವಾರಸುದಾರರಿಲ್ಲದ 78,213 ಕೋಟಿ ರೂಪಾಯಿ!

Modi Meditation
ದೇಶ4 hours ago

Modi Meditation: ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸಲ್ಲ ಮೋದಿ; 2 ದಿನ ಪಾನೀಯವೇ ಆಹಾರ!

Virat kohli
ಕ್ರಿಕೆಟ್5 hours ago

Virat Kohli : ವಿರಾಟ್​ ಕೊಹ್ಲಿ ಟೀಕಿಸಿದ ನ್ಯೂಜಿಲ್ಯಾಂಡ್​ ಮಾಜಿ ಆಟಗಾರನಿಗೆ ಕೊಲೆ ಬೆದರಿಕೆ!

Hindu Janajagruthi Samithi demands declaration of Zakir Naik as international terrorist
ಬೆಂಗಳೂರು5 hours ago

Zakir Naik: ಜಾಕೀರ್ ನಾಯಕ್‌ನನ್ನು ಭಯೋತ್ಪಾದಕನೆಂದು ಘೋಷಿಸಿ; ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Necessary Preparation for North East Graduate Constituency Election Voting says DC M S Diwakar
ವಿಜಯನಗರ6 hours ago

MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ ಮತದಾನಕ್ಕೆ ಸಿದ್ಧತೆ: ಡಿಸಿ ಎಂ.ಎಸ್. ದಿವಾಕರ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ13 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌