Site icon Vistara News

CM Siddaramaiah: ರಾಷ್ಟ್ರಪತಿಗೆ ಏಕವಚನ ಪ್ರಯೋಗ; ಸಿದ್ದರಾಮಯ್ಯ ಕ್ಷಮೆಯಾಚನೆ

droupadi murmu and siddaramaiah

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಏಕವಚನ ಪ್ರಯೋಗ ಮಾಡಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕ್ಷಮೆಯಾಚಿಸಿದ್ದಾರೆ. ರಾಷ್ಟ್ರದ ಪ್ರಥಮ ಪ್ರಜೆ ಕುರಿತು ಏಕವಚನ ಬಳಸಿದ್ದಕ್ಕೆ ವಿಪಕ್ಷ ನಾಯಕರು ಆಕ್ರೋಶ ಹೊರಹಾಕಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ (CM Siddaramaiah) ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ ಬಿಜೆಪಿ ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು, ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು. ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ‌ ಸಂಭೋದಿಸಿದೆ.

ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಅಪ್ಪ-ಅಮ್ಮ ಸೇರಿದಂತೆ ಹಿರಿಯರನ್ನು ಕೂಡ ಏಕವಚನದಲ್ಲಿ ಸಂಭೋದಿಸುವುದು ರೂಢಿ. ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ‌ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದರು?

ಚಿತ್ರದುರ್ಗದಲ್ಲಿ ಭಾನುವಾರ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕನ್ನು ಟೀಕಿಸುತ್ತಾ, ರಾಷ್ಟ್ರಪತಿ ದ್ರೌಪದಿ ಮುರ್ಮು… ಶೋಷಿತ ಸಮುದಾಯಕ್ಕೆ ಸೇರಿದವಳು… ಅವರು ಸಂವಿಧಾನದ ರಕ್ಷಕರು(custodian of constitution), ಅವಳನ್ನು ನೂತನ ಸಂಸತ್‌ ಭವನ ಉದ್ಘಾಟನೆ ಹಾಗೂ ರಾಮಮಂದಿರ ಉದ್ಘಾಟನೆಗೆ ಕರೆಯಲಿಲ್ಲ. ಇವರ ಯೋಗ್ಯತೆಗೆ ನನ್ನ ವಿರುದ್ಧ ಮಾತನಾಡುತ್ತಾರೆ ಎಂದು ಕಿಡಿಕಾರಿದ್ದರು. ಹೀಗಾಗಿ ರಾಷ್ಟ್ರಪತಿಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡಿ ಅಪಮಾನ ಮಾಡಿದ್ದಾರೆ ಎಂದು ವಿಪಕ್ಷಗಳ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ | Hanuman Flag: ಕೆರಗೋಡಿನಲ್ಲಿ ಉದ್ವಿಗ್ನ ಸ್ಥಿತಿ; ಆರ್‌.ಅಶೋಕ್‌ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

HD Kumaraswamy: ರಾಷ್ಟ್ರಪತಿಗಳನ್ನು ʼಅವಳುʼ ಎಂದ ಸಿದ್ದರಾಮಯ್ಯ; ಆಚಾರಗೆಟ್ಟ ಸಿಎಂ ಎಂದು ಎಚ್‌ಡಿಕೆ ಕಿಡಿ

ಬೆಂಗಳೂರು: ಚಿತ್ರದುರ್ಗದಲ್ಲಿ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧನೆ ಮಾಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ, ರಾಷ್ಟ್ರಪತಿಗಳಿಗೆ ಅಪಚಾರ ಎಸಗಿರುವ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು, ಇಲ್ಲವೇ ಅವರನ್ನು ಆ ಸ್ಥಾನದಿಂದ ವಜಾ ಮಾಡಬೇಕು ಎಂದು ರಾಜ್ಯಪಾಲರನ್ನು ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ | Karnataka Drought: ರೈತರಿಗೆ ಬರ ಪರಿಹಾರ ಕೊಡದ ಟೋಪಿ ಸಿದ್ದರಾಮಯ್ಯ; ನಾಳೆ ಕೋಲಾರದಲ್ಲಿ ಪ್ರತಿಭಟನೆ ಎಂದ ಅಶೋಕ್‌

ಆಚಾರಗೆಟ್ಟ ಮುಖ್ಯಮಂತ್ರಿ

ರಾಷ್ಟ್ರಪತಿಗಳು, ದೇಶದ ಪ್ರಥಮ ಪ್ರಜೆ ಆಗಿರುವ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ತುಚ್ಛವಾಗಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಿಗೆಯ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು ಎಂದಿರುವ ಕುಮಾರಸ್ವಾಮಿ ಅವರು, ಸಿಎಂ ಬಳಸಿರುವ ಪದವನ್ನು ಬರೆಯಲಾರೆ ಎಂದು ಎಂದಿದ್ದಾರಲ್ಲದೆ, ಸಿದ್ದರಾಮಯ್ಯ ಆಚಾರಗೆಟ್ಟ ಮುಖ್ಯಮಂತ್ರಿ ಎಂದು ಕಟುವಾಗಿ ಟೀಕಿಸಿದ್ದಾರೆ.

ಈ ಡೋಂಗೀ ಪ್ರಜಾಪ್ರಭುತ್ವವಾದಿಯ ಅಸಲಿ ಮುಖ ಕಳಚಿಬಿದ್ದಿದೆ. ಒಂದು ಕ್ಷಣವೂ ಮುಖ್ಯಮಂತ್ರಿ ಪದವಿಯಲ್ಲಿ ಇರಲು ಅವರು ಅರ್ಹರಲ್ಲ. ಕೂಡಲೇ ತಾವೆಸಗಿರುವ ಅಪಚಾರಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಅಥವಾ ಮಾನ್ಯ ರಾಜ್ಯಪಾಲರೇ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕಿತ್ತೆಸೆಯಬೇಕು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಶೋಷಿತರ ಜಾಗೃತಿ ಸಮಾವೇಶದಲ್ಲೇ ಅಪಮಾನ

ಆಚಾರವಿಲ್ಲದ ನಾಲಿಗೆ, ನಿನ್ನ ನೀಚಬುದ್ಧಿಯ ಬಿಡು ನಾಲಿಗೆ ಎಂದು ದಾಸರು ಹೇಳಿದ್ದಾರೆ. ಸಿದ್ದರಾಮಯ್ಯಗೆ ಆಚಾರ ಹತ್ತಿರಕ್ಕೂ ಸುಳಿಯದ ವಿಚಾರ. ಶೋಷಿತ ಬುಡಕಟ್ಟು ಸಮುದಾಯದಿಂದ ಬಂದ ದೇಶದ ಮೊತ್ತ ಮೊದಲ ರಾಷ್ಟ್ರಪತಿಗಳು, ಅದರಲ್ಲಿಯೂ ಮಹಿಳೆ.. ಶೋಷಿತರ ಜಾಗೃತಿ ಸಮಾವೇಶದಲ್ಲೇ ಅವರಿಗೆ ಮುಖ್ಯಮಂತ್ರಿ ಅಪಮಾನ ಎಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಕೀಲರಂತೆ, ಸ್ವಯಂಘೋಷಿತ ಸಂವಿಧಾನ ತಜ್ಞರಂತೆ.. ನಾಚಿಕೆಯಾಗಬೇಕು ಇವರಿಗೆ. ಸಾರ್ವಜನಿಕ ವೇದಿಕೆಯಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಮುಖ್ಯಮಂತ್ರಿಯೊಬ್ಬರು ಸಂಬೋಧಿಸುವ ರೀತಿಯೇ ಇದು. ಸಿದ್ದರಾಮಯ್ಯನವರ ನಡವಳಿಕೆ ಕರ್ನಾಟಕಕ್ಕೆ ಅಂಟಿದ ಅಳಿಸಲಾಗದ ಕಳಂಕ. ಅವರ ಈ ಕೀಳುಮಾತು ದೇಶಕ್ಕೆ, ಸಂವಿಧಾನಕ್ಕೆ ಆಗಿರುವ ಘೋರ ಅಪಚಾರ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದ್ದಾರೆ.

ಶನಿವಾರದಂದು ಚಾಮರಾಜನಗರದಲ್ಲಿ ಇದೇ ಸಿದ್ದರಾಮಯ್ಯನವರ ಸುಪುತ್ರ ಯತೀಂದ್ರ ಭಾಷಣ ಮಾಡುತ್ತಿದ್ದಾಗ ಯಾರೋ ಒಬ್ಬರು ಏಕವಚನದಲ್ಲಿ ಪ್ರಶ್ನಿಸಿದರೆಂಬ ಕಾರಣಕ್ಕೆ ಪೊಲೀಸರು ಆತನನ್ನು ಅಟ್ಟಾಡಿಸಿಕೊಂಡು ಹೋಗಿ ಬಂಧಿಸಿ ದರದರನೇ ಎಳೆದುಕೊಂಡು ಹೋದರು. ಹಾಗಿದ್ದರೆ, ರಾಷ್ಟ್ರಪತಿಗಳನ್ನೇ ಏಕವಚನದಲ್ಲಿ ಸಂಬೋಧಿಸಿದ ಈ ಮುಖ್ಯಮಂತ್ರಿಗೇನು ಶಿಕ್ಷೆ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | Hanuman Flag: ಕೆರಗೋಡಿನಲ್ಲಿ ಉದ್ವಿಗ್ನ ಸ್ಥಿತಿ; ಆರ್‌.ಅಶೋಕ್‌ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

ಮಾತೆತ್ತಿದರೆ ಸಂವಿಧಾನ, ಪ್ರಜಾಪ್ರಭುತ್ವ, ವಕೀಲಿಕೆ ನಮ್ಮಪ್ಪನ ಮನೆ ಆಸ್ತಿ ಎಂದು ಜಾಗಟೆ ಹೊಡೆಯುವ ಸಿದ್ದರಾಮಯ್ಯನವರು ಮಾನ, ಮರ್ಯಾದೆ, ಮಹಿಳೆಯರ ಮೇಲೆ ಗೌರವ ಏನಾದರೂ ಇಟ್ಟುಕೊಂಡಿದ್ದರೆ, ಈ ಕ್ಷಣದಲ್ಲಿಯೇ ಸಿಎಂ ಕುರ್ಚಿಯನ್ನು ಖಾಲಿ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಗುಡುಗಿದ್ದಾರೆ.

Exit mobile version