CM Siddaramaiah: ಮೋದಿ ʼಹಿಟ್ಲರ್‌ʼ ಹೇಳಿಕೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು - Vistara News

ಕರ್ನಾಟಕ

CM Siddaramaiah: ಮೋದಿ ʼಹಿಟ್ಲರ್‌ʼ ಹೇಳಿಕೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

CM Siddaramaiah: ಬಿಜೆಪಿ 400 ಸೀಟು ಗೆದ್ದರೆ ಸಂವಿಧಾನ ಬದಲಿಸುತ್ತೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸೋಲಿನ ಹತಾಶೆಯಿಂದ ಈ ರೀತಿ ಮಾತನಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಟೀಕಿಸಿದ್ದಾರೆ.

VISTARANEWS.COM


on

BJP files complaint against Cm Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಎಂದಿದ್ದ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಅಧಿಕಾರಿಗೆ ಶಾಸಕ ಸುರೇಶ್ ಕುಮಾರ್ ನೇತೃತ್ವದ ಬಿಜೆಪಿ ನಿಯೋಗ ದೂರು ನೀಡಿದೆ.

ಬಳಿಕ ಶಾಸಕ ಸುರೇಶ್ ಕುಮಾರ್ ಮಾತನಾಡಿ, ರಾಜ್ಯ ಸರ್ಕಾರದ ನೇತೃತ್ವ ವಹಿಸಿರುವವರಿಗೆ ಯಾವುದೇ ನೀತಿ ಇಲ್ಲ. ಈಗ ಅವರು ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಕೊಳ್ಳೇಗಾಲದಲ್ಲಿ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರನ್ನು ಹಿಟ್ಲರ್ ಎಂದು ಕರೆದಿದ್ದಾರೆ. ಇದೊಂದು ಅವಹೇಳನಕಾರಿ ಪದ, ಈ ರೀತಿ ಅವರು ಮಾತನಾಡಬಾರದು ಎಂದು ಕಿಡಿಕಾರಿದ್ದಾರೆ.

ಬಿಜೆಪಿ 400 ಸೀಟು ಗೆದ್ದರೆ ಸಂವಿಧಾನ ಬದಲಿಸುತ್ತೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಚುನಾವಣೆ ಸೋಲಿನ ಹತಾಶೆಯಿಂದ ಮಾತನಾಡಿದ್ದಾರೆ. ನಿಜವಾಗಿಯೂ ಚಾಮರಾಜನಗರ ಜನರು, ರಾಜ್ಯದ ಜನರು ಸಿದ್ದರಾಮಯ್ಯ ಮಾತನ್ನು ತಿರಸ್ಕಾರ ಮಾಡುತ್ತಾರೆ. ಅದಕ್ಕಾಗಿ ಚುನಾವಣಾ ಆಯೋಗಕ್ಕೆ ಈ ಬಗ್ಗೆ ದೂರು ಕೊಟ್ಟಿದ್ದೇವೆ. ತಕ್ಷಣವೇ ಅವರನ್ನು ಸ್ಟಾರ್ ಕ್ಯಾಂಪೇನರ್‌ ಪಟ್ಟಿಯಿಂದ ಹೆಸರು ಕೈ ಬಿಡಬೇಕು ಎಂದಿದ್ದೇವೆ. ಅವರು ಕಾನೂನು ಕ್ರಮ ಜರುಗಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Pradeep Eshwar: ಸುಧಾಕರ್‌ಗೆ ಒಂದು ವೋಟ್‌ ಲೀಡ್‌ ಸಿಕ್ಕರೆ ನಿವೃತ್ತಿ; ಪ್ರದೀಪ್‌ ಈಶ್ವರ್‌ ಸವಾಲು!

ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದರು?

ಕೊಳ್ಳೇಗಾಲದಲ್ಲಿ ನಡೆದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಅವರು, ಪ್ರಧಾನಿ ಮೋದಿ ಮತ್ತು ಬಿಜೆಪಿಯವರು ಹಿಟ್ಲರ್‌, ಮುಸೊಲಿನಿ ಸಿದ್ಧಾಂತಗಳಲ್ಲಿ ನಂಬಿಕೆ ಇಟ್ಟವರು. ಮೋದಿ ಅವರ ಕೈಯಲ್ಲಿ ದೇಶದ ಪ್ರಜಾಪ್ರಭುತ್ವ, ಸಂವಿಧಾನ ಸುರಕ್ಷಿತವಾಗಿಲ್ಲ ಎಂದಿದ್ದರು. ಅಲ್ಲದೇ ಮೋದಿ ಅವರನ್ನು ಯುರೋಪಿಯನ್ ಸರ್ವಾಧಿಕಾರಿಗಳಾದ ಬೆನಿಟೊ ಮುಸೊಲಿನಿ ಮತ್ತು ಹಿಟ್ಲರ್‌ಗೆ ಹೋಲಿಸಿ ವಾಗ್ದಾಳಿ ನಡೆಸಿದ್ದರು.

ಮೋದಿಯನ್ನು ಹಿಟ್ಲರ್‌, ಸದ್ದಾಂ ಹುಸೇನ್‌ಗೆ ಹೋಲಿಸಿದ ವೀರಪ್ಪ ಮೊಯ್ಲಿ!

Veerappa Moily
Lok Sabha Election 2024: Veerappa Moily Campares Narendra Modi With Adolf Hitler And Saddam Hussein

ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election 2024) ಭರಾಟೆ ಜೋರಾಗುತ್ತಲೇ ರಾಜಕೀಯ ನಾಯಕರ ಹೇಳಿಕೆಗಳೂ ಅಬ್ಬರ, ವಿವಾದ, ಅವಹೇಳನಕಾರಿಯ ಸ್ವರೂಪ ಪಡೆದುಕೊಳ್ಳುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ, ಕಾಂಗ್ರೆಸ್‌ ಹಿರಿಯ ನಾಯಕ ವೀರಪ್ಪ ಮೊಯ್ಲಿ (Veerappa Moily) ಅವರು ನರೇಂದ್ರ ಮೋದಿ (Narendra Modi) ಅವರನ್ನು ಸರ್ವಾಧಿಕಾರಿಗಳಾದ ಅಡಾಲ್ಫ್‌ ಹಿಟ್ಲರ್‌ (Adolf Hitler) ಹಾಗೂ ಸದ್ದಾಂ ಹುಸೇನ್‌ (Saddam Hussein) ಅವರಿಗೆ ಹೋಲಿಕೆ ಮಾಡಿದ್ದಾರೆ.

“ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಸದ್ದಾಂ ಹುಸೇನ್‌, ಅಡಾಲ್ಫ್‌ ಹಿಟ್ಲರ್‌ ಕೂಡ ಮೈನಾರಿಟಿ ಕಮ್ಯುನಿಟಿ ಮೇಲೆ ದೌರ್ಜನ್ಯ ಎಸಗಿದ್ದರು. ಆದರೂ, ಸದ್ದಾಂ ಹುಸೇನ್‌ ದೈವ ಭಕ್ತನಾಗಿದ್ದ. ದೊಡ್ಡ ದೊಡ್ಡ ಮಸೀದಿಗಳನ್ನು ಕಟ್ಟುತ್ತಿದ್ದ. ಜನರನ್ನು ತಮ್ಮ ಹತ್ತಿರ ಹಿಡಿದುಕೊಳ್ಳುವ ಆಯುಧ ಎಂದರೆ ಅದು ಧಾರ್ಮಿಕ ವಿಚಾರಗಳಿಗೆ ಪ್ರಚೋದನೆ ಕೊಡುವುದು. ಹಾಗಾಗಿ, ನರೇಂದ್ರ ಮೋದಿ ಕೂಡ ಭಾರತದಲ್ಲಿ ಇದನ್ನೇ ಮಾಡುತ್ತಿದ್ದಾರೆ. ಇದರ ಭಾಗವಾಗಿಯೇ ರಾಮಮಂದಿರ ನಿರ್ಮಿಸಿದರು. ಆದರೆ, ಅದನ್ನು ಪೂರ್ಣಗೊಳಿಸಿಲ್ಲ. ರಾಮಮಂದಿರವನ್ನು ಮಾತ್ರ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ” ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಾಲ ಹೆಚ್ಚಿಸಿದ್ದೇ ಮೋದಿ ಸಾಧನೆ

“ದೇಶದಲ್ಲಿ ದೊಡ್ಡವರ ಅಪರಾಧ, ಅತ್ಯಾಚಾರಗಳು ಹೊರಗೆ ಬರಲ್ಲ. ಅಪರಾಧಗಳ ಸಂಖ್ಯೆ ಗಣನೀಯವಾಗಿ ಜಾಸ್ತಿಯಾಗಿದೆ. ಅಷ್ಟೇ ಅಲ್ಲ, ಕಳೆದ 10 ವರ್ಷದಲ್ಲಿ ಹೆಚ್ಚು ಸಾಲ ಮಾಡಿದ್ದೇ ಮೋದಿ ಅವರ ಸಾಧನೆಯಾಗಿದೆ. ಕಾಂಗ್ರೆಸ್‌ ಅವಧಿಯಲ್ಲಿ ದೇಶದ ಸಾಲ 25 ಲಕ್ಷ ಕೋಟಿ ರೂ. ಇತ್ತು. ಮೋದಿ ಅವಧಿಯಲ್ಲಿ ಅದು ಗಣನೀಯವಾಗಿ ಜಾಸ್ತಿಯಾಗಿದೆ. ಮೋದಿ ಅವಧಿಯಲ್ಲಿ ಸಾಲದ ಪ್ರಮಾಣವು ಶೇ.2.5ರಷ್ಟು ಹೆಚ್ಚಾಗಿದೆ. ಇದು ಮೋದಿ ಅವರ ಸಾಧನೆಯಾಗಿದೆ” ಎಂದು ಕುಟುಕಿದರು.

ಮೋದಿ ಇವೆಂಟ್‌ ಮ್ಯಾನೇಜರ್‌

“ನರೇಂದ್ರ ಮೋದಿ ಅವರು ಒಬ್ಬ ಇವೆಂಟ್‌ ಮ್ಯಾನೇಜರ್.‌ ನಮ್ಮಂತಹ ಪ್ರಜಾಪ್ರಭುತ್ವ ದೇಶಕ್ಕೆ ಜನಾನುರಾಗಿ ನಾಯಕ ಬೇಕೇ ಹೊರತು, ಇವೆಂಟ್‌ ಮ್ಯಾನೇಜರ್‌ ಅಲ್ಲ. ರೈತರು, ಕಾರ್ಮಿಕರು ಹಾಗೂ ಕೈಗಾರಿಕೆಗಳ ಸ್ಥಿತಿ ಶೋಚನೀಯವಾಗಿದೆ. ಆದರೆ, ಕಾಂಗ್ರೆಸ್‌ ಜನರ ಪರವಾಗಿ ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಗ್ಯಾರಂಟಿ ಘೋಷಣೆ ಮಾಡಲಾಯಿತು. ಇದಕ್ಕೆ ಹಣ ತರುವುದು ಹೇಗೆ ಎಂಬ ಅನುಮಾನ ನನಗೂ ಇತ್ತು. ಆದರೆ, ಅಧಿಕಾರಕ್ಕೆ ಬಂದ 10 ತಿಂಗಳಲ್ಲಿಯೇ ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದೆ. ಸಿದ್ದರಾಮಯ್ಯ ಅವರು ಅನುಷ್ಠಾನಕ್ಕೆ ತಂದು ಸಾಧನೆ ಮಾಡಿದ್ದಾರೆ” ಎಂಬುದಾಗಿ ಬಣ್ಣಿಸಿದರು.

ಇದನ್ನೂ ಓದಿ: Siddaramaiah: ಯಾವ ಮುಖ ಇಟ್ಕೊಂಡು ಮೋದಿ ಮತ ಕೇಳ್ತಾರೆ? ಸಿದ್ದರಾಮಯ್ಯ ವಾಗ್ದಾಳಿ

ರಾಮಮಂದಿರ ಕಟ್ಟಿದ್ದೇವೆ

“ನಾವು ಕೂಡ ರಾಮನ ಭಕ್ತರು. ನಮ್ಮ ಊರಿನಲ್ಲಿ ರಾಮಮಂದಿರ ಕಟ್ಟಿದ್ದೇವೆ. ರಾಮಾಯಣ ಮಹಾನ್ವೇಷಣಂ ಕೃತಿ ಕೂಡ ಬರೆದವನು ನಾನು. ರಾಮನ ಬಗ್ಗೆ ಇತಿಹಾಸವಿದೆ. ಆದರೆ, ನಮ್ಮದು ಜಾತ್ಯತೀತ ರಾಷ್ಟ್ರ. ರಾಮಮಂದಿರ ನಿರ್ಮಿಸಿದ್ದೇವೆ ಎಂದು ಅದರ ಹೆಸರಲ್ಲಿ ರಾಜಕಾರಣ ಮಾಡಬಾರದು” ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading
Advertisement
Latest1 hour ago

ಸಿಎಂ ಆದ ಮರುದಿನವೇ ಮಾಜಿ ಸಿಎಂ ಸ್ಟಾಲಿನ್‌ ಭೇಟಿಯಾದ ವಿಜಯ್‌

Latest1 day ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ1 day ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest1 day ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest1 day ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

ಪ್ರಮುಖ ಸುದ್ದಿ2 days ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest2 days ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest2 days ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ3 days ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ3 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌