ಬೆಂಗಳೂರು: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಕಾನೂನು ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಮುಂದಾಗಿದ್ದಾರೆ. ಈಗಾಗಲೇ ಸಿಎಂ ಬೆಂಬಲಕ್ಕೆ ನಿಲ್ಲಲು ಸಚಿವರು ಹಾಗೂ ಶಾಸಕರಿಗೆ ಹೈ ಕಮಾಂಡ್ ಸೂಚನೆ ಕೊಟ್ಟಿರುವ ಹಿನ್ನೆಲೆಯಲ್ಲಿ ಆ.23ರಂದು ಕೈ ವರಿಷ್ಠರ ಭೇಟಿಯಾಗಲು ಸಿಎಂ, ನವ ದೆಹಲಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದಾರೆ. ಕರ್ನಾಟಕ ರಾಜ್ಯಪಾಲರ ನಡೆ ವಿರುದ್ಧವಾಗಿ ದೆಹಲಿ ಮಟ್ಟದಲ್ಲಿ ಹೋರಾಟ ನಡೆಸುವ ಕುರಿತು ವರಿಷ್ಠರ ಜತೆ ಚರ್ಚೆ ನಡೆಸಲು ಸಿಎಂ ತೆರಳುತ್ತಿದ್ದಾರೆ.
ಇದನ್ನೂ ಓದಿ | Manipur Bomb Blast: ಮಾಜಿ ಶಾಸಕನ ಮನೆಯಲ್ಲಿ ಬಾಂಬ್ ಬ್ಲಾಸ್ಟ್; ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ
ದೇಶದಲ್ಲಿ ಬಿಜೆಪಿಯೇತರ ಹಾಗೂ ಕಾಂಗ್ರೆಸ್ ಪರವಿರುವ ಸರ್ಕಾರದ ಸಿಎಂಗಳ ಬೆಂಬಲದೊಂದಿಗೆ ರಾಷ್ಟ್ರಪತಿಗೆ ದೂರು ನೀಡುವ ಕುರಿತು ಸಿಎಂ ಚರ್ಚೆ ನಡೆಸಲಿದ್ದಾರೆ. ಕರ್ನಾಟಕದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆ ಹಾಗೂ ವರಿಷ್ಠರ ಭೇಟಿ ವೇಳೆ ಮತ್ತೊಮ್ಮೆ ಮುಡಾದಲ್ಲಿ ನನ ಪಾತ್ರವಿಲ್ಲ ಎಂದು ಮನವರಿಕೆ ಮಾಡಿಕೊಡಲು ಸಿಎಂ ದೆಹಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ.
ಪ್ರಾಸಿಕ್ಯೂಷನ್ ಸಂಕಷ್ಟ; ಸಿಎಂ ನಾಳಿನ ಬಳ್ಳಾರಿ, ಮಂತ್ರಾಲಯ ಪ್ರವಾಸ ರದ್ದು
ಬೆಂಗಳೂರು: ಆ. 19ರಂದು ನಿಗದಿಯಾಗಿದ್ದ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಬಳ್ಳಾರಿ ಜಿಲ್ಲಾ ಪ್ರವಾಸ ಮತ್ತು ಮಂತ್ರಾಲಯ ಭೇಟಿ ಕಾರ್ಯಕ್ರಮಗಳು ರದ್ದಾಗಿದೆ. ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಹೋರಾಟದ ಕುರಿತು ಚರ್ಚೆ ನಡೆಸಲು ನಾಳಿನ ಕಾರ್ಯಕ್ರಮಗಳನ್ನು ಸಿಎಂ ರದ್ದು ಮಾಡಿದ್ದಾರೆ.
ಇದನ್ನೂ ಓದಿ | V Somanna : ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದು ಸಂಸದರ ಕಚೇರಿ ಉದ್ಘಾಟಿಸಿದ ವಿ ಸೋಮಣ್ಣ
ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದರಿಂದ ಸಿಎಂ ಮುಂದಿನ ಕಾನೂನು ಹೋರಾಟದ ಕುರಿತು ಚರ್ಚೆ ನಡೆಸುತ್ತಿದ್ದಾರೆ. ಅಲ್ಲದೇ ನಾಳೆ ಹೈಕೋರ್ಟ್‌ನಲ್ಲಿ ಸಿಎಂ ಪರವಾಗಿ ಅಭಿಷೇಕ್ ಮನು ಸಿಂಘ್ವಿ, ಕಪಿಲ್ ಸಿಬಲ್ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ. ನಾಳೆ ಬೆಳಗ್ಗೆ ಬೆಂಗಳೂರಿಗೆ ಸಿಂಘ್ವಿ ಮತ್ತು ಸಿಬಲ್ ಆಗಮಿಸಲಿದ್ದಾರೆ. ಸೋಮವಾರ ಬೆಳಗ್ಗೆ ವಕೀಲರ ಜೊತೆಗೆ ಸಿಎಂ ಸಿದ್ದರಾಮಯ್ಯ ಸುದೀರ್ಘ ಚರ್ಚೆ ಹಿನ್ನೆಲೆಯಲ್ಲಿ ನಾಳಿನ ಬಳ್ಳಾರಿ ಜಿಲ್ಲೆ ಮತ್ತು ಮಂತ್ರಾಲಯ ಭೇಟಿಯನ್ನು ಸಿಎಂ ರದ್ದು ಮಾಡಿದ್ದಾರೆ.