Site icon Vistara News

CM Siddaramaiah: ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರೋದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದ ಸಿಎಂ

CM Siddaramaiah

ಬೆಂಗಳೂರು: ರಾಹುಲ್ ಗಾಂಧಿ ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು. ಅವರು ಲೋಕಸಭಾ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ ನೀಡಿದ್ದೆ. ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಎದುರಿಸಬೇಕಾದರೆ ನೀವೇ ವಿರೋಧಪಕ್ಷದ ನಾಯಕರಾಗಬೇಕೆಂದು ಕಾರ್ಯಕಾರಿಣಿ ಸಮಿತಿ ಹಾಗೂ ನಾನೂ ಒತ್ತಾಯ ಮಾಡಿದ್ದೆ. ವಿಪಕ್ಷ ನಾಯಕರಾಗಿ ಜವಾಬ್ದಾರಿ ವಹಿಸಿಕೊಂಡಿರುವ ಅವರಿಗೆ ಅಭಿನಂದನೆ ಹೇಳಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಹೇಳಿದರು.

ಹಾಲಿನ ಉತ್ಪಾದನೆ 99 ಲಕ್ಷ ಲೀಟರ್‌ಗಿಂತ ಹೆಚ್ಚಾಗಿದೆ

ಹಾಲಿನ ದರ ಹೆಚ್ಚಾಗಿಲ್ಲ. ಕಳೆದ ವರ್ಷ ಇದೇ ವೇಳೆಗೆ ಹಾಲಿನ ಉತ್ಪಾದನೆ 90 ಲಕ್ಷ ಲೀಟರ್ ಇತ್ತು. ಈಗ 99 ಲಕ್ಷ ಲೀಟರ್‌ಗಿಂತ ಹೆಚ್ಚಾಗಿದೆ. ರೈತರಿಂದ ನಾವು ಹಾಲು ಪಡೆಯಬೇಕಾಗಿದ್ದು, ಅದನ್ನು ಮಾರಾಟ ಮಾಡಬೇಕಿದೆ. ಅರ್ಧ ಲೀಟರ್ ಪ್ಯಾಕೆಟ್‌ನಲ್ಲಿ 50 ಮೀ.ಲೀ ಹೆಚ್ಚು ಮಾಡಿದ್ದು, ಅದಕ್ಕೆ ತಗಲುವ 2.10 ರೂ.ಗಳನ್ನು ಪ್ರಮಾಣಕ್ಕೆ ತಕ್ಕಂತೆ ಬೆಲೆ ನಿಗದಿ ಮಾಡಲಾಗಿದೆ ಎಂದು ಪುನರುಚ್ಚರಿಸಿದರು. ಮಾರುಕಟ್ಟೆ ಅಗತ್ಯವಿದೆ, ಹಾಲಿನ ಬೆಲೆ ಹೆಚ್ಚು ಮಾಡಿಲ್ಲ. ಹಾಲು ಹೆಚ್ಚು ಉತ್ಪಾದನೆಯಾಗಿರುವುದನ್ನು ಹೆಚ್ಚು ನೀಡಿ ಅದಕ್ಕೆ ತಕ್ಕದರವನ್ನಷ್ಟೇ ನಿಗದಿ ಮಾಡಲಾಗಿದೆ ಎಂದರು.

ಹಾಲಿನ ದರ ಏರಿಕೆಯಾಗಿಲ್ಲ: ಕಾಫಿ, ಟೀ ದರಗಳ ಹೆಚ್ಚಳ ಸಲ್ಲದು

ಹೋಟೆಲ್ ಮಾಲೀಕರ ಸಂಘದವರು ಸಭೆ ಸೇರಿ ಕಾಫಿ‌, ಟೀ ದರಗಳನ್ನು ಹೆಚ್ಚಿಸಲಾಗುವುದು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅವರು ಹೇಗೆ ಹೆಚ್ಚಿಸುತ್ತಾರೆ, ಹಾಲಿನ ಬೆಲೆ ಏರಿದ್ದರೆ ಮಾತ್ರ ಹೆಚ್ಚಿಸಬೇಕು ಎಂದರು.

ಇದನ್ನೂ ಓದಿ | CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

ರೈತರಿಂದ ಹಾಲು ಕೊಳ್ಳಬೇಕು

ಹೆಚ್ಚಾಗಿ ಉತ್ಪಾದನೆಯಾಗಿರುವ ಹಾಲನ್ನು ರೈತರಿಂದ ಕೊಳ್ಳಬೇಕೆ ಹೊರತು ಚೆಲ್ಲಲಾಗುವುದಿಲ್ಲ. ಕೊಳ್ಳುವವವರಿಗೆ ಹಾಲು ಹೆಚ್ಚಾಗಿ ದೊರೆಯುತ್ತಿದ್ದು ಜನ ಹಾಲನ್ನು ಕೊಳ್ಳಬೇಕು ಎಂದರು. ಇದೇ ವೇಳೆ ಸಂಸದರ ಸಭೆಗೆ ದೆಹಲಿಗೆ ತೆರಳುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಹೋಗುವಾಗ ಹೇಳುತ್ತೇನೆ ಎಂದರು.

Exit mobile version