Yathindra Siddaramaiah : ಲಿಸ್ಟ್‌ ಫೈನಲ್‌ ಮುಜುಗರ; ಯತೀಂದ್ರ ಮೇಲೆ ಸಿದ್ದರಾಮಯ್ಯ ಕೆಂಡಾಮಂಡಲ - Vistara News

ಕರ್ನಾಟಕ

Yathindra Siddaramaiah : ಲಿಸ್ಟ್‌ ಫೈನಲ್‌ ಮುಜುಗರ; ಯತೀಂದ್ರ ಮೇಲೆ ಸಿದ್ದರಾಮಯ್ಯ ಕೆಂಡಾಮಂಡಲ

Yathindra Siddaramaiah : ವರ್ಗಾವಣೆ ದಂಧೆಯ ಚರ್ಚೆ ಎಂಬಂತೆ ಬಿಂಬಿತವಾಗಿರುವ ಫೋನ್‌ ಸಂಭಾಷಣೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಯತೀಂದ್ರ ಮೇಲೆ ಗರಂ ಆಗಿದ್ದಾರೆ.

VISTARANEWS.COM


on

CM Siddaramaiah Yathindra Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ʻನನ್ನದೇ ಲಿಸ್ಟ್‌ ಫೈನಲ್‌ ಮಾಡಬೇಕುʼ ಎಂದು ನೇರ ಆದೇಶ ನೀಡುವ ಮೂಲಕ ಸುದ್ದಿಯಲ್ಲಿರುವ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರ ಮೇಲೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರೇ ಗರಂ ಆಗಿದ್ದಾರೆ.

ಮೈಸೂರು ತಾಲೂಕಿನ ಕೀಳನಪುರ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿದ್ದ ವೇಳೆ ಸಿದ್ದರಾಮಯ್ಯ ಅವರಿಂದ ಬಂದ ಫೋನ್‌ ಕರೆಗೆ ಉತ್ತರಿಸುವ ವೇಳೆ ಯತೀಂದ್ರ ಸಿದ್ದರಾಮಯ್ಯ ಲಿಸ್ಟ್‌ ಬಗ್ಗೆ ಮಾತನಾಡಿರುವುದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯ ಅವರು ಮಾಡಿದ ಕರೆಗೆ ಪ್ರತ್ಯುತ್ತರ ನೀಡಿದ ಯತೀಂದ್ರ ಅವರು, ಸಿಎಂ ಅವರ ವಿಶೇಷಾಧಿಕಾರಿ ಮಹದೇವ್‌ ನೀಡಿದ ಪಟ್ಟಿಯಲ್ಲಿ ವಿವೇಕಾನಂದ ಎಂಬ ಹೆಸರು ಹೇಗೆ ಸೇರಿಕೊಂಡಿತು ಎಂದು ಕೇಳಿದ್ದಾರೆ. ಸಿದ್ದರಾಮಯ್ಯ ಅವರ ಕೈಯಿಂದ ಮಹದೇವ್‌ ಅವರಿಗೆ ಫೋನ್‌ ಕೊಡಿಸಿ ʼಮಹದೇವ್​ ಯಾಕೆ ಯಾವ್ದ್ಯಾವುದು ಕೊಡ್ತಾ ಇದ್ದೀರಿ? ಮತ್ತೆ ಇದೆಲ್ಲ ಯಾರು ಕೊಡ್ತಿರೋದುʼ ಅಂತ ಪ್ರಶ್ನೆ ಮಾಡಿದ್ದಾರೆ. ʼಅದೆಲ್ಲ ಬೇಡ. ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟೇ ಮಾತ್ರ ಮಾಡಿʼ ಅಂತ ಯತೀಂದ್ರ ಸೂಚಿಸಿರುವ ವಿಡಿಯೊ ಈಗ ವೈರಲ್‌ ಆಗಿದೆ.

ಇದು ವರ್ಗಾವಣೆಗೆ ಸಂಬಂಧಿಸಿದ ಪಟ್ಟಿ ಎಂದು ಸುದ್ದಿಯಾಗಿದೆ. ಯತೀಂದ್ರ ಸಿದ್ದರಾಮಯ್ಯ ಅವರು ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ, ದಂಧೆ ನಡೆಸುತ್ತಿದ್ದಾರೆ ಎಂಬ ಆರೋಪಗಳಿಗೂ ಈ ವಿಡಿಯೊಗೂ ತಾಳೆ ಹಾಕಲಾಗುತ್ತಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರು ತೀವ್ರ ಮುಜುಗರಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

ಕಾವೇರಿಯಲ್ಲಿ ಜತೆಯಾಗಿರುವ ಸಿದ್ದರಾಮಯ್ಯ, ಪುತ್ರ ಯತೀಂದ್ರ

ಕೆಲವು ದಿನಗಳ ಹಿಂದೆ ಮೈಸೂರಿನಲ್ಲಿ ನಡೆದ ಈ ಘಟನೆಯ ವಿಡಿಯೊ ಗುರುವಾರ ವೈರಲ್‌ ಆಗಿದೆ. ಈ ಸುದ್ದಿ ಮಾಧ್ಯಮಗಳಲ್ಲಿ ಬ್ರೇಕ್‌ ಆದಾಗ ಸಿದ್ದರಾಮಯ್ಯ ಮತ್ತು ಯತೀಂದ್ರ ಅವರು ಕಾವೇರಿ ನಿವಾಸದಲ್ಲೇ ಇದ್ದರು. ಅಲ್ಲಿ ಅವರಿಬ್ಬರು ಮುಖಾಮುಖಿಯಾದಾಗ ಸಿದ್ದರಾಮಯ್ಯ ಅವರು ಯತೀಂದ್ರ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಮಾಧ್ಯಮಗಳ ಸುದ್ದಿ ಪ್ರಸ್ತಾಪಿಸಿ ಏನಿದು ಎಂದು ಸಿದ್ದರಾಮಯ್ಯ ಗರಂ ಆದರೆನ್ನಲಾಗಿದೆ.

ಇದನ್ನೂ ಓದಿ: Yathindra Siddaramaih : ಯತೀಂದ್ರ ವರ್ಗಾವಣೆ ದಂಧೆಗೆ ಸಾಕ್ಷಿ; ಸಿಎಂ ರಾಜೀನಾಮೆಗೆ HDK ಆಗ್ರಹ

ಇದಕ್ಕೆ ಯತೀಂದ್ರ ಕೊಟ್ಟ ಸ್ಪಷ್ಟನೆ ಏನು?

ʻʻಅದು ಕ್ಷೇತ್ರ ಮತ್ತು ಜಿಲ್ಲೆಯ ಕೆಲಸಗಳ ಪಟ್ಟಿಯನ್ನು ನಾನು ಕೊಟ್ಟಿದ್ದೆ. ನಾನು ಕೊಟ್ಟಿದ್ದು ಮಾಡಿ ಎಂದು ನಿಮ್ಮ ಜತೆ ಮಾತನಾಡಿದ್ದು. ಆದರೆ ಮಾಧ್ಯಮಗಳಲ್ಲಿ ಏನೇನೋ ಸುದ್ದಿ ಬರ್ತಿದೆʼʼ ಎಂದು ಯತೀಂದ್ರ ವಿವರಣೆ ನೀಡಿದ್ದಾರೆ ಎನ್ನಲಾಗಿದೆ.

ʻʻನೀವು ಮಹದೇವ್‌ ಅವರು ಪಟ್ಟಿ ಫೈನಲ್ ಮಾಡಿದ್ದಕ್ಕೆ ನನಗೆ ಬೇಸರ ಆಗಿತ್ತು. ಕ್ಷೇತ್ರದ ಕೆಲಸಕ್ಕಾಗಿ ಜಿಲ್ಲೆಯ ಕಾರ್ಯಕರ್ತರನ್ನು ಪರಿಗಣಿಸುವ ಸಲುವಾಗಿ ನನ್ನ ಪಟ್ಟಿ ಫೈನಲ್ ಮಾಡಿ ಎಂದು ಹೇಳಿದ್ದೆʼʼ ಎಂದು ಯತೀಂದ್ರ ಸಮಜಾಯಿಷಿ ನೀಡಿದರು ಎನ್ನಲಾಗಿದೆ.

ಆದರೆ, ಅದನ್ನೆಲ್ಲ ಸಾರ್ವಜನಿಕ ಸಭೆಯಲ್ಲಿ ಹೇಳ್ತಾರಾ? ಎಲ್ಲಿ ಏನು ಮಾತನಾಡಬೇಕು ಅಂತ ಗೊತ್ತಾಗಲ್ವಾ ಎಂದು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡರು ಎನ್ನಲಾಗಿದೆ.

ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್‌

ಇವೆಲ್ಲ ಬೆಳವಣಿಗೆಗಳ ನಡುವೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಆಗಮಿಸಿದ್ದಾರೆ. ಅಲ್ಲಿ ಹಲವು ವಿಚಾರಗಳ ಚರ್ಚೆ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Murder case : ರಸ್ತೆಯಲ್ಲಿ ಅಡ್ಡಗಟ್ಟಿ ಚಿಕ್ಕಮ್ಮನನ್ನು ಹೊಡೆದು ಕೊಂದ ದುಷ್ಟ

Murder case : ಪಾಪಿ ಮಗನೊಬ್ಬ ನಡುರಸ್ತೆಯಲ್ಲೇ ಚಿಕ್ಕಮ್ಮನನ್ನು ಹೊಡೆದು ಬಡಿದು ಕೊಂದು ಹಾಕಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಪರಾರಿ ಆಗಿರುವ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

VISTARANEWS.COM


on

By

murder case
ಕೊಲೆಯಾದ ಸ್ಥಳದಲ್ಲಿ ಪರಿಶೀಲನೆ ನಡೆಸಿದ ಪೊಲೀಸರು
Koo

ಬೆಂಗಳೂರು: ಕೌಟುಂಬಿಕ ಕಲಹ (Family Dispute) ಹಿನ್ನೆಲೆ ಮಗನಿಂದಲೆ ಚಿಕ್ಕಮ್ಮನ ಕೊಲೆಯಾಗಿದೆ. ಬೆಂಗಳೂರು ಗ್ರಾಮಾಂತರದ ಹೊಸಕೋಟೆಯ ಸಿದ್ದಾರ್ಥ ನಗರದ ಬಳಿ ತಡರಾತ್ರಿ ಘಟನೆ (Murder Case) ನಡೆದಿದೆ. ಬೆಂಗಳೂರಿನ ದೊಮ್ಮಸಂದ್ರ ಮೂಲದ ಚಂದ್ರಮ್ಮ ( 40 ) ಮೃತ ದುರ್ದೈವಿ. ಆರೋಪಿ ವೆಂಕಟೇಶ್ ಎಂಬಾತ ಕೊಲೆ ಮಾಡಿ ಎಸ್ಕೇಪ್ ಆದವನು.

ಚಂದ್ರಮ್ಮ ಕೈವಾರಕ್ಕೆ ದೇವಸ್ಥಾನಕ್ಕೆ ಹೋಗಿ ರಾತ್ರಿ ವಾಪಸ್ ಆಗುತ್ತಿದ್ದರು. ಈ ವೇಳೆ‌ ಹೊಸಕೋಟೆ ಬಳಿ ಚಂದ್ರಮ್ಮ ಇದ್ದ ಬೈಕ್ ಅಡ್ಡ ಗಟ್ಟಿದ ವೆಂಕಟೇಶ್‌ ಗಲಾಟೆ ಶುರು ಮಾಡಿದ್ದ. ಗಲಾಟೆಯಲ್ಲಿ ಮಾತಿಗೆ ಮಾತು ಬೆಳೆದಿದ್ದು, ಅಲ್ಲೆ ಇದ್ದ ದೊಣ್ಣೆಯಿಂದ ಚಂದ್ರಮ್ಮನ ತಲೆಗೆ ಹೊಡೆದಿದ್ದಾನೆ. ದೊಣ್ಣೆಯಿಂದ ಹೊಡೆದ ರಭಸಕ್ಕೆ ಚಂದ್ರಮ್ಮ ತೀವ್ರ ರಕ್ತವಾಗಿ ರಸ್ತೆಯಲ್ಲೆ ಬಿದ್ದು ಒದ್ದಾಡಿದ್ದಾರೆ.

ಮಾರಣಾಂತಿಕ ಹಲ್ಲೆ ಮಾಡಿದ ವೆಂಕಟೇಶ್‌ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಇತ್ತ ಗಂಭೀರ ಗಾಯಗೊಂಡಿದ್ದ ಚಂದ್ರಮ್ಮಳನ್ನು ಬೆಂಗಳೂರಿನ ಖಾಸಗಿ ಆಸ್ವತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಚಂದಮ್ಮ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

murder Case

ಪರಾರಿ ಆಗಿರುವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ‌ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Prajwal Revanna Case: ಇಂದು ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯ, ಮತ್ತೊಂದು ಕೇಸ್‌ನಲ್ಲಿ ಅಂದರ್!‌

ಚಿಮ್ಮಿದ ರಕ್ತ, ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆ

ಚಿಕ್ಕೋಡಿ: ಭಾನುವಾರ ತಡರಾತ್ರಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬನ ಬರ್ಬರವಾಗಿ ಕೊಲೆ (Murder Case) ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ‌ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಯಕ್ಸಂಬಾ ಪಟ್ಟಣದ ನಿವಾಸಿ ಮಹೇಶ ಕುರ್ಣಿ (48) ಕೊಲೆಯಾದವನು.

ಯಕ್ಸಂಬಾ ಪಟ್ಟಣದ ಬೀರೇಶ್ವರ ಕಾಲೋನಿಯಲ್ಲಿ ಈ ಕೃತ್ಯ ನಡೆದಿದೆ. ಮುಂಜಾನೆ ರಕ್ತಸಿಕ್ತವಾಗಿ ಬಿದ್ದಿದ್ದ ಮೃತದೇಹವನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಕೂಡಲೇ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸದಲಗಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಂತಕರು ಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ. ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Prajwal Revanna Case: ಇಂದು ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯ, ಮತ್ತೊಂದು ಕೇಸ್‌ನಲ್ಲಿ ಅಂದರ್!‌

Prajwal Revanna Case: ಸಿಐಡಿಯಲ್ಲಿ ದಾಖಲಾಗಿರುವ ರೇಪ್ ಕೇಸಿನಲ್ಲಿ ಇನ್ನಷ್ಟು ತನಿಖೆ ಅಗತ್ಯವಾಗಿರುವ ಕಾರಣ ಮತ್ತೆ ಬಾಡಿ ವಾರೆಂಟ್ ಮೇಲೆ ಪ್ರಜ್ವಲ್ ರೇವಣ್ಣ ಕಸ್ಟಡಿಗೆ ಪಡೆಯಲು ಎಸ್‌ಐಟಿ ಕೋರ್ಟ್‌ಗೆ ಮನವಿ ಮಾಡಲಿದೆ.

VISTARANEWS.COM


on

Prajwal revanna case
Koo

ಬೆಂಗಳೂರು: ಇಂದು ಹಾಸನ (Hassan Ex MP) ಮಾಜಿ ಸಂಸದ ಪ್ರಜ್ವಲ್ ರೇವಣ್ಣ‌ (Prajwal Revanna Case) ಅವರ ವಿರುದ್ಧದ ಒಂದು ಅತ್ಯಾಚಾರ ಪ್ರಕರಣದಲ್ಲಿ (physical Abuse) ಪೊಲೀಸ್‌ ಕಸ್ಟಡಿ (Police Custody) ಮುಕ್ತಾಯವಾಗುತ್ತಿದ್ದು, ಕೋರ್ಟ್‌ಗೆ (court) ಹಾಜರುಪಡಿಸಲಾಗುತ್ತಿದೆ. ಮತ್ತೊಂದು ಪ್ರಕರಣದಲ್ಲಿ ಅವರನ್ನು ಕಸ್ಟಡಿಗೆ ಪಡೆಯಲು ಎಸ್‌ಐಟಿ (SIT) ಸಿದ್ಧತೆ ಮಾಡಿಕೊಂಡಿದೆ.

ಈಗಾಗಲೇ ಎರಡೆರಡು ಬಾರಿ ಪ್ರಜ್ವಲ್‌ ರೇವಣ್ಣ ಅವರನ್ನು ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ಮಾಡಿದ್ದಾರೆ. ಕೋರ್ಟ್‌ಗೆ ಮನವರಿಕೆ ಮಾಡಿ, ಪ್ರಜ್ವಲ್ ವಿರುದ್ಧದ ಎರಡು ಪ್ರಕರಣಗಳ ತನಿಖೆಯನ್ನು ಎಸ್ಐಟಿ ಮುಗಿಸಿದೆ. ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳಲ್ಲಿ ಹಾಗೂ ಸಿಐಡಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದ ತನಿಖೆ ಬಹುತೇಕ ಪೂರ್ಣವಾಗಿದೆ.

ಇಂದು ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಪ್ರಜ್ವಲ್ ರೇವಣ್ಣನನ್ನು ಕೋರ್ಟ್‌ಗೆ ಎಸ್ಐಟಿ ಹಾಜರುಪಡಿಸಲಿದೆ. ಸಿಐಡಿಯಲ್ಲಿ ದಾಖಲಾಗಿರುವ ರೇಪ್ ಕೇಸಿನಲ್ಲಿ ಇನ್ನಷ್ಟು ತನಿಖೆ ಅಗತ್ಯವಾಗಿರುವ ಕಾರಣ ಮತ್ತೆ ಬಾಡಿ ವಾರೆಂಟ್ ಮೇಲೆ ಪ್ರಜ್ವಲ್ ರೇವಣ್ಣ ಕಸ್ಟಡಿಗೆ ಪಡೆಯಲು ಎಸ್‌ಐಟಿ ಕೋರ್ಟ್‌ಗೆ ಮನವಿ ಮಾಡಲಿದೆ.

ಪ್ರತಿಯೊಂದು ಪ್ರಕರಣದಲ್ಲಿಯೂ ಕಸ್ಟಡಿಗೆ ಪಡೆದು ಪ್ರತ್ಯೇಕವಾಗಿ ತನಿಖೆ ನಡೆಸಲಾಗುತ್ತಿದೆ. ಒಟ್ಟು ಮೂರು ಪ್ರಕರಣಗಳಿದ್ದು, ಒಂದು ಪ್ರಕರಣ ಮುಗಿದ ಬೆನ್ನಲ್ಲೆ ಮತ್ತೊಂದು ಪ್ರಕರಣದ ತನಿಖೆ ನಡೆಯುತ್ತಿದೆ. ಪ್ರಜ್ವಲ್ ರೇವಣ್ಣ‌ ವಿರುದ್ಧ ಪ್ರಬಲ ಸಾಕ್ಷ್ಯಗಳ ಸಂಗ್ರಹಕ್ಕೆ ಎಸ್ಐಟಿ ಹರಸಾಹಸ ಪಡುತ್ತಿದೆಯಾದರೂ, ಅದು ಸಾಧ್ಯವಾಗಿಲ್ಲ. ಎಸ್‌ಐಟಿ ವಶದಲ್ಲಿರುವ ಅಶ್ಲೀಲ ವಿಡಿಯೋಗಳಲ್ಲಿ ಪ್ರಜ್ವಲ್‌ ಮುಖ ಕಾಣಿಸುತ್ತಿಲ್ಲ. ಹಲವಾರು ಮಹಿಳೆಯರ ಜೊತೆಗಿನ ಲೈಂಗಿಕ ಕ್ರಿಯೆಗಳು ದಾಖಲಾಗಿವೆಯಾದರೂ, ಅವರಲ್ಲಿ ಯಾರೂ ದೂರು ನೀಡಿಲ್ಲ. ಪ್ರಜ್ವಲ್‌ ಮನೆಯಲ್ಲಿ ನಡೆದ ಮಹಜರು ವೇಲೆ ವಶಪಡಿಸಿಕೊಳ್ಳಲಾದ ವಸ್ತುಗಳಲ್ಲಿ ಸಂಸದರ ವಿರುದ್ಧ ನಿಲ್ಲಬಹುದಾದ ಮಹತ್ವದ ಸಾಕ್ಷಿಗಳು ದೊರೆತಿಲ್ಲ.

10 ದಿನ ಎಸ್‌ಐಟಿ ಕಸ್ಟಡಿಯಲ್ಲಿದ್ದ ಪ್ರಜ್ವಲ್‌ ರೇವಣ್ಣನನ್ನು ಜೂನ್‌ 10ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಜೂನ್‌ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲು ಸೂಚಿಸಲಾಗಿತ್ತು. ಇನ್ನೂ ವಿಚಾರಣೆ ಬಾಕಿ ಇರುವುದರಿಂದ ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಮನವಿ ಮಾಡಿದ್ದರಿಂದ, ಮತ್ತೆ 6 ದಿನಗಳ ಕಾಲ ಪ್ರಜ್ವಲ್‌ ರೇವಣ್ಣನನ್ನು ಎಸ್‌ಐಟಿ ಕಸ್ಟಡಿಗೆ ನೀಡಲು ಕೋರ್ಟ್‌ ಸಮ್ಮತಿಸಿದೆ. ನ್ಯಾಯಾಂಗ ಬಂಧನದಲ್ಲಿದ್ದ ಪ್ರಜ್ವಲ್‌ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ಕಳೆದಿದ್ದಾರೆ. ಜೈಲಿನ ಕ್ವಾರಂಟೈನ್ ಬ್ಯಾರಕ್‌ನಲ್ಲಿ ಸಾಮಾನ್ಯ ಕೈದಿಯಂತೆ ಪ್ರಜ್ವಲ್ ಇದ್ದರು.

ಇನ್ನೊಂದೆಡೆ ವಿಡಿಯೋ ಮಾಡಿಕೊಂಡ ಮದರ್ ಡಿವೈಸ್‌ಗಾಗಿ ಎಸ್‌ಐಟಿ ಹುಡುಕಾಟ ನಡೆಸಿದೆ. ಈ ಮೂಲ ಮೊಬೈಲ್‌ ಕಳೆದುಹೋಗಿದೆ. ಒಂದು ವರ್ಷದ ಹಿಂದೆಯೇ ಈ ಬಗ್ಗೆ ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿರುವುದಾಗಿ ಪ್ರಜ್ವಲ್‌ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಪರಾರಿಯಾಗಲು ಸಹಾಯ; ಪ್ರಜ್ವಲ್ ರೇವಣ್ಣ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೊಟೀಸ್!

Continue Reading

ಕ್ರೈಂ

Actor Darshan: ಆ ಭೀಕರ ಶೆಡ್‌ನಲ್ಲಿ ಇನ್ನೂ ಹಲವರ ರಕ್ತದ ಕಲೆ ಪತ್ತೆ! ಏನ್‌ ನಡೆದಿತ್ತು ಇಲ್ಲಿ?

Actor Darshan: ದರ್ಶನ್‌ ಮತ್ತು ಗ್ಯಾಂಗ್‌ನ ಕರಾಳ ಹಿನ್ನೆಲೆಗೆ ಈ ಶೆಡ್‌ನಲ್ಲಿ ಸಿಗುತ್ತಿರುವ ಸಾಕ್ಷ್ಯಗಳು ಮತ್ತಷ್ಟು ಪೂರಕವಾಗಲಿವೆ. ಪಟ್ಟಣಗೆರೆ ಶೆಡ್‌ನಲ್ಲಿ ವಿಧಿವಿಜ್ಞಾನ ಪರಿಶೀಲನೆಗೆ ಎಫ್ಎಸ್ಎಲ್ ಟೀಮ್‌ ಹೋದಾಗ ಬೇರೆಯವರ ರಕ್ತದ ಕಲೆಗಳು ಸಿಕ್ಕಿದ್ದು, ಇವು ಯಾರವು ಎಂದು ಪತ್ತೆ ಹಚ್ಚುವ ತಲೆನೋವು ಕೂಡ ಎಸ್‌ಐಟಿ ಹೆಗಲೇರಿದೆ.

VISTARANEWS.COM


on

pattanagere shed actor darshan renuka swamy murder
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಆರೆಸ್ಟ್ ಆಗಿರುವ ನಟ ದರ್ಶನ್ (Actor Darshan) ವಿಚಾರಣೆಯ ಜೊತೆಜೊತೆಗೇ, ಹಲ್ಲೆ ನಡೆಸಲಾಗಿರುವ ಪಟ್ಟಣಗೆರೆಯ ಶೆಡ್‌ನ (Pattanagere Shed) ಬಗ್ಗೆ ಇನ್ನಷ್ಟು ಭೀಕರ ಸತ್ಯಗಳು ಅನಾವರಣವಾಗುತ್ತಿವೆ. ಶೆಡ್‌ನಲ್ಲಿ ಈ ಪ್ರಕರಣಕ್ಕೆ ಸಂಬಂಧವಿಲ್ಲದ ಇನ್ನಷ್ಟು ಮಂದಿಯ ರಕ್ತದ ಕಲೆಗಳು (blood stains) ಪತ್ತೆಯಾಗಿದ್ದು, ಇನ್ನಷ್ಟು ಹಲ್ಲೆ- ಕೊಲೆ (Assault) ಪ್ರಕರಣಗಳು ಇಲ್ಲಿ ನಡೆದಿರಬಹುದು ಎಂಬ ತರ್ಕಕ್ಕೆ ಪುಷ್ಟಿ ನೀಡಿವೆ.

ದರ್ಶನ್‌ ಮತ್ತು ಗ್ಯಾಂಗ್‌ನ ಕರಾಳ ಹಿನ್ನೆಲೆಗೆ ಈ ಶೆಡ್‌ನಲ್ಲಿ ಸಿಗುತ್ತಿರುವ ಸಾಕ್ಷ್ಯಗಳು ಮತ್ತಷ್ಟು ಪೂರಕವಾಗಲಿವೆ. ಪಟ್ಟಣಗೆರೆ ಶೆಡ್‌ನಲ್ಲಿ ವಿಧಿವಿಜ್ಞಾನ ಪರಿಶೀಲನೆಗೆ ಎಫ್ಎಸ್ಎಲ್ ಟೀಮ್‌ ಹೋದಾಗ ಬೇರೆಯವರ ರಕ್ತದ ಕಲೆಗಳು ಸಿಕ್ಕಿದ್ದು, ಇವು ಯಾರವು ಎಂದು ಪತ್ತೆ ಹಚ್ಚುವ ತಲೆನೋವು ಕೂಡ ಎಸ್‌ಐಟಿ ಹೆಗಲೇರಿದೆ.

ಈ ಹಿಂದೆ ಇದೇ ಶೆಡ್‌ನಲ್ಲಿ ದರ್ಶನ್‌, ತನ್ನ ಇತರ ವಿರೋಧಿಗಳನ್ನೂ ಕರೆಸಿ ಹಲ್ಲೆ ನಡೆಸುತ್ತಿದ್ದುದರ ಬಗ್ಗೆ ಪುಕಾರುಗಳಿವೆ. ಬಂಧಿತ ಆರೋಪಿಗಳಲ್ಲೇ ಹಲವರು ಈ ವಿಚಾರ ಬಾಯ್ಬಿಟ್ಟಿದ್ದಾರೆ. ಹೀಗಾಗಿ, ವಿನಯ್ ಆಂಡ್ ಗ್ಯಾಂಗ್‌ನಿಂದ ಈ ಶೆಡ್‌ನಲ್ಲಿ ರೇಣುಕಾಸ್ವಾಮಿ ಅಲ್ಲದೆ ಬೇರೆಯವರ ಮೇಲೆಯೂ ಹಲ್ಲೆ ನಡೆದಿತ್ತು; ವ್ಯವಹಾರದ ವಿಚಾರವಾಗಿ ಹಲವರ ಮೇಲೆ ಹಲ್ಲೆ ಮಾಡಿದ್ದರ ಬಗ್ಗೆಯೂ ಇದೀಗ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಈಗ ರೇಣುಕಾಸ್ವಾಮಿಯ ರಕ್ತದ ಕಲೆಗಳಲ್ಲದೆ, ಮೂರರಿಂದ ನಾಲ್ಕು ತಿಂಗಳ ಹಿಂದಿನ ಬ್ಲಡ್ ಗುರುತುಗಳು ಕೂಡ ಪತ್ತೆಯಾಗಿವೆ. ಆದರೆ ಹಲ್ಲೆಗೊಳಗಾದ ಬಗ್ಗೆ ಯಾರೂ ಸಹ ದೂರು ನೀಡಲು ಮುಂದೆ ಬಂದಿಲ್ಲ. ಹಲ್ಲೆಗೊಳಗಾಗಿದ್ದರೂ ದರ್ಶನ್‌ಗೆ ಹೆದರಿಕೊಂಡು ಸುಮ್ಮನಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆಯೂ ಆರೋಪಿಗಳನ್ನು ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.

ನಿರ್ಮಾಪಕರಿಗೂ ಗೂಸಾ!

ರೇಣುಕಾಸ್ವಾಮಿ ಕೊಲೆಯಾದ ಪಟ್ಟಣಗೆರೆಯ ಆ ಶೆಡ್ ಬಗ್ಗೆ ಇದೀಗ ಇನ್ನಿತರ ಕೆಲವು ಭಯಾನಕ ಸತ್ಯಗಳು ಹೊರಬೀಳುತ್ತಿವೆ. ಇಲ್ಲಿ ಅದೆಷ್ಟೋ ಕನ್ನಡ ಚಿತ್ರ ನಿರ್ಮಾಪಕರು ಕೂಡ ಗೂಸಾ ತಿಂದಿದ್ದಾರೆ ಎಂಬುದು ಬಯಲಾಗಿದೆ. ತನಗೆ ಆಗದವರು, ತನ್ನ ವಿರೋಧಿಗಳು ಹಾಗೂ ಪೇಮೆಂಟ್‌ ಮಾಡದ ನಿರ್ಮಾಪಕರನ್ನು ಅಟ್ಯಾಕ್ ಮಾಡಲು ದರ್ಶನ್‌ ಬಳಸುತ್ತಿದ್ದ ಜಾಗವೇ ಈ ಶೆಡ್ ಎನ್ನಲಾಗಿದೆ.

ನಟ ದರ್ಶನ್ ಎಷ್ಟೋ ಮಂದಿಗೆ ಇಲ್ಲೇ ಹಲ್ಲೆ ಮಾಡಿ, 2ರಿಂದ 3 ದಿನಗಳ ಕಾಲ ಇಲ್ಲೇ ಇರಿಸಿಕೊಳ್ಳುತ್ತಿದ್ದ. ಕಳಿಸಿಕೊಡುವಾಗ ಬ್ಯಾಂಡೇಜ್ ಹಾಕಿಸಿ ಕೈಗೆ ಹಣ ಕೊಟ್ಟು ಕಳುಹಿಸುತ್ತಿದ್ದ ಎಂದು ಕೆಲವರು ಇದೀಗ ಪೊಲೀಸರ ಮುಂದೆ ಹೇಳಿಕೊಂಡಿದ್ದಾರೆ. ದರ್ಶನ್‌ ಕಾರು ಇಲ್ಲಿಗೆ ಆಗಾಗ ಬಂದು ಹೋಗುತ್ತಿದ್ದುದನ್ನು ಕೆಲವು ಸ್ಥಳೀಯರು ಗಮನಿಸಿದ್ದಾರೆ. ದರ್ಶನ್‌ಗೆ ಇನ್ನೆಷ್ಟು ಕರಾಳ ಮುಖಗಳಿವೆ ಎಂದು ಪೊಲೀಸರೇ ಇದೀಗ ಬೆಚ್ಚಿ ಬೀಳುವಂತಾಗಿದೆ.

ಪ್ರಮುಖ ಸಾಕ್ಷಿಗಳೇ ನಾಶ, ಸಿಸಿಟಿವಿ ರೆಕಾರ್ಡ್‌ ಡಿಲೀಟ್‌

ರೇಣುಕಾಸ್ವಾಮಿ ಕೊಲೆಯ‌ (Renuka Swamy Murder) ನಂತರ ಆಸುಪಾಸಿನ ಸ್ಥಳಗಳಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ (CCTV recording) ದಾಖಲಾಗಿದ್ದ ಎಲ್ಲ ದೃಶ್ಯಗಳನ್ನು ಡಿಲೀಟ್‌ (Delete) ಮಾಡಲಾಗಿದೆ ಎಂಬ ಆಘಾತಕಾರಿ ಸಂಗತಿ ಬಯಲಾಗಿದೆ. ದರ್ಶನ್‌ (Actor Darshan) ನಡೆಸಿದ ಕರಾಳ ಕೃತ್ಯದ ನಂತರ ಕಳೆದ ಒಂದು ವರ್ಷದ ಸಿಸಿಟಿವಿ ದಾಖಲಾತಿಗಳನ್ನು ಡಿಲೀಟ್‌ ಮಾಡಲಾಗಿದೆ ಎಂಬ ಎಕ್ಸ್‌ಕ್ಲೂಸಿವ್‌ ಮಾಹಿತಿ ವಿಸ್ತಾರ ನ್ಯೂಸ್‌ಗೆ ದೊರೆತಿದೆ.

ಕೊಲೆಯ ಬಳಿಕ, ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನ ಹಾಗೂ ಹಲ್ಲೆ ನಡೆದ ಪಟ್ಟಣಗೆರೆಯ ಶೆಡ್‌ನ ದೃಶ್ಯಗಳನ್ನು ಡಿಲೀಟ್‌ ಮಾಡಿಸಲಾಗಿದೆ. ಆರೋಪಿಗಳು ಕಳೆದ ಒಂದು ವರ್ಷದ ಸಿಸಿ ಟಿವಿ ದೃಶ್ಯಗಳನ್ನು ಡಿಲೀಟ್ ಮಾಡಿಸಿದ್ದಾರೆ. ಸಿಸಿ ಟಿವಿ ದೃಶ್ಯಗಳೇ ಕೊಲೆಯ ಪ್ರಮುಖ ಸಾಕ್ಷಿ ಆಗಲಿವೆ ಎಂಬ ಹಿನ್ನೆಲೆಯಲ್ಲಿ, ಇವುಗಳನ್ನು ಪೂರ್ತಿಯಾಗಿ ಡಿಲೀಟ್‌ ಮಾಡಲು ಆರೋಪಿಗಳು ಅಪರಾಧ ಪರಿಣಿತರ ಸಲಹೆ ಪಡೆದೇ ಈ ಕೃತ್ಯ ಎಸಗಿದ್ದಾರೆ ಎಂದು ತರ್ಕಿಸಲಾಗಿದೆ.

ರೇಣುಕಾಸ್ವಾಮಿ ಕೊಲೆಯ ಮೊದಲಿನ ಹಾಗೂ ನಂತರದ ಎಲ್ಲಾ ಸಿಸಿ ಕ್ಯಾಮರಾ ದೃಶ್ಯಗಳನ್ನು ಡಿಲೀಟ್‌ ಮಾಡಿಸಿದ್ದಾರೆ. ತನಿಖೆಗೆ ಇವು ಅತ್ಯಂತ ಅಗತ್ಯವಾಗಿದ್ದು, ಶೆಡ್ ಹಾಗೂ ರೆಸ್ಟೋರೆಂಟ್‌ನ ಸಿಸಿ ಟಿವಿ‌ ರೆಕಾರ್ಡಿಂಗ್‌ ರಿಕವರಿ ಮಾಡಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ದರ್ಶನ್‌ ಸೇರಿದಂತೆ ಆರೋಪಿಗಳ ಬಂಧನ ಆದ ಬಳಿಕ ಈ ರೆಕಾರ್ಡಿಂಗ್‌ ಡಿಲೀಟ್‌ ಮಾಡಲಾಗಿದೆಯೇ ಅಥವಾ ಮೊದಲೇ ಮಾಡಲಾಗಿದೆಯೇ ಎಂದು ತಿಳಿದುಬರಬೇಕಿದೆ.

ಕೊಲೆಯ ಪ್ರಮುಖ ಸಾಕ್ಷಿಗಳನ್ನೇ ಖತರ್‌ನಾಕ್ ಆರೋಪಿಗಳು ಡಿಲೀಟ್ ಮಾಡಿದ್ದು, ಈ ಹಿನ್ನೆಲೆಯಲ್ಲಿ ಸಾಕ್ಷಿ ನಾಶಕ್ಕೆ ಪೊಲೀಸ್‌ ಇಲಾಖೆಯಲ್ಲಿರುವವರಿಂದಲೂ ಆರೋಪಿಗಳು ಸಲಹೆ ಪಡೆದಿದ್ದಾರೆಯೇ ಎಂಬುದು ಕೂಡ ತನಿಖಾಧಿಕಾರಿಗಳಿಗೆ ಕುತೂಹಲ ಮೂಡಿಸಿದೆ. ಈಗಾಗಲೇ ಪ್ರಶ್ನೆಗೆ ಒಳಗಾಗುತ್ತಿರುವವರ ಪಟ್ಟಿಯಲ್ಲಿ ಒಬ್ಬ ಪೊಲೀಸ್‌ ಅಧಿಕಾರಿ ಕೂಡ ಇದ್ದಾರೆ ಎಂಬುದನ್ನು ಇಲ್ಲಿ ಗಮನಿಸಬಹುದು.

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಪಟ್ಟಣಗೆರೆಯ ಶೆಡ್‌ನಲ್ಲಿ ಕೂಡಿಹಾಕಿ ಥಳಿಸಿ ಸಾಯಿಸಲಾಗಿತ್ತು. ನಂತರ ಇದನ್ನು ಮುಚ್ಚಿಹಾಕುವುದು ಹೇಗೆ ಎಂಬ ಕುರಿತು ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ನಟ ಹಾಗೂ ಆರೋಪಿಗಳು ಕೂತು ಮಾತನಾಡಿದ್ದರು. ಇಲ್ಲೇ 30 ಲಕ್ಷ ರೂಪಾಯಿಯ ಡೀಲ್‌ ಕೂಡ ನಡೆದಿತ್ತು. ಇದೀಗ ಎರಡೂ ಕಡೆಗಳ ಸಿಸಿಟಿವಿ ಹಾರ್ಡ್ ಡ್ರೈವ್‌ಗಳು ಕೂಡ ನಾಶವಾಗಿವೆ ಎಂದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನ ಮಾಲಿಕ‌ ವಿನಯ್‌ನನ್ನು ಕೂಡ ಪ್ರಶ್ನಿಸಲಾಗುತ್ತಿದೆ. ‌

ಇದನ್ನೂ ಓದಿ: Actor Darshan: ಕೊಲೆಯನ್ನು ಆತುರದಲ್ಲಿ ಮಾಡಿರ್ತಾನೆ ಬಳಿಕ ಕೊರಗುತ್ತಾನೆ; ದರ್ಶನ್ ಹಳೆಯ ಸಂದರ್ಶನ ವೈರಲ್‌!

Continue Reading

ಪ್ರಮುಖ ಸುದ್ದಿ

Actor Darshan: ಹಾಸ್ಯನಟ ಚಿಕ್ಕಣ್ಣ ಬೆನ್ನಲ್ಲೇ ನಟ ಯಶಸ್‌ ಸೂರ್ಯಗೂ ನೋಟೀಸ್‌, ವಿಚಾರಣೆ

Actor Darshan: ನಟ ಯಶಸ್‌ ಸೂರ್ಯ ಕೂಡ ಅಂದು ಕುಖ್ಯಾತ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ಲ್ಲಿ ಡಿ ಗ್ಯಾಂಗ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ಗೊತ್ತಾಗಿದೆ. ಈತ ದರ್ಶನ್‌ಗೆ ಆಪ್ತನಾಗಿದ್ದು, ಅದೇ ದಿನ ನಡೆಸಲಾದ ಪಾರ್ಟಿಯಲ್ಲಿ ಚಿಕ್ಕಣ್ಣ ಜೊತೆಗೆ ಹಾಜರಿದ್ದರು.

VISTARANEWS.COM


on

actor darshan yashas surya
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಆರೆಸ್ಟ್ ಆಗಿರುವ ನಟ ದರ್ಶನ್ (Actor Darshan) ಜೊತೆ ಅದೇ ದಿನ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣ (comedian Chikkanna) ಅವರ ವಿಚಾರಣೆ ನಡೆಸಲಾಗಿದ್ದು, ಅದೇ ಪಾರ್ಟಿಯಲ್ಲಿದ್ದ ಇನ್ನೊಬ್ಬ ನಟನಿಗೂ ಪೊಲೀಸ್‌ ವಿಚಾರಣೆ ನೋಟೀಸ್‌ (police notice) ಹೋಗಿದೆ.

ನಟ ಯಶಸ್‌ ಸೂರ್ಯ (Yashas Surya) ಕೂಡ ಅಂದು ಕುಖ್ಯಾತ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ಲ್ಲಿ ಡಿ ಗ್ಯಾಂಗ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ಗೊತ್ತಾಗಿದೆ. ಈತ ದರ್ಶನ್‌ಗೆ ಆಪ್ತನಾಗಿದ್ದು, ಅದೇ ದಿನ ನಡೆಸಲಾದ ಪಾರ್ಟಿಯಲ್ಲಿ ಚಿಕ್ಕಣ್ಣ ಜೊತೆಗೆ ಹಾಜರಿದ್ದರು. ಇದೀಗ ವಿಚಾರಣೆಗೆ ಹಾಜರಾಗಲು ಯಶಸ್‌ಗೂ ನೋಟೀಸ್‌ ನೀಡಲಾಗಿದೆ.

ಚಿಕ್ಕಣ್ಣ, ಯಶಸ್ ಸೂರ್ಯ ಸೇರಿದಂತೆ ಇನ್ನೂ ಕೆಲ ನಟರಿಗೂ ಪೊಲೀಸರು ನೋಟೀಸ್ ನೀಡುವ ಸಾಧ್ಯತೆ ಇದೆ. ಮುಖ್ಯವಾಗಿ, ಅಂದು ದರ್ಶನ್‌ ಯಾರುಯಾರನ್ನು ಭೇಟಿಯಾಗಿದ್ದರೋ ಅವರೆಲ್ಲರೂ ಪೊಲೀಸ್‌ ತನಿಖೆಯನ್ನು ಎದುರಿಸಬೇಕಿದೆ. ಅಂದು ನಡೆಸಿದ ಮಾತುಕತೆಯನ್ನು ದರ್ಶನ್‌, ರೇಣುಕಾಸ್ವಾಮಿ ವಿಚಾರ ಎತ್ತಿದ್ದರೇ ಎಂಬುದು ತನಿಖೆಯ ಮುಖ್ಯ ವಿಚಾರವಾಗಿರಲಿದೆ.

actor darshan yashas surya

ಸಾಕ್ಷಿದಾರರಾಗಿ ಬಳಕೆ

ದರ್ಶನ್ ಆಂಡ್ ಗ್ಯಾಂಗ್‌ನಿಂದ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಲ್ಲದೇ ಹಲವು ಮಂದಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಅವರ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಹೇಳಿಕೆ ನೀಡಿದವರನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳು ಸೇರಿ 27ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಲಾಗಿದೆ. 27 ಮಂದಿಯಲ್ಲಿ 17 ಮಂದಿ ಬಂಧಿತ ಆರೋಪಿಗಳು. ನಟ ದರ್ಶನ್, ಪವಿತ್ರ ಗೌಡ ಸೇರಿ 17 ಮಂದಿ ಬಂಧಿತ ಆರೋಪಿಗಳು. ಇನ್ನುಳಿದ 10 ಮಂದಿಯನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ. ಸಾಕ್ಷಿಗಳು ಎಂದು ಈವರೆಗೆ 10 ಮಂದಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.

ಘಟನಾ ಸ್ಥಳದಲ್ಲಿ ಹಾಜರಿದ್ದ ಕೆಲವರು, ಬೇರೆಬೇರೆ ಕಡೆಗಳಲ್ಲಿ ಪ್ರತ್ಯಕ್ಷ ಪರೋಕ್ಷವಾಗಿ ಕಂಡು ಬಂದ ವ್ಯಕ್ತಿಗಳ ವಿಚಾರಣೆ ನಡೆಸಲಾಗಿದೆ. ಅವರನ್ನು ರೇಣುಕಾಸ್ವಾಮಿ ಕೊಲೆ ಸಂಬಂಧ ಸಾಕ್ಷಿಗಳು ಎಂದು ಪರಿಗಣಿಸಿ ಹೇಳಿಕೆ ದಾಖಲು ಮಾಡಲಾಗಿದೆ. ಶೆಡ್ ಬಳಿ ಇದ್ದ ಇನ್ನೂ ಕೆಲವರ ಹೇಳಿಕೆ ಪಡೆದುಕೊಂಡಿದ್ದಾರೆ. ಘಟನೆ ಹೇಗಾಯ್ತು, ಯಾರು ಯಾರು ಇದ್ದರು, ಎಷ್ಟು ಜನ ಸೇರಿದ್ದರು, ದರ್ಶನ್ ಎಷ್ಟು ಹೊತ್ತಿಗೆ ಬಂದಿದ್ದು, ಯಾವಯಾವ ಆಯುಧಗಳಿಂದ ಹಲ್ಲೆ ಮಾಡಿದರು, ಹೀಗೆ ಹಲವು ವಿಚಾರಗಳ ಬಗ್ಗೆ ಹೇಳಿಕೆ ದಾಖಲಿಸಿದ್ದಾರೆ. ಶೆಡ್‌ನ ಸಿಸಿ ಕ್ಯಾಮೆರಾ ಫೂಟೇಜ್‌ಗಳನ್ನು ದರ್ಶನ್‌ ಗ್ಯಾಂಗ್‌ ನಾಶ ಮಾಡಿರುವ ಹಿನ್ನೆಲೆಯಲ್ಲಿ, ಈ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಮಹತ್ವ ಪಡೆದುಕೊಳ್ಳಲಿದೆ.

ಹಾಸ್ಯನಟ ಚಿಕ್ಕಣ್ಣಗೆ ಮೂರು ಗಂಟೆ ಪೊಲೀಸರ ಡ್ರಿಲ್‌

ನಟ ದರ್ಶನ್ (Actor Darshan) ಜೊತೆ ಕೊಲೆಯ ದಿನ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣ ಅವರನ್ನು ಪೊಲೀಸ್‌ ತನಿಖೆಯ ಉರುಳು ಸುತ್ತಿಕೊಂಡಿದ್ದು, ನಿನ್ನೆ ಮೂರು ಗಂಟೆಗಳ ಕಾಲ ಅವರನ್ನು ವಿಶೇಷ ತನಿಖಾ ತಂಡ ವಿಚಾರಣೆ ನಡೆಸಿದೆ. ವಿಚಾರಣೆ ಸಂದರ್ಭದಲ್ಲಿ, ಅದೇ ದಿನ ತಾನು ದರ್ಶನ್ ಜೊತೆ ಪಾರ್ಟಿ ಮಾಡಿದ್ದು ನಿಜ ಎಂದು ಚಿಕ್ಕಣ್ಣ ಒಪ್ಪಿಕೊಂಡಿದ್ದಾರೆ.

“ಇಬ್ಬರೂ ಪಾರ್ಟಿ ಮುಗಿಸಿ ಒಟ್ಟಿಗೆ ಪಬ್‌ನಿಂದ ಹೋದೆವು ಎಂದು ಚಿಕ್ಕಣ್ಣ ಹೇಳಿದ್ದಾರೆ. 8ನೇ ತಾರೀಕು ಆರ್‌ಆರ್ ನಗರದ ಸ್ಟೋನಿ ಬ್ರೋಕ್ ಪಬ್‌ಗೆ ನಾನು ಬಂದಿದ್ದೆ. ಮಧ್ಯಾಹ್ನ 1.30ರ ಸುಮಾರಿಗೆ ಪಬ್‌ಗೆ ಬಂದಿದ್ದೆ. ದರ್ಶನ್ ಮತ್ತು ನಾನು ಒಂದೇ ಟೇಬಲ್ ನಲ್ಲಿ ಪಾರ್ಟಿ ಮಾಡಿದೆವು. ಸುಮಾರು 4:30ರ ಹೊತ್ತಿಗೆ ಅವರು ಹೊರಟರು. ಅವರ ಜೊತೆಗೆ ನಾನೂ ಅಲ್ಲಿಂದ ಹೊರಟೆ. ನಾನು ನಮ್ಮ‌ ಮನೆಗೆ ಹೋದೆ, ದರ್ಶನ್ ಎಲ್ಲಿಗೆ ಹೋದ್ರೋ ನನಗೆ ಗೊತ್ತಿಲ್ಲ” ಎಂದು ಚಿಕ್ಕಣ್ಣ ಹೇಳಿದ್ದಾರೆ.

ʼನಾವು ಸೇರಿದ್ದು ಸಿನಿಮಾ ವಿಚಾರ ಮಾತಾನಾಡೋಕೆ. ಅದನ್ನಷ್ಟೇ ಮಾತಾಡಿ ಅಲ್ಲಿಂದ ಹೊರಟೆʼ ಎಂದು ಚಿಕ್ಕಣ್ಣ ತಿಳಿಸಿದ್ದಾರೆ. ವಕೀಲರ ಜೊತೆ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ ಅವರ ಬಳಿ ಪೊಲೀಸರು ನೂರಾರು ಪ್ರಶ್ನೆಗಳನ್ನು ಹಾಕಿ ವಿಷಯ ಸಂಗ್ರಹಿಸಿದರು. 1.30ರಿಂದ 4.30ರವರೆಗೆ ಏನೆಲ್ಲಾ ಆಯ್ತು? ಮತ್ತೋರ್ವ ನಟ ಹಾಗೂ ನಿರ್ಮಾಪಕ ಇದ್ರಾ? ಯಾವ ಸಿನಿಮಾ ವಿಚಾರಕ್ಕೆ ಮಾತು ಕತೆ ನಡೀತಿತ್ತು? ಬರೀ ಸಿನಿಮಾ‌ ವಿಚಾರವಾ ಅಥವಾ ಬೇರೆ ಏನಾದ್ರೂ ಮಾತು ಕತೆ ನಡೆದಿತ್ತಾ? ಅವತ್ತು ದರ್ಶನ್ ವರ್ತನೆ ಹೇಗಿತ್ತು? ಪಾರ್ಟಿ ವೇಳೆ ದರ್ಶನ್‌ಗೆ ಕರೆಗಳು ಬರ್ತಿದ್ವಾ?ರೇಣುಕಾಸ್ವಾಮಿ ಬಗ್ಗೆ ಅವತ್ತು ಚರ್ಚೆ ಏನಾದ್ರು ಆಗಿತ್ತಾ? ಹೀಗೆ ಹಲವು ವಿಚಾರಗಳ ಬಗ್ಗೆ ಚಿಕ್ಕಣ್ಣನನ್ನು ಪ್ರಶ್ನೆ ಮಾಡಲಾಗಿದೆ.

ಪೊಲೀಸ್‌ ವಿಚಾರಣೆ ಬಳಿಕ ಹೊರಗೆ ಬಂದ ಚಿಕ್ಕಣ್ಣ, “ಇವತ್ತು ಪೊಲೀಸರು ವಿಚಾರಣೆಗೆ ಕರೆದಿದ್ರು, ಹೋಗಿದ್ದೆ. ಅವತ್ತು ಊಟಕ್ಕೆ ಹೋಗಿದ್ದೆ ಅದನ್ನು ಹೇಳಿದೆ. ತನಿಖೆಯಲ್ಲಿರುವ ಕಾರಣ ಬೇರೆ ಏನೂ ಹೇಳುವುದಕ್ಕೆ ಆಗದು. ಅವರು ಕೇಳಿದ್ದಕ್ಕೆ ಉತ್ತರ ಕೊಟ್ಟಿದೀನಿ” ಎಂದು ತಿಳಿಸಿದರು.

ಇದನ್ನೂ ಓದಿ: Actor Darshan: ಹಾಸ್ಯನಟ ಚಿಕ್ಕಣ್ಣಗೆ ಮೂರು ಗಂಟೆ ಪೊಲೀಸರ ಡ್ರಿಲ್‌, ರೇಣುಕಾಸ್ವಾಮಿ ಕೊಲೆ ವಿಷಯ ಬಂತಾ ಪಾರ್ಟಿಯಲ್ಲಿ?

Continue Reading
Advertisement
NEET UG 2024
Latest13 mins ago

NEET UG 2024: ಮಗಳ ಜೊತೆ ಸೇರಿ ನೀಟ್ ಯುಜಿ ಪರೀಕ್ಷೆ ಬರೆದು ಪಾಸಾದ ಅಪ್ಪ!

Sidhartha Mallya
ಸಿನಿಮಾ18 mins ago

Sidhartha Mallya: ಹಸೆಮಣೆಗೇರಲು ಸಜ್ಜಾದ ದೀಪಿಕಾ ಪಡುಕೋಣೆ ಮಾಜಿ ಪ್ರೇಮಿ ಸಿದ್ಧಾರ್ಥ್‌ ಮಲ್ಯ

murder case
ಕ್ರೈಂ33 mins ago

Murder case : ರಸ್ತೆಯಲ್ಲಿ ಅಡ್ಡಗಟ್ಟಿ ಚಿಕ್ಕಮ್ಮನನ್ನು ಹೊಡೆದು ಕೊಂದ ದುಷ್ಟ

How Much Salt Is Too Much
ಆರೋಗ್ಯ50 mins ago

How Much Salt Is Too Much: ಉಪ್ಪು ಅತಿಯಾಗದಿರಲಿ; ದಿನಕ್ಕೆ ನಾವೆಷ್ಟು ಉಪ್ಪು ತಿನ್ನುತ್ತಿದ್ದೇವೆ ಗೊತ್ತಿರಲಿ

T20 World Cup 2024
ಕ್ರೀಡೆ52 mins ago

T20 World Cup 2024: ಸೂಪರ್​-8 ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಆಘಾತ; ಅಭ್ಯಾಸದ ವೇಳೆ ಸ್ಟಾರ್​ ಆಟಗಾರನಿಗೆ ಗಾಯ

Narendra Modi
ದೇಶ1 hour ago

Narendra Modi: ಮೂರನೇ ಬಾರಿ ಪ್ರಧಾನಿ ಪಟ್ಟಕ್ಕೇರಿದ ಬಳಿಕ ಇಂದು ಸ್ವಕ್ಷೇತ್ರ ವಾರಾಣಸಿಗೆ ಮೋದಿ ಮೊದಲ ಭೇಟಿ

Prajwal revanna case
ಪ್ರಮುಖ ಸುದ್ದಿ1 hour ago

Prajwal Revanna Case: ಇಂದು ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯ, ಮತ್ತೊಂದು ಕೇಸ್‌ನಲ್ಲಿ ಅಂದರ್!‌

Team India Coach
ಕ್ರೀಡೆ2 hours ago

Team India Coach: ಜಾಂಟಿ ರೋಡ್ಸ್ ಟೀಮ್​ ಇಂಡಿಯಾದ ಮುಂದಿನ ಫೀಲ್ಡಿಂಗ್​ ಕೋಚ್​

pattanagere shed actor darshan renuka swamy murder
ಕ್ರೈಂ2 hours ago

Actor Darshan: ಆ ಭೀಕರ ಶೆಡ್‌ನಲ್ಲಿ ಇನ್ನೂ ಹಲವರ ರಕ್ತದ ಕಲೆ ಪತ್ತೆ! ಏನ್‌ ನಡೆದಿತ್ತು ಇಲ್ಲಿ?

Beer Side Effect
ಆರೋಗ್ಯ2 hours ago

Beer Side Effect: ಬಿಯರ್‌ ಕುಡಿದರೆ ತೂಕ ಹೆಚ್ಚುತ್ತದೆ ಎನ್ನುವುದು ನಿಜವೇ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು22 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು23 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌