ಬೆಂಗಳೂರು: ಜಮ್ಮು ಕಾಶ್ಮೀರದ ರಜೌರಿಯಲ್ಲಿ ಪಾಕ್ ಮೂಲದ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ (Rajouri Encounter) ಮಡಿದ ಕರ್ನಾಟಕದ ವೀರ ಯೋಧ ಪ್ರಾಂಜಲ್ (Captain Pranjal) ಅವರ ಕುಟುಂಬಕ್ಕೆ ರೂ. 50,00,000 (ಐವತ್ತು ಲಕ್ಷ) ಪರಿಹಾರಧನವನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಮಂಜೂರು ಮಾಡಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. “ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ. ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ನಾಳೆ ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆʼʼ ಎಂದು ಬರೆದಿದ್ದಾರೆ.
ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.
— CM of Karnataka (@CMofKarnataka) December 4, 2023
ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ… pic.twitter.com/HgJQ9FlqXo
ಜಮ್ಮು ಕಾಶ್ಮೀರದ ರಜೌರಿಯಲ್ಲಿ ಪಾಕ್ ಮೂಲದ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ (Rajouri Encounter) ಕರ್ನಾಟಕದ ವೀರ ಯೋಧ ಪ್ರಾಂಜಲ್ (Captain Pranjal) ಮೃತಪಟ್ಟಿದ್ದರು. ಇವರ ಮನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಜಿಗಣಿ ಸಮೀಪದ ನಿಸರ್ಗ ಬಡಾವಣೆಯಲ್ಲಿದೆ. ಯೋಧನ ಮನೆಯ ಆವರಣದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಸಂಸ್ಕಾರ ನಡೆದಿತ್ತು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಅಲ್ಲಿಗೆ ಭೇಟಿ ನೀಡಿ, ಹುತಾತ್ಮ ಯೋಧನ ಅಂತಿಮ ದರ್ಶನ ಪಡೆದಿದ್ದರು. ಸಂಬಂಧಿಕರು ಹಾಗೂ ಸಹಸ್ರಾರು ಸಾರ್ವಜನಿಕರ ಉಪಸ್ಥಿತಿಯಲ್ಲಿ ಅಂತ್ಯಸಂಸ್ಕಾರ ನಡೆದಿತ್ತು.
ಉಗ್ರರ ಜತೆಗಿನ ಹೋರಾಟದಲ್ಲಿ ಮುಂಚೂಣಿಯಲ್ಲಿ ನಿಂತು ಬಡಿದಾಡಿ ಪ್ರಾಣ ತ್ಯಾಗ ಮಾಡಿದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನ (MRPL) ನಿವೃತ್ತ ಆಡಳಿತ ನಿರ್ದೇಶಕ ವೆಂಕಟೇಶ್ ಅವರ ಏಕೈಕ ಪುತ್ರ. (MRPL) ನ ಮಾಜಿ ನಿರ್ದೇಶಕ ಎಂ.ವೆಂಕಟೇಶ್ ಅವರ ಪುತ್ರ. ಎಂಆರ್‌ಪಿಎಲ್‌ನ ಬಳಿಯೇ ಇರುವ ದೆಹಲಿ ಪಬ್ಲಿಕ್ ಸ್ಕೂಲ್‌ನಲ್ಲೇ ಪ್ರಾಂಜಲ್ ವಿದ್ಯಾಭ್ಯಾಸ ಮಾಡಿದ್ದರು. ಕರಾವಳಿಯವರೇ ಆದ ವೆಂಕಟೇಶ್ ಅವರು ಮೇ 31ರಂದು ಸೇವಾ ನಿವೃತ್ತರಾಗಿದ್ದರು. ಕೆಲಕಾಲ ಮೈಸೂರಲ್ಲೂ ಇದ್ದರು. ತಂದೆಯ ನಿವೃತ್ತ ಸಮಾರಂಭಕ್ಕೆ ಪ್ರಾಂಜಲ್ ಆಗಮಿಸಿದ್ದರು. ನಿವೃತ್ತಿ ಬಳಿಕ ವೆಂಕಟೇಶ್ ಅವರು ಇದೀಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.