ಬೆಂಗಳೂರು: ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ (Basavanna Cultural Icon of Karnataka) ಎಂದು ಗೌರವಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು(CM Siddaramaiah). ಅವರು ಗುರುವಾರ ಲಾಲ್ ಬಾಗ್‌ನ ಗಾಜಿನ ಮನೆಯಲ್ಲಿ ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ 2024 ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು(bengaluru lalbagh flower show).
ಬಸವಣ್ಣನವರ ಹೆಸರು ಚಿರಸ್ಥಾಯಿಯಾಗಿಸಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದರು. ಶಿವಮೊಗ್ಗದಲ್ಲಿರುವ ಜೈಲಿನ 46 ಎಕರೆ ಪ್ರದೇಶದಲ್ಲಿ ಉದ್ಯಾನವನಕ್ಕೆ ಅಲ್ಲಮಪ್ರಭು ಉದ್ಯಾನವನ ಎಂದು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ಅಲ್ಲಮಪ್ರಭು ಹಾಗೂ ಅಕ್ಕಮಹಾದೇವಿ ಶಿಕಾರಿಪುರದವರಾದ್ದರಿಂದ ಅವರ ಹೆಸರನ್ನೂ ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಈ ತೀರ್ಮಾನ ಮಾಡಲಾಗಿದೆ ಎಂದರು.
ತೋಟಗಾರಿಕೆ ಇಲಾಖೆಯವರು ಬೆಳೆಯುವ ಹೂ, ಹಣ್ಣುಗಳು,ಇಲಾಖೆಯಲ್ಲಿ ಆಗಿರುವ ಬೆಳವಣಿಗೆಗಳನ್ನು ಜನರಿಗೆ ಪರಿಚಯಿಸುವ ಕಾರ್ಯಕ್ರಮ ಇದು. ಎಂದ ಮುಖ್ಯಮಂತ್ರಿಗಳು ತೋಟಗಾರಿಕೆ ಇಲಾಖೆಗೆ ಧನ್ಯವಾದಗಳನ್ನು ಹೇಳಿದರು.
ಗಣರಾಜ್ಯೋತ್ಸವದ ಅಂಗವಾಗಿ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನವನ್ನು ಇಂದು ಉದ್ಘಾಟಿಸಲಾಗಿದೆ. ಬಸವಾದಿ ಶರಣರ ವಚನ ಸಾಹಿತ್ಯ ಆಧಾರಿತವಾದ ಫಲಪುಷ್ಪ ಪ್ರದರ್ಶನ ಈ ಬಾರಿಯ ವಿಶೇಷತೆ. ಹನ್ನರಡನೆಯ ಶತಮಾನದಲ್ಲಿ ಜಾತಿರಹಿತ ಹಾಗೂ ಮೂಡನಂಬಿಕೆ ಕಂದಾಚಾರಗಳಿಂದ ಮುಖ್ತವಾದ ಸಮ ಸಮಾಜ ನಿರ್ಮಾಣ ಮಾಡಲು ಹೋರಾಟ ನಡೆಸಲಾಗಿತ್ತು. ಈ ವಚನ ಚಳವಳಿಯ ಬಗ್ಗೆ ಜನರಿಗೆ ಪ್ರಚುರಪಡಿಸಲು ಉದ್ದೇಶದಿಂದ ಈ ಬಾರಿಯ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಹಲವಾರು ಬಗೆಯ ಫಲಪುಷ್ಪಗಳ ಮೂಲಕ ಬಸವಾದಿ ಶರಣರ ಸಂದೇಶಗಳನ್ನು ಪ್ರಚುರಪಡಿಸಲಾಗುತ್ತಿದೆ. ಇಂದಿನಿಂದ 28 ನೇ ಜನವರಿ ವರೆಗೆ ಪ್ರದರ್ಶನ ನಡೆಯಲಿದ್ದು, ತೋಟಗಾರಿಕೆ ಇಲಾಖೆ ಮಾಡಿಕೊಟ್ಟಿರುವ ಈ ಅವಕಾಶವನ್ನು ಬೆಂಗಳೂರಿನ ನಾಗರಿಕರು ಸದುಪಯೋಗ ಪಡಿಸಿಕೊಳ್ಳಬೇಕು. ತೋಟಗಾರಿಕಾ ಇಲಾಖೆಯವರಿಂದ ವಿವಿಧ ಫಲ ಪುಷ್ಪಗಳನ್ನು ಬೆಳೆಯಲಾಗುತ್ತದೆ ಎಂಬ ವಿಸ್ತೃತ ಮಾಹಿತಿಯನ್ನು ಜನರು ಪಡೆಯಬಹುದಾಗಿದೆ ಎಂದರು.
ಈ ಸುದ್ದಿಯನ್ನೂ ಓದಿ: Lalbagh Flower Show : ಜ.18 ರಿಂದ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ; ವಿಶ್ವ ಗುರು ಬಸವಣ್ಣ ಅನಾವರಣ